The most-visited ಕನ್ನಡ Wikipedia articles, updated daily. Learn more...
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರ ಬೆಂಗಳೂರು ನಗರ. ಬೆಂಗಳೂರು ತಾಲೂಕು 486 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು 3 ತಾಲ್ಲೂಕುಗಳನ್ನು ಹೊಂದಿದ್ದು, ಬೆಂಗಳೂರು ತಾಲ್ಲೂಕು ವಿಭಜಸಿ ಯಲಹಂಕ ತಾಲೂಕು ರಚನೆ, ಬೆಂಗಳೂರು ದಕ್ಷಿಣ ತಾಲೂಕನ್ನು ಬನಶಂಕರಿ ಎಂದು ಮರು ನಾಮಕರಣ ಮಾಡಲಾಗಿದೆ, ಬನಶಂಕರಿ ತಾಲ್ಲೂಕು ವಿಭಜಸಿ ಕೃಷ್ಣರಾಜಪುರ ತಾಲೂಕು ರಚನೆ ಮಾಡಲಾಗಿದೆ.
{{#if:| ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಶಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. .
{{#if:| ಬೆಂಗಳೂರು ಗ್ರಾಮಾಂತರ ಜಿಲ್ಲೆ ಕರ್ನಾಟಕದ 30 ಜಿಲ್ಲೆಗಳಲ್ಲೊಂದು. 1986ರಲ್ಲಿ ಬೆಂಗಳೂರು ಜಿಲ್ಲೆಯನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಎಂದು ವಿಂಗಡಿಸಿ ರಚಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4 ತಾಲ್ಲೂಕು, 17 ಹೋಬಳಿಗಳು 1122 ಹಳ್ಳಿಗಳು, 3 ನಗರಸಭೆ, 2 ಪುರಸಭೆ, 1 ಪಟ್ಟಣ ಪಂಚಾಯಿತಿ ಮತ್ತು 229 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ.
ಜಯಚಾಮರಾಜ ಒಡೆಯರ್ (ಜುಲೈ ೧೮, ೧೯೧೯-ಸೆಪ್ಟೆಂಬರ್ ೨೩, ೧೯೭೪) ಮೈಸೂರು ಸಂಸ್ಥಾನದ ೨೫ನೇ ಹಾಗು ಕೊನೆಯ ಮಹಾರಾಜ ಆಗಿದ್ದವರು. ಇವರು ೧೯೪೦ರಿಂದ ೧೯೫೦ರವರೆಗೆ ರಾಜ್ಯಬಾರ ನಡೆಸಿ, ೧೯೫೦ರಲ್ಲಿ ಭಾರತವು ಗಣರಾಜ್ಯವಾದಾಗ ಮೈಸೂರು ರಾಜ್ಯದ ಪ್ರಮುಖರಾಗಿ ೧೯೫೬ರವರೆಗು ಸೇವೆ ಸಲ್ಲಿಸಿದರು. ಕರ್ನಾಟಕ ಸ್ಥಾಪನೆಯ ನಂತರ ೧೯೬೪ರವರೆಗೆ ಅದರ ರಾಜ್ಯಪಾಲರಾಗಿದ್ದರು.ಇವರು ಯದುವಂಶದ ಕೊನೆಯ ದೊರೆ.
{{#if:| | ಕನಕಪುರ: ಅರ್ಕಾವತಿ ನದಿ ದಂಡೆಯಲ್ಲಿರುವ ಕರ್ನಾಟಕದ ರಾಮನಗರ ಜಿಲ್ಲೆಗೆ ಸೇರಿದ ಒಂದು ನಗರ.ಮತ್ತು ಇದೇ ಹೆಸರಿನ ತಾಲೂಕಿನ ಆಡಳಿತ ಕೇಂದ್ರ.ದೇಶದಲ್ಲಿಯೇ ಅತೀ ಹೆಚ್ಚು ರೇಷ್ಮೆ ಉತ್ಪಾದಿಸುವ ತಾಲೂಕು '''ರೇಷ್ಮೆ ಕಣಿವೆ''' ಎಂದೇ ಖ್ಯಾತಿ.ಗ್ರಾನೈಟ್ ಉತ್ಪಾದನೆಯಲ್ಲಿ ಸಹ ಕರ್ನಾಟಕದಲ್ಲಿ ಬಹಳ ಮುಂಚೂಣಿಯಲ್ಲಿದೆ ಆದ್ದರಿಂದ ಕರ್ನಾಟಕದ ಗ್ರಾನೈಟ್ ರಾಜಧಾನಿ ಎಂದು ಪ್ರಸಿದ್ಧಿ ಪಡೆದಿದೆ . ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿತ್ತು. ಹಾಗೂ ಹಿಂದೆ ದೇಶದ ಅತಿ ದೊಡ್ಡ ಲೋಕಸಭಾಕ್ಷೇತ್ರವಾಗಿತ್ತ್ತು.
ಪ್ರಿಯಾಂಕಾ ಚೋಪ್ರಾ (ಹಿಂದಿ:प्रियंका चोपड़ा; ಜನನ ೧೮ ಜುಲೈ ೧೯೮೨) ಭಾರತೀಯ ಚಲನಚಿತ್ರ ನಟಿ ಹಾಗೂ ಮಾಜಿ ವಿಶ್ವ ಸುಂದರಿ. ತನ್ನ ನಟನಾ ವೃತ್ತಿಯನ್ನು ಆರಂಭಿಸುವ ಮುಂಚೆ, ರೂಪದರ್ಶಿಯಾಗಿ ಕೆಲಸ ಮಾಡಿದ್ದ ಪ್ರಿಯಾಂಕಾ 2000ನೆ ಇಸವಿಯಲ್ಲಿ ವಿಶ್ವ ಸುಂದರಿ ಕಿರೀಟವನ್ನು ಧರಿಸಿ ಪ್ರಖ್ಯಾತಳಾದಳು. ತಮಿಳು ಚಲನಚಿತ್ರ ತಮಿಳನ್ (2002) ಚೋಪ್ರಾ ನಟಿಸಿದ ಮೊದಲ ಚಲನಚಿತ್ರ.ಆ ನಂತರದ ವರ್ಷ 2003ರಲ್ಲಿ ತೆರೆ ಕಂಡ, ಅನಿಲ್ ಶರ್ಮಾರವರ 'ದಿ ಹೀರೊ: ಲವ್ ಸ್ಟೋರಿ ಆಫ್ ಎ ಸ್ಪೈ' ಪ್ರಿಯಾಂಕಾ ನಟನೆಯ ಚೊಚ್ಚಲ ಹಿಂದಿ ಚಲನಚಿತ್ರ; ಅದೇ ವರ್ಷ ಬಿಡುಗಡೆಗೊಂಡ ಆಕೆ ನಟಿಸಿದ ಎರಡನೆ ಹಿಂದಿ ಚಲನಚಿತ್ರ ರಾಜ್ ಕನ್ಬರ್ರವರ 'ಅಂದಾಜ್' ವಾಣಿಜ್ಯವಾಗಿ ಯಶಸ್ಸು ಕಂಡಿತಲ್ಲದೆ, ಈ ಚಲನಚಿತ್ರದಲ್ಲಿನ ನಟನೆಗಾಗಿ ಫಿಲ್ಮ್ಫೇರ್ ಅತ್ಯುತ್ತಮ ಆರಂಭಿಕ ನಟಿ ಪ್ರಶಸ್ತಿ ಕೂಡ ಪಡೆದಳು.2004ರಲ್ಲಿ ಅಬ್ಬಾಸ್-ಮಸ್ತಾನ್ ನಿರ್ದೇಶಿಸಿದ ಐತ್ರಾಜ್ ಚಲನಚಿತ್ರದಲ್ಲಿನ ನಟನೆಗಾಗಿ ವಿಮರ್ಶಕರ ಪ್ರಶಂಸೆಗೆ ಪಾತ್ರರಾದ ಪ್ರಿಯಾಂಕಾ ಫಿಲ್ಮ್ಫೇರ್ ಅತ್ಯುತ್ತಮ ಖಳನಾಯಕಿ ಪ್ರಶಸ್ತಿ ಗಳಿಸಿ, ಈ ಪ್ರಶಸ್ತಿ ಪಡೆದ ಎರಡನೆ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರಳಾದಳು.
ಕದಂಬಿನಿ ಗಂಗೂಲಿ (೧೮ ಜೂಲೈ ೧೮೬೧ - ೩ ಅಕ್ಟೋಬರ್ ೧೯೨೩) ಮತ್ತು ಚಂದ್ರಮುಖಿ ಬಸು ಭಾರತದ ಹಾಗು ಬ್ರಿಟಿಷ್ ಸಾಮ್ರಾಜ್ಯದಲ್ಲಿದ್ದ ಇಬ್ಬರೇ ಮಹಿಳಾ ಪದವಿಧರರು. ಕದಂಬಿನಿ ಗಂಗೂಲಿ ದಕ್ಷಿಣ ಏಷ್ಯಾದ ಮೂಲದ ದಕ್ಷಿಣ ಏಷ್ಯಾದಲ್ಲಿ ಪಾಶ್ಚತ್ಯ ಮದ್ದಿನ ತರಬೇತಿ ಪಡೆದುಕೊಂಡ ಮೊದಲನೇ ಮಹಿಳಾ ವೈದ್ಯೆ . ಆನಂದಿ ಗೋಪಾಲ್ ಜೋಶಿ, ಇನ್ನೋರ್ವ ಭಾರತೀಯ ಮಹಿಳೆ ಅದೇ ಸಮಯದಲ್ಲಿ (೧೮೮೬) ಅಮೆರಿಕಾದಲ್ಲಿ ವೈದ್ಯಳಾಗಿ ಉತ್ತೀರ್ಣಗೊಂಡರು.
ಬೆಳ್ತಂಗಡಿ(ಉಚ್ಚಾರಣೆː listen :ಬೆಳ್ತಂಗಡಿ) ಇದು ದಕ್ಷಿಣ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ.ಇದು ಜಿಲ್ಲಾ ಕೇಂದ್ರ ಮಂಗಳೂರಿನಿಂದಸುಮಾರು ೬೦ ಕಿ.ಮೀ ಪೂರ್ವಕ್ಕೆ ಇದೆ.ಇದನ್ನು ತುಳುಭಾಷೆಯಲ್ಲಿ "ಬೋಲ್ತೇರ್” ಎಂದು ಕರೆಯುತ್ತಾರೆ. ಉತ್ತರ, ಈಶಾನ್ಯ ಮತ್ತು ಪೂರ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಆಗ್ನೇಯದಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕು ಪಶ್ಚಿಮದಲ್ಲಿ ಕಾರ್ಕಳ ಮತ್ತು ಬಂಟ್ವಾಳ ತಾಲ್ಲುಕುಗಳೂ ದಕ್ಷಿಣದಲ್ಲಿ ಪುತ್ತೂರು ತಾಲ್ಲೂಕು ಸುತ್ತುವರೆದಿದೆ. 1954ರಲ್ಲಿ ರೂಪಿತವಾದ ಈ ತಾಲ್ಲೂಕಿನ ವೇಣೂರು, ಬೆಳ್ತಂಗಡಿ ಮತ್ತು ಕೊಕ್ಕಡ ಇವು ಮೂರು ಹೋಬಳಿಗಳೂ 84 ಗ್ರಾಮಗಳೂ ಇವೆ.
ಮಿನುಗುತಾರೆ ಕಲ್ಪನಾ(18-7-1943-/12-5-1979)ಎನಿಸಿ ಚಿತ್ರ ರಸಿಕರ ಮನಸ್ಸಿನಲ್ಲಿ ಅಚ್ಚಳಿಯದ ಪಾತ್ರಗಳನ್ನು ನಿರ್ವಹಿಸಿ ಜನಪ್ರಿಯತೆಯ ಉತ್ತುಂಗಕ್ಕೇರಿದ, ನಟಿ ಕಲ್ಪನಾ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನವರು . ಚಿತ್ರರಂಗವನ್ನು ಪ್ರವೇಶಿಸುವ ಮೊದಲು ಅವರ ಹೆಸರು 'ಶರತ್ ಲತಾ'.1943 ಜುಲೈ 18ರ ಮಧ್ಯಾಹ್ನ 3ಗಂಟೆಗೆ ಶ್ರೀಯುತ ಎನ್.ಎಸ್.ಕೃಷ್ಣಮೂರ್ತಿ ಮತ್ತು ಎಂ.ಜಾನಕಮ್ಮನವರ ಪುತ್ರಿಯಾಗಿ ಮಂಗಳೂರಿನ ವೆನ್ ಲ್ಯಾಕ್ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದರು.1963ರಲ್ಲಿ ಪಂತುಲುರವರ 'ಸಾಕುಮಗಳು' ಚಿತ್ರದಿಂದ ಆರಂಭವಾದ ಸಿನಿಮಾ ಪಯಣ 1978ರ ಶ್ರೀಯುತ ಜ್ಞಾನಪೀಠಿ ಶಿವರಾಮ ಕಾರಂತರ ನಿರ್ದೇಶನದ 'ಮಲೆಯಮಕ್ಕಳು' ರವರೆಗೂ 78 ಸಿನಿಮಾಗಳಲ್ಲಿ ಅಭಿನಯಿಸುವಂತೆ ಮಾಡಿತು.ಅಂತಹ ಒಬ್ಬ ಮಹಾನ್ ತಾರೆ ಕಲ್ಪನಾ ರವರ ಬಗ್ಗೆ ಮೈಸೂರಿನ ಯುವ ಸಾಹಿತಿ ವಿ.ಶ್ರೀಧರ ಸುಮಾರು 1114ಪುಟಗಳ "ರಜತರಂಗದ ಧ್ರುವತಾರೆ"(ಮಿನುಗುತಾರೆ ಕಲ್ಪನಾರ ಸಂಸ್ಮರಣ ಗ್ರಂಥ) ಬೃಹತ್ ಸಂಸ್ಮರಣ ಗ್ರಂಥವನ್ನು ತಂದಿರುವುದು ಕಲ್ಪನಾರಿಗೆ ನೀಡಿರುವ ಬಹು ದೊಡ್ಡ ಗೌರವ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಚಾಮುಂಡೇಶ್ವರಿ ಹಿಂದೂಧರ್ಮದಲ್ಲಿ, ಚಾಮುಂಡಿ ಎಂದೂ ಪರಿಚಿತವಾಗಿರುವ ಹಿಂದೂ ದೇವಿಮಾತೆಯಾದ ದೇವಿಯ ಭಯಾನಕ ರೂಪ ಮತ್ತು ಸಪ್ತ ಮಾತೃಕೆಯರ ಪೈಕಿ ಒಬ್ಬಳು. ಅವಳು ಯೋಧೆ ದುರ್ಗಾ ದೇವಿಯ ಪರಿಚಾರಕಿಯರಾದ ಅರವತ್ತ ನಾಲ್ಕು ಅಥವಾ ಎಂಬತ್ತೊಂದು ತಾಂತ್ರಿಕ ದೇವತೆಗಳಾದ, ಮುಖ್ಯ ಯೋಗಿನಿಗಳ ಪೈಕಿ ಕೂಡ ಒಬ್ಬಳು. ಈ ಹೆಸರು ಚಾಮುಂಡಿಯು ಕೊಂದ ಇಬ್ಬರು ಅಸುರರಾದ ಚಂಡ ಮತ್ತು ಮುಂಡರ ಸಂಯೋಗವಾಗಿದೆ.
ಭಾರತ, ಅಧಿಕೃತವಾಗಿ: ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಲೋಕಪಾವನಿ ನದಿ ಕಾವೇರಿಯ ಪ್ರಮುಖ ಉಪನದಿಯಾಗಿದೆ, ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕು, ಹೊಣಕೆರೆ ಹೋಬಳಿಯ ಬೋಗಾದಿ ಸಮೀಪದ ಕಳ್ಳಿಗುಂದಿ ಗ್ರಾಮಕ್ಕೆ ಹೊಂದಿಕೊಂಡ್ಡಿರುವ ಅರಣ್ಯದ ಇಳಿಜಾರು ಪ್ರದೇಶವನ್ನು ಲೋಕಪಾವನಿ ನದಿಯ ಉಗಮ ಸ್ಥಾನವೆಂದು ಗುರುತಿಸಲಾಗಿದೆ. ಮಳೆಗಾಲದಷ್ಟೇ ಉಕ್ಕಿ ಹರಿಯುವ ಈ ನದಿ ಸುಖಧರೆ, ತಟ್ಟೆಕೆರೆ, ಆಯಿತನಹಳ್ಳಿ ಗ್ರಾಮಗಳ ಅಸು ಪಾಸಿನಲ್ಲಿ ಹರಿದು,ಕರಿಕ್ಯಾತನಹಳ್ಳಿ ಗ್ರಾಮದಿಂದ 600 ಮೀಟರ್ ದೂರದಲ್ಲಿ 15 ಅಡಿ ಎತ್ತರದಿಂದ ದುಮುಕಿ ನಯನ ಮನೋಹರ ಜಲಪಾತವನು ನಿರ್ಮಿಸಿದ್ದು, ಈ ಜಲಪಾತಕ್ಕೆ ಮೊಸಳೆ ಗುಂಡಿ ಜಲಪಾತವೆಂದು ಕರೆಯುತ್ತಾರೆ. ಇಲ್ಲಿಂದ ನೂರು ಮೀಟರ್ ಸಾಗಿದ ಕೂಡಲೇ, ಬೆಟ್ಟದ ಸಾಲಿನಿಂದ ಹರಿದು ಬರುವ ನೀರಿನ ಹರಿವು ಸಿಳ್ಳೆ ಹಳ್ಳ ಎಂಬ ಹೆಸರಿನಲ್ಲಿ ಲೋಕಪಾವನಿಯನ್ನು ಸೇರಿಕೊಳ್ಳುತ್ತದೆ.
ಸರ್ಕಾರಿ ಇಂಜಿನಿರಿಂಗ್ ಕಾಲೇಜು, ಹಾಸನ
ಸರ್ಕಾರಿ ಇಂಜಿನಿರಿಂಗ್ ಕಾಲೇಜು, ಹಾಸನ ಇದು ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿದೆ. ಬೆಂಗಳೂರು ಮಂಗಳೂರು(B.M) ರಾಷ್ಟ್ರೀಯ ಹೆದ್ದಾರಿ ನಂ:೪೮ ರಲ್ಲಿ ಅತ್ಯಂತ ವಿಶಾಲವಾದ ಕಟ್ಟಡ ಮತ್ತು ಪೂರ್ವಯೋಜಿತ ಉಪಯುಕ್ತತೆಗಳು ೪೦ ಎಕರೆಯ ವಿಶಾಲ ಭೂಪ್ರದೇಶದಲ್ಲಿ ಹರಡಿಕೊಂಡಿವೆ. ಇದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪ್ರಮಾಣಿತಗೊಂಡಿದೆ ಮತ್ತು ಎ.ಐ.ಸಿ.ಟಿ.ಇ, ನವದೆಹಲಿಯಿಂದ ಅನುಮೋದಿತಗೊಂಡಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಬೆಳಗಾವಿಯಲ್ಲಿ 1998ರಲ್ಲಿ ಸ್ಥಾಪನೆಯಾಯಿತು. ಸರ್.ಎಂ.ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಸ್ಥಾಪಿಸಲಾದ ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯದ ಸುಮಾರು 200ಕ್ಕೂ ಹೆಚ್ಚು ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಬರುತ್ತವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.ಭೂಮಿಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ 'ಮಾರ್ಸ್'(Mars) ಎಂದು ಕರೆಯುತ್ತಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಮಹಾನಗರದ ಕ್ಷೇತ್ರದ ನಾಗರಿಕ ಮತ್ತು ಮೂಲಭೂತ ವ್ಯವಸ್ಥೆಗಳ ಆಸ್ತಿಯ ಜವಾಬ್ದಾರಿಯನ್ನು ಹೊಂದಿರುವ ಸರ್ಕಾರದ ಆಡಳಿತಾತ್ಮಕ ಅಂಗವಾಗಿದೆ. ಬಿಬಿಎಂಪಿ ಸರ್ಕಾರದ ಮೂರನೇ ಹಂತವನ್ನು ಪ್ರತಿನಿಧಿಸುತ್ತದೆ, (ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮೊದಲಿನ ಎರಡು ಹಂತಗಳು). ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ನಗರ ಸಮಿತಿ ಮುನ್ನೆಡೆಸುತ್ತದೆ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಮಣ್ಣು ಒಂದು ಸ್ವಾಭಾವಿಕ ವಸ್ತು. ಇದರಲ್ಲಿ ಖನಿಜಾಂಶವುಳ್ಳ ವಿವಿಧ ಗಾತ್ರದ ಅನೇಕ ಪದರುಗಳಿವೆ(ಸಾಯಿಲ್ ಹಾರಿಜಾನ್ಸ್), ಇದು ತನ್ನ ಮೂಲ ವಸ್ತುವಿಗಿಂತ ಮೇಲ್ಮೈಯಲ್ಲಿ ಭೌತಿಕವಾಗಿ, ರಾಸಾಯನಿಕವಾಗಿ, ಮತ್ತು ಖನಿಜಾಂಶಗಳ ಇರುವಿಕೆಯಲ್ಲಿ ವ್ಯತ್ಯಾಸ ತೋರುತ್ತದೆ. ಇದು ರಾಸಾಯನಿಕವಾಗಿ ಹಾಗು ಪರಿಸರದ ಕ್ರಿಯೆಗಳಿಂದಾಗಿ ಮುರಿದ ಬಂಡೆಗಳಿಂದ ಅಥವಾ ಕೊಚ್ಚಿಹೋದ ಅನೇಕ ಮಾರ್ಪಾಡುಗಳನ್ನೊಳಗೊಂಡ, ಹವಾ ಪರಿಣಾಮಗಳಿಂದ ,ಮತ್ತು ಭೂಸವೆತಗಳಿಂದ ರೂಪುಗೊಂಡಿದೆ .
ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿ ಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಜಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಜಿಲ್ಲೆ ಕೊಡಗನ್ನು ಗುರುತಿಸಲು ಇದಕ್ಕಿಂತ ಬೇರೆ ವರ್ಣನೆ ಬೇಕಾಗಿಲ್ಲ. ಕೊಡಗಿಗೆ ಕೂರ್ಗ್ (Coorg) ಎಂಬ ಆಂಗ್ಲೀಯ ಬಳಕೆಯೂ ಇದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯) (ಆಂಗ್ಲ:Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಮ್ಯಾಗ್ಟೆಜಂಗ್ನೆಜಿಯಂಗ್ ಮೇರಿ ಕೋಮ್(ಜನನ ಮಾರ್ಚ ೧,೧೯೮೩),ಎಮ್.ಸಿ. ಕೋಮ್, ಮ್ಯಾಗ್ನಿಫಿಸಿಯಂಟ್ ಮೇರಿ ಅಥವಾ ಕೇವಲ ಮೇರಿ ಕೋಮ್ ಇವರು ಓರ್ವ ಭಾರತೀಯ ಮಹಿಳಾ ಬಾಕ್ಸಿಂಗ್ ಪಟು.ಇವರು ಈಶಾನ್ಯ ರಾಜ್ಯ ಮಣಿಪುರದ ಕೋಮ್ ಬುಡಕಟ್ಟು ಜನಾಂಗಕ್ಕೆ ಸೇರಿದವರು, ಐದು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಆಗಿದ್ದು ಅಲ್ಲದೇ ಪ್ರತಿ ಆರು ಚಾಂಪಿಯನ್ಷಿಪ್ ಗಳಲ್ಲೂ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸಿಂಗ್ ಪಟು ಕೂಡ ಆಗಿದ್ದಾರೆ. ಇವರು ೨೦೧೨ ಬೇಸಿಗೆ ಓಲಿಂಪಿಕ್ಸ್ ಗೆ ಆಯ್ಕೆಯಾದ ಏಕೈಕ ಭಾರತೀಯ ಮಹಿಳಾ ಬಾಕ್ಸಿಂಗ್ ಪಟು ಮತ್ತು ೫೧ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ, ಕಂಚಿನ ಪದಕ ಗೆದ್ದಿದ್ದಾರೆ.
ಹರಪ್ಪ (ಉರ್ದು/ಪಂಜಾಬಿ: ہڑپہ, pronounced [ɦəɽəpːaː]) ಸಾಹಿವಾಲ್ ನ ಪಶ್ಚಿಮಕ್ಕೆ 20 km (12 mi)ದೂರದಲ್ಲಿರುವ, ಪಾಕಿಸ್ತಾನದ ಈಶಾನ್ಯದಲ್ಲಿನ ಪಂಜಾಬ್ ಪ್ರಾಂತ್ಯದಲ್ಲಿನ ಒಂದು ಮಹತ್ವದ ಪ್ರಾಚ್ಯವಸ್ತು ಸಂಶೋಧನಾ ಕುತೂಹಲಗಳ ಆಗರವಾದಂತಹ ಸ್ಥಳ. ಹಿಂದೆ ರಾವಿ ನದಿ ಹರಿಯುತ್ತಿದ್ದ ಸ್ಥಳದಲ್ಲಿ ಈಗ ಇರುವಂತಹ ಒಂದು ಆಧುನಿಕ ಹಳ್ಳಿಯ ಹೆಸರಿನಿಂದ ಇದಕ್ಕೂ ಈ ಹೆಸರು ಬಂದಿದ್ದು, ಈ ಹಳ್ಳಿಯು ಸಂಶೋಧನಾ ಸ್ಥಳದ ಆಗ್ನೇಯಕ್ಕೆ ಸುಮಾರು 5 km (3 mi) ದೂರದಲ್ಲಿದೆ. ಈ ಸ್ಥಳದಲ್ಲಿ ಕಂಚಿನ ಯುಗದ ಕೋಟೆಕೊತ್ತಲಗಳುಳ್ಳ ನಗರದ ಅವಶೇಷಗಳಿದ್ದು,ಇದು ಸಿಮೆಟ್ರಿ H ವಿಧಾನದ ಒಂದು ಭಾಗವಾಗಿದೆ ಹಾಗೂ ಸಿಂಧು ಕಣಿವೆ ನಾಗರಿಕತೆಯ ಅವಶೇಷಗಳ ಆಗರವಾಗಿದೆ; ಸಿಂಧ್ ಮತ್ತು ಪಂಜಾಬ್ ಗಳಲ್ಲಿ ಇದು ಕೇಂದ್ರಿತವಾಗಿದೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.