The most-visited ಕನ್ನಡ Wikipedia articles, updated daily. Learn more...
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರ ಬೆಂಗಳೂರು ನಗರ. ಬೆಂಗಳೂರು ತಾಲೂಕು 486 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು 3 ತಾಲ್ಲೂಕುಗಳನ್ನು ಹೊಂದಿದ್ದು, ಬೆಂಗಳೂರು ತಾಲ್ಲೂಕು ವಿಭಜಸಿ ಯಲಹಂಕ ತಾಲೂಕು ರಚನೆ, ಬೆಂಗಳೂರು ದಕ್ಷಿಣ ತಾಲೂಕನ್ನು ಬನಶಂಕರಿ ಎಂದು ಮರು ನಾಮಕರಣ ಮಾಡಲಾಗಿದೆ, ಬನಶಂಕರಿ ತಾಲ್ಲೂಕು ವಿಭಜಸಿ ಕೃಷ್ಣರಾಜಪುರ ತಾಲೂಕು ರಚನೆ ಮಾಡಲಾಗಿದೆ.
ಕನ್ನಡ ಪ್ರವಾಸ ಸಾಹಿತ್ಯ 19ನೆಯ ಶತಮಾನದಲ್ಲಿಯೇ ಆರಂಭವಾಯಿತು. ಜವಹರಲಾಲ್ ನೆಹರೂರವರು ಕೆ.ಪಿ.ಎಸ್.ಮೆನೆನ್ ರವರ ಗ್ರಂಥಕ್ಕೆ ಮುನ್ನುಡಿ ಬರೆಯುತ್ತ ಹೀಗೆ ಹೇಳಿದ್ದಾರೆ: ‘ಪ್ರವಾಸ ಮಾಡುವುದು ಒಳ್ಳೆಯದು; ಹಾಗೆ ಪ್ರವಾಸ ಮಾಡಲಾರದೇ ಹೋದಾಗ ಪ್ರವಾಸದ ಬಗೆಗೆ ಬಂದಿರುವ ಸಾಹಿತ್ಯವನ್ನಾದರೂ ಓದುವುದು ಉತ್ತಮ ಹವ್ಯಾಸ’. ಕನ್ನಡಿಗರು ಈ ಹವ್ಯಾಸ ಬೆಳೆಸಿಕೊಳ್ಳಲು ಸಾಕಷ್ಟು ಸರಕಿದೆ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಮಣ್ಣು ಒಂದು ಸ್ವಾಭಾವಿಕ ವಸ್ತು. ಇದರಲ್ಲಿ ಖನಿಜಾಂಶವುಳ್ಳ ವಿವಿಧ ಗಾತ್ರದ ಅನೇಕ ಪದರುಗಳಿವೆ(ಸಾಯಿಲ್ ಹಾರಿಜಾನ್ಸ್), ಇದು ತನ್ನ ಮೂಲ ವಸ್ತುವಿಗಿಂತ ಮೇಲ್ಮೈಯಲ್ಲಿ ಭೌತಿಕವಾಗಿ, ರಾಸಾಯನಿಕವಾಗಿ, ಮತ್ತು ಖನಿಜಾಂಶಗಳ ಇರುವಿಕೆಯಲ್ಲಿ ವ್ಯತ್ಯಾಸ ತೋರುತ್ತದೆ. ಇದು ರಾಸಾಯನಿಕವಾಗಿ ಹಾಗು ಪರಿಸರದ ಕ್ರಿಯೆಗಳಿಂದಾಗಿ ಮುರಿದ ಬಂಡೆಗಳಿಂದ ಅಥವಾ ಕೊಚ್ಚಿಹೋದ ಅನೇಕ ಮಾರ್ಪಾಡುಗಳನ್ನೊಳಗೊಂಡ, ಹವಾ ಪರಿಣಾಮಗಳಿಂದ ,ಮತ್ತು ಭೂಸವೆತಗಳಿಂದ ರೂಪುಗೊಂಡಿದೆ .
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
{{#if:| ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಶಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. .
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
{{#if:| ಬೆಂಗಳೂರು ಗ್ರಾಮಾಂತರ ಜಿಲ್ಲೆ ಕರ್ನಾಟಕದ 30 ಜಿಲ್ಲೆಗಳಲ್ಲೊಂದು. 1986ರಲ್ಲಿ ಬೆಂಗಳೂರು ಜಿಲ್ಲೆಯನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಎಂದು ವಿಂಗಡಿಸಿ ರಚಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4 ತಾಲ್ಲೂಕು, 17 ಹೋಬಳಿಗಳು 1122 ಹಳ್ಳಿಗಳು, 3 ನಗರಸಭೆ, 2 ಪುರಸಭೆ, 1 ಪಟ್ಟಣ ಪಂಚಾಯಿತಿ ಮತ್ತು 229 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ, ಅದರಲ್ಲಿ ಬೂದಿಹಾಳ ಗ್ರಾಮ ಪಂಚಾಯಿತಿ ಪ್ರಮುಖವಾ..
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತ, ಅಧಿಕೃತವಾಗಿ: ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಶಬ್ದ ಮಾಲಿನ್ಯ ಮಾನವ ಅಥವಾ ಪ್ರಾಣಿಗಳ ಜೀವನದ ಮೇಲೆ ದುಃಪರಿಣಾಮ ಬೀರಿ ಅವುಗಳ ಜೀವನ ಚಟುವಟಿಕೆಯ ಸಮತೋಲಕ್ಕೆ ಭಂಗ ತರುವಂಥ, ಮನುಷ್ಯ-ಪ್ರಾಣಿ-ಯಂತ್ರಗಳಿಂದ ಹೊಮ್ಮಿ ಬರುವ ಸಪ್ಪಳಕ್ಕೆ 'ಶಬ್ದ ಮಾಲಿನ್ಯ' ಎನ್ನಲಾಗಿದೆ. ಸಾಮಾನ್ಯವಾಗಿ ಸಾರಿಗೆ, ಅದರಲ್ಲೂ ವಿಶೇಷವಾಗಿ ಮೋಟಾರ್ ವಾಹನಸಂಚಾರದಿಂದ ಹೊಮ್ಮುವ ಶಬ್ದ ಈ ಮಲಿನತೆಗೆ ತನ್ನ ಕಾಣಿಕೆ ನೀಡುತ್ತದೆ. ವಿಶ್ವದಾದ್ಯಂತ ಶಬ್ದಮಾಲಿನ್ಯಕ್ಕೆ ಮುಖ್ಯ ಕಾರಣ ಸಾರಿಗೆ ವ್ಯವಸ್ಥೆ - ಎಂದರೆ ವಿವಿಧ ರೀತಿಯ ವಾಹನಗಳ ಸದ್ದು - ವಿಮಾನದ ಸದ್ದು ಹಾಗೂ ರೈಲುಗಳ ಸದ್ದು ಕೂಡ ಇದರಲ್ಲಿ ಸೇರಿರುತ್ತದೆ.ಕಳಪೆ ನಗರ ಯೋಜನೆಗಳ ಕಾರಣದಿಂದಾಗಿ ಅಕ್ಕಪಕ್ಕದಲ್ಲೇ ನಾಯಿಕೊಡೆಗಳಂತೆ ಮೇಲೇಳುತ್ತಿರುವ ಕೈಗಾರಿಕೆಗಳು ಮತ್ತು ಮನೆಗಳು, ವಸತಿ ಪ್ರದೇಶಗಳಲ್ಲಿನ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಹರಪ್ಪ (ಉರ್ದು/ಪಂಜಾಬಿ: ہڑپہ, pronounced [ɦəɽəpːaː]) ಸಾಹಿವಾಲ್ ನ ಪಶ್ಚಿಮಕ್ಕೆ 20 km (12 mi)ದೂರದಲ್ಲಿರುವ, ಪಾಕಿಸ್ತಾನದ ಈಶಾನ್ಯದಲ್ಲಿನ ಪಂಜಾಬ್ ಪ್ರಾಂತ್ಯದಲ್ಲಿನ ಒಂದು ಮಹತ್ವದ ಪ್ರಾಚ್ಯವಸ್ತು ಸಂಶೋಧನಾ ಕುತೂಹಲಗಳ ಆಗರವಾದಂತಹ ಸ್ಥಳ. ಹಿಂದೆ ರಾವಿ ನದಿ ಹರಿಯುತ್ತಿದ್ದ ಸ್ಥಳದಲ್ಲಿ ಈಗ ಇರುವಂತಹ ಒಂದು ಆಧುನಿಕ ಹಳ್ಳಿಯ ಹೆಸರಿನಿಂದ ಇದಕ್ಕೂ ಈ ಹೆಸರು ಬಂದಿದ್ದು, ಈ ಹಳ್ಳಿಯು ಸಂಶೋಧನಾ ಸ್ಥಳದ ಆಗ್ನೇಯಕ್ಕೆ ಸುಮಾರು 5 km (3 mi) ದೂರದಲ್ಲಿದೆ. ಈ ಸ್ಥಳದಲ್ಲಿ ಕಂಚಿನ ಯುಗದ ಕೋಟೆಕೊತ್ತಲಗಳುಳ್ಳ ನಗರದ ಅವಶೇಷಗಳಿದ್ದು,ಇದು ಸಿಮೆಟ್ರಿ H ವಿಧಾನದ ಒಂದು ಭಾಗವಾಗಿದೆ ಹಾಗೂ ಸಿಂಧು ಕಣಿವೆ ನಾಗರಿಕತೆಯ ಅವಶೇಷಗಳ ಆಗರವಾಗಿದೆ; ಸಿಂಧ್ ಮತ್ತು ಪಂಜಾಬ್ ಗಳಲ್ಲಿ ಇದು ಕೇಂದ್ರಿತವಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ನೀರಾವರಿ ಎಂದರೆ ನೆಲಕ್ಕೆ ಕೃತಕವಾಗಿ ನೀರಿನ ಅನ್ವಯ (ಇರಿಗೇಶನ್). ಮುಖ್ಯವಾಗಿ ಬೇಸಾಯಕ್ಕೆ ಮಳೆನೀರನ್ನು ಮಾತ್ರ ಆಶ್ರಯಿಸದೆ ಇತರ ನೈಸರ್ಗಿಕ ಮೂಲಗಳಿಂದ-ಉದಾಹರಣೆಗೆ ನದಿ ಸರೋವರ ತೋಡುಬಾವಿಗಳಿಂದ-ನೀರನ್ನು ಒದಗಿಸುವುದು ನೀರಾವರಿಯ ಉದ್ದೇಶ. ನೀರಿನ ಮೂಲ (ಜಲಾಶಯ) ಮತ್ತು ಸಂಗ್ರಹಿತ ಜಲವನ್ನು ಉದ್ದಿಷ್ಟ ನಿವೇಶನಗಳಿಗೆ ಹರಿಸಲು ಕಾಲುವೆಗಳೂ-ಇವು ನೀರಾವರಿಯ ಪ್ರಮುಖಾವಶ್ಯಕತೆಗಳು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಗ್ರೀಕ್ ἐνέργεια ಮೂಲ ಪದಗಳಾದ ಎನರ್ಜೀಯಾ ' (ಚಟುವಟಿಕೆ, ಕಾರ್ಯಾಚರಣೆ) ಮತ್ತು ἐνεργός ಎನರ್ಗೊಸ್' (ಸಕ್ರಿಯ, ಕಾರ್ಯನಿರತ) ಎಂಬ ಪದಗಳಿಂದ ಭೌತವಿಜ್ಞಾನದ ಶಕ್ತಿ ('ಎನರ್ಜಿ') (=ಇಂಧನ, ಬಲ) ಎಂಬ ಇಂಗ್ಲಿಷ್ ಪದವು ನಿಷ್ಪನ್ನವಾಗಿದೆ. 'ಶಕ್ತಿ' ಎಂಬುದು, ಬಲವು ನಿರ್ವಹಿಸಬಲ್ಲ ಕಾರ್ಯದ ಯಾವುದೇ ಭೌತಿಕ ಅದಿಶ ಪರಿಮಾಣವನ್ನು ಸೂಚಿಸುವುದಾಗಿದೆ. ಸಂರಕ್ಷಣಾ ನಿಯಮಕ್ಕೆ ಒಳಗಾಗುವ ವಸ್ತು ಮತ್ತು ವ್ಯವಸ್ಥೆಗಳ ಲಕ್ಷಣವೂ ಆಗಿದೆ.