The most-visited ಕನ್ನಡ Wikipedia articles, updated daily. Learn more...
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
Odor Pungentಸಾಂದ್ರತೆ 2.144 mg cm−3 (at 0 °C) ಕರಗು ಬಿಂದು -192 °C, 81 K, -314 °F ಕುದಿ ಬಿಂದು -112 °C, 161 K, -170 °F ಕರಗುವಿಕೆ ನೀರಿನಲ್ಲಿ 1.05 g L−1 (at 0 °C) ಕರಗುವಿಕೆ other solvents Very soluble in CCl4, sulfuric acid Vapor pressure 55.7 atm (−12.15 °C or 10.13 °F or 261.00 K) +6.7·10−6 cm3/mol ವಕ್ರೀಕಾರಕ ಸೂಚಿ (nD) (ರಿಫ್ರಾಕ್ಟಿವ್ ಇಂಡೆಕ್ಸ್) 1.2226 (liquid), 1.00052 (gas, STP, 546 nm — note high dispersion) ರಚನೆ C2v Digonal Dihedral Hybridisation sp2 for O1 ದ್ವಿಧ್ರುವ ಚಲನೆ 0.53 D ಉಷ್ಣರಸಾಯನಶಾಸ್ತ್ರ ರೂಪಗೊಳ್ಳುವ ಸ್ಟ್ಯಾಂಡರ್ಡ್ ಶಾಖಪ್ರಮಾಣ ΔfHo298 142.67 kJ mol−1ಸ್ಟ್ಯಾಂಡರ್ಡ್ಮೋಲಾರ್ ಎಂಟ್ರಪಿ So298 238.92 J K−1 mol−1 Hazards GHS pictograms GHS Signal word H270, H314, H318 NFPA 704 Lethal dose or concentration (LD, LC): 12.6 ppm (mouse, 3 hr)50 ppm (human, 30 min)36 ppm (rabbit, 3 hr)21 ppm (mouse, 3 hr)21.8 ppm (rat, 3 hr)24.8 ppm (guinea pig, 3 hr)4.8 ppm (rat, 4 hr) US health exposure limits (NIOSH): TWA 0.1 ppm (0.2 mg/m3) C 0.1 ppm (0.2 mg/m3) 5 ppm Y (verify) (what is: Y/N?)Infobox references ಓಝೋನ್' ('O3 ), ಅಥವಾ ಟ್ರೈಆಕ್ಸಿಜನ್ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ರೈತನು ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು. ಕೃಷಿಯ ಕಾಲಮಾನ ನವಶಿಲಾಯುಗದಷ್ಟು ಹಿಂದಿನದ್ದು ಎಂದು ನಿರ್ಧರಿಸಲಾಗಿದೆ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಒಲಿಂಪಿಕ್ಸ್ನಲ್ಲಿ ಭಾರತದ ಪ್ರದರ್ಶನ
ಭಾರತವು ೧೯೦೦ರಲ್ಲಿ ಮೊದಲ ಬಾರಿಗೆ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿತು. ಭಾರತದಿಂದ ಸ್ಪರ್ಧಿಸಿದ ಏಕೈಕ ಕ್ರೀಡಾಪಟು ನಾರ್ಮನ್ ಪ್ರಿಟ್ಚರ್ಡ್. ಅವರು ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎರಡು ಬೆಳ್ಳಿಯ ಪದಕಗಳನ್ನು ಗೆದ್ದಿದ್ದರು.