The most-visited ಕನ್ನಡ Wikipedia articles, updated daily. Learn more...
ಪ್ರಣಿತಾ ಸುಭಾಷ್ ಭಾರತೀಯ ನಟಿ, ರೂಪದರ್ಶಿ ಅವರು ಕನ್ನಡ, ತೆಲುಗು ಮತ್ತು ತಮಿಳು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕಿಂತ ಮುಂಚಿತವಾಗಿ ಮಾಡೆಲಿಂಗ್ನಲ್ಲಿ ವೃತ್ತಿಜೀವನವನ್ನು ಆರಂಭಿಸಿದರು . ೨೦೧೦ರ ಕನ್ನಡ ಚಿತ್ರವಾದ ಪೋರ್ಕಿ, ತೆಲುಗು ಚಲನಚಿತ್ರ ಪೊಕಿರಿ ಚಿತ್ರದ ರಿಮೇಕ್ನಲ್ಲಿ ನಟಿಯಾಗಿ ಅಭಿನಯಿಸಿದರು ಮತ್ತು ಅದೇ ವರ್ಷದಲ್ಲಿ ತೆಲುಗು ಚಲನಚಿತ್ರವಾದ ಎಮ್ ಪಿಲ್ಲೋ ಎಮ್ ಪಿಲ್ಲಡೊದಲ್ಲಿ ಅಭಿನಯಿಸಿದರು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಪಂಜುರ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಸರಗೋಡಿನ ಕೆಲ ಭಾಗಗಳಲ್ಲಿ ಪೂಜಿಸಲ್ಪಡುವ, ಹಂದಿಯ ಮುಖದ ಒಂದು ದೈವ. ಮೂಲ ಮೈಸಂದಾಯ(ಮಹಿಷ), ನಂದಿಗೋಣೆ(ಹೋರಿ) ಹಾಯ್ಗುಳಿ(ಹಾಯುವ ಗೂಳಿ), ಪಿಲ್ಚಂಡಿ( ಹುಲಿ) ಆನೆ, ಕುದುರೆ ಇವೆಲ್ಲವೂ ಒಂದಲ್ಲ ಒಂದು ರೂಪದಲ್ಲಿ ತುಳುನಾಡಿನಲ್ಲಿ ಪೂಜೆ ಪಡೆಯುತ್ತಿವೆ. ಅದೇ ರೀತಿ ಮೂಲದಲ್ಲಿ ಪಂಜುರ್ಲಿ(ಹಂದಿಯ ಮರಿ) ದೈವತ್ವಕ್ಕೇರಲ್ಪಟ್ಟು ತುಳುನಾಡಿನಾದ್ಯಂತ ಪೂಜೆ ಪಡೆಯುತ್ತಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮಾನವ ಸಾಮಾಜಿಕ ವ್ಯವಹಾರಗಳಲ್ಲಿ, ತಾರತಮ್ಯ ಎಂದರೆ ಒಬ್ಬ ವ್ಯಕ್ತಿಯು ಯಾವ ಗುಂಪು, ವರ್ಗ, ಅಥವಾ ಶ್ರೇಣಿಗೆ ಸೇರಿದ್ದಾನೊ ಎಂದು ಗ್ರಹಿಸಿಲಾಗುತ್ತದೆಯೊ ಅದನ್ನು ಆಧರಿಸಿ ಆ ವ್ಯಕ್ತಿಯ ಕಡೆಗೆ ಮಾಡುವ ವ್ಯವಹಾರ ಅಥವಾ ಅದರ ಆಲೋಚನೆ ಅಥವಾ ಅವನ ಪರವಾಗಿ ಮಾಡುವ ವ್ಯತ್ಯಾಸ. ಇವುಗಳಲ್ಲಿ ವಯಸ್ಸು, ಬಣ್ಣ, ಕ್ಷಮೆ ನೀಡಲಾದ ಅಥವಾ ದಾಖಲೆ ತಡೆಹಿಡಿಯಲಾದ ದೋಷ ನಿರ್ಣಯಗಳು, ಅಂಗವೈಕಲ್ಯ, ಜನಾಂಗೀಯತೆ, ಕುಟುಂಬದ ಸ್ಥಾನಮಾನ, ಲಿಂಗ ಗುರುತು, ಆನುವಂಶಿಕ ಗುಣಲಕ್ಷಣಗಳು, ವೈವಾಹಿಕ ಸ್ಥಿತಿ, ರಾಷ್ಟ್ರೀಯತೆ, ಜನಾಂಗ, ಧರ್ಮ, ಲಿಂಗ ಮತ್ತು ಲೈಂಗಿಕ ದೃಷ್ಟಿಕೋನ ಸೇರಿವೆ. ತಾರತಮ್ಯವು ಒಂದು ನಿರ್ದಿಷ್ಟ ಗುಂಪು ಅಥವಾ ಸಾಮಾಜಿಕ ವರ್ಗದಲ್ಲಿ ಅವರುಗಳ ವಾಸ್ತವಿಕ ಅಥವಾ ಗ್ರಹಿಸಿದ ಸದಸ್ಯತ್ವವನ್ನು ಆಧರಿಸಿ "ಜನರನ್ನು ಸಾಮಾನ್ಯವಾಗಿ ನಡೆಸಿಕೊಳ್ಳುವ ರೀತಿಗಿಂತ ಹೆಚ್ಚು ಕೆಟ್ಟದಾದ ರೀತಿಯಲ್ಲಿ" ಒಬ್ಬ ವ್ಯಕ್ತಿ ಅಥವಾ ಗುಂಪಿನತ್ತ ವ್ಯವಹಾರವನ್ನು ಒಳಗೊಂಡಿರುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮೈಸೂರು ದಸರಾವು ಭಾರತದಲ್ಲಿ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನ ವಿಜಯದಶಮಿ. ಹಬ್ಬವನ್ನು ಹಿಂದೂ ಕ್ಯಾಲೆಂಡರ್ ತಿಂಗಳ ಅಶ್ವಿನ್ನಲ್ಲಿ ಹತ್ತನೇ ದಿನದಂದು ಆಚರಿಸಲಾಗುತ್ತದೆ, ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ನಯನತಾರ ಅವರು ೨೦೦೩ ರ ಮಲಯಾಳಂ ಚಿತ್ರ ಮನಾಸ್ಸಿನಕ್ಕರೆಯಲ್ಲಿ ಜಯರಾಮ್ ಅವರೊಂದಿಗೆ ಅಭಿನಯಿಸಿದರು. ತಮಿಳು ಚಿತ್ರರಂಗದಲ್ಲಿ ಆಯ್ಯ ಮತ್ತು ತೆಲುಗು ಚಿತ್ರರಂಗದಲ್ಲಿ ಲಕ್ಷ್ಮಿ ಚಲನಚಿತ್ರದೊಂದಿಗೆ ಅವರು ಚೊಚ್ಚಲ ಪ್ರವೇಶ ಮಾಡಿದರು. ಇದರ ನಂತರ ಅವರು ಚಂದ್ರಮುಖಿ , ದುಬೈ ಸೀನು, ತುಲಿಯಾಸಿ, ಬಿಲ್ಲಾ, ಯಾರಡಿ ನೀ ಮೊಹಿನಿ, ಆಧವನ್, ಅಡರ್ಸ್ , ರಾಜಾ ರಾಣಿ, ಅರಂಬಮ್, ಥನಿ ಒರುವಾನ್, ಮಾಯಾ, ನಾನು ರೌಡಿ ಧಾನ್, ಬಾಬು ಬಂಗಾರಮ್ ಮತ್ತು ಇರು ಮುಗಾನ್ ಮೊದಲಾದ ತಮಿಳು ಮತ್ತು ತೆಲಗು ಚಲನಚಿತ್ರಗಳಲ್ಲಿ ಯಶಸ್ವಿಯಾಗಿ ನಟಿಸಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.