The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಪಂಜುರ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಸರಗೋಡಿನ ಕೆಲ ಭಾಗಗಳಲ್ಲಿ ಪೂಜಿಸಲ್ಪಡುವ, ಹಂದಿಯ ಮುಖದ ಒಂದು ದೈವ. ಮೂಲ ಮೈಸಂದಾಯ(ಮಹಿಷ), ನಂದಿಗೋಣೆ(ಹೋರಿ) ಹಾಯ್ಗುಳಿ(ಹಾಯುವ ಗೂಳಿ), ಪಿಲ್ಚಂಡಿ( ಹುಲಿ) ಆನೆ, ಕುದುರೆ ಇವೆಲ್ಲವೂ ಒಂದಲ್ಲ ಒಂದು ರೂಪದಲ್ಲಿ ತುಳುನಾಡಿನಲ್ಲಿ ಪೂಜೆ ಪಡೆಯುತ್ತಿವೆ. ಅದೇ ರೀತಿ ಮೂಲದಲ್ಲಿ ಪಂಜುರ್ಲಿ(ಹಂದಿಯ ಮರಿ) ದೈವತ್ವಕ್ಕೇರಲ್ಪಟ್ಟು ತುಳುನಾಡಿನಾದ್ಯಂತ ಪೂಜೆ ಪಡೆಯುತ್ತಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಈ ಲೇಖನ ಸಮಾಜ ವಿಜ್ಞಾನದ ಬಗ್ಗೆ. ಅರ್ಥಶಾಸ್ತ್ರ ಪದದ ಇತರ ಬಳಕೆಗಳಿಗಾಗಿ ಅರ್ಥಶಾಸ್ತ್ರ (ದ್ವಂದ್ವ ನಿವಾರಣೆ) ನೋಡಿ.ಅರ್ಥಶಾಸ್ತ್ರವು ಸರಕುಗಳ ಮತ್ತು ಸೇವೆಗಳ ಉತ್ಪಾದನೆ, ಹಂಚುವಿಕೆ ಮತ್ತು ಬಳಕೆಗಳನ್ನು ಅಧ್ಯಯನ ಮಾಡುವ ಒಂದು ಸಮಾಜ ವಿಜ್ಞಾನ. ಪ್ರಚಲಿತ ಆರ್ಥಿಕ ವಿನ್ಯಾಸಗಳು, ಭೌತಿಕ ವಿಜ್ಞಾನಗಳಿಗೆ ಹೆಚ್ಚಿನ ಸಮಾನ ಧರ್ಮವುಳ್ಳ ಒಂದು ಪ್ರಾಯೋಗಿಕ ಹಾದಿ ಬಳಸುವ ಒಂದು ಅಪೇಕ್ಷೆಗೆ ಬದ್ಧವಾಗಿ, ೧೯ನೇ ಶತಮಾನದಲ್ಲಿ ತಡವಾಗಿ ರಾಜಕೀಯ ಆರ್ಥಿಕ ವ್ಯವಸ್ಥೆಯ ವಿಶಾಲವಾದ ವ್ಯಾಪ್ತಿಯಿಂದ ಹೊರಹೊಮ್ಮಿದವು.
ಕುತುಬ್ ಮಿನಾರ್ ಸಂಕೀರ್ಣವು ಭಾರತದ ದೆಹಲಿಯಲ್ಲಿರುವ ಸ್ಮಾರಕ ಮತ್ತು ಕಟ್ಟಡಗಳ ಸಮೂಹವಾಗಿದೆ. ಈ ಸಂಕೀರ್ಣದ ಅತಿ ಪ್ರಸಿದ್ಧ ಅಂಗವೆಂದರೆ ಕುತುಬ್ ಮಿನಾರ್ ಗೋಪುರ. ಇದರ ನಿರ್ಮಾಣ ಕಾರ್ಯವನ್ನು ಗುಲಾಮ ಸಂತತಿಯ ಮೊದಲ ಸುಲ್ತಾನ ಕುತ್ಬುದ್ದೀನ್ ಐಬಕ್ ಪ್ರಾರಂಭಿಸಿದನು.ಆದರೆ ಗೋಪುರದ ರಚನೆಯನ್ನು ಇಲ್ತಾಮಿಷ್ ಪೂರ್ಣಗೊಳಿಸಿದನು ನಂತರ ಅಲ್ತ್ಮಷ್ ಮತ್ತು ಅಲ್ಲಾ ಉದ್ದೀನ್ ಖಿಲ್ಜಿ ಇತ್ಯಾದಿ ಸುಲ್ತಾನರು ಬೆಳೆಸಿಕೊಂಡು ಹೋದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮಾಪಣ್ಣ ಮಲ್ಲಿಕಾರ್ಜುನ್ ಖರ್ಗೆ (ಜನನ 21 ಜುಲೈ 1942) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, 16 ನೇ ಲೋಕಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದಾರೆ. ಇವರು ಭಾರತ ಸರ್ಕಾರದಲ್ಲಿ ಮಾಜಿ ರೈಲ್ವೆ ಸಚಿವರಾಗಿದ್ದರು ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿದ್ದರು. ಖರ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಮತ್ತು 2009 ರಿಂದ ಸಂಸತ್ತಿನ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಸದಸ್ಯ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಭಾರತೀಯ ಜಾತಿ ಪದ್ದತಿ ಯು ಸಾಮಾಜಿಕ ಶ್ರೇಣೀಕರಣವನ್ನು ವಿವರಿಸುತ್ತದೆ.ಅದಲ್ಲದೇ ಸಾಮಾಜಿಕ ನಿರ್ಭಂಧಗಳಡಿ ಭಾರತ ಉಪಖಂಡದ ಸಾವಿರಾರು ಪಂಗಡದ ಪ್ರವರ್ಗಗಳನ್ನು, ವಂಶವಾಹಿನಿಗಳ ಸಮೂಹವನ್ನು ವ್ಯಾಖ್ಯಾನಿಸುತ್ತದೆ.ಇದನ್ನೇ ಜಾತಿ ಗಳು ಅಥವಾ ಕೋಮು ಗಳೆಂದು ಹೇಳಲಾಗುತ್ತದೆ. ಈ ಜಾತಿಯಲ್ಲಿಯೇ ಅನ್ಯಗೋತ್ರ ಗುಂಪುಗಳ ಅಸ್ತಿತ್ವ ಇದೆ,ಇದನ್ನು ಗೋತ್ರಗಳು,ವಂಶವಾಹಿನಿ ಅಥವಾ ಕುಟುಂಬದ ಕುಲಗೋತ್ರವನ್ನು ವೈಯಕ್ತಿಕ ನೆಲೆಯಲ್ಲಿ ಗುರುತಿಸಲಾಗುತ್ತದೆ. ಹಲವಾರು ಉಪ-ಜಾತಿಗಳಲ್ಲಿ ಶಾಕಾದ್ವಿಪಿ,ಕೂಡಾ ಒಂದು,ಒಂದೇ ಗೋತ್ರದಲ್ಲಿ ವಿವಾಹ ಅನುಮತಿಸಿದ್ದರೂ ಅದನ್ನು ಪರ್ಯಾಯ ನಿರ್ಭಂದಿತ ಸಗೋತ್ರ ವಿವಾಹಕ್ಕೆ ಪರಿಗಣಿಸಲಾಗುತ್ತದೆ.(ಉದಾಹರಣೆಗೆ ಅಡ್ಡಹೆಸರುಗಳು ಒಂದೇ ಆಗಿದ್ದರೆ ಅಲ್ಲಿ ವಿವಾಹ ನಿಷಿದ್ದದ ನಿಯಮ ಉಂಟು) ಹಿಂದುತ್ವದೊಂದಿಗೆ ಗುರುತಿಸಿಕೊಂಡಿರುವ ಇತರ ಮುಸ್ಲಿಮರ ಕೆಲವು ಗುಂಪುಗಳು ಮತ್ತು ಕ್ರಿಶ್ಚನ್ ರು ಕೂಡಾ ಇದೇ ತೆರನಾದ ಗುಂಪು ಪ್ರಭೇದವನ್ನು ಹೊಂದಿರುವುದು ಭಾರತದ ಉಪಖಂಡದಲ್ಲಿ ಕಾಣುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಯುನೆಸ್ಕೋ ( ವಿಶ್ವಸಂಸ್ಥೆಯ ಸಾಂಸ್ಕೃತಿಕ ಅಂಗ) ವಿಶ್ವದ ಕೆಲವು ವಿಶಿಷ್ಟ ತಾಣಗಳನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸುತ್ತದೆ. ಇಂತಹ ತಾಣಗಳು ಅರಣ್ಯ, ಪರ್ವತ, ಸರೋವರ, ಮರುಭೂಮಿ, ಸ್ಮಾರಕ, ಕಟ್ಟಡ, ಸಂಕೀರ್ಣ ಅಥವಾ ಒಂದು ನಗರವಾಗಿರಬಹುದು. ೨೧ ಸದಸ್ಯರಾಷ್ಟ್ರಗಳನ್ನೊಳಗೊಂಡ ಯುನೆಸ್ಕೋ ವಿಶ್ವ ಪರಂಪರೆಯ ತಾಣ ಸಮಿತಿಯು ಇಂತಹ ತಾಣಗಳ ಅರ್ಹತೆಯನ್ನು ಅಳೆದು ಸೂಕ್ತವಾದಲ್ಲಿ ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿಸುತ್ತದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.