The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಪಂಜುರ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಸರಗೋಡಿನ ಕೆಲ ಭಾಗಗಳಲ್ಲಿ ಪೂಜಿಸಲ್ಪಡುವ, ಹಂದಿಯ ಮುಖದ ಒಂದು ದೈವ. ಮೂಲ ಮೈಸಂದಾಯ(ಮಹಿಷ), ನಂದಿಗೋಣೆ(ಹೋರಿ) ಹಾಯ್ಗುಳಿ(ಹಾಯುವ ಗೂಳಿ), ಪಿಲ್ಚಂಡಿ( ಹುಲಿ) ಆನೆ, ಕುದುರೆ ಇವೆಲ್ಲವೂ ಒಂದಲ್ಲ ಒಂದು ರೂಪದಲ್ಲಿ ತುಳುನಾಡಿನಲ್ಲಿ ಪೂಜೆ ಪಡೆಯುತ್ತಿವೆ. ಅದೇ ರೀತಿ ಮೂಲದಲ್ಲಿ ಪಂಜುರ್ಲಿ(ಹಂದಿಯ ಮರಿ) ದೈವತ್ವಕ್ಕೇರಲ್ಪಟ್ಟು ತುಳುನಾಡಿನಾದ್ಯಂತ ಪೂಜೆ ಪಡೆಯುತ್ತಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕಿತ್ತೂರು ಬೆಳಗಾವಿ ಜಿಲ್ಲೆಯ ಒಂದು ಊರು.ಇಂದು ಇದು ಸಣ್ಣ ಗ್ರಾಮವಾಗಿದ್ದರೂ ಹಿಂದೆ ಕನ್ನಡನಾಡಿನ ಮಹಾನಗರಗಳಲ್ಲೊಂದಾಗಿತ್ತು. 12ನೆಯ ಶತಮಾನದಿಂದ ಕಿತ್ತೂರು ಎಂಬ ಹೆಸರು ಬಳಕೆಯಲ್ಲಿದೆ ಬೈಲಹೊಂಗಲದಿಂದ ೨೬ ಕಿಮೀ ದೂರದಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಾರವಾಡ-ಬೆಳಗಾವಿ ನಡುವೆ ಇದೆ. ೧೨ನೆಯ ಶತಮಾನದ ಹೊತ್ತಿಗೇ ಈ ಊರು ಇದ್ದುದು ಇಲ್ಲಿನ ಬಸವೇಶ್ವರ ದೇವಾಲಯದ ಶಾಸನವೊಂದರಿಂದ ತಿಳಿದುಬರುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗಂಧದ ಗುಡಿ ( ಅನುವಾದ. ಶ್ರೀಗಂಧದ ಮರಗಳ ವಾಸಸ್ಥಾನ ) 1973 ರ ಭಾರತೀಯ ಕನ್ನಡ ಭಾಷೆಯ ಆಕ್ಷನ್ ನಾಟಕವನ್ನು ವಿಜಯ್ ನಿರ್ದೇಶಿಸಿದ್ದಾರೆ ಮತ್ತು ಎಂಪಿ ಶಂಕರ್ ನಿರ್ಮಿಸಿದ್ದಾರೆ. ರಾಜಕುಮಾರ್ ಅವರ 150 ನೇ ಚಿತ್ರದಲ್ಲಿ ಪ್ರಾಮಾಣಿಕ ಅರಣ್ಯ ಅಧಿಕಾರಿ ಕುಮಾರ್ ಪಾತ್ರದಲ್ಲಿ ವಿಷ್ಣುವರ್ಧನ್ ಅವರು ಆನಂದ್ ಎಂಬ ಎದುರಾಳಿಯಾಗಿ ನಟಿಸಿದ್ದಾರೆ, ಆದರೂ ಚಿತ್ರದ ಕೊನೆಯಲ್ಲಿ ಅವರ ಪಾತ್ರವನ್ನು ರಿಡೀಮ್ ಮಾಡಲಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಮೈಲಿ ೫,೨೮೦ ಅಡಿಗಳಿಗೆ (೧,೭೬೦ ಗಜಗಳು, ಅಥವಾ ಸುಮಾರು ೧,೬೦೯ ಮೀಟರ್ಗಳು) ಸಮಾನವಾದ ಉದ್ದದ ಏಕಮಾನ. ೫,೨೮೦ ಅಡಿಗಳ ಮೈಲಿಯನ್ನು ನಾವಿಕ ಮೈಲಿಯಿಂದ (ಸುಮಾರು ೬,೦೭೬ ಅಡಿಗಳು, ಅಥವಾ ೧,೮೫೨ ಮೀಟರ್ಗಳು) ಪ್ರತ್ಯೇಕಿಸಲು ಅದನ್ನು ಭೂ ಮೈಲಿ ಎಂದು ಕರೆಯಬಹುದು. ೧೯೫೯ರ ಅಂತರರಾಷ್ಟ್ರೀಯ ಗಜ ಮತ್ತು ಪೌಂಡ್ ಒಪ್ಪಂದ ಗಜವನ್ನು ನಿಖರವಾಗಿ ೦.೯೧೪೪ ಮೀಟರ್ಗಳೆಂದು ಪ್ರಮಾಣೀಕರಿಸುವವರೆಗೆ ಭೂ ಮೈಲಿಯ ನಿಖರವಾದ ಉದ್ದ ಇಂಗ್ಲಿಷ್ ಮಾತನಾಡುವ ದೇಶಗಳಲ್ಲಿ ಬದಲಾಗುತ್ತಿತ್ತು, ಮತ್ತು ಇದಾದ ಮೇಲೆ ಒಂದು ಮೈಲಿ ನಿಖರವಾಗಿ ೧,೬೦೯.೩೪೪ ಮೀಟರ್ಗಳೆಂದಾಯಿತು.
ಕೆಯಾನೂ ಚಾರ್ಲ್ಸ್ ರೀವ್ಸ್ pronounced /keˈɑːnuː/([ಕೆ-ಆ-ನೂ, ಇದನ್ನು ಆಗಾಗ ಕೀ-ಆ-ನೂ ಎಂದು ತಪ್ಪಾಗಿ ಉಚ್ಚರಿಸಲಾಗುತ್ತದೆ] ಜನನ ಸೆಪ್ಟೆಂಬರ್ 2, 1964), ಈತ ಕೆನಡಾದ ನಟನಾಗಿದ್ದು, ಬಿಲ್ ಎಂಡ್ ಟೆಡ್ಸ್ ಎಕ್ಸ್ಲೆಂಟ್ ಅಡ್ವೆಂಚರ್ (ಇದು ಕೊನೆಗೆ ಆ ಪಂಥದ ಒಂದು ಅತ್ಯುತ್ತಮ ಕೃತಿ ಎನ್ನಿಸಿಕೊಂಡಿತು) ನಲ್ಲಿ ತನ್ನ ಸ್ಪೇಸ್ಡ್-ಔಟ್ ಮೆಟಲ್ಹೆಡ್ ಪಾತ್ರದಿಂದ ಗುರುತಿಕೊಂಡವ. ಮತ್ತು ಈ ಎರಡು ಆರ್ಥಿಕವಾಗಿ ಹಾಗೂ ವಿಮರ್ಶೆಯ ದೃಷ್ಠಿಯಿಂದ ಉತ್ತಮವೆನಿಸಿಕೊಂಡ ಸಾಹಸ ಚಲನಚಿತ್ರಗಳಲ್ಲಿ ನಟಿಸಿ ಪ್ರಸಿದ್ಧಿಯಾದವ: "ಟಿಕ್ಕಿಂಗ್ ಟೈಮ್ ಬಾಂಬ್" ಎಂಬ ಥ್ರಿಲ್ಲರ್ ಚಿತ್ರ ಸ್ಪೀಡ್ ಮತ್ತು ವೈಜ್ಞಾನಿಕ ಕಲ್ಪನೆ-ಸಾಹಸದ ದ ಮಾಟ್ರಿಕ್ಸ್ ಚಿತ್ರತ್ರಯಗಳು. ಈತ ಅತ್ಯಂತ ಪ್ರಸಿದ್ಧರಾದ ನಿರ್ದೇಶಕರ ಅಡಿಯಲ್ಲಿ ಅಂದರೆ ಸ್ಟೆಫನ್ ಫ್ರಿಯರ್ಸ್ (1988 ರ ಸಮಯದ ಚಿತ್ರ ಡೇಂಜರಸ್ ಲಯೇಶನ್ಸ್ ); ಗುಸ್ ವ್ಯಾನ್ ಸ್ಯಾಂಟ್ (ಕೆಚ್ಚೆದೆಯ 1991ರ ಸ್ವತಂತ್ರ ಚಲನಚಿತ್ರ ಮೈ ಓನ್ ಪ್ರೈವೇಟ್ ಇದಾಹೋ (ವ್ಯಾನ್ ಸ್ಯಾಂಟ್ ಅವರೇ ಬರೆದಿದ್ದಾರೆ)); ಮತ್ತು ಬರ್ನಾರ್ಡೋ ಮರ್ಟೋಲ್ಯೂಕಿ (1993 ರ ಚಲನಚಿತ್ರ ಲಿಟಲ್ ಬುದ್ಧ ) ಮುಂತಾದವರೊಡನೆ ಕೆಲಸ ಮಾಡಿದ್ದಾನೆ.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ದೃಗ್ವಿಜ್ಞಾನದಲ್ಲಿ, ವಸ್ತುವಿನ ವಕ್ರೀಭವನದ ವಕ್ರೀಭವನ ಸೂಚ್ಯಂಕ ಅಥವಾ ಸೂಚ್ಯಂಕವು ಆಯಾಮದ ಮೂಲಕ ಎಷ್ಟು ವೇಗವಾಗಿ ಬೆಳಕು ಚಲಿಸುತ್ತದೆ ಎಂಬುದನ್ನು ವಿವರಿಸುವ ಅಳತೆಯಿಲ್ಲದ ಸಂಖ್ಯೆಯಾಗಿದೆ . ಇದನ್ನು ಈ ರೀತಿ ವ್ಯಾಖ್ಯಾನಿಸಲಾಗಿದೆ η = c v {\displaystyle \eta ={\frac {c}{v}}} ಎಲ್ಲಿ c ಎಂಬುದು ನಿರ್ವಾತದಲ್ಲಿ ಬೆಳಕಿನ ವೇಗ ಮತ್ತು v ಎಂಬುದು ಮಾಧ್ಯಮದಲ್ಲಿ ಬೆಳಕಿನ ಹಂತದ ವೇಗ . ಉದಾಹರಣೆಗೆ, ನೀರಿನ ವಕ್ರೀಭವನ ಸೂಚ್ಯಂಕ 1.333, ಅಂದರೆ ಬೆಳಕು ನೀರಿನಂತೆ ನಿರ್ವಾತದಲ್ಲಿ 1.333 ಪಟ್ಟು ವೇಗವಾಗಿ ಚಲಿಸುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.