The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಪಂಜುರ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಸರಗೋಡಿನ ಕೆಲ ಭಾಗಗಳಲ್ಲಿ ಪೂಜಿಸಲ್ಪಡುವ, ಹಂದಿಯ ಮುಖದ ಒಂದು ದೈವ. ಮೂಲ ಮೈಸಂದಾಯ(ಮಹಿಷ), ನಂದಿಗೋಣೆ(ಹೋರಿ) ಹಾಯ್ಗುಳಿ(ಹಾಯುವ ಗೂಳಿ), ಪಿಲ್ಚಂಡಿ( ಹುಲಿ) ಆನೆ, ಕುದುರೆ ಇವೆಲ್ಲವೂ ಒಂದಲ್ಲ ಒಂದು ರೂಪದಲ್ಲಿ ತುಳುನಾಡಿನಲ್ಲಿ ಪೂಜೆ ಪಡೆಯುತ್ತಿವೆ. ಅದೇ ರೀತಿ ಮೂಲದಲ್ಲಿ ಪಂಜುರ್ಲಿ(ಹಂದಿಯ ಮರಿ) ದೈವತ್ವಕ್ಕೇರಲ್ಪಟ್ಟು ತುಳುನಾಡಿನಾದ್ಯಂತ ಪೂಜೆ ಪಡೆಯುತ್ತಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕಿತ್ತೂರು ಬೆಳಗಾವಿ ಜಿಲ್ಲೆಯ ಒಂದು ಊರು.ಇಂದು ಇದು ಸಣ್ಣ ಗ್ರಾಮವಾಗಿದ್ದರೂ ಹಿಂದೆ ಕನ್ನಡನಾಡಿನ ಮಹಾನಗರಗಳಲ್ಲೊಂದಾಗಿತ್ತು. 12ನೆಯ ಶತಮಾನದಿಂದ ಕಿತ್ತೂರು ಎಂಬ ಹೆಸರು ಬಳಕೆಯಲ್ಲಿದೆ ಬೈಲಹೊಂಗಲದಿಂದ ೨೬ ಕಿಮೀ ದೂರದಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಾರವಾಡ-ಬೆಳಗಾವಿ ನಡುವೆ ಇದೆ. ೧೨ನೆಯ ಶತಮಾನದ ಹೊತ್ತಿಗೇ ಈ ಊರು ಇದ್ದುದು ಇಲ್ಲಿನ ಬಸವೇಶ್ವರ ದೇವಾಲಯದ ಶಾಸನವೊಂದರಿಂದ ತಿಳಿದುಬರುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ನರಕ ಚತುರ್ದಶಿ ( ಕಾಳಿಯಾ ಚೌದಸ್ , ರೂಪ್ ಚೌದಸ್, ಛೋಟಿ ದೀಪಾವಳಿ, ನರಕ ನಿವಾರಣ ಚತುರ್ದಶಿ ಅಥವಾ ಭೂತ ಚತುರ್ದಶಿ ಎಂದೂ ಕರೆಯಲಾಗುತ್ತದೆ) ಹಿಂದೂ ಪಂಚಾಂಗದಲ್ಲಿ ಶಾಲಿವಾಹನ ಶಕೆಯ ಅಶ್ವಿನ ತಿಂಗಳಿನ ಕೃಷ್ಣ ಪಕ್ಷ ದಲ್ಲಿ ಚತುರ್ದಶಿ ಅಂದರೆ ೧೪ನೇ ದಿನ ಬರುವ ಹಬ್ಬವಾಗಿದೆ. ಇದು ಐದು ದಿನಗಳ ಕಾಲ ನಡೆಯುವ ದೀಪಾವಳಿ ಹಬ್ಬದ ಎರಡನೇ ದಿನವಾಗಿದೆ. ಈ ದಿನ ಅಸುರ (ರಾಕ್ಷಸ) ನರಕಾಸುರನನ್ನು ಕೃಷ್ಣ, ಸತ್ಯಭಾಮ ಮತ್ತು ಕಾಳಿ ಕೊಂದರು ಎಂದು ಹಿಂದೂ ಸಾಹಿತ್ಯವು ಹೇಳುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕಲಾ ನಿರ್ದೇಶಕರು ರಂಗಭೂಮಿ, ಜಾಹೀರಾತು, ಮಾರ್ಕೆಟಿಂಗ್, ಪ್ರಕಾಶನ, ಫ್ಯಾಷನ್, ಚಲನಚಿತ್ರ ದೂರದರ್ಶನ, ಇಂಟರ್ನೆಟ್ ಮತ್ತು ವೀಡಿಯೋ ಗೇಮ್ಗಳಲ್ಲಿ ವಿವಿಧ ರೀತಿಯ ಉದ್ಯೋಗ ಕಾರ್ಯಗಳಿಗೆ ಶೀರ್ಷಿಕೆಯಾಗಿದೆ. ಕಲಾತ್ಮಕ ನಿರ್ಮಾಣದ ದೃಷ್ಟಿಯನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಏಕೀಕರಿಸುವುದು ಏಕೈಕ ಕಲಾ ನಿರ್ದೇಶಕರ ಜವಾಬ್ದಾರಿಯಾಗಿದೆ. ನಿರ್ದಿಷ್ಟವಾಗಿ ಹೇಳುವುದಾದರೆ ಅವರು ಅದರ ಒಟ್ಟಾರೆ ದೃಶ್ಯ ಗೋಚರತೆಯ ಉಸ್ತುವಾರಿ ವಹಿಸುತ್ತಾರೆ.
ಮೈಕಲ್ ಕರ್ಕ್ ಡಗ್ಲಸ್ (ಜನನ 1944ರ ಸೆಪ್ಟೆಂಬರ್ 25), ಪ್ರಧಾನವಾಗಿ ಚಲನಚಿತ್ರಗಳು ಹಾಗೂ ದೂರದರ್ಶನದಲ್ಲಿ ಸಕ್ರಿಯವಾಗಿರುವ ಅಮೆರಿಕಾದ ಓರ್ವ ನಟ ಹಾಗೂ ನಿರ್ಮಾಪಕ. ಅವನಿಗೆ ಒಂದು ಎಮಿ ಪ್ರಶಸ್ತಿ, ಒಂದು ಗೋಲ್ಡನ್ ಗ್ಲೋಬ್ ಪ್ರಶಸ್ತಿ ಲಭಿಸಿವೆ. ಎರಡು ಅಕಾಡೆಮಿ ಪ್ರಶಸ್ತಿಗಳಿಗೂ ಈತ ಪಾತ್ರನಾಗಿದ್ದು, ಅದರಲ್ಲಿ ಮೊದಲನೆಯದು 1975ರ ಅತ್ಯುತ್ತಮ ಚಲನಚಿತ್ರವಾದ ಒನ್ ಫ್ಲ್ಯೂ ಓವರ್ ದಿ ಕಕೂಸ್ ನೆಸ್ಟ್ ನ ನಿರ್ಮಾಪಕನಾಗಿ ಪಡೆದ ಪ್ರಶಸ್ತಿಯಾದರೆ, ಎರಡನೆಯದು ವಾಲ್ ಸ್ಟ್ರೀಟ್ ಚಿತ್ರದಲ್ಲಿನ ತನ್ನ ಪಾತ್ರಕ್ಕಾಗಿ 1987ರಲ್ಲಿ ಪಡೆದ ಅತ್ಯುತ್ತಮ ನಟ ಪ್ರಶಸ್ತಿಯಾಗಿದೆ.
ದಿ ಲಾರ್ಡ್ ಆಫ್ ದಿ ರಿಂಗ್ಸ್, ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಮತ್ತು ಭಾಷಾಶಾಸ್ತ್ರಜ್ಞ J.R.R. ಟೋಲ್ಕಿನ್ ಅವರ ಪ್ರಸಿದ್ಧ ಅತಿ ಕಾಲ್ಪನಿಕ ಕಾದಂಬರಿ. ಈ ಕಥಾನಕವು ಟೋಲ್ಕಿನ್ ಅವರ ಮುಂಚಿನ, ಕಡಿಮೆ ಸಂಕಿರ್ಣತೆಯುಳ್ಳ ದಿ ಹೊಬ್ಬಿಟ್ (೧೯೩೭) ಎಂಬ ಮಕ್ಕಳ ಕಾಲ್ಪನಿಕ ಕಾದಂಬರಿಯ ಉತ್ತರಾರ್ಧ ಭಾಗವಾದರೂ ತರುವಾಯ ಬೃಹತ್ ಕೃತಿಯಾಗಿ ಅರಳಿತು. ಈ ಕಾದಂಬರಿಯನ್ನು ೧೯೩೭ ಮತ್ತು ೧೯೪೯ರಲ್ಲಿ ,ಹೆಚ್ಚಾಗಿ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಹಂತಹಂತವಾಗಿ ಬರೆಯಲಾಯಿತು.ಸಾಮಾನ್ಯವಾಗಿ ಓದುಗರಿಗೆ ಕೃತಿತ್ರಯ ಎಂದೇ ಪರಿಚಿತವಾದರೂ, ಪ್ರಾರಂಭದಲ್ಲಿ ಎರಡು-ಸಂಪುಟಗಳ ಜೋಡಿಯಲ್ಲಿ ಒಂದು ಸಂಪುಟವಾಗಿದಿ ಸಿಲ್ಮರಿಲ್ಲಿಯೋನ್ ಜೊತೆಗೆ ಹೊರತರಬೇಕೆಂಬುದೆ ಟೋಲ್ಕಿನ್ ಉದ್ದೇಶವಾಗಿತ್ತು.
ಮೆಟಾಡೇಟಾ (ಮೆಟಾ ಡೇಟಾ ಅಥವಾ ಮೆಟಾಇನ್ಫಾರ್ಮೇಶನ್ ) ಎ೦ಬುದು ಯಾವುದೇ ಮಾಧ್ಯಮದಲ್ಲಿನ ಯಾವುದೇ ರೀತಿಯ ದತ್ತಾ೦ಶದ ಕುರಿತ ದತ್ತಾ೦ಶ ವಿವರ. ಮೆಟಾಡೇಟಾವು ವೀಕ್ಷಕರಿಗೆ ಬೇಕಾದ ಅಥವಾ ಅವರು ನೋಡಲು, ಅನುಭವಿಸಲು ಬಯಸುವುದೇನನ್ನು ಎ೦ಬುದನ್ನು ವಿವರಿಸುವ ಚಿತ್ರ, ಬರಹ ಅಥವಾ ಧ್ವನಿಯಾಗಿದೆ. ಈ ವೀಕ್ಷಕರು ಒಬ್ಬ ವ್ಯಕ್ತಿ,ಗು೦ಪು ಅಥವಾ ಒಂದು ಸಾಫ್ಟ್ವೇರ್ ಪ್ರೋಗ್ರಾಮ್ ಆಗಿರಬಹುದು.
ಗಂಧದ ಗುಡಿ ( ಅನುವಾದ. ಶ್ರೀಗಂಧದ ಮರಗಳ ವಾಸಸ್ಥಾನ ) 1973 ರ ಭಾರತೀಯ ಕನ್ನಡ ಭಾಷೆಯ ಆಕ್ಷನ್ ನಾಟಕವನ್ನು ವಿಜಯ್ ನಿರ್ದೇಶಿಸಿದ್ದಾರೆ ಮತ್ತು ಎಂಪಿ ಶಂಕರ್ ನಿರ್ಮಿಸಿದ್ದಾರೆ. ರಾಜಕುಮಾರ್ ಅವರ 150 ನೇ ಚಿತ್ರದಲ್ಲಿ ಪ್ರಾಮಾಣಿಕ ಅರಣ್ಯ ಅಧಿಕಾರಿ ಕುಮಾರ್ ಪಾತ್ರದಲ್ಲಿ ವಿಷ್ಣುವರ್ಧನ್ ಅವರು ಆನಂದ್ ಎಂಬ ಎದುರಾಳಿಯಾಗಿ ನಟಿಸಿದ್ದಾರೆ, ಆದರೂ ಚಿತ್ರದ ಕೊನೆಯಲ್ಲಿ ಅವರ ಪಾತ್ರವನ್ನು ರಿಡೀಮ್ ಮಾಡಲಾಗಿದೆ.
ಡಿಯೇಗೊ ಮೆರಡೋನ (ಜನನ ಅಕ್ಟೋಬರ್ ೩೦, ೧೯೬೦ - ಮರಣ ನವೆಂಬರ್ ೨೫, ೨೦೨೦) ಅರ್ಜೆ೦ಟಿನಾದ ಮಾಜಿ ಫುಟ್ಬಾಲ್ ಕ್ರೀಡಾಪಟು ಮತ್ತು ನವೆ೦ಬರ್ ೨೦೦೮ರಿ೦ದ ಜುಲೈ ೨೦೧೦ರವರೆಗೆ ಅರ್ಜೆ೦ಟಿನಾ ರಾಷ್ಟ್ರೀಯ ಫುಟ್ಬಾಲ್ ತ೦ಡದ ಮ್ಯಾನೇಜರರಾಗಿದ್ದರು. ಇವರು ಜಗತ್ತಿನ ಮಹಾನ್ ಫುಟ್ಬಾಲ್ ಆಟಗಾರರಲ್ಲಿ ಒಬ್ಬರೆಂದು ಹೇಳಲಾದರು, ಅದೇ ದನಿಯಲ್ಲಿ, ಇವರು ಅತ್ಯ೦ತ ವಿವಾದಾಸ್ಪದ, ಸುದ್ದಿಯೋಗ್ಯವಾದ ವ್ಯಕ್ತಿ ಎಂದೂ ಹೇಳಲಾಗುತ್ತದೆ. ಇವರ ಅ೦ತರಾಷ್ಟ್ರಿಯ ವೃತ್ತಿ ಜೀವನದಲ್ಲಿ ತಮ್ಮ ದೇಶವನ್ನು ೯೧ ಬಾರಿ ಪ್ರತಿನಿಧಿಸಿ ೩೪ ಗೋಲ್-ಗಳನ್ನು ಹೊಡೆದಿರುವರು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಮೈಸೂರು ದಸರಾವು ಭಾರತದಲ್ಲಿ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನ ವಿಜಯದಶಮಿ. ಹಬ್ಬವನ್ನು ಹಿಂದೂ ಕ್ಯಾಲೆಂಡರ್ ತಿಂಗಳ ಅಶ್ವಿನ್ನಲ್ಲಿ ಹತ್ತನೇ ದಿನದಂದು ಆಚರಿಸಲಾಗುತ್ತದೆ, ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.