The most-visited ಕನ್ನಡ Wikipedia articles, updated daily. Learn more...
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪಂಜುರ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಸರಗೋಡಿನ ಕೆಲ ಭಾಗಗಳಲ್ಲಿ ಪೂಜಿಸಲ್ಪಡುವ, ಹಂದಿಯ ಮುಖದ ಒಂದು ದೈವ. ಮೂಲ ಮೈಸಂದಾಯ(ಮಹಿಷ), ನಂದಿಗೋಣೆ(ಹೋರಿ) ಹಾಯ್ಗುಳಿ(ಹಾಯುವ ಗೂಳಿ), ಪಿಲ್ಚಂಡಿ( ಹುಲಿ) ಆನೆ, ಕುದುರೆ ಇವೆಲ್ಲವೂ ಒಂದಲ್ಲ ಒಂದು ರೂಪದಲ್ಲಿ ತುಳುನಾಡಿನಲ್ಲಿ ಪೂಜೆ ಪಡೆಯುತ್ತಿವೆ. ಅದೇ ರೀತಿ ಮೂಲದಲ್ಲಿ ಪಂಜುರ್ಲಿ(ಹಂದಿಯ ಮರಿ) ದೈವತ್ವಕ್ಕೇರಲ್ಪಟ್ಟು ತುಳುನಾಡಿನಾದ್ಯಂತ ಪೂಜೆ ಪಡೆಯುತ್ತಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಿಸುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಪಾಂಡವರು ಮಹಾಭಾರತದ ಮಹಾಕಾವ್ಯದ ಪ್ರಮುಖ ಪಾತ್ರಗಳಾದ ಯುಧಿಷ್ಠಿರ, ಭೀಮ, ಅರ್ಜುನ, ನಕುಲ ಮತ್ತು ಸಹದೇವ ಎಂಬ ಐದು ಸಹೋದರರನ್ನು ಉಲ್ಲೇಖಿಸಲಾಗಿದೆ. ಅವರನ್ನು ಕುರು ರಾಜ ಪಾಂಡುವಿನ ಪುತ್ರರೆಂದು ಪರಿಗಣಿಸಲಾಗುತ್ತಿತ್ತು, ಆದರೆ ಪಾಂಡುವಿನ ಮಕ್ಕಳನ್ನು ಹೊಂದಲು ಅಸಮರ್ಥತೆಯಿಂದಾಗಿ ಕುಂತಿ-ಮಾದ್ರಿಯರು ಬೇರೆ ಬೇರೆ ದೇವರುಗಳಿಂದ ಪಾಂಡವರನ್ನು ಪಡೆದರು. ಪಾಂಡವರು ದ್ರೌಪದಿ ಎಂಬ ಹೆಂಡತಿಯನ್ನು ಹಂಚಿಕೊಂಡರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಆಹಾರ ಸರಪಳಿಗಳನ್ನು ಮೊದಲು ೯ ನೇ ಶತಮಾನದ ಆಫ್ರಿಕನ್ ಅರಬ್ ವಿಜ್ಞಾನಿ ಮತ್ತು ತತ್ವಜ್ಞಾನಿ ಅಲ್ ಜಹಿಜ್ ಪರಿಚಯಿಸಿದರು. ನಂತರ ೧೯೨೭ ರಲ್ಲಿ ಪ್ರಕಟವಾದ ಚಾರ್ಲ್ಸ್ ಎಲ್ಟನ್ರ ಪುಸ್ತಕದಲ್ಲಿ ಜನಪ್ರಿಯಗೊಳಿಸಲಾಯಿತು. ಇದರಲ್ಲಿ ಆಹಾರ ಜಾಲದ ಪರಿಕಲ್ಪನೆಯನ್ನು ಪರಿಚಯಿಸಲಾಯಿತು.ಒಂದು ಸರಪಣಿಯ ಉದ್ದವು ಪೌಷ್ಟಿಕಾಂಶಗಳ ಗ್ರಾಹಕ ಮತ್ತು ಜಾಲ ತಳದ ನಡುವಿನ ಕೊಂಡಿಗಳ ಸಂಖ್ಯೆಯಾಗಿರುತ್ತದೆ ಮತ್ತು ಒಂದು ಸಂಪೂರ್ಣ ಜಾಲದ ಸರಾಸರಿ ಸರಪಣಿ ಉದ್ದವು ಆಹಾರ ಜಾಲದಲ್ಲಿನ ಎಲ್ಲಾ ಸರಪಣಿಗಳ ಉದ್ದಗಳ ಅಂಕಗಣಿತ ಸರಾಸರಿಯಾಗಿರುತ್ತದೆ.
ರಿಷಿ ಸುಣಕ್ ಜನನ 12 ಮೇ 1980 ಅವರು ಯುನೈಟೆಡ್ ಕಿಂಗ್ಡಮ್ನ ನಿಯೋಜಿತ ಪ್ರಧಾನಿ ಮತ್ತು 24 ಅಕ್ಟೋಬರ್ 2022 ರಿಂದ ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ ಬ್ರಿಟಿಷ್ ರಾಜಕಾರಣಿ. ಅವರು ಹಿಂದೆ 2020 ರಿಂದ 2022 ರವರೆಗೆ ಖಜಾನೆಯ ಕುಲಪತಿಯಾಗಿ ಮತ್ತು 2019 ರಿಂದ 2020 ರವರೆಗೆ ಖಜಾನೆಯ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು 2015 ರಿಂದ ರಿಚ್ಮಂಡ್ (ಯಾರ್ಕ್ಸ್) ಗೆ ಸಂಸತ್ತಿನ ಸದಸ್ಯರಾಗಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಎನ್.ಆರ್.ನಾರಾಯಣ ಮೂರ್ತಿ (ನಾಗವಾರ ರಾಮರಾವ್ ನಾರಾಯಣಮೂರ್ತಿ) ಭಾರತದ ಉದ್ಯಮಿ ಹಾಗು ಹೆಸರಾಂತ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಾದಇನ್ಫೋಸಿಸ್ನ ಸಹ ಸಂಸ್ಥಾಪಕರು. ಸುಮಾರು ಇಪ್ಪತ್ತು ವರ್ಷಗಳ ಕಾಲ ಆ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ನಿರ್ವಹಿಸಿದ ಇವರು, ಈಗ ಇನ್ಫೋಸಿಸ್ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ, ಹಾಗು ಹಿತಚಿಂತಕ ಅಧಿಕಾರಿಯಾಗಿದ್ದಾರೆ. ಭಾರತವು ವಿಶ್ವ ಮಾಹಿತಿ ತಂತ್ರಜ್ಞಾನ ಭೂಪಟದಲ್ಲಿ ಪ್ರಕಟವಾಗುವಂತೆ ಮಾಡಿದವರಲ್ಲಿ ಅಗ್ರಜರು ಎಂದು ಕರೆಯಲ್ಪಡುವ ಇವರು, ಹಲವಾರು ಉದ್ಯಮ ಸಂಸ್ಥೆಗಳು ಸರ್ಕಾರಿ ಸಂಸ್ಥೆಗಳು ಮತ್ತು ಉನ್ನತ ವಿದ್ಯಾಸಂಸ್ಥೆಗಳ ನಿರ್ವಾಹಕ ಮಂಡಳಿಗಳ ಸದಸ್ಯರಾಗಿದ್ದಾರೆ.
ಜೀವ ವೈವಿಧ್ಯತೆಯು ಭೂಮಿಯ ಮೇಲೆ ವಿವಿಧ ಭೌಗೋಳಿಕ ಪ್ರದೇಶಗಳ ಅಥವಾ ಪರಿಸರ ವ್ಯವಸ್ಥೆಯಲ್ಲಿ ಇರುವ ವಿವಿಧ ಜೀವಿಗಳು, ಅವುಗಳ ಹಂಚಿಕೆ ಮತ್ತ್ತು ವ್ಯತ್ಯಾಸವನ್ನು ಸೂಚಿಸುತ್ತದೆ. ಯುನೈಟೆಡ್ ನೇಷನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಮ್ (ಯುಎನ್ಇಪಿ) Archived 2018-02-17 at the Wayback Machine.ಯ ಪ್ರಕಾರ, ಜೀವವೈವಿಧ್ಯತೆಯು ಸಾಮಾನ್ಯವಾಗಿ ತಳಿ, ಜಾತಿ ಮತ್ತು ಪರಿಸರ ವ್ಯವಸ್ಥೆಯ ಮಟ್ಟದಲ್ಲಿ ವ್ಯತ್ಯಾಸವನ್ನು ತಿಳಿಸುತ್ತದೆ. ಜೀವ ವೈವಿಧ್ಯತೆಯು ಭೂಮಿಯ ಮೇಲೆ ಒಂದೇ ಸಮನಾಗಿ ಹಂಚಿಕೆಯಾಗಿರುವುದಿಲ್ಲ.
ಮಾನವ ಯಾವುದನ್ನು ಪವಿತ್ರ ಭಾವನೆಯಿಂದ ನೋಡುವನೋ ಅದರೊಡನೆ ಇರಿಸಿಕೊಳ್ಳುವ ಸಂಬಂಧವೇ ಧರ್ಮವೆಂಬ (ರಿಲಿಜನ್) ಶಬ್ದದ ವಿಶಾಲಾರ್ಥ. ಪವಿತ್ರವೆನಿಸತಕ್ಕುದು ಅತಿಮಾನುಷವೇ ಇರಬೇಕೆಂಬ ನಿಯಮವಿಲ್ಲ; ಮಾನವಾಕೃತಿಯಲ್ಲಿಯೇ ಇರಬೇಕೆಂದೂ ಇಲ್ಲ; ವೈಯಕ್ತಿಕ ಭಾವನೆ ಮಾತ್ರವೆಂದೂ ಅದರರ್ಥವಲ್ಲ. ದೇವರು ಎಂಬ ಶಬ್ದವನ್ನು ವೈಯಕ್ತಿಕ ಇಲ್ಲವೆ ಅತಿಮಾನುಷವೆಂಬ ಅಭಿಪ್ರಾಯದಲ್ಲಿ ಬಳಸುವುದಾದರೆ, ಅಂಥ ದೇವತಾಸ್ವರೂಪಗಳೊಡನೆ ಮಾನವನ ಸಂಬಂಧ ಧರ್ಮವೆನಿಸುವಂತೆ, ಅಂಥವುಗಳಲ್ಲದ ಪವಿತ್ರ ವಸ್ತುಗಳೊಂದಿಗೆ ಅವನ ಸಂಬಂಧಕ್ಕೂ ಅನ್ವಯಿಸುವಷ್ಟು ಅದು ವಿಶಾಲವಾಗಿದೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮೀಟರ್ ಎಂಬುದು ಅಂತರರಾಷ್ಟ್ರೀಯ ಏಕಮಾನ ವ್ಯವಸ್ಥೆಯಲ್ಲಿ (en:SI units) ಉದ್ದದ ಅಳತೆಯ ಮೂಲ ಪ್ರಮಾಣ. ಐತಿಹಾಸಿಕವಾಗಿ ಇದು ಭೂಮಿಯ ಸಮಭಾಜಕ ವೃತ್ತದಿಂದ ಉತ್ತರ ಧ್ರುವದ ವರೆಗಿನ ದೂರದ ೧೦ ಮಿಲಿಯನ್ರ ಒಂದು ಭಾಗವಾಗಿ ನಿರ್ಧಾರಿತವಾಯಿತು. ಈ ಅಳತೆಯನ್ನು ಫ್ರಾನ್ಸ್ನ ವಿಜ್ಞಾನ ಪರಿಷತ್ತಿನಲ್ಲಿ ಒಂದು ಪ್ಲಾಟಿನಮ್-ಇರಿಡಿಯಮ್ ಲೋಹದ ಪಟ್ಟಿಯ ಮೇಲೆ ಎರಡು ಗೆರೆಗಳಿಂದ ಸೂಚಿತವಾಗಿತ್ತು.
ನರಕ ಚತುರ್ದಶಿ ( ಕಾಳಿಯಾ ಚೌದಸ್ , ರೂಪ್ ಚೌದಸ್, ಛೋಟಿ ದೀಪಾವಳಿ, ನರಕ ನಿವಾರಣ ಚತುರ್ದಶಿ ಅಥವಾ ಭೂತ ಚತುರ್ದಶಿ ಎಂದೂ ಕರೆಯಲಾಗುತ್ತದೆ) ಹಿಂದೂ ಪಂಚಾಂಗದಲ್ಲಿ ಶಾಲಿವಾಹನ ಶಕೆಯ ಅಶ್ವಿನ ತಿಂಗಳಿನ ಕೃಷ್ಣ ಪಕ್ಷ ದಲ್ಲಿ ಚತುರ್ದಶಿ ಅಂದರೆ ೧೪ನೇ ದಿನ ಬರುವ ಹಬ್ಬವಾಗಿದೆ. ಇದು ಐದು ದಿನಗಳ ಕಾಲ ನಡೆಯುವ ದೀಪಾವಳಿ ಹಬ್ಬದ ಎರಡನೇ ದಿನವಾಗಿದೆ. ಈ ದಿನ ಅಸುರ (ರಾಕ್ಷಸ) ನರಕಾಸುರನನ್ನು ಕೃಷ್ಣ, ಸತ್ಯಭಾಮ ಮತ್ತು ಕಾಳಿ ಕೊಂದರು ಎಂದು ಹಿಂದೂ ಸಾಹಿತ್ಯವು ಹೇಳುತ್ತದೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.