The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ಅಂತರಜಾಲ (ಆಂಗ್ಲ: Internet ಇಂಟರ್ನೆಟ್) ಎನ್ನುವುದು ಕಂಪ್ಯೂಟರ್ ನೆಟ್ವರ್ಕ್ಗಳ (ಜಾಲಬಂಧಗಳ) ಒಂದು ನೆಟ್ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್ವರ್ಕ್ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಉಡುಪಿ (Tulu: ಒಡಿಪು) ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವಿಜಯದಾಸರು ಈ ಎಲ್ಲ ಮಹನೀಯರೂ ಸಹ ಶ್ರೀಮನ್ ಮಧ್ವಾಚಾರ್ಯರನ್ನು ನಿತ್ಯ ಉಪಾಸಿಸುವ, ಅವರ ಅನುಯಾಯಿಗಳೇ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಭ್ರಷ್ಟಾಚಾರವು ಯಾವುದೇ ವ್ಯಕ್ತಿ ನಿಯಮಬಾಹಿರವಾದ ಮತ್ತು ತನಗೆ ತಮ್ಮವರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ವಸ್ತು ಯಾ ಹಣ ಪಡೆಯುವುದು ಅಥವಾ ಲಾಭಮಾಡಿಕೊಳ್ಳುವುದು ಎನ್ನಬಹುದು. ಸಾರ್ವಜನಿಕ ಸೇವಾ ಸ್ಥಾನದಲ್ಲಿರುವವರು, ಜನ ಪ್ರತಿನಿಧಿಗಳು ಅಥವಾ ಸರಕಾರದ ಅಧಿಕಾರಿಗಳು ಯಾ ಸೇವಕರು ನಿಯಮ ಬಾಹಿರವಾಗಿ ಅಥವಾ ತಮ್ಮ ಆ ಸ್ಥಾನವನ್ನು ಉಪಯೋಗಿಸಿಕೊಂಡು ನಿಯಮಕ್ಕಿಂತ ಹೆಚ್ಚಿನ ಅಥವಾ ತಮಗೆ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ಲಾಭ ಪಡೆಯುವುದು. ತಮ್ಮ ಅಧಿಕಾರವನ್ನು ನಿಯಮಕ್ಕೆ ವಿರುದ್ಧವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳುವುದು.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಹಿರೋಷಿಮಾ ಮತ್ತು ನಾಗಸಾಕಿಗಳ ಪರಮಾಣು ಬಾಂಬ್ ದಾಳಿಗಳು
1945ರಲ್ಲಿ ನಡೆದ IIನೇ ಜಾಗತಿಕ ಸಮರದ ಅಂತಿಮ ಹಂತಗಳ ಅವಧಿಯಲ್ಲಿ, ಅಮೆರಿಕಾ ಸಂಯುಕ್ತ ಸಂಸ್ಥಾನವು ಜಪಾನ್ನಲ್ಲಿರುವ ಹಿರೋಷಿಮಾ ಮತ್ತು ನಾಗಸಾಕಿ ನಗರಗಳ ವಿರುದ್ಧ ಪರಮಾಣು ಬಾಂಬ್ ದಾಳಿಗಳನ್ನು ನಡೆಸಿತು. ತೀವ್ರ ಯುದ್ಧತಂತ್ರವನ್ನೊಳಗೊಂಡಿದ್ದ ಜಪಾನಿಯರ 67 ನಗರಗಳ ಮೇಲಿನ ಬೆಂಕಿ-ಬಾಂಬ್ ದಾಳಿಯ ಆರು ತಿಂಗಳುಗಳ ನಂತರ, ಪಾಟ್ಸ್ಡ್ಯಾಂ ಘೋಷಣೆಯಿಂದ ನೀಡಲ್ಪಟ್ಟ ಒಂದು ಅಂತಿಮ ಷರತ್ತನ್ನು ಜಪಾನಿಯರ ಸರ್ಕಾರ ಉಪೇಕ್ಷಿಸಿತು. ಅಧ್ಯಕ್ಷ ಹ್ಯಾರಿ S. ಟ್ರೂಮನ್ನಿಂದ ಬಂದ ಕಾರ್ಯಕಾರಿ ಆದೇಶದ ಅನುಸಾರ, 1945ರ ಆಗಸ್ಟ್ 6ರ ಸೋಮವಾರದಂದು "ಲಿಟ್ಲ್ ಬಾಯ್" ಎಂಬ ಹೆಸರಿನ ಪರಮಾಣು ಶಸ್ತ್ರಾಸ್ತ್ರವನ್ನು ಹಿರೋಷಿಮಾ ನಗರದ ಮೇಲೆ U.S. ಬೀಳಿಸಿತು; ಇದಾದ ನಂತರ ಆಗಸ್ಟ್ 9ರಂದು ನಾಗಸಾಕಿಯ ಮೇಲೆ "ಫ್ಯಾಟ್ ಮ್ಯಾನ್"ನ ಆಸ್ಫೋಟನವನ್ನು ಅದು ನಡೆಸಿತು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.