The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೆಲ ಪರಿಸ್ಥಿತಿಗಳಲ್ಲಿ ಒಂದು ದೇಶದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಹೆಸರು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.೧೯೪೭ರಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ೧೯೯೧ರ ವರೆಗೆ, ಅನುಕ್ರಮದ ಸರ್ಕಾರಗಳು ವ್ಯಾಪಕ ಸರ್ಕಾರಿ ಹಸ್ತಕ್ಷೇಪ ಮತ್ತು ನಿಯಂತ್ರಣವುಳ್ಳ ರಕ್ಷಣಾವಾದಿ ಆರ್ಥಿಕ ನೀತಿಗಳನ್ನು ಪ್ರೋತ್ಸಾಹಿಸಿದವು; ಶೀತಲ ಸಮರದ ಅಂತ್ಯ ಮತ್ತು ೧೯೯೧ ರಲ್ಲಿ ತೀವ್ರ ಪಾವತಿ ಬಾಕಿ ಬಿಕ್ಕಟ್ಟಿನ ಕಾರಣ ಭಾರತವು ಆರ್ಥಿಕ ಉದಾರೀಕರಣದ ವಿಶಾಲ ಕಾರ್ಯಕ್ರಮವನ್ನು ಅಳವಡಿಸಿಕೊಂಡಿತು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಕರ್ನಾಟಕ ರಾಜ್ಯದಲ್ಲಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯನ್ನು ಭಾರತದ ಬ್ಯಾಂಕಿಂಗ್ನ ತೊಟ್ಟಿಲು ಎಂದು ಕರೆಯಲಾಗುತ್ತದೆ. ಇದಕ್ಕೆ ಕಾರಣ ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಏಳು ಬ್ಯಾಂಕುಗಳು ಈ ಪ್ರದೇಶದಲ್ಲಿ ಹುಟ್ಟಿಕೊಂಡಿತು, ಅವುಗಳೆಂದರೆ: ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್, ವಿಜಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ವೈಶ್ಯ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು . ಮೇಲಿನ ಬ್ಯಾಂಕ್ಗಳ ಪಟ್ಟಿಯಲ್ಲಿ ಮೊದಲ ಐದು ಬ್ಯಾಂಕ್ಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ಥಾಪಿಸಲಾಯಿತು.
ಅಡಾಲ್ಫ್ ಹಿಟ್ಲರ್ , (೨೦ ಏಪ್ರಿಲ್ ೧೮೮೯ - ೩೦ ಏಪ್ರಿಲ್ ೧೯೪೫) ಆಸ್ಟ್ರಿಯಾದಲ್ಲಿ ಜನಿಸಿದ ಜರ್ಮನ್ ರಾಜಕಾರಣಿ ಹಾಗೂ ನಾಜಿ ಪಕ್ಷವೆಂದೇ ಖ್ಯಾತವಾದ ನ್ಯಾಶನಲ್ ಸೋಶಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ (ಸಂಕ್ಷಿಪ್ತ ರೂಪ NSDAP) ನೇತಾರನಾಗಿದ್ದವನು. ಈತನು ೧೯೩೩ರಿಂದ ೧೯೪೫ರ ವರೆಗೆ ಜರ್ಮನಿಯನ್ನು ಆಳಿದನು. ೧೯೩೩ರಿಂದ ೧೯೪೫ರವರೆಗೆ ಚಾನ್ಸೆಲರ್ ಆಗಿ ಹಾಗೂ ೧೯೩೪ರಿಂದ ೧೯೪೫ರವರೆಗೆ ರಾಷ್ಟ್ರದ ಮುಖ್ಯಸ್ಥನಾಗಿ ಆಡಳಿತ ನಡೆಸಿದನು.
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯, ೧೯೫೫ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವ ಮಸೂದೆಯಾಗಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಆ ಆರು ಧರ್ಮದವರು ಭಾರತಕ್ಕೆ ೩೧ ಡಿಸೆಂಬರ್ ೨೦೧೪ ಅಥವಾ ಅದಕ್ಕಿಂತಲೂ ಮೊದಲು ಪ್ರವೇಶಿಸಿದವರಾಗಿದ್ದಲ್ಲಿ, ಅವರೆಲ್ಲರೂ ಭಾರತೀಯ ಪೌರತ್ವಕ್ಕೆ ಅರ್ಹರು.ಕೇಂದ್ರ ಸಚಿವ ಸಂಪುಟವು ೪ ಡಿಸೆಂಬರ್ ೨೦೧೯ ರಂದು ಮಸೂದೆಯನ್ನು ಮುಂದಿಟ್ಟಿತು. ಇದನ್ನು ಡಿಸೆಂಬರ್ ೧೦ ರಂದು ಲೋಕಸಭೆಯು ಅಂಗೀಕರಿಸಿತು ಹಾಗೂ ಡಿಸೆಂಬರ್ ೧೧ ರಂದು ರಾಜ್ಯಸಭೆಯು ಇದನ್ನು ಅಂಗೀಕಾರ ಮಾಡಿತು.
ಕರ್ಮಧಾರಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:- (i) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶ ಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಸ್ಟಾಕ್ ಮಾರುಕಟ್ಟೆ ಅಥವಾ ಷೇರು ಮಾರುಕಟ್ಟೆ ಷೇರುಗಳು (ಷೇರುಗಳನ್ನು) ಕೊಳ್ಳುವವರು ಮತ್ತು ಮಾರುವವರು ಸಮೂಹದ (ಆರ್ಥಿಕ ವ್ಯವಹಾರಗಳ ಸಡಿಲ ನೆಟ್ವರ್ಕ್, ಒಂದು ಭೌತಿಕ ಸೌಲಭ್ಯ ಅಥವಾ ಪ್ರತ್ಯೇಕವಾದ ಘಟಕದ) ಆಗಿದೆ;ಈ ಒಂದು ಶೇರು ವಿನಿಮಯ ಕೇಂದ್ರದಲ್ಲಿ ಪಟ್ಟಿ ಭದ್ರತಾ ಪತ್ರಗಳ ಹಾಗೂ ಮಾತ್ರ ಖಾಸಗಿಯಾಗಿ ವ್ಯಾಪಾರ ಹೊಂದಿರುತ್ತವೆ. ವಿಶ್ವದ ಸ್ಟಾಕ್ ಮಾರುಕಟ್ಟೆ ಗಾತ್ರ ಅಕ್ಟೋಬರ್ 2008 ಆರಂಭದಲ್ಲಿ ಸುಮಾರು $ 36.6 ಟ್ರಿಲಿಯನ್ ಎಂದು ಅಂದಾಜಿಸಲಾಗಿದೆ.ಒಟ್ಟು ವಿಶ್ವದ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು $ 791 ಟ್ರಿಲಿಯನ್ ಮುಖ ಅಥವಾ ಮುಖಬೆಲೆ ಎಂದು ಅಂದಾಜಿಸಲಾಗಿದೆ.ಇದು ಇಡೀ ವಿಶ್ವದ ಆರ್ಥಿಕತೆಯ 11 ಬಾರಿ ಗಾತ್ರ ಪ್ರಮುಖ ವಿನಿಮಯ ಕೇಂದ್ರಗಳು, ಆಂಸ್ಟರ್ಡ್ಯಾಮ್ ಸ್ಟಾಕ್ ಎಕ್ಸ್ಚೇಂಜ್, ಲಂಡನ್ ಸ್ಟಾಕ್ ಎಕ್ಸ್ಚೇಂಜ್, ನ್ಯೂಯಾರ್ಕ್ ಸ್ಟಾಕ್ ಎಕ್ಸ್ಚೇಂಜ್, ಪ್ಯಾರಿಸ್ ಬರ್ಸ್, ಡಾಯ್ಚಿ ಬೋರ್ಸ್ಗೆ (ಫ್ರಾಂಕ್ಫರ್ಟ್ ವಿನಿಮಯ), ಟೊರೊಂಟೊ ಸ್ಟಾಕ್ ಎಕ್ಸ್ಚೇಂಜ್, ಫಿಲಿಫೈನ್ ಸ್ಟಾಕ್ ಎಕ್ಸ್ಚೇಂಜ್, ಸಿಂಗಾಪುರ್ ಎಕ್ಸ್ಚೇಂಜ್, ಟೋಕಿಯೋ ಸ್ಟಾಕ್ ಎಕ್ಸ್ಚೇಂಜ್ ಹಾಂಗ್ ಕಾಂಗ್ ಸ್ಟಾಕ್ ಎಕ್ಸ್ಚೇಂಜ್, ಶಾಂಘಾಯ್ ಸ್ಟಾಕ್ ಎಕ್ಸ್ಚೇಂಜ್, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ನೈಜೀರಿಯನ್ ಸ್ಟಾಕ್ ಎಕ್ಸ್ಚೇಂಜ್, JSE ಲಿಮಿಟೆಡ್. ಲ್ಯಾಟಿನ್ ಅಮೆರಿಕದಲ್ಲಿ, BM & F ಬೊವೆಸ್ಪಾ ಮತ್ತು ವೇ ಮುಂತಾದ ವಿನಿಮಯ ಇವೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮಕರಂದ ಸಸ್ಯಗಳು ಉತ್ಪಾದಿಸುವ ಒಂದು ಶರ್ಕರಭರಿತ ದ್ರವ. ಸಸ್ಯಗಳಲ್ಲಿ ಮಕರಂದವು ಹೂವಿನಿಂದ ಅಥವಾ ಎಲೆಗಳ ಬುಡದಲ್ಲಿ ಉತ್ಪನ್ನವಾಗುತ್ತದೆ. ಹೂವಿನಿಂದ ಸ್ರವಿಸುವ ಮಕರಂದವು ಪರಾಗಸ್ಪರ್ಶ ಕ್ರಿಯೆಯಲ್ಲಿ ಸಹಕರಿಸುವ ಪ್ರಾಣಿಗಳನ್ನು (ಸಾಮಾನ್ಯವಾಗಿ ಕೀಟಗಳು ಮತ್ತು ಪಕ್ಷಿಗಳು) ಆಕರ್ಷಿಸಿದರೆ ಎಲೆಯ ಭಾಗದಲ್ಲಿ ಸ್ರವಿಸುವ ಮಕರಂದವು ಸಸ್ಯಾಹಾರಿ ಪ್ರಾಣಿಗಳಿಂದ ತನಗಾಗುವ ಹಾನಿಯನ್ನು ಆದಷ್ಟು ಕಡಿಮೆ ಮಾಡಿಕೊಳ್ಳಲು ಸಸ್ಯವು ಹೂಡಿಕೊಂಡಿರುವ ನೈಸರ್ಗಿಕ ಉಪಾಯವಾಗಿದೆ.
ಸಣ್ಣ ಸಿಡುಬು (ಮೈಲಿ ಬೇನೆ)ಒಂದು ಸಾಂಕ್ರಾಮಿಕ ರೋಗ.ಈ ರೋಗವು ಎರಡು ಬಗ್ಗೆಯ ವೈರಸ್ನಿಂದ ಉಂಟಾಗುತ್ತದೆ.ಒಂದು ವೇರಿಯನ್ಟ್ ಇನ್ನೊಂದು ವೇರಿಯೋಲ.ಲ್ಯಾಟಿನ್ ಭಾಷೆಯಲ್ಲಿ ಈ ರೋಗವನ್ನು ವೇರಿಯೋಲ ಎಂದು ಕರೆಯುತ್ತಾರೆ. ಆಂಗ್ಲ ಭಾಷೆಯಲ್ಲಿ ಈ ರೋಗವನ್ನು ಪಾಕ್ಸ್ ಅಥವಾ ರೆಡ್ ಪ್ಲೇಗ್ ಎಂದು ಕರೆಯುತ್ತಾರೆ. ೧೫ನೇ ಶತಮಾನದಲ್ಲಿ ಮೊಟ್ಟ ಮೊದಲು ಬ್ರಿಟನ್ನವರು ಈ ರೋಗವನ್ನು ಸಣ್ಣ ಸಿಡುಬು ಎಂದು ಬಳಸುತ್ತಿದ್ದರು.
ಚಿಪ್ಕೋ ಚಳುವಳಿ ಅಥವಾ ಚಿಪ್ಕೋ ಆಂದೋಲನ ಎಂಬುದು ಮಹಾತ್ಮ ಗಾಂಧಿಯವರ ಮೂಲಮಂತ್ರಗಳಾದ ಸತ್ಯಾಗ್ರಹ ಮತ್ತು ಅಹಿಂಸೆಗಳ ಮೂಲಕ ಮರಗಳನ್ನು ಅಪ್ಪಿಕೊಳ್ಳುವುದರ ಮೂಲಕ ಮರ ಕಡಿಯುವುದರ ಬಗ್ಗೆ ಅಸಹಕಾರ ತೋರಿಸಿದ ಪ್ರಮುಖ ಚಳುವಳಿಯಾಗಿದೆ. ಚಿಪ್ಕೋ ಚಳುವಳಿಯು ಮೊದಲಿಗೆ ೧೯೭೦ರಲ್ಲಿ ಉತ್ತರಖಂಡದ ಗರ್ವಾಲಹಿಮಾಲಯ ಹಾಗೂ ಉತ್ತರಪ್ರದೇಶದಲ್ಲಿ ಅತಿಯಾಗಿ ನಡೆಯುತ್ತಿದ್ದ ಅರಣ್ಯನಾಶದ ಬಗ್ಗೆ ಅರಿವು ಮೂಡಿಸುವುದರ ಮೂಲಕ ಆರಂಭವಾಯಿತು. ಮಾರ್ಚ್ ೨೬ ೧೯೭೪ರಲ್ಲಿ ಉತ್ತರಖಂಡ ರಾಜ್ಯದ ಚಮೋಲಿ ಜಿಲ್ಲೆಯ ರೇನಿಹಳ್ಳಿ ಮತ್ತು ಹೇಮ ವಾಲ್ಘಂಟೆಯಲ್ಲಿ ಕೆಲವು ಮಹಿಳೆಯರು ಭಯಬೀತರಾಗಿ ತಮ್ಮ ಕಾಡಿನ ಸಾಂಪ್ರದಾಯಿಕ ಹಕ್ಕನ್ನು ವಾಪಸ್ಸು ಪಡೆಯುವ ಸಲುವಾಗಿ ಇವರು ಮರಕಡಿಯುವುದನ್ನು ವಿರೋಧಿಸಿ ಹೋರಾಟ ನಡೆಸಿದರು.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.