The most-visited ಕನ್ನಡ Wikipedia articles, updated daily. Learn more...
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಉಡುಪಿ (Tulu: ಒಡಿಪು) ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವಿಜಯದಾಸರು ಈ ಎಲ್ಲ ಮಹನೀಯರೂ ಸಹ ಶ್ರೀಮನ್ ಮಧ್ವಾಚಾರ್ಯರನ್ನು ನಿತ್ಯ ಉಪಾಸಿಸುವ, ಅವರ ಅನುಯಾಯಿಗಳೇ.
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರ ಬೆಂಗಳೂರು ನಗರ. ಬೆಂಗಳೂರು ತಾಲೂಕು 486 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು 3 ತಾಲ್ಲೂಕುಗಳನ್ನು ಹೊಂದಿದ್ದು, ಬೆಂಗಳೂರು ತಾಲ್ಲೂಕು ವಿಭಜಸಿ ಯಲಹಂಕ ತಾಲೂಕು ರಚನೆ, ಬೆಂಗಳೂರು ದಕ್ಷಿಣ ತಾಲೂಕನ್ನು ಬನಶಂಕರಿ ಎಂದು ಮರು ನಾಮಕರಣ ಮಾಡಲಾಗಿದೆ, ಬನಶಂಕರಿ ತಾಲ್ಲೂಕು ವಿಭಜಸಿ ಕೃಷ್ಣರಾಜಪುರ ತಾಲೂಕು ರಚನೆ ಮಾಡಲಾಗಿದೆ.
ಊರ್ಮಿಳಾ ಮಾತೋಂಡ್ಕರ್ (ಮರಾಠಿ:उर्मिला मातोंडकर) (ಜನಸಿದ್ದು 1974ರ ಫೆಬ್ರವರಿ 4ರಂದು, ಇಂಡಿಯಾದ ಮಹಾರಾಷ್ಟ್ರದ ಮುಂಬಯಿನಲ್ಲಿ )ಅವರು ಬಾಲಿವುಡ್ನ ಹೆಸಾರಾಂತ ನಟಿ. ಮಾತೋಂಡ್ಕರ್, 1980ರಲ್ಲಿ ಕಲಿಯುಗ್ ಚಿತ್ರದ ಮೂಲಕ ಬಾಲನಟಿಯಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು, ನರಸಿಂಹ {1991} ಚಿತ್ರದಲ್ಲಿ ನಾಯಕಿ ನಟಿಯಾದರು. ರಂಗೀಲಾ , ಜುದಾಯಿ ಮತ್ತು ಸತ್ಯ ಚಿತ್ರಗಳ ತಮ್ಮ ಪಾತ್ರಗಳ ಜನಪ್ರಿಯತೆಯಿಂದ ಹಿಂದಿ ಚಲನಚಿತ್ರರಂಗದ ಮುಖ್ಯಧಾರೆಯಲ್ಲಿ ಸ್ಥಾನ ಪಡೆದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕ್ಯಾನ್ಸರ್ (/ˈkænsə(r)/ ( listen)ವೈದ್ಯಕೀಯ ಪದಗಳಲ್ಲಿ:ಮಾಲಿಗಂಟ್ (ಕೇಡು ತರುವ)ನಿಯೊಪ್ಲಾಸ್ಮ್ (ಊತದ ಗೆಡ್ಡೆ),ಇದನ್ನು ಅರ್ಬುದ ರೋಗ ಎಂದು ಕರೆಯುತ್ತಾರೆ.ಇದರಲ್ಲಿ ಕೋಶಗಳ ಒಂದು ಸಮೂಹವು ಅನಿಯಂತ್ರಿತ ಬೆಳವಣಿಗೆ ಯನ್ನು ತೋರಿಸುತ್ತವೆ.ಅಂದರೆ ಸಾಮಾನ್ಯಕ್ಕಿಂತಲೂ ಮಿತಿಮೀರಿದ ಕೋಶಗಳ ವಿಭಜನೆ),ಅಂಗಾಂಶಗಳ ಮೇಲೆ ದುರಾಕ್ರಮಣ (ಶರೀರದ ಒಂದು ಭಾಗದಲ್ಲಿ ಇದು ಕಾಣಿಸಿಕೊಂಡರೆ ಅಕ್ಕಪಕ್ಕದ ಕೋಶಗಳನ್ನು ನಾಶಪಡಿಸುತ್ತದೆ).ಇದು ಹಲವು ಬಾರಿ ದೇಹದ ಇತರ ಭಾಗಗಳಿಗೆ ವೇಗವಾಗಿ ಪಸರಿಸು ತ್ತದೆ.(ರಕ್ತ ಅಥವಾ ಕೀವುಗಳಂತಹ ಮಲಿನ ದ್ರವಗಳ ಮೂಲಕ ದೇಹದ ಎಲ್ಲೆಡೆಯೂ ಹಬ್ಬಿಕೊಳ್ಳುತ್ತದೆ.) ಕ್ಯಾನ್ಸರ್ ನ ಹಾನಿಕಾರಕ ಲಕ್ಷಣಗಳು ಇತರೆ ಸಾಮಾನ್ಯ ಗೆಡ್ಡೆಗಳು,ಅಂದರೆ ತಾವೇ ತಾವಾಗಿ ಹುಟ್ಟಿಕೊಂಡವುಗಳು ಸ್ವಯಂ ಮಿತಿಗೊಳಪಟ್ಟವುಗಳು ಇತರ ಅಂಗಾಂಶಗಳ ಮೇಲೆ ಆಕ್ರಮಣ ಅಥವಾ ನಾಶಮಡುವ ಪ್ರವೃತ್ತಿಯು ಕ್ಯಾನ್ಸರ್ ಗಿಂತ ಭಿನ್ನವಾಗಿದೆ. ಲುಕೆಮಿಯಾ ಕೂಡಾ ನಾಲ್ಕು ಕ್ಯಾನ್ಸರ್ ಗಳಲ್ಲಿ ಒಂದಾದರೂ ಇದು ಊತದ ಗೆಡ್ದೆಯ ಲಕ್ಷಣ ಹೊಂದಿರುವದಿಲ್ಲ. ವೈದ್ಯಕೀಯ ವಿಜ್ಞಾನದಲ್ಲಿ ಇದರ ಅಧ್ಯಯನ,ರೋಗ ನಿದಾನ ಪತ್ತೆ,ಚಿಕಿತ್ಸೆ ಮತ್ತು ಕ್ಯಾನ್ಸರ್ ನಿರ್ಮೂಲನೆಯ ಅಂಶಗಳನ್ನು ಹೊಂದಿರುವ ವೈದ್ಯಕೀಯ ಶಾಖೆಯನ್ನು ಆಂಕಾಲಜಿ ಎಂದು ಕರೆಯುತ್ತಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಶಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. .
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಕರ್ನಾಟಕದ 30 ಜಿಲ್ಲೆಗಳಲ್ಲೊಂದು. 1986ರಲ್ಲಿ ಬೆಂಗಳೂರು ಜಿಲ್ಲೆಯನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಎಂದು ವಿಂಗಡಿಸಿ ರಚಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4 ತಾಲ್ಲೂಕು, 17 ಹೋಬಳಿಗಳು 1122 ಹಳ್ಳಿಗಳು, 3 ನಗರಸಭೆ, 2 ಪುರಸಭೆ, 1 ಪಟ್ಟಣ ಪಂಚಾಯಿತಿ ಮತ್ತು 229 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ, ಅದರಲ್ಲಿ ಬೂದಿಹಾಳ ಗ್ರಾಮ ಪಂಚಾಯಿತಿ ಪ್ರಮುಖವಾ..
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕೊರೊನಾ ವೈರಸ್ ಕಾಯಿಲೆ 2019 ( ಕೋವಿಡ್ ೧೯ ) ಎಂಬುದು ತೀವ್ರವಾದ ಉಸಿರಾಟದ ಸಮಸ್ಯೆಯಾದ ಸಿಂಡ್ರೋಮ್ ಕೊರೊನಾವೈರಸ್ ೨ (ಸಾರ್ಸ್-ಕೋವಿಡ್-೧೯) ನಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ . ಈ ರೋಗ ಮೊದಲು ೨೦೧೯ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿತು. ಈ ಕಾಯಿಲೆಯ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು,ವಾಸನೇ ಮತ್ತು ರುಚಿ ನಷ್ಟ ಉಸಿರಾಟದ ತೊಂದರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.