The most-visited ಕನ್ನಡ Wikipedia articles, updated daily. Learn more...
ದಶರಥ ಮಹಾರಾಜನಿಗೆ ಬೇಟೆಯಾಡುವ ಹವ್ಯಾಸ ಆತನು ಕತ್ತಲಲ್ಲಿ ಬಾಣ ಪ್ರಯೋಗ ಮಾಡುವ ಶಬ್ದವೇದಿ ವಿದ್ಯೆ ಕಲಿತಿದ್ದ. ಒಂದು ದಿನ ಸಂಜೆ ಬೇಟೆಗೆಂದು ಅರಣ್ಯಕ್ಕೆ ಹೋಗಿದ್ದ. ನದಿಯ ದಡದಲ್ಲಿ ಮೃಗವು ನೀರು ಕುಡಿಯಲು ಬರುವುದನ್ನು ದಾರಿ ಕಾಯುತ್ತಾ ಕುಳಿತಿದ್ದ.ಅದೇ ಸಮಯಕ್ಕೆ ಶ್ರವಣ ಕುಮಾರನು ತನ್ನ ಕುರುಡು ತಾಯಿ ತಂದೆಯರನ್ನು ಕಾವಲಿಯಲ್ಲಿ ಕುಳ್ಳಿರಿಸಿ ಹೆಗಲಿನಲ್ಲಿ ಹೊತ್ತುಕೊಂಡು ಅಲ್ಲಿಗೆ ಬಂದ.
ಪರ್ಣಪಾತಿ ಎಂದರೆ ಪರಿಪಕ್ವತೆಯ ಘಟ್ಟದಲ್ಲಿ ಬೀಳುವುದು (ಉದುರುವುದು) ಅಥವಾ ಉದುರುವುದಕ್ಕೆ ಪ್ರವೃತ್ತವಾಗುವುದು ಎಂದು ಮತ್ತು ವಿಶಿಷ್ಟವಾಗಿ ಈ ಪದವನ್ನು ಕಾಲಕಾಲಕ್ಕೆ ತಮ್ಮ ಎಲೆಗಳನ್ನು ಕಳೆದುಕೊಳ್ಳುವ ಮರ ಹಾಗೂ ಪೊದೆಗಳ ಸಂಬಂಧದಲ್ಲಿ ಮತ್ತು ಹೂ ಬಿಟ್ಟ ನಂತರ ಪುಷ್ಪದಳಗಳ ಅಥವಾ ಪಕ್ವವಾದ ಹಣ್ಣುಗಳಂತಹ ಇತರ ಸಸ್ಯ ರಚನೆಗಳ ಉದುರುವಿಕೆಯ ಸಂಬಂಧದಲ್ಲಿ ಬಳಸಲಾಗುತ್ತದೆ. ಹೆಚ್ಚು ನಿಖರವಾದ ಅರ್ಥದಲ್ಲಿ, ಪರ್ಣಪಾತಿ ಎಂದರೆ ಮುಂದೆ ಅಗತ್ಯವಿರದ ಒಂದು ಭಾಗದ ಬೀಳುವಿಕೆ, ಅಥವಾ ಅದರ ಉದ್ದೇಶ ಮುಗಿದ ನಂತರ ಬೀಳುವಿಕೆ. ಸಸ್ಯಗಳ ಸಂಬಂಧದಲ್ಲಿ, ಇದು ನೈಸರ್ಗಿಕ ಪ್ರಕ್ರಿಯೆಗಳ ಪರಿಣಾಮ.
ದೇವಾಲಯಗಳಲ್ಲಿ ದೇವರುಗಳಿಗೆ ವಿಭಿನ್ನ ರೀತಿಯ ಸೇವೆಯನ್ನು ಮಾಡಲು ಅರ್ಪಿಸಲಾಗಿರುವ ಯುವತಿಯರನ್ನು ದೇವದಾಸಿಯರೆಂದು ಕರೆಯಲಾಗುತ್ತಿತ್ತು. ಈ ಯುವತಿಯರು ಭಗವಂತನ ದಾಸಿಯರಾದ್ದರಿಂದ ಮಂದಿರವನ್ನು ಶುದ್ಧಗೋಳಿಸುವುದು, ದೀಪ ಬೆಳಗಿಸುವುದು ಹಾಗೂ ದೇವರ ಪ್ರತಿಮೆಯ ಸಮ್ಮುಖದಲ್ಲಿ ಭಕ್ತಿಪೂರ್ವಕವಾಗಿ ಗಾಯನ ನರ್ತನ ಮೊದಲಾದ ನಿಶ್ಚಿತ ಕಾರ್ಯಗಳನ್ನು ಮಾಡುವುದು-ಇವುಗಳ ಮೂಲಕ ದೇವರ ಸೇವೆಯನ್ನು ನೆರವೇರಿಸುತ್ತಿದ್ದರು. ಈ ಪದ್ಧತಿ ತೀರ ಪ್ರಾಚೀನವಾದುದೆಂದು ತಿಳಿದು ಬರುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೊರೊನಾ ವೈರಸ್ ಕಾಯಿಲೆ 2019 ( ಕೋವಿಡ್ ೧೯ ) ಎಂಬುದು ತೀವ್ರವಾದ ಉಸಿರಾಟದ ಸಮಸ್ಯೆಯಾದ ಸಿಂಡ್ರೋಮ್ ಕೊರೊನಾವೈರಸ್ ೨ (ಸಾರ್ಸ್-ಕೋವಿಡ್-೧೯) ನಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ . ಈ ರೋಗ ಮೊದಲು ೨೦೧೯ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿತು. ಈ ಕಾಯಿಲೆಯ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು,ವಾಸನೇ ಮತ್ತು ರುಚಿ ನಷ್ಟ ಉಸಿರಾಟದ ತೊಂದರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಗೋಲು ಗಳಿಸಲು ಕಾಲಿನಿಂದ ಚೆಂಡನ್ನು ಒದೆಯುವುದು, ವಿವಿಧ ಡಿಗ್ರಿಗಳಿಗೆ ಒಳಗೊಂಡ ಕ್ರೀಡಾ ಒಂದು ಸಂಖ್ಯೆಯನ್ನು ಸೂಚಿಸುತ್ತದೆ. ಈ ಕ್ರೀಡಾ ಜಗತ್ತಿನಾದ್ಯಂತ ಅತ್ಯಂತ ಜನಪ್ರಿಯವಾಗಿದೆ ಸಾಮಾನ್ಯವಾಗಿ "ಫುಟ್ಬಾಲ್" ಅಥವಾ "ಸಾಕ್ಕರ್" ಎಂದು ಕರೆಯಲಾಗುತ್ತದೆ ಅಸೋಸಿಯೇಶನ್ ಫುಟ್ಬಾಲ್,. ಅನರ್ಹ, ಫುಟ್ಬಾಲ್ ಪದವು ಫುಟ್ಬಾಲ್ನ ಯಾವುದೇ ಪ್ರಕಾರಕ್ಕೆ ಅನ್ವಯಿಸುತ್ತದೆ ಪದ ಅಸೋಸಿಯೇಷನ್ ಫುಟ್ಬಾಲ್, ಹಾಗೆಯೇ ಅಮೆರಿಕನ್ ಫುಟ್ಬಾಲ್, ಆಸ್ಟ್ರೇಲಿಯನ್ ನಿಯಮಗಳ ಫುಟ್ಬಾಲ್, ಕೆನಡಿಯನ್ ಫುಟ್ಬಾಲ್, ಗೇಲಿಕ್ ಫುಟ್ಬಾಲ್, ರಗ್ಬಿ ಲೀಗ್, ರಗ್ಬಿ ಒಕ್ಕೂಟ ಸೇರಿದಂತೆ ಕಾಣಿಸಿಕೊಳ್ಳುವ ಪ್ರಾದೇಶಿಕ ಸನ್ನಿವೇಶದಲ್ಲಿ ಅತ್ಯಂತ ಜನಪ್ರಿಯ , ಮತ್ತು ಇತರ ಸಂಬಂಧಿತ ಆಟಗಳು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಆಮ್ಲಜನಕ (Oxygen) ಅನಿಲ ರೂಪದ ಒಂದು ಮೂಲಧಾತು.ಇದರ ಪರಮಾಣು ಸಂಖ್ಯೆ ೮.ಇದು ಪ್ರಪಂಚದಲ್ಲಿ ಎಲ್ಲಾ ಜೀವಿಗಳ ಪ್ರಾಣವಾಯು.ಇದು ಭೂಮಿಯಲ್ಲಿ ಅತ್ಯಂತ ಹೇರಳವಾಗಿರುವ ಮೂಲಧಾತುಗಳಲ್ಲಿ ಒಂದು.ವಾತಾವರಣದ ೧/೫ ರಷ್ಟು,ಭೂಪದರ(Earth's crust)ದ ತೂಕದಲ್ಲಿ ಶೇಕಡಾ ೪೯ ರಷ್ಟು,ಖನಿಜ ಹಾಗೂ ಶಿಲೆಗಳ ತೂಕದ ಅರ್ದದಷ್ಟು,ಭೂಮಿಯಲ್ಲಿರುವ ನೀರಿನ ತೂಕದ ಶೇಕಡಾ ೮೯ ರಷ್ಟು ಆಮ್ಲಜನಕವಿದೆ.ಇದು ಸಾಮಾನ್ಯ ರೂಪದಲ್ಲಿ ಬಣ್ಣವಿಲ್ಲದ,ರುಚಿಇಲ್ಲದ,ವಾಸನೆ ಇಲ್ಲದ ಅನಿಲ.ದ್ರವ ಆಮ್ಲಜನಕ ತಿಳಿ ನೀಲಿ ಬಣ್ಣವನ್ನು ಹೊಂದಿದೆ.ಸಾಮಾನ್ಯವಾಗಿ ೨ ಪರಮಾಣು ಸೇರಿಕೊಂಡು ಇರುತ್ತವೆ.ಮೂರು ಪರಮಾಣುಗಳು ಸೇರಿ ಇದ್ದಾಗ ಓಜೋನ್ಎಂದು ಕರೆಯಲ್ಪಡುತ್ತದೆ.ಇದು ಸೂರ್ಯನ ನೇರಳಾತೀತ ವಿಕಿರಣಗಳಿಂದ ಭೂಮಿಯನ್ನು ರಕ್ಷಿಸುವುದು.ಈ ಅನಿಲವು ದಹನ ಕ್ರಿಯೆಯನ್ನು ಬೆಂಬಲಿಸುವುದು. ಇದನ್ನು ಕಂಡು ಹಿಡಿದ ವ್ಯಕ್ತಿ ಜೋಸೆಫ್ ಪ್ರೀಸ್ಟ್ಲಿ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಎ ಜೀವಸತ್ವ (ವಿಟಮಿನ್ ಎ) ಅಪರ್ಯಾಪ್ತ ಪೌಷ್ಟಿಕ ಸಾವಯವ ಸಂಯುಕ್ತಗಳ ಒಂದು ಗುಂಪು. ಇದರಲ್ಲಿ ರೆಟಿನಾಲ್, ರೆಟ್ನ್ಯಾಲ್, ರೆಟಿನೋಯಿಕ್ ಆಮ್ಲ, ಮತ್ತು ಹಲವಾರು ಪ್ರೋವಿಟಮಿನ್ ಎ ಕ್ಯಾರೋಟಿನಾಯ್ಡ್ಗಳು ಸೇರಿವೆ. ಎ ಜೀವಸತ್ವ ಅನೇಕ ಕಾರ್ಯಗಳನ್ನು ಹೊಂದಿದೆ: ಅದು ಬೆಳವಣಿಗೆ ಮತ್ತು ಅಭಿವೃದ್ಧಿಗೆ, ಪ್ರತಿರಕ್ಷಾ ವ್ಯವಸ್ಥೆಯ ನಿರ್ವಹಣೆಗೆ ಮತ್ತು ಉತ್ತಮ ದೃಷ್ಟಿಗೆ ಮುಖ್ಯವಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಅಂತರರಾಷ್ಟ್ರೀಯ ಏಕಮಾನ – (ಇಂಗ್ಲೀಶ್ International System of Units ಅಥವಾ SI- ಎಸ್ಐ) ಒಂದು ಅಳೆಯುವ ಏಕಮಾನ ವ್ಯವಸ್ಥೆಯಾಗಿದ್ದು ಮೆಟ್ರಿಕ್ ವ್ಯವಸ್ಥೆಯ ಆಧುನಿಕ ರೂಪ. ಈ ವ್ಯವಸ್ಥೆಯಲ್ಲಿ ದಶಾಂಶಗಳನ್ನು ಅಥವಾ ಹತ್ತರ ಗುಣಕಗಳನ್ನು (ಮಲ್ಟಿಪಲ್) ಬಳಸಲಾಗಿದೆ ಮತ್ತು ಹತ್ತರ ಘಾತಗಳಲ್ಲಿ ಅಂದರೆ 102, 103, 104 ಮುಂತಾದ ಸಂಖ್ಯೆಗಳಿಂದ ಮೀಟರ್, ಗ್ರಾಂ ಮುಂತಾದ ಏಕಮಾನಕವನ್ನು ಗುಣಿಸಲಾಗುತ್ತದೆ ಅಥವಾ ವಿಭಜಿಸಲಾಗುತ್ತದೆ. ಈ ಮೂಲಕ ಈ ವ್ಯವಸ್ಥೆ ತೀರ ದೊಡ್ಡ ಅಥವಾ ತೀರ ಸಣ್ಣ ಸಂಖ್ಯೆಗಳನ್ನು ಸುಲಭವಾಗಿ ತೋರಿಸಲು ಅವಕಾಶ ಒದಗಿಸಿಕೊಡುತ್ತದೆ.
ರೇಷ್ಮೆಯು ರೇಷ್ಮೆ ಹುಳುಗಳು ಉತ್ಪಾದಿಸುವ ಒಂದು ಪ್ರೊಟೀನ್ ನಾರು. ರೇಷ್ಮೆ ಬಟ್ಟೆಗಳನ್ನುಟ್ಟ ಹೆಂಗೆಳೆಯರ, ಮಕ್ಕಳ, ಮತ್ತು ಎಲ್ಲ ವಯೋಮಾನದ ಜನರ ಸಂಭ್ರಮಗಳನ್ನು ನೋಡುವುದು ಕಣ್ಣಿಗೆ ಹಬ್ಬ. ಆಕರ್ಷಕ ಮೈಮಾಟವಿರುವವರಿಗೆ, ಮತ್ತಷ್ಟು ನಿಖಾರತೆಗಳನ್ನು ಕೊಡುವ ದಟ್ಟ ಬಣ್ಣಗಳ, ಹೊಳಪಿನ, ವೈವಿಧ್ಯಮಯ ಸಂಗಮಗಳ ನಿಧಿಯಾದ, ರೇಷ್ಮೆ ಉಡುಪಿಗೆ ಕಾಲ, ದೇಶ ಹಾಗೂ ವಯಸ್ಸಿನ ಪರಿಮಿತಿಯಿಲ್ಲ.
ಮನೆಯಂಗಣದಲ್ಲಿನ ಗುಬ್ಬಚ್ಚಿಗಳು ಹಾಗೂ ಇನ್ನಿತರ ಪಕ್ಷಿಗಳ ಬಗೆಗೆ ಜನ ಜಾಗೃತಿ ಉಂಟುಮಾಡಿ ಅವುಗಳ ಸಂಕುಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಮಾರ್ಚ್ 20 ದಿನವನ್ನು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾಗುತ್ತಿದೆ. ಭಾರತದ ನೇಚರ್ ಫಾರೆವರ್ ಸೊಸೈಟಿಯ ಪ್ರಮುಖ ಆಸಕ್ತಿಯ ಮೇರೆಗೆ ಪ್ರಾರಂಭಗೊಂಡಿರುವ ಈ ಆಚರಣೆಗೆ, ಫ್ರಾನ್ಸಿನ ಇಕೋ-ಸಿಸ್ ಆಕ್ಷನ್ ಫೌಂಡೆಶನ್ ಮತ್ತು ವಿಶ್ವದ ಅನೇಕ ಸಂಸ್ಥೆಗಳು ಸಹಯೋಗ ನೀಡಿವೆ.ಸಂಸ್ಥೆಯ ನಿರ್ಮಾತೃ ಮೊಹಮ್ಮದ್ ದಿಲ್ವಾರ್ ಅವರು 2010ರಲ್ಲಿ ಗುಬ್ಬಚ್ಚಿಗಳ ದಿನವನ್ನು ಜಗತ್ತಿಗೆ ಪರಿಚಯಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಹರಿದು ಬಂಗಾಳ ಕೊಲ್ಲಿಗೆ ಹೋಗಿ ಸೇರುವ, ದಯಾ ನದಿಯ ಮುಖ ಭಾಗದಲ್ಲಿರುವ, ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿ, ಖುರ್ದಾ ಮತ್ತು ಗಂಜಾಂ ಜಿಲ್ಲೆಗಳುದ್ದಕ್ಕೂ ಹರಡಿಕೊಂಡಿರುವ ಚಿಲ್ಕ ಸರೋವರ (ಚಿಲಿಕ ಸರೋವರ ) ಒಂದು ಉಪ್ಪು ನೀರಿನ ಸರೋವರವಾಗಿದೆ. ಅದು ಭಾರತದಲ್ಲೇ ಅತ್ಯಂತ ದೊಡ್ಡ ಕರಾವಳಿಯ ನೀರಿನ ಪ್ರದೇಶವಾಗಿದೆ ಹಾಗೂ ವಿಶ್ವದಲ್ಲೇ ಎರಡನೆಯ ಅತಿ ವಿಶಾಲವಾದ ಜಲಾವೃತ ಪ್ರದೇಶವಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ರಾಣಿ ಮುಖರ್ಜಿ ([1]) ಜನನ 21 ಮಾರ್ಚ್ 1978; ರಾಣಿ ಮುಖರ್ಜಿ ಯು ಹಿಂದಿ ಚಲನಚಿತ್ರಗಳಲ್ಲಿ ನಿರತರಾಗಿರುವ ಭಾರತದ ಚಿತ್ರನಟಿ. ರಾಜಾ ಕಿ ಆಯೇಗಿ ಬಾರಾತ್ (1997) ರಲ್ಲಿ ತಮ್ಮ ನಟನೆಯ ಪ್ರಥಮ ಪ್ರವೇಶ ಮಾಡಿದ, ಮುಖರ್ಜಿಯವರು ಇಲ್ಲಿಯವರೆಗೂ ತಮ್ಮ ಅತ್ಯಂತ ದೋಡ್ಡ ವಾಣಿಜ್ಯದ ಯಶಸ್ಸನ್ನು ಕರಣ್ ಜೋಹರ್ ರವರ ಪ್ರೇಮ ಪ್ರಕರಣದ 'ಕುಚ್ ಕುಚ್ ಹೋತಾ ಹೈ ' ನಲ್ಲಿ (1990) ತಮ್ಮ ನಟನೆಯ ಮೊದಲ ಅಧ್ಬುತ ಜಯವನ್ನು ಕಂಡರು, ಹಾಗೂ ಆ ಚಿತ್ರದಲ್ಲಿ ತಮ್ಮ ಅಭಿನಯಕ್ಕಾಗಿ ಫಿಲ್ಮ್ ಫೇರ್ ನ ಅತ್ಯಂತ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿಯನ್ನು ಪಡೆದರು. ಅವರು ನಂತರ ಅನೇಕ ಚಲನಚಿತ್ರಗಳಲ್ಲಿ ನಟಿಸಿದರು, ಆದರೆ ಅವುಗಳಲ್ಲಿ ಹೆಚ್ಚು ನಿರೀಕ್ಷೆಯ ಮಟ್ಟವನ್ನು ಮುಟ್ಟಲಿಲ್ಲ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮಳೆನೀರು ಕೊಯ್ಲು ಎಂಬುದು ಮಳೆನೀರನ್ನು ಒಟ್ಟುಗೂಡಿಸುವ, ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಕುಡಿಯುವ ನೀರನ್ನು ಒದಗಿಸಲು ಜಾನುವಾರುಗಳಿಗೆ ನೀರುಣಿಸಲು ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರುಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಉಷ್ಣವಲಯದ ನಿತ್ಯಹರಿದ್ವರ್ಣದ ಕಾಡುಗಳು
ಭೂಮಧ್ಯರೇಖೆಯಿಂದ ಸುಮಾರು 28 ಡಿಗ್ರಿಗಳ ಅಂತರದಲ್ಲಿ ಉತ್ತರಕ್ಕೆ ಇಲ್ಲವೇ ದಕ್ಷಿಣಕ್ಕೆ ಇರುವ ಸ್ಥಳವೇ ಉಷ್ಣವಲಯದ ನಿತ್ಯಹರಿದ್ವರ್ಣದ ಕಾಡುಗಳು . ಇವುಗಳು ಕಂಡುಬರುವುದು ಏಷಿಯಾ, ಆಸ್ಟ್ರೇಲಿಯಾ, ಆಫ್ರಿಕಾ, ದಕ್ಷಿಣ ಅಮೇರಿಕಾ, ಮಧ್ಯ ಅಮೇರಿಕಾ, ಮೆಕ್ಸಿಕೊ ಹಾಗೂ ಪೆಸಿಫಿಕ್ ದ್ವೀಪಗಳ ಹಲವು ದ್ವೀಪಗಳು. ವಿಶ್ವ ವನ್ಯಜೀವಿ ನಿಧಿಯ ಪ್ರಕಾರ (ಜೀವರಾಶಿ)ಜೀವ ಮಂಡಲ, ಉಷ್ಣವಲಯದ ಆರ್ದ್ರ ಕಾಡುಗಳ ಜಾತಿಯ ಕಾಡುಗಳನ್ನು ಉಷ್ಣವಲಯದ ನಿತ್ಯಹರಿದ್ವರ್ಣದ ಕಾಡುಗಳು ಉಷ್ಣವಲಯದ ಆರ್ದ್ರ ಕಾಡುಗಳು ಅಥವಾ ವಿಸ್ತಾರ ಕಾಡುಗಳು ) ಮತ್ತು ಕೆಲವೊಮ್ಮೆ ಅವುಗಳನ್ನು ತಗ್ಗುಪ್ರದೇಶದ ಉಷ್ಣವಲಯದ ನಿತ್ಯಹಸಿರಿನ ಕಾಡುಗಳು .
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.