The most-visited ಕನ್ನಡ Wikipedia articles, updated daily. Learn more...
ರಾಣಿ ಮುಖರ್ಜಿ ([1]) ಜನನ 21 ಮಾರ್ಚ್ 1978; ರಾಣಿ ಮುಖರ್ಜಿ ಯು ಹಿಂದಿ ಚಲನಚಿತ್ರಗಳಲ್ಲಿ ನಿರತರಾಗಿರುವ ಭಾರತದ ಚಿತ್ರನಟಿ. ರಾಜಾ ಕಿ ಆಯೇಗಿ ಬಾರಾತ್ (1997) ರಲ್ಲಿ ತಮ್ಮ ನಟನೆಯ ಪ್ರಥಮ ಪ್ರವೇಶ ಮಾಡಿದ, ಮುಖರ್ಜಿಯವರು ಇಲ್ಲಿಯವರೆಗೂ ತಮ್ಮ ಅತ್ಯಂತ ದೋಡ್ಡ ವಾಣಿಜ್ಯದ ಯಶಸ್ಸನ್ನು ಕರಣ್ ಜೋಹರ್ ರವರ ಪ್ರೇಮ ಪ್ರಕರಣದ 'ಕುಚ್ ಕುಚ್ ಹೋತಾ ಹೈ ' ನಲ್ಲಿ (1990) ತಮ್ಮ ನಟನೆಯ ಮೊದಲ ಅಧ್ಬುತ ಜಯವನ್ನು ಕಂಡರು, ಹಾಗೂ ಆ ಚಿತ್ರದಲ್ಲಿ ತಮ್ಮ ಅಭಿನಯಕ್ಕಾಗಿ ಫಿಲ್ಮ್ ಫೇರ್ ನ ಅತ್ಯಂತ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿಯನ್ನು ಪಡೆದರು. ಅವರು ನಂತರ ಅನೇಕ ಚಲನಚಿತ್ರಗಳಲ್ಲಿ ನಟಿಸಿದರು, ಆದರೆ ಅವುಗಳಲ್ಲಿ ಹೆಚ್ಚು ನಿರೀಕ್ಷೆಯ ಮಟ್ಟವನ್ನು ಮುಟ್ಟಲಿಲ್ಲ.
ದಶರಥ ಮಹಾರಾಜನಿಗೆ ಬೇಟೆಯಾಡುವ ಹವ್ಯಾಸ ಆತನು ಕತ್ತಲಲ್ಲಿ ಬಾಣ ಪ್ರಯೋಗ ಮಾಡುವ ಶಬ್ದವೇದಿ ವಿದ್ಯೆ ಕಲಿತಿದ್ದ. ಒಂದು ದಿನ ಸಂಜೆ ಬೇಟೆಗೆಂದು ಅರಣ್ಯಕ್ಕೆ ಹೋಗಿದ್ದ. ನದಿಯ ದಡದಲ್ಲಿ ಮೃಗವು ನೀರು ಕುಡಿಯಲು ಬರುವುದನ್ನು ದಾರಿ ಕಾಯುತ್ತಾ ಕುಳಿತಿದ್ದ.ಅದೇ ಸಮಯಕ್ಕೆ ಶ್ರವಣ ಕುಮಾರನು ತನ್ನ ಕುರುಡು ತಾಯಿ ತಂದೆಯರನ್ನು ಕಾವಲಿಯಲ್ಲಿ ಕುಳ್ಳಿರಿಸಿ ಹೆಗಲಿನಲ್ಲಿ ಹೊತ್ತುಕೊಂಡು ಅಲ್ಲಿಗೆ ಬಂದ.
ಪರ್ಣಪಾತಿ ಎಂದರೆ ಪರಿಪಕ್ವತೆಯ ಘಟ್ಟದಲ್ಲಿ ಬೀಳುವುದು (ಉದುರುವುದು) ಅಥವಾ ಉದುರುವುದಕ್ಕೆ ಪ್ರವೃತ್ತವಾಗುವುದು ಎಂದು ಮತ್ತು ವಿಶಿಷ್ಟವಾಗಿ ಈ ಪದವನ್ನು ಕಾಲಕಾಲಕ್ಕೆ ತಮ್ಮ ಎಲೆಗಳನ್ನು ಕಳೆದುಕೊಳ್ಳುವ ಮರ ಹಾಗೂ ಪೊದೆಗಳ ಸಂಬಂಧದಲ್ಲಿ ಮತ್ತು ಹೂ ಬಿಟ್ಟ ನಂತರ ಪುಷ್ಪದಳಗಳ ಅಥವಾ ಪಕ್ವವಾದ ಹಣ್ಣುಗಳಂತಹ ಇತರ ಸಸ್ಯ ರಚನೆಗಳ ಉದುರುವಿಕೆಯ ಸಂಬಂಧದಲ್ಲಿ ಬಳಸಲಾಗುತ್ತದೆ. ಹೆಚ್ಚು ನಿಖರವಾದ ಅರ್ಥದಲ್ಲಿ, ಪರ್ಣಪಾತಿ ಎಂದರೆ ಮುಂದೆ ಅಗತ್ಯವಿರದ ಒಂದು ಭಾಗದ ಬೀಳುವಿಕೆ, ಅಥವಾ ಅದರ ಉದ್ದೇಶ ಮುಗಿದ ನಂತರ ಬೀಳುವಿಕೆ. ಸಸ್ಯಗಳ ಸಂಬಂಧದಲ್ಲಿ, ಇದು ನೈಸರ್ಗಿಕ ಪ್ರಕ್ರಿಯೆಗಳ ಪರಿಣಾಮ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಕೊರೊನಾ ವೈರಸ್ ಕಾಯಿಲೆ 2019 ( ಕೋವಿಡ್ ೧೯ ) ಎಂಬುದು ತೀವ್ರವಾದ ಉಸಿರಾಟದ ಸಮಸ್ಯೆಯಾದ ಸಿಂಡ್ರೋಮ್ ಕೊರೊನಾವೈರಸ್ ೨ (ಸಾರ್ಸ್-ಕೋವಿಡ್-೧೯) ನಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ . ಈ ರೋಗ ಮೊದಲು ೨೦೧೯ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿತು. ಈ ಕಾಯಿಲೆಯ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು,ವಾಸನೇ ಮತ್ತು ರುಚಿ ನಷ್ಟ ಉಸಿರಾಟದ ತೊಂದರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ದಾಳಗಳು ಹಲವು ಗುರುತಿರುವ ಪಾರ್ಶ್ವ ಮುಖಗಳಲ್ಲಿ ಯಾವುದರ ಮೇಲಾದರೂ ಇಳಿಯುವಂತೆ ವಿನ್ಯಾಸಗೊಳಿಸಲಾದ, ಹಲವುವೇಳೆ ಸರಿಸುಮಾರು ಲಂಬ ಅಕ್ಷದ ಪಟ್ಟಕದಂತಿರುವ ಡೈಸ್. ತುದಿಯ ಮೇಲೆ ಇಳಿಯುವಿಕೆ ಬಹಳ ಅಪರೂಪ ಏಕೆಂದರೆ ಇತರ ಮುಖಗಳಿಗೆ ಹೋಲಿಸಿದರೆ ಅವುಗಳ ಗಾತ್ರ ಸಣ್ಣದಾಗಿದೆ, ದಾಳದ ಎತ್ತರದಲ್ಲಿ ಅಂತರ್ಗತವಾಗಿರುವ ಅಸ್ಥಿರತೆಯಿರುವುದರಿಂದ, ಮತ್ತು ದಾಳವನ್ನು ಎಸೆಯುವುದರ ಬದಲು ಅಕ್ಷದ ಮೇಲೆ ಉರುಳಿಸುವುದರಿಂದ. ಅನೇಕ ದಾಳಗಳು ತುದಿಯ ಮೇಲೆ ಇಳಿಯುವುದನ್ನು ತಪ್ಪಿಸಲು, ತುದಿಗಳಿಗೆ ದುಂಡನೆಯ ಅಥವಾ ಶಿಖರಾಕಾರ ಕೊಟ್ಟು, ಹೆಚ್ಚಿನ ಪರಿಹಾರ ಒದಗಿಸುತ್ತವೆ, ಮತ್ತು ಇದರಿಂದ ಅಂತಹ ಆಗುಹ ಭೌತಿಕವಾಗಿ ಅಸಾಧ್ಯವಾಗುತ್ತದೆ (ಕನಿಷ್ಠಪಕ್ಷ ಚಪ್ಪಟೆ ಭದ್ರ ಮೇಲ್ಮೈ ಮೇಲೆ).
ವಾದಿರಾಜರು (ಕ್ರಿ.ಶ. ೧೪೮೦ - ೧೬೦೦) ಕನ್ನಡ ಹರಿದಾಸ ಪಂಥದ ಪ್ರಮುಖರಲ್ಲೊಬ್ಬರು.ಇವರು ವ್ಯಾಸರಾಯರ ಪ್ರಮುಖ ಶಿಷ್ಯರಲ್ಲಿ ಸೋದೆಯ ಮಠಾಧಿಪತಿಗಳಾಗಿದ್ದ ವಾದಿರಾಜರೂ ಒಬ್ಬರು.ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಆತನು ಕವಿತೆ ತರ್ಕಬದ್ಧವಾದುದು.ಇವರ ವಾಗ್ವೈಖರಿಯನ್ನು ಮೆಚ್ಚಿದ ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನು ಇವರಿಗೆ ಪ್ರಸಂಗಾಭರಣ ತೀರ್ಥ ಎಂಬ ಬಿರುದನ್ನು ನೀಡಿ ಗೌರವಿಸಿದರು.ಶ್ರೀಹರಿ ಭಕ್ತಿಯನ್ನು ಕೀರ್ತನೆಗಳ ಮೂಲಕ ಜನ ಸಾಮಾನ್ಯರಿಗೆ ತಿಳಿಕನ್ನಡದಲ್ಲಿ ಸರಳವಾಗಿ ಅರ್ಥವಾಗುವಂತೆ ಮಾಡಿದರು.ಅಷ್ಟ ಮಠಗಳಲ್ಲಿ ಈಗ ನಡೆಯುವ ಪರ್ಯಾಯೋತ್ಸವ ಪದ್ಧತಿಯನ್ನು ಪ್ರಾರಂಭಿಸಿದರು.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಆಂಗ್ಲ ಹೆಸರು - Infosys Limited (INFY Archived 2005-07-19 at the Wayback Machine.) ಇನ್ಫೋಸಿಸ್ ಭಾರತದ ಬೆಂಗಳೂರು ನಗರದಲ್ಲಿ ಕೇಂದ್ರೀಕೃತವಾದ ಬಹುರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಅತಿ ದೊಡ್ಡ ಸಂಸ್ಥೆಗಳಲ್ಲಿ ಒಂದಾಗಿದ್ದು, ೧,೪೫,೦೦೦ ಕ್ಕೂ ಹೆಚ್ಚು ಕೆಲಸಗಾರರನ್ನು ಹೊಂದಿದೆ. ಭಾರತದಲ್ಲಿ ಒಂಬತ್ತು ತಂತ್ರಾಂಶ ಅಭಿವೃದ್ಧಿ ಕೇಂದ್ರ ಮತ್ತು ಪ್ರಪಂಚದಾದ್ಯಂತ ೨೯ ಕಛೇರಿಗಳನ್ನು ಭಾರತ, ಯುಸ್ಎ, ಚೀನಾ, ಆಸ್ಟ್ರೇಲಿಯಾ, ಯುಕೆ, ಕೆನಡ, ಜಪಾನ್ ಹಾಗೂ ಇನ್ನಿತರೆ ರಾಷ್ಟ್ರಗಳಲ್ಲಿದೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.