The most-visited ಕನ್ನಡ Wikipedia articles, updated daily. Learn more...
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು.
ಕೃತಕ ವಾತಾಯನ (ಕೃತಕ ಉಸಿರಾಟ ಎಂದೂ ಕರೆಯುತ್ತಾರೆ) ಉಸಿರಾಟಕ್ಕೆ ಸಹಾಯ ಮಾಡುವ ಅಥವಾ ಉತ್ತೇಜಿಸುವ ಸಾಧನವಾಗಿದೆ, ಶ್ವಾಸಕೋಶದ ವಾತಾಯನ, ಬಾಹ್ಯ ಉಸಿರಾಟ ಮತ್ತು ಆಂತರಿಕ ಉಸಿರಾಟದ ಮೂಲಕ ದೇಹದಲ್ಲಿನ ಅನಿಲಗಳ ಒಟ್ಟಾರೆ ವಿನಿಮಯವನ್ನು ಉಲ್ಲೇಖಿಸುವ ಚಯಾಪಚಯ ಪ್ರಕ್ರಿಯೆ. ಇದು ಉಸಿರಾಡದ ಅಥವಾ ಸಾಕಷ್ಟು ಉಸಿರಾಟದ ಪ್ರಯತ್ನವನ್ನು ಮಾಡದ ವ್ಯಕ್ತಿಗೆ ಕೈಯಾರೆ ಗಾಳಿಯನ್ನು ಒದಗಿಸುವ ರೂಪವನ್ನು ತೆಗೆದುಕೊಳ್ಳಬಹುದು, ಅಥವಾ ಒಬ್ಬ ವ್ಯಕ್ತಿಯು ಶ್ವಾಸಕೋಶದ ಒಳಗೆ ಮತ್ತು ಹೊರಗೆ ಗಾಳಿಯನ್ನು ಚಲಿಸಲು ಯಾಂತ್ರಿಕ ವೆಂಟಿಲೇಟರ್ ಅನ್ನು ಒಳಗೊಂಡ ಯಾಂತ್ರಿಕ ವಾತಾಯನವಾಗಿರಬಹುದು ಸ್ವಂತವಾಗಿ ಉಸಿರಾಡಲು ಸಾಧ್ಯವಾಗುವುದಿಲ್ಲ, ಉದಾಹರಣೆಗೆ ಸಾಮಾನ್ಯ ಅರಿವಳಿಕೆಯೊಂದಿಗೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅಥವಾ ವ್ಯಕ್ತಿಯು ಕೋಮಾ ಅಥವಾ ಆಘಾತದಲ್ಲಿದ್ದಾಗ.
ಕೊಟ್ಟುರು ಚಿಕರಂಗಪ್ಪ ರಘುನಾಥ್ (ಜನನ: ೧೭ ಏಪ್ರಿಲ್ ೧೯೬೫), ಅವರ ಹೆಸರು ರಂಗಾಯಣ ರಘು ಎ೦ದು ಪ್ರಸಿದ್ಧವಾಗಿದೆ, ಇವರು ಭಾರತೀಯ ಚಲನಚಿತ್ರ ಮತ್ತು ವೇದಿಕೆಯ ನಟ, ಸಿನಿಮಾದಲ್ಲಿ ಇವರ ಹೆಚ್ಚಾಗಿ ತಮಾಷೆ ಮತ್ತು ನಕಾರಾತ್ಮಕ-ಮಸುಕಾದ ಪಾತ್ರಗಳನ್ನು ಚಿತ್ರಿಸಿರುವ ಇವರು ೨೫೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವುದಕ್ಕೂ ಮುನ್ನ, ೧೯೮೮ ರಿಂದ ೧೯೯೯ ರವರೆಗೆ ಅವರು ಬಿ. ವಿ.
ಕೋಲಾರ ಚಿನ್ನದ ಗಣಿ (ಕೆ.ಜಿ.ಎಫ್) (English: Kolar Gold Field) ಕರ್ನಾಟಕದ ಒಂದು ಸಣ್ಣ ಗಣಿಗಾರಿಕೆ ಪಟ್ಟಣ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿದೆ.ಇಲ್ಲಿ ಗಣಿ ನೌಕರರ ಕುಟುಂಬಗಳು ವಾಸಿಸುತ್ತಿದ್ದಾರೆ.ಕೆ.ಜಿ.ಎಫ್ ಪೂರ್ವಭಾಗದಲ್ಲಿ ಒಂದು ಪರ್ವತಗಳ ಸಾಲಿದೆ,ಇದರಲ್ಲಿ ದೊಡ್ಡ ಬೆಟ್ಟ ಪರ್ವತ ಒಂದಾಗಿದೆ.ಇದು ಸಮುದ್ರ ಮಟ್ಟದಿಂದ ೩೧೯೫ ಅಡಿಯಿದ್ದು, ಅತ್ಯಂತ ಎದ್ದುಕಾಣುವ ಬಿಂದುವಾಗಿದೆ.ಕೆ.ಜಿ.ಎಫ್ ನಿಂದ ಸುಮಾರು 30 ಕಿಲೊಮೀಟರ್ ದೂರದಲ್ಲಿ ಕೋಲಾರ ಇದೆ ಹಾಗು ಸುಮಾರು 100 ಕಿಲೊಮೀಟರ್ ಅಂತರದಲ್ಲಿ ಬೆಂಗಳೂರಿದೆ.ಕೆ.ಜಿ.ಎಫ್ ಚಿನ್ನದ ಗಣಿಯನ್ನು ಕಡಿಮೆ ನಿಕ್ಷೇಪಗಳು ಮತ್ತು ಹೆಚ್ಚುತ್ತಿರುವ ಬೆಲೆಯ ಕಾರಣ ಬಿ.ಇ.ಎಂ.ಎಲ್ ಮೂಲಕ 2001 ರಲ್ಲಿ ಮುಚ್ಚಲಾಯಿತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಹಿಂದೂ ಧರ್ಮದಲ್ಲಿ, ಯಜ್ಞ ಅಥವಾ ಯಾಗವು ವೈದಿಕ ಕಾಲದಿಂದ ಹುಟ್ಟಿಕೊಂಡಿರುವ ವೈದಿಕ ಮಂತ್ರಗಳ (ಮತ್ತು ಅರ್ಚನೆ, ಪ್ರಾರ್ಥನೆ, ಪ್ರಶಂಸೆ, ಅರ್ಪಣೆ ಮತ್ತು ನೈವೇದ್ಯ, ಬಲಿದಾನ) ಪಠಣವು ಜೊತೆಗೂಡಿರುವ ಅರ್ಪಣೆಗಳ ಒಂದು ಧರ್ಮಾಚರಣೆ. ಯಜ್ಞವು ಅಗ್ನಿಯಲ್ಲಿ ಹವನ ಸಾಮಗ್ರಿಯನ್ನು ಅರ್ಪಿಸುವ ಮತ್ತು ಶುದ್ಧೀಕರಿಸುವ ಒಂದು ಪುರಾತನ ಕ್ರಿಯಾವಿಧಿ. ಯಜ್ಞ ಶಬ್ದದ ಭವ್ಯ ಅರ್ಥವು ಸಂಸ್ಕೃತ ಕ್ರಿಯಾಪದ ಯಜ್ ಇಂದ ವ್ಯುತ್ಪನ್ನವಾಗಿದೆ, ಮತ್ತು ಇದು ಮೂರು ಅರ್ಥಗಳನ್ನು ಹೊಂದಿದೆ - ದೇವಪೂಜನ, ಸೌಗತೀಕರಣ ಹಾಗೂ ದಾನ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು. ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ಧಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಯಶ್ (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಕೆಜಿಎಫ್ ಅಧ್ಯಾಯ ೧ ೨೦೧೮ರಲ್ಲಿ ಬಿಡುಗಡೆಯಾದ ಭಾರತೀಯ ಕನ್ನಡ ಚಲನಚಿತ್ರ. ಇದನ್ನು ಮೂಲ ಭಾಷೆಯಿಂದ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಧ್ವನಿಪಥದೊಂದಿಗೆ(ಡಬ್ ಮಾಡಿ) ಬಿಡುಗಡೆ ಮಾಡಲಾಯಿತು. ಚಲನಚಿತ್ರವನ್ನು ಉಗ್ರಂ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ಅವರು ಬರೆದು ನಿರ್ದೇಶಿಸಿದ್ದಾರೆ ಮತ್ತು ಹೋಂಬಾಳೆ ಚಲನಚಿತ್ರಗಳ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿದ್ದಾರೆ.
ಅತಿ ಹೆಚ್ಚು ಹಣ ಗಳಿಸಿದ ಭಾರತೀಯ ಚಲನಚಿತ್ರಗಳ ಪಟ್ಟಿ
ಇದು ಅತ್ಯಂತ ಹೆಚ್ಚು ಹಣ ಗಳಿಸಿದ ಭಾರತೀಯ ಚಿತ್ರಗಳ ಶ್ರೇಯಾಂಕವಾಗಿದೆ, ಇದರಲ್ಲಿ ಸಂಪ್ರದಾಯವಾದಿ ಜಾಗತಿಕ ಗಲ್ಲಾ ಪೆಟ್ಟಿಗೆಯ ಅಂದಾಜಿನ ಆಧಾರದ ಮೇಲೆ ಹಲವಾರು ಭಾಷೆಗಳಿಂದ ಬರುವ ಚಲನಚಿತ್ರಗಳು ಪ್ರಸಿದ್ಧವಾದ ಮೂಲಗಳಿಂದ ವರದಿಯಾಗಿದೆ. ಭಾರತದಲ್ಲಿ ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ ಯಾವುದೇ ಅಧಿಕೃತ ಟ್ರ್ಯಾಕಿಂಗ್ ಇಲ್ಲ, ಮತ್ತು ಇಂಡಿಯನ್ ಸೈಟ್ಗಳ ಪ್ರಕಾಶನ ದತ್ತಾಂಶವನ್ನು ಆಗಾಗ್ಗೆ ತಮ್ಮ ದೇಶೀಯ ಬಾಕ್ಸ್ ಆಫೀಸ್ ಅಂದಾಜು ಹೆಚ್ಚಿಸಲು ಒತ್ತಾಯಿಸಲಾಗುತ್ತದೆ. ಭಾರತೀಯ ಚಲನಚಿತ್ರಗಳು 20 ನೇ ಶತಮಾನದ ಆರಂಭದಿಂದಲೂ ಸಹ ಪ್ರಪಂಚದಾದ್ಯಂತ ಮಾರುಕಟ್ಟೆಗಳಲ್ಲಿ ಪ್ರದರ್ಶಿಸಲ್ಪಟ್ಟಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಬೀಸಣಿಗೆಯು ತಮ್ಮನ್ನು ತಂಪಾಗಿಸುವ ಅಥವಾ ದಣಿವಾರಿಸುವ ಉದ್ದೇಶಕ್ಕಾಗಿ ವಾಯುಪ್ರವಾಹವನ್ನು ಪ್ರಚೋದಿಸಲು ಬಳಸಲಾಗುವ ಒಂದು ಸಾಧನ. ಹಿಂದೆ ಮುಂದೆ ಬೀಸಲಾದ ಯಾವುದೇ ಅಗಲವಾದ, ಚಪ್ಪಟೆ ಮೇಲ್ಮೈಯು ಸಣ್ಣ ವಾಯುಪ್ರವಾಹವನ್ನು ಸೃಷ್ಟಿಸುತ್ತದೆ ಮತ್ತು ಹಾಗಾಗಿ ಅದನ್ನು ಒಂದು ಮೂಲಭೂತ ಬೀಸಣಿಗೆ ಎಂದು ಪರಿಗಣಿಸಬಹುದು. ಸಾಮಾನ್ಯವಾಗಿ, ಉದ್ದೇಶ-ನಿರ್ಮಿತ ಕೈಯಲ್ಲಿ ಹಿಡಿಯಬಹುದಾದ ಬೀಸಣಿಗೆಗಳು ವೃತ್ತದ ಖಂಡದಂತಹ ಆಕಾರ ಹೊಂದಿರುತ್ತವೆ ಮತ್ತು ತೆಳು ವಸ್ತುವಿನಿಂದ (ಕಾಗದ ಅಥವಾ ಗರಿಗಳು) ನಿರ್ಮಿತವಾಗಿರುತ್ತವೆ ಮತ್ತು ಇವನ್ನು ಪಟ್ಟಿಗಳ ಮೇಲೆ ಕೂರಿಸಲಾಗಿರುತ್ತದೆ ಮತ್ತು ಒಂದು ತಿರುಗುಗೂಟದ ಸುತ್ತ ತಿರುಗುತ್ತವೆ ಮತ್ತು ಹಾಗಾಗಿ ಬಳಕೆಯಲ್ಲಿ ಇಲ್ಲದಿದ್ದಾಗ ಇದನ್ನು ಮುಚ್ಚಬಹುದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕುಮಾರರಾಮ: 13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ ಕುಮಾರರಾಮ ವಾಲ್ಮೀಕಿ/ಬೇಡ [೧] ಸಮುದಾಯಕ್ಕೆ ಸೇರಿದ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು.ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಲಿಷ್ಠ ಹಿಂದೂ ಸಾಮ್ರಾಜ್ಯದ ಕನಸುಕಂಡವನು ಈ ಕುಮಾರ ರಾಮ.13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ಧಿ.