The most-visited ಕನ್ನಡ Wikipedia articles, updated daily. Learn more...
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.ಕಾರ್ಮಿಕರ ಮೆರೆವಣಿಗೆ, ಪ್ರದರ್ಶನ, ಸಭೆ-ಇವು ಆ ದಿನದ ವಿಶೇಷಗಳು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಸತ್ಯಜಿತ್ ರೇ (ಮೇ ೨, ೧೯೨೧ - ಏಪ್ರಿಲ್ ೨೩, ೧೯೯೨) ಪ್ರಸಿದ್ಧ ಬ೦ಗಾಳಿ ಚಿತ್ರ ನಿರ್ದೇಶಕರು, ಮತ್ತು ಭಾರತೀಯ ಚಿತ್ರರ೦ಗದ ಅತಿ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರು. ಪಥೇರ್ ಪಾ೦ಚಾಲಿ, ಅಪರಾಜಿತೊ ಮತ್ತು ಅಪ್ಪುವಿನ ಪ್ರಪ೦ಚ - ಈ ಮೂರು ಚಿತ್ರಗಳ ಸರಣಿ ಇವರ ಅತಿ ಪ್ರಸಿದ್ಧ ಚಿತ್ರಗಳನ್ನು ಒಳಗೊ೦ಡಿದೆ. ಅಕಿರಾ ಕುರೋಸಾವಾ, ಸ್ಟೀವನ್ ಸ್ಪೀಲ್ಬರ್ಗ್, ಮಾರ್ಟಿನ್ ಸೋರ್ಸೆಸಿ ಮೊದಲಾದ ಅನೇಕ ಹೆಸರಾ೦ತ ನಿರ್ದೇಶಕರು ಸತ್ಯಜಿತ್ ರೇ ಅವರ ಚಿತ್ರಗಳನ್ನು ಮೆಚ್ಚಿಕೊ೦ಡಿರುವುದು೦ಟು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಬಿಳಿ ಅತ್ಯಂತ ತಿಳಿ ಬಣ್ಣವಾಗಿದೆ ಮತ್ತು ವರ್ಣರಹಿತವಾಗಿದೆ, ಏಕೆಂದರೆ ಅದು ಬೆಳಕಿನ ಎಲ್ಲ ಗೋಚರವಿರುವ ತರಂಗಾಂತರಗಳನ್ನು ಸಂಪೂರ್ಣವಾಗಿ ಪ್ರತಿಫಲಿಸುತ್ತದೆ ಮತ್ತು ಚೆದುರಿಸುತ್ತದೆ; ಅದು ತಾಜಾ ಹಿಮ, ಸೀಮೆಸುಣ್ಣ ಅಥವಾ ಹಾಲಿನ ಬಣ್ಣವಾಗಿದ್ದು, ಕಪ್ಪು ಪದದ ವಿರುದ್ಧಪದವಾಗಿದೆ. ಯೂರೋಪ್ ಮತ್ತು ಅಮೇರಿಕದಲ್ಲಿನ ಸಮೀಕ್ಷೆಗಳ ಪ್ರಕಾರ, ಬಿಳಿಯು ಬಹುತೇಕ ವೇಳೆ ಪರಿಪೂರ್ಣತೆ, ಶುಭ, ಪ್ರಾಮಾಣಿಕತೆ, ಸ್ವಚ್ಛತೆ, ಆರಂಭ, ನವೀನ, ತಟಸ್ಥತೆ ಮತ್ತು ನಿಖರತೆಯೊಂದಿಗೆ ಸಂಬಂಧಿಸಲಾದ ಬಣ್ಣವಾಗಿದೆ. ಬಿಳಿಯು ಬಹುತೇಕ ಎಲ್ಲ ವಿಶ್ವ ಧರ್ಮಗಳಿಗೆ ಒಂದು ಪ್ರಮುಖ ಬಣ್ಣವಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಶೈಕ್ಷಣಿಕ ಹಂತಗಳು ಎಂದರೆ ವಿಧ್ಯುಕ್ತ ಕಲಿಕೆಯ ಉಪವಿಭಾಗಗಳು ಮತ್ತು ಸಾಮಾನ್ಯವಾಗಿ ಮುಂಚಿನ ಬಾಲ್ಯದ ಶಿಕ್ಷಣ, ಪ್ರಾಥಮಿಕ ಶಿಕ್ಷಣ, ಪ್ರೌಢ ಶಿಕ್ಷಣ ಮತ್ತು ತೃತೀಯಕ (ಅಥವಾ ಉನ್ನತ) ಶಿಕ್ಷಣವನ್ನು ಒಳಗೊಳ್ಳುತ್ತವೆ. ತನ್ನ ಅಂತರರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಯ ಪ್ರಮಾಣಕ ವರ್ಗೀಕರಣದಲ್ಲಿ (ಐಎಸ್ಸಿಇಡಿ) ಯುನೆಸ್ಕೊ ಏಳು ಸ್ತರಗಳ ಶಿಕ್ಷಣವನ್ನು ಗುರುತಿಸುತ್ತದೆ, ಸ್ತರ ೦ (ಪ್ರಾಥಮಿಕಪೂರ್ವ ಶಿಕ್ಷಣ) ಇಂದ ಸ್ತರ ೬ ರವರೆಗೆ (ಉನ್ನತ ಶಿಕ್ಷಣದ ಎರಡನೇ ಹಂತ). ಯುನೆಸ್ಕೊದ ಅಂತರರಾಷ್ಟ್ರೀಯ ಶಿಕ್ಷಣ ವಿಭಾಗವು ದೇಶ-ನಿರ್ದಿಷ್ಟ ಶಿಕ್ಷಣ ವ್ಯವಸ್ಥೆಗಳು ಮತ್ತು ಅವುಗಳ ಹಂತಗಳ ದತ್ತಸಂಚಯವನ್ನು ನಿರ್ವಹಿಸುತ್ತದೆ.
ಕೆ.ಜಿ.ಎಫ್: ಅಧ್ಯಾಯ 2 ಪ್ರಶಾಂತ್ ನೀಲ್ ಬರೆದು ನಿರ್ದೇಶಿಸಿದ ಮತ್ತು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ 2022 ರ ಭಾರತೀಯ ಕನ್ನಡ ಭಾಷೆಯ ಅವಧಿಯ ಸಾಹಸ ಚಲನಚಿತ್ರವಾಗಿದೆ. ಇದು ಎರಡು ಭಾಗಗಳ ಸರಣಿಯಲ್ಲಿ ಎರಡನೇ ಕಂತಾಗಿದ್ದು, 2018 ರ ಚಲನಚಿತ್ರ KGF: ಅಧ್ಯಾಯ 1 ರ ಉತ್ತರಭಾಗವಾಗಿದೆ. ಚಿತ್ರದಲ್ಲಿ ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್ ಮತ್ತು ಪ್ರಕಾಶ್ ರಾಜ್ ನಟಿಸಿದ್ದಾರೆ.
REDIRECT Template:Infobox province or territory of Canadaಬ್ರಿಟಿಷ್ ಕೋಲಂಬಿಯಾವು (BC ) (French: la Colombie-Britannique, C.-B. ) ಕೆನಡಾದ ಪ್ರಾಂತ್ಯದ ಪಶ್ಚಿಮ ಭಾಗವಾಗಿದೆ ಮತ್ತು ಅದು ತನ್ನ ಸ್ವಾಭಾವಿಕ ಸೌಂದರ್ಯಕ್ಕಾಗಿ (ನಿಸರ್ಗದತ್ತ ಸೌಂದರ್ಯ) ಹೆಸರುವಾಸಿಯಾಗಿದೆ, ಇದರ ಲ್ಯಾಟಿನ್ ಮೊಟೊದಲ್ಲಿ ಪ್ರತಿಫಲಿಸಲ್ಪಟ್ಟಂತೆ, ಭವ್ಯ ಸೈನ್ ಒಕಾಸು ಆಗಿದೆ ("ಅಪಖ್ಯಾತಿಯಿಲ್ಲದ ಭವ್ಯತೆ"). 1871 ರಲ್ಲಿ, ಇದು ಕೆನಡಾದ ಆರನೆಯ ಪ್ರಾಂತ್ಯವೆಂಬ ಹೆಸರನ್ನು ಪಡೆಯಿತು. ವಿಕ್ಟೋರಿಯಾ ಇದು ಬ್ರಿಟಿಷ್ ಕೋಲಂಬಿಯಾದ ರಾಜಧಾನಿಯಾಗಿದೆ, ಇದು ಕೆನಡಾದಲ್ಲಿನ ಹದಿನೈದನೇ ಅತ್ಯಂತ ದೊಡ್ದದಾದ ಮಹಾನಗರದ ಪ್ರಾಂತ್ಯವಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕೆ2 ಭೂಮಿಯ ಮೇಲೆ ಮೌಂಟ್ ಎವರೆಸ್ಟ್ನ ನಂತರ ಎರಡನೇ ಅತಿ ಎತ್ತರದ ಪರ್ವತ. ಇದರ ಮೇಲ್ಮೈ ಶಿಖರ 8,611 metres (28,251 ft) ನಷ್ಟಿದ್ದು, ಕಾರಕೋರಂ ಶ್ರೇಣಿಯ ಭಾಗವಾಗಿದೆ, ಮತ್ತು ಕ್ಸಿನ್ಜಿಯಾಂಗ್, ಚೀನಾದ ಕ್ಸಿನ್ಜಿಯಾಂಗ್ದ ಟಾಕ್ಸ್ಕೊರ್ಗನ್ ಟಜಿಕ್ ಸ್ವಯಾಧಿಕಾರದ ಕೌಂಟಿ ಮತ್ತು ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿರುವ ಗಿಲ್ಗಿಟ್ ಪ್ರದೇಶಗಳ ಸೀಮೆಯಲ್ಲಿದೆ. ಪಾಕ್ ಆಕ್ರಮಿತ ಕಾಶ್ಮೀರವು ತನ್ನ ಭೂಪ್ರದೇಶವೆಂದು ಭಾರತದ ನಿಲುವಾದ್ದರಿಂದ ಆ ದೃಷ್ಟಿಯಲ್ಲಿ ಕೆ-೨ ಭಾರತದ ಅತ್ಯುನ್ನತ ಶಿಖರವೆನಿಸಲ್ಪಡುವುದು.
ಈ ಲೇಖನವು ಪಿಯಾನೋ ಸಂಗೀತವಾದ್ಯದ ಬಗ್ಗೆ ಮಾಹಿತಿ ನೀಡುತ್ತದೆ, ಪಿಯಾನೋ ಸಂಗೀತಶೈಲಿಯ ಮಾಹಿತಿಗೆ - ಪಿಯಾನೋ ಸಂಗೀತಶೈಲಿಗೆ ಭೇಟಿಕೊಡಿ ಪಿಯಾನೋ ಕೀಲಿಮಣೆಗಳನ್ನು ಹೊಂದಿದ ದೊಡ್ಡ ಸಂಗೀತವಾದ್ಯ. ಪಿಯಾನೋ ಎಂದರೆ, ಪಿಯಾನೋ ಫೋರ್ಟೆ ಎಂಬ ಇಟಾಲಿಯನ್ಪದದ ಮೃದು ಶಬ್ದ ಎಂಬರ್ಥ ಕೊಡುವ ಪದ. ಭಾರತದಲ್ಲಿ ಪ್ರಸಿದ್ಧವಾದ ಹಾರ್ಮೋನಿಯಂನಂತೆ ಇದರ ಕೀಲಿಗಳನ್ನು ಲಯಬದ್ದವಾಗಿ ಒತ್ತುವ ಮೂಲಕ ಸಂಗೀತ ರಚನೆ ಮಾಡಬಹುದು.
ರೇಷ್ಮೆಯು ರೇಷ್ಮೆ ಹುಳುಗಳು ಉತ್ಪಾದಿಸುವ ಒಂದು ಪ್ರೊಟೀನ್ ನಾರು. ರೇಷ್ಮೆ ಬಟ್ಟೆಗಳನ್ನುಟ್ಟ ಹೆಂಗೆಳೆಯರ, ಮಕ್ಕಳ, ಮತ್ತು ಎಲ್ಲ ವಯೋಮಾನದ ಜನರ ಸಂಭ್ರಮಗಳನ್ನು ನೋಡುವುದು ಕಣ್ಣಿಗೆ ಹಬ್ಬ. ಆಕರ್ಷಕ ಮೈಮಾಟವಿರುವವರಿಗೆ, ಮತ್ತಷ್ಟು ನಿಖಾರತೆಗಳನ್ನು ಕೊಡುವ ದಟ್ಟ ಬಣ್ಣಗಳ, ಹೊಳಪಿನ, ವೈವಿಧ್ಯಮಯ ಸಂಗಮಗಳ ನಿಧಿಯಾದ, ರೇಷ್ಮೆ ಉಡುಪಿಗೆ ಕಾಲ, ದೇಶ ಹಾಗೂ ವಯಸ್ಸಿನ ಪರಿಮಿತಿಯಿಲ್ಲ.
ಜೇಮ್ಸ್ ಫ್ರಾನ್ಸಿಸ್ ಕ್ಯಾಮೆರಾನ್ (ಜನನ ಆಗಸ್ಟ್ ೧೬, ೧೯೫೪) ಒಬ್ಬ ಕೆನೇಡಿಯನ್ ಚಲನಚಿತ್ರ ನಿರ್ಮಾಪಕ, ಆವಿಷ್ಕಾರಿ, ಎಂಜಿನಿಯರ್, ಫಿಲಾಂತ್ರೊಪಿಸ್ಟ್, ಮತ್ತು ಸಮುದ್ರ-ಆಳದ ಅನ್ವೇಷಕರಾಗಿದ್ದಾರೆ. ದಿ ಟರ್ಮಿನೇಟರ್ (೧೯೮೪) ಎಂಬ ವೈಜ್ಞಾನಿಕ ಕಾಲ್ಪನಿಕ ಆಕ್ಷನ್ ಚಲನಚಿತ್ರದ ಮೂಲಕ ಇವರು ತಮ್ಮ ಪ್ರಥಮ ಪ್ರಮುಖ ಯಶಸ್ಸನ್ನು ಕಂಡುಕೊಂಡರು. ಅನಂತರ ಅವರು ಹಾಲಿವುಡ್ನ ಸುಪ್ರಸಿದ್ಧ ನಿರ್ದೇಶಕರಾದರು.
ಏಕವ್ಯಕ್ತಿ ಮಾರಾಟ ಸಂಸ್ಥೆಗಳ,ಅಥವಾ ಒಬ್ಬನೇ ಮಾಲೀಕ ವ್ಯವಹಾರದ ದೋಷಗಳ ಕಾರಣವಾಗಿ ಹುಟ್ಟಿಕೊಂಡ ಪಾಲುದಾರಿಕೆ ಒಂದು ವ್ಯವಹಾರ ಸಂಸ್ಥೆಯ ರೂಪ. ಏಕವ್ಯಕ್ತಿ ಮಾರಾಟ ಸಂಸ್ಥೆಯ ಅತ್ಯಂತ ಪ್ರಧಾನ ದೋಷಗಳಾದ ಸೀಮಿತ ಬಂಡವಾಳ ಮತ್ತು ಸೀಮಿತ ನಿರ್ವಹಣಾ ಕೌಶಲ್ಯವನ್ನು,ಪಾಲುದಾರಿಕೆ ಸಂಸ್ಥೆಯ ರಚನೆಯ ಮೂಲಕ ಗೆಲ್ಲಲಾಯಿತು. ಪಾಲುದಾರಿಕೆಯಲ್ಲಿ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳು ಒಂದುಗೂಡುತ್ತಾರೆ.ಅವರಲ್ಲಿ ಕೆಲವರು ಬಂಡವಾಳ ಹೊಂದಿದ್ದರೆ ಮತ್ತೆ ಕೆಲವರು ಕೌಶಲ್ಯ ಅಥವಾ ಅನುಭವವನ್ನು ಹೊಂದಿರುತ್ತಾರೆ.
ಪಗ್ ನಾಯಿಯ ಒಂದು ತಳಿ.ಒಂದು ಸುಕ್ಕುಗತಟ್ಟದ ಸಣ್ಣಮುಚ್ಚಿದಾದ ಮುಖ ಮತ್ತು ಸುರುಳಿಯಾದ ಬಾಲ.ಪಗ್ ತಳಿ ವಿವಿಧ ಬಣ್ಣಗಳಲ್ಲಿ ಬರುತ್ತದೆ.ದಂಡ ಹೊಳಪು ಕೊಟ ಹೊಂದಿದೆ.ಅವುಗಳು ಹೆಚ್ಚಾಗಿ ಕಪ್ಪು ಅಥವಾ ಬಿಳಿ ಬಣ್ಣದಲ್ಲಿ ಇರುತ್ತವೆ.ಅವುಗಳು ಕಾಂಪ್ಯಕ್ಟಚದರದ ದೀಹವನ್ನು ಹೊಂದಿರುತ್ತವೆ ಮತ್ತು ಅಭಿವ್ರದ್ದಿಪಡಿಸಿದ ಸ್ನಾಯಗಳನ್ನು ಹೊಂದಿರುತ್ತವೆ.ಪಗ್ಸ್ ೧೬ನೀ ಶತಮಾನದಲ್ಲಿ ಚೀನಾದಿಂದ ಯುರೂಪಿಗೆ ತಂದಿದ್ದ.ಪಗ್ಸ್ ಗಳು ಪಶ್ಚಿಮ ಯುರೊಪನ ನೆದಲ್ಂದ್ಸ್ನ ಕಿತ್ತಳೆ ಮನೆಯ ಮತ್ತು ಸ್ತುವಟ್ರ್ ಮನೆಯಲ್ಲಿ ಜನಪ್ರಿಯಗೊಳಿಸಿದರು.೧೯ನೀ ಶತಮಾನದಲ್ಲಿ ರಾಣಿ ವಿಕ್ಟೂರಿಯಾ ಯುನೈಟಡ ಕಿಂಗ್ದ್ ಮ್ ರಲ್ಲಿ ಪಗ್ಸ್ ಒಂದು ತೀವ್ರಾಸಕ್ತಯ.ಅವರು ಈ ನಾಯಿಗಳನ್ನು ರಾಯಲ್ ಕುಟುಂಬದ ಇತರ ಸದಸ್ಯರಿಗೆ ತಲುಪಿಸಿದ್ದರು.ಪಗ್ಸ್ ಬೆರೆಯುವ ಮತ್ತು ಶಾಂತ ಬಡನಾಡಿ ನಾಯಿಗಳು ಎಂದು ಕರೆಯಲಾಗುತ್ತದೆ.೨೦೦೪ರಲ್ಲಿ ನಡೆದ ವಿಶ್ವದ ಶ್ವಾನ ಪ್ರದಶ್ರನದಲ್ಲಿ ಪಗ್ ಅತುತ್ತಮ ನಾಯಿ ಎಂದು ನಿಣಯಿಸಲಾಯಿತು...
ಇದೇ ಆರ್ಥದ ಬ್ರಹ್ಮಾಂಡ ಪುಟ ಬೇರೆ ಇದೆ.ಗುರುತ್ವಾಕರ್ಷಣದಿಂದ ಒಟ್ಟಾಗಿರುವ ಅನೇಕ ನಕ್ಷತ್ರಗಳು, ಅವುಗಳ ಮಧ್ಯೆ ಇರುವ ವಾಯು, ಧೂಳು ಮತ್ತು ಅಜ್ಞಾತ ಕಪ್ಪು ದ್ರವ್ಯದ (en:Dark Matter)ಬೃಹತ ಗಾತ್ರದ ಸಮೂಹ -ಬ್ರಹ್ಮಾಂಡ; ನಕ್ಷತ್ರಗಳ ಗುಂಪು ಎರಡು ಅಥವಾ ಹೆಚ್ಚು ನಕ್ಷತ್ರಗಳ ಗುಂಪಿಗೆನಕ್ಷತ್ರಪುಂಜಗಳು; (ನಕ್ಷತ್ರಕೂಟ:ಉಪಯೋಗದಲ್ಲಿಲ್ಲ -ಜಾತಕ ತಾಳೆ ನೋಡುವಾಗ ಮಾತ್ರಾ ಉಪಯೋಗಿಸುವರು) ಅಥವಾ ತಾರಾಗಣವು ಕೆಲವೇ ನಕ್ಷತ್ರಗಳ ಒಂದು ಗುಂಪು ಎಂದು ಹೆಸರು. ಈ ನಕ್ಷತ್ರಕೂಟಗಳಲ್ಲಿ ಸಾಮಾನ್ಯವಾಗಿ ೧೦ ಮಿಲಿಯನ್ ಇಂದ ೧ ಟ್ರಿಲಿಯನ್ ನಕ್ಷತ್ರಗಳು ಒಂದೇ ಗುರುತ್ವದ ಕೇಂದ್ರಬಿಂದುವಿನ ಸುತ್ತ ಪ್ರದಕ್ಷಣೆ ಮಾಡುತ್ತವೆ. ಸೂರ್ಯ ಮತ್ತು ಸೌರಮಂಡಲ ಇರುವ ನಕ್ಷತ್ರಕೂಟದ ಹೆಸರು ಆಕಾಶಗಂಗೆ.
ಹೆಣ್ಣು ಪ್ರಾಣಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ/ತೂತು ಯೋನಿ ಮುಂದುವರಿದ ಪ್ರಾಣಿಗಳಲ್ಲಿ ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕಾರಿ. ವಯಸ್ಸಿನ ಮಹಿಳೆಯೊಬ್ಬಳು ಯೋನಿಯ ಉದ್ದ ಆದಾಗ್ಯೂ ಮುಂಭಾಗದ ಗೋಡೆಯ (ಮುಂದೆ) ಅಡ್ಡಲಾಗಿ ಸುಮಾರು ೬ ೭.೫ ಸೆಂ (೨.೫ ೩), ಹಾಗೂ ೯ ಸೆಂ (ರಲ್ಲಿ ೩.೫) ಉದ್ದ ಬದಿಯಲ್ಲಿರುವ ಹಿಂಭಾಗದ ಗೋಡೆ (ಹಿಂದಿನ).
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದಿ ಮೆಟ್ರಿಕ್ಸ್ ಒಂದು(West Frisian) ವೈಜ್ಞಾನಿಕ ಕಾಲ್ಪನಿಕ ಕತೆ-ಸಾಹಸಪ್ರಧಾನ ಚಲನಚಿತ್ರವಾಗಿದ್ದು, ಇದನ್ನು ಬರೆದು ನಿರ್ದೇಶನ ಮಾಡಿದವರು ಲಾರ್ರಿ ಮತ್ತು ಎಂಡೀ ವಾಚೋಸ್ಕಿ ಮತ್ತು ಅಭಿನಯಿಸಿದವರು ಕೀನು ರೀವ್ಸ್, ಲಾರೆನ್ಸ್ ಫೀಶ್ಬರ್ನ್, ಕೇರ್ರೀ-ಆಯ್ನೆ ಮೊಸ್ ಜೋ ಪೆಂಟೋಲಿಯಾನೊ ಮತ್ತು ಹ್ಯೂಗೋ ವೀವಿಂಗ್. ಇದು ಮೊದಲು ಅಮೇರಿಕಾ ದೇಶದದಲ್ಲಿ ಮಾರ್ಚ್ 31, 1999 ರಂದು ಬಿಡುಗಡೆಗೊಂಡಿತು ಮತ್ತು ಇದು ಈ ಚಲನಚಿತ್ರ ಸರಣಿಯ, ಹಾಸ್ಯ ಪುಸ್ತಕಗಳು, ವಿಡಿಯೊ ಆಟಗಳು ಮತ್ತು ಎನಿಮೇಶನ್ಗಳ ಮೊದಲ ಭಾಗವಾಗಿದೆ. ಈ ಚಲನಚಿತ್ರವು ಭವಿಷ್ಯವೊಂದನ್ನು ವಿವರಿಸುತ್ತಿದ್ದು, ಅದರಲ್ಲಿ ನಿಜವಾಗಿ ಮನುಷ್ಯರು ತಿಳಿದುಕೊಳ್ಳುವ ವಾಸ್ತವಿಕತೆ ಮೆಟ್ರಿಕ್ಸ್ ಆಗಿರುತ್ತದೆ: ಇದು ಸಚೇತನ ಯಂತ್ರಗಳು ನಕಲು ಮಾಡಿದ ವಾಸ್ತವಿಕತೆಯಾಗಿದ್ದು, ಇದನ್ನು ಮನುಷ್ಯರನ್ನು ತಣಿಸಲು ಮತ್ತು ವಶಪಡಿಸಿಕೊಳ್ಳಲು, ಮತ್ತು ಅದೇ ಸಮಯದಲ್ಲಿ ಅವರ ದೇಹದ ಶಾಖ ಮತ್ತು ವಿದ್ಯಚ್ಛಕ್ತಿಯನ್ನು ಶಕ್ತಿಯ ಆಕರಗಳಾಗಿ ಬಳಸಿಕೊಳ್ಳಲು ಮಾಡಲಾಗಿರುತ್ತದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೨೫) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.