The most-visited ಕನ್ನಡ Wikipedia articles, updated daily. Learn more...
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೨೫) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಭಾರತ ಬಹು ಸಾಂಸ್ಕೃತಿಕ ಮತ್ತು ಬಹು ಧಾರ್ಮಿಕ ಬೀಡಾಗಿರುವ ಭಾರತ ವಿವಿಧ ಧರ್ಮಗಳ ಹಬ್ಬಗಳು ಆಚರಿಸುತ್ತದೆ. ಭಾರತದಲ್ಲಿ ೩ ರಾಷ್ಟ್ರೀಯ ರಜಾದಿನಗಳು, ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ಮತ್ತು ಗಾಂಧಿ ಜಯಂತಿ, ಭಾರತದಾದ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ. ಜೊತೆಗೆ, ಅನೇಕ ಭಾರತೀಯ ರಾಜ್ಯಗಳು ಜಾತಿಯಲ್ಲಿರುವ ಧಾರ್ಮಿಕ ಹಾಗೂ ಭಾಷಾ ಜನಸಂಖ್ಯೆಗಳ ವಿವಿಧ ಸ್ಥಳೀಯ ಹಬ್ಬಗಳನ್ನೂ ಆಚರಿಸುತ್ತವೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ದಂತಕಥೆಯು ಜನಪದ ಸಾಹಿತ್ಯದ ಪ್ರಕಾರವಾಗಿದ್ದು ಮಾನವ ಇತಿಹಾಸದಲ್ಲಿ ನಡೆದದ್ದೆಂದು ಹೇಳುವವನು ಹಾಗೂ ಕೇಳುಗರಿಬ್ಬರಿಂದಲೂ ಗ್ರಹಿಸಲಾದ ಅಥವಾ ನಂಬಲಾದ ಮಾನವ ಕ್ರಿಯೆಗಳು ಇರುವ ಕಥೆಯನ್ನು ಹೊಂದಿರುತ್ತದೆ. ಈ ಪ್ರಕಾರದಲ್ಲಿನ ಕಥೆಗಳು ಮಾನವೀಯ ಮೌಲ್ಯಗಳನ್ನು ತೋರ್ಪಡಿಸಬಹುದು, ಮತ್ತು ಕಥೆಗೆ ಸತ್ಯಾಭಾಸವನ್ನು ನೀಡುವ ನಿರ್ದಿಷ್ಟ ಗುಣಗಳನ್ನು ಹೊಂದಿರಬಹುದು. ತನ್ನ ಸಕ್ರಿಯ ಹಾಗೂ ನಿಷ್ಕ್ರಿಯ ಭಾಗಿಗಳಿಗೆ ದಂತಕಥೆಯು "ಸಾಧ್ಯತೆ"ಯ ಲೋಕದಾಚೆಗಿರುವ ಘಟನೆಗಳನ್ನು ಒಳಗೊಂಡಿರುವುದಿಲ್ಲ, ಆದರೆ ಪವಾಡಗಳನ್ನು ಒಳಗೊಂಡಿರಬಹುದು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
thumb|ಗುಲ್ಜಾರಿ ಲಾಲ್ ನಂದಾ ಗುಲ್ಜಾರಿ ಲಾಲ್ ನಂದಾ (ಜುಲೈ ೪, ೧೮೯೮ - ಜನವರಿ ೧೫, ೧೯೯೮) ಎರಡು ಬಾರಿ ಭಾರತದ ಹಂಗಾಮಿ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಲಾಹೋರ್, ಆಗ್ರಾ ಮತ್ತು ಅಲಹಾಬಾದ್ ಗಳಲ್ಲಿ ಅಧ್ಯಯನ ನಡೆಸಿದ ನಂದಾ ಅವರು ೧೯೨೧ರಲ್ಲಿ ಮುಂಬಯಿಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾದರು. ೧೯೩೭ರಲ್ಲಿ ಮುಂಬಯಿ ಸರ್ಕಾರದ ವಿಧಾನಸಭೆಗೆ ಚುನಾಯಿತರಾಗಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತದ ಉಜ್ಜಯಿನಿಯ,ವಿಕ್ರಮಾದಿತ್ಯ (ಸಂಸ್ಕೃತ:विक्रमादित्य) (102 BCE ನಿಂದ 15 CE) ಪೌರಾಣಿಕ ರಾಜನಾಗಿದ್ದನು. ಬುದ್ಧಿವಂತಿಕೆ, ಶೌರ್ಯ ಮತ್ತು ಉದಾರತೆಗಾಗಿ ಖ್ಯಾತನಾಗಿದ್ದನು. ಗಮನೀಯವಾಗಿ ಚಂದ್ರಗುಪ್ತ II ಮತ್ತು ಸಾಮ್ರಾಟ್ ಹೇಮ್ ಚಂದ್ರ ವಿಕ್ರಮಾದಿತ್ಯ ('ಹೇಮು ಎಂದು ಖ್ಯಾತನಾಗಿರುವ') ಮುಂತಾದ ಅನೇಕ ರಾಜರುಗಳಿಗೆ ಭಾರತದ ಚರಿತ್ರೆಯಲ್ಲಿ "ವಿಕ್ರಮಾದಿತ್ಯ" ಎಂಬ ಬಿರುದು ಬಂದಿರುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಕದಂಬ ಮನೆತನ : ಪಶ್ಚಿಮ ಕರ್ನಾಟಕದಲ್ಲಿ ಪ್ರ.ಶ. 4-7ನೆಯ ಶತಮಾನದವರೆಗೆ ಸ್ವತಂತ್ರರಾಗಿಯೂ 10-13ನೆಯ ಶತಮಾನದವರೆಗೆ ಹಾನುಗಲ್ಲು, ಗೋವ ಮುಂತಾದ ಕಡೆಗಳಲ್ಲಿ ಬಹುತೇಕ ಸಾಮಂತರು ಅಥವಾ ಮಾಂಡಲಿಕರಾಗಿಯೂ ಆಳಿದ ಒಂದು ರಾಜಮನೆತನ. ಈ ಮನೆತನದ ಅರಸರಿಗೆ ಸಂಬಂಧಿಸಿದ ಶಾಸನಗಳು ಮತ್ತು ದಿನಾಂಕಗಳನ್ನು ಆಯಾ ಅರಸರ ಆಳ್ವಿಕೆಯ ವರ್ಷ ಮಾಸ ಪಕ್ಷ ದಿನಗಳ ಎಣಿಕೆಯಲ್ಲಿ ನಿರೂಪಿಸಿರುವುದರಿಂದ ಇವಕ್ಕೆ ಸಮಾನವಾದ ತಾರೀಖುಗಳನ್ನು ನಿಷ್ಕರ್ಷಿಸುವುದು ಕಷ್ಟವೆಂದು ಹೇಳಲಾಗಿದೆ.
ಸಗಟು ವ್ಯಾಪಾರ ಎಂದರೆ ಸರಕುಗಳು ಅಥವಾ ಮಾಲುಗಳನ್ನು ಚಿಲ್ಲರೆ ವ್ಯಾಪಾರಿಗಳಿಗೆ; ಕೈಗಾರಿಕಾ, ವಾಣಿಜ್ಯ, ಸಾಂಸ್ಥಿಕ, ಅಥವಾ ಇತರ ವೃತ್ತಿಪರ ವ್ಯವಹಾರದ ಬಳಕೆದಾರರಿಗೆ; ಅಥವಾ ಇತರ ಸಗಟು ವ್ಯಾಪಾರಿಗಳಿಗೆ ಮತ್ತು ಸಂಬಂಧಿತ ಅಧೀನ ಸೇವೆಗಳಿಗೆ ಮಾರಾಟ ಮಾಡುವುದು. ಸಾಮಾನ್ಯವಾಗಿ ಹೇಳುವುದಾದರೆ, ಇದು ಸಾಮಾನ್ಯ ಗ್ರಾಹಕನನ್ನು ಹೊರತುಪಡಿಸಿ ಇತರ ಯಾರಿಗಾದರೂ ಸರಕುಗಳನ್ನು ಮಾರಾಟ ಮಾಡುವುದು. ಸಂಯುಕ್ತ ರಾಷ್ಟ್ರ ಅಂಕಿಅಂಶ ವಿಭಾಗದ ಪ್ರಕಾರ, ಸಗಟು ವ್ಯಾಪಾರವೆಂದರೆ ಹೊಸ ಹಾಗೂ ಬಳಸಿದ ಸರಕುಗಳನ್ನು ಚಿಲ್ಲರೆ ವ್ಯಾಪಾರಿಗಳು, ಕೈಗಾರಿಕಾ, ವಾಣಿಜ್ಯ, ಸಾಂಸ್ಥಿಕ ಅಥವಾ ವೃತ್ತಿಪರ ಬಳಕೆದಾರರಿಗೆ, ಅಥವಾ ಇತರ ಸಗಟು ವ್ಯಾಪಾರಗಳಿಗೆ ಮರುಮಾರಾಟ (ರೂಪಾಂತರವಿಲ್ಲದೇ ಮಾರಾಟ) ಮಾಡುವುದು, ಅಥವಾ ಅಂತಹ ವ್ಯಕ್ತಿಗಳು ಅಥವಾ ಕಂಪನಿಗಳಿಗೆ ಮಾಲುಗಳನ್ನು ಖರೀದಿಸುವಲ್ಲಿ, ಅಥವಾ ಮಾಲುಗಳನ್ನು ಮಾರುವುದರಲ್ಲಿ ಮಧ್ಯವರ್ತಿ ಅಥವಾ ದಳ್ಳಾಳಿಯಾಗಿ ಕಾರ್ಯನಿರ್ವಹಿಸುವುದನ್ನು ಒಳಗೊಳ್ಳುತ್ತದೆ.
ಸಮಾಜಶಾಸ್ತ್ರವು ಸಮಾಜ ವಿಜ್ಞಾನಗಳಲ್ಲಿ ಹೊಸದಾದ ಮತ್ತು ಬಹುಶೀಘ್ರವಾಗಿ ಬೆಳೆಯುತ್ತಿರುವ ಜ್ಞಾನ ಶಾಖೆಗಳಲ್ಲೊಂದು (ಸೋಷಿಯಾಲಜಿ). ಈ ಪರಿಕಲ್ಪನೆಯನ್ನು ಪ್ರಥಮಬಾರಿಗೆ ಫ್ರಾನ್ಸ್ನ ಸಾಮಾಜಿಕ ತತ್ತ್ವಜ್ಞಾನಿ ಆಗಸ್ಟ್ ಕಾಂಟ್ ಪ್ರಯೋಗಿಸಿದ (1829). ಮಾನವ ಮತ್ತು ಸಮಾಜದ ನಡುವಿನ ಪರಸ್ಪರ ಸಂಬಂಧ ಮತ್ತು ಪ್ರಭಾವ ಸ್ವರೂಪವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡುವ ಈ ವಿಷಯ ವ್ಯಾಪ್ತಿಯಲ್ಲಿ ಸಮಾಜದ ಎಲ್ಲ ಸಂಸ್ಥೆಗಳೂ ಆ ಸಂಸ್ಥೆಗಳಲ್ಲಿ ನಡೆಯುವ ಚಟವಟಿಕೆಗಳೂ ಕಾಲದಿಂದ ಕಾಲಕ್ಕೆ ಸಮಾಜದಲ್ಲಿ ತಲೆದೋರುವ ಬದಲಾವಣೆಗಳೂ ಪ್ರಮುಖ ಸ್ಥಾನ ಪಡೆದಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
"ಪಂಚತಂತ್ರ ಕಥೆಗಳ ಮೂಲ ಭಾರತ".ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ( ಸಂಸ್ಕೃತ:पञ्चतन्त्र' )ಐದು ಮೂಲತತ್ವಗಳು'ಕ್ರಿಸ್ತ ಪೂರ್ವ 3ನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.