The most-visited ಕನ್ನಡ Wikipedia articles, updated daily. Learn more...
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ರಕ್ತಪರಿಚಲನೆಯ ವ್ಯವಸ್ಥೆ ಯು ಅ೦ಗ ವ್ಯೂಹದ ಒಂದು ಭಾಗವಾಗಿದೆ, ಅಲ್ಲದೆ ಪೋಷಕಾ೦ಶಗಳಾದ (ಅಮೈನೊ ಆಮ್ಲ ಹಾಗು ಎಲೆಕ್ಟ್ರೋಲೈಟ್ಸ್), ಅನಿಲಗಳು, ಹಾರ್ಮೋನುಗಳು, ರಕ್ತ ಕೋಶಗಳನ್ನು ದೇಹದ ವಿವಿಧ ಕೋಶಗಳ ಒಳಗೆ ಮತ್ತು ಹೊರಗೆ ಹೋಗುವ೦ತೆ ಮಾಡುತ್ತದೆ ಇದರಿಂದಾಗಿ ದೇಹಕ್ಕೆ ರೋಗಗಳ ವಿರುದ್ಧ ಹೋರಾಡುವ ಕ್ಷಮತೆ ಹಾಗು ದೇಹದ ಉಷ್ಣತೆ ಮತ್ತು pHಗಳನ್ನು ಸಮಮಟ್ಟದಲ್ಲಿ ಹೋಮಿಯೋಸ್ಟಾಸಿಸ್ ನಲ್ಲಿ ತೂಗಿಸಿಕೊ೦ಡು ಹೋಗಲು ಸಹಾಯವನ್ನು ಒದಗಿಸುತ್ತದೆ. ಈ ವ್ಯವಸ್ಥೆಯು ರಕ್ತ ವಿ೦ಗಡನೆಯ ಜಾಲದ೦ತೆಯೇ ಕರಾರುವಕ್ಕಾಗಿದೆ, ಆದರೆ ಕೆಲವೊಮ್ಮೆ ರಕ್ತಪರಿಚಲನೆಯ ವ್ಯವಸ್ಥೆಯು ಹೃದಯನಾಳದ ವ್ಯವಸ್ಥೆಯನ್ನು ಒಳಗೊ೦ಡಿದೆ ಎಂದು ಪರಿಗಣಿಸಲಾಗುತ್ತದೆ, ಇದು ರಕ್ತ ಹಾಗೂ ದುಗ್ಧರಸವನ್ನು ಹ೦ಚುವ ದುಗ್ಧರಸ ಸ್ರವಿಸುವ ವ್ಯವಸ್ಥೆ ಯನ್ನು ಹೊಂದಿದೆ. ಮಾನವನನ್ನು ಒಳಗೊ೦ಡು ಇತರ ಕಶೇರುಕಗಳು, ಸ೦ಕ್ಷಿಪ್ತ ಹೃದಯನಾಳದ ವ್ಯವಸ್ಥೆಯನ್ನು ಹೊಂದಿದೆ (ಇದರರ್ಥ ರಕ್ತವು ಎ೦ದಿಗೂ ಅಪಧಮನಿ, ಧಮನಿ ಹಾಗು ಸೂಕ್ಷ್ಮ ರಕ್ತವಾಹಿನಿಗಳ ಜಾಲವನ್ನು ಬಿಡುವುದಿಲ್ಲ) , ಅಲ್ಲದೆ ಕೆಲವು ಅಕಶೇರುಕಗಳು ಹೊರ ಹೃದಯನಾಳದ ವ್ಯವಸ್ಥೆಯನ್ನು ಹೊ೦ದಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಹಿಂದೂ ಧರ್ಮದಲ್ಲಿ, ಸಂಪ್ರದಾಯ ಶಬ್ದವನ್ನು ಆಧ್ಯಾತ್ಮಿಕ ವಂಶಾವಳಿ, ಧಾರ್ಮಿಕ ವ್ಯವಸ್ಥೆ ಎಂದು ಹೇಳಬಹುದು. ಇದು ಸರಿಸುಮಾರು ಆಂಗ್ಲದ ಟ್ರೆಡಿಷನ್ ಶಬ್ದಕ್ಕೆ ಸಮಾನಾರ್ಥಕವಾಗಿದೆ. ಇದು ಗುರುಗಳು ಮತ್ತು ಶಿಷ್ಯರ ಉತ್ತರಾಧಿಕಾರಕ್ಕೆ ಸಂಬಂಧಿಸಿದೆ, ಮತ್ತು ಆಧ್ಯಾತ್ಮಿಕ ಸಂಪರ್ಕದಾರಿಯಾಗಿ ಕಾರ್ಯನಿರ್ವಹಿಸುತ್ತದೆ, ಮತ್ತು ಒಂದು ಧಾರ್ಮಿಕ ಗುರುತಿಗೆ ಸ್ಥಿರತೆಯನ್ನು ನೀಡುವ ಸಂಬಂಧಗಳ ಸೂಕ್ಷ್ಮ ಜಾಲವನ್ನು ಒದಗಿಸುತ್ತದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಈ ಲೇಖನವು ಆತಿಥ್ಯ/ಅತಿಥಿ ಸತ್ಕಾರದ ಅರ್ಥ ನಿರೂಪಣೆಗೆ ಸಂಬಂಧಿಸಿದುದಾಗಿದೆ. ಹೋಟೆಲ್ ನಿರ್ವಹಣೆಯ ಶೈಕ್ಷಣಿಕ ಅಧ್ಯಯನಗಳಿಗಾಗಿ, ನೋಡಿ ಆತಿಥ್ಯ/ಅತಿಥಿ ಸತ್ಕಾರ ನಿರ್ವಹಣಾ ಅಧ್ಯಯನಗಳು ಹಾಗೂ ಆತಿಥ್ಯ/ಅತಿಥಿ ಸತ್ಕಾರ ಉದ್ಯಮ. ಆತಿಥ್ಯ/ಅತಿಥಿ ಸತ್ಕಾರ ವು ಓರ್ವ ಅತಿಥಿ ಹಾಗೂ ಆತಿಥೇಯರ ನಡುವಿನ ಒಂದು ಬಾಂಧವ್ಯ/ಸಂಬಂಧ, ಅಥವಾ ಅತಿಥಿ ಸತ್ಕಾರದ ನಡೆ ಅಥವಾ ಪ್ರವೃತ್ತಿಯಾಗಿರುತ್ತದೆ.
ಸರ್ ಐಸಾಕ್ ನ್ಯೂಟನ್ FRS (4 ಜನವರಿ 1643– 31 ಮಾರ್ಚ್ 1727 [OS: 25 December 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ , ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.