The most-visited ಕನ್ನಡ Wikipedia articles, updated daily. Learn more...
ಮೋಹನ್ ಲಾಲ್ (ಮಲಯಾಳಂ:മോഹന്ലാല്) ಎಂಬ ಏಕ ಹೆಸರಿನಿಂದ ಕರೆಯಲ್ಪಡುವ ಮೋಹನ್ ಲಾಲ್ ವಿಶ್ವನಾಥನ್ ನಾಯರ್ (೧೯೬೦ರ ಮೇ ೨೧ರಂದು ಜನಿಸಿದರು) ಒಬ್ಬ ಭಾರತೀಯ ಚಲನಚಿತ್ರ ನಟ ಮತ್ತು ನಿರ್ಮಾಪಕರಾಗಿದ್ದಾರೆ. ಅವರು ಮುಖ್ಯವಾಗಿ ಮಲಯಾಳಂ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ. ಅವರು ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು - ಎರಡು ಅತ್ಯುತ್ತಮ ನಟ ಪ್ರಶಸ್ತಿಗಳು, ಒಂದು ವಿಶೇಷ ಜ್ಯೂರಿ ಪ್ರಶಸ್ತಿ ಮತ್ತು ಒಂದು ಅತ್ಯುತ್ತಮ ಚಿತ್ರಕ್ಕಾಗಿ ಪ್ರಶಸ್ತಿ (ನಿರ್ಮಾಪಕರಾಗಿ) ಮೊದಲಾದವನ್ನು ಪಡೆದಿದ್ದಾರೆ.
ಭತ್ತದ ಪದವು ಸಸ್ಯಕ್ಕೂ ಹಾಗೂ ಸಸ್ಯದ ಕಾಳಿಗೂ ಅನ್ವಯಿಸುತ್ತದೆ. ಭತ್ತಕ್ಕೆ ಕನ್ನಡದಲ್ಲಿ ನೆಲ್ಲು ಎಂದು ಸಹ ಇಂಗ್ಲೀಶ್ನಲ್ಲಿ ಪ್ಯಾಡಿ ಬಳಕೆಯಲ್ಲಿದ್ದಾಗ್ಯೂ ರೈಸ್ ಎನ್ನುವ ಪದವನ್ನು ಭತ್ತ (ಕೆಲವೊಮ್ಮೆ ಅನ್ಮಿಲ್ಡ್ ರೈಸ್), ಅಕ್ಕಿ ಹಾಗೂ ಅನ್ನಕ್ಕೂ ಬಳಸಲಾಗುತ್ತದೆ. ಏಷಿಯಾದ ಭತ್ತದ ವೈಜ್ಞಾನಿಕ ಹೆಸರು ಒರಿಜ ಸಟಿವ ಮತ್ತು ಆಫ್ರಿಕಾದ ಬತ್ತದ ವೈಜ್ಞಾನಿಕ ಹೆಸರು ಒರಿಜ ಗ್ಲಾಬಿರ್ರಿಮ.
ಲಾರ್ಡ್ಸ್ ಕ್ರಿಕೆಟ್ ಮೈದಾನ (ಸಾಮಾನ್ಯವಾಗಿ ಲಾರ್ಡ್ಸ್ ಎಂದು ಹೆಸರಾಗಿದೆ) ಎನ್ನುವುದು ಲಂಡನ್ನ ಸೇಂಟ್ ಜಾನ್ಸ್ ವುಡ್ನಲ್ಲಿರುವ ಕ್ರಿಕೆಟ್ ಆಟವಾಡುವ ಸ್ಥಳವಾಗಿದೆ. ಇದರ ಸ್ಥಾಪಕರಾದ ಥಾಮಸ್ ಲಾರ್ಡ್ ಎನ್ನುವವರ ಹೆಸರನ್ನು ಪಡೆದಿರುವ ಇದರ ಮಾಲೀಕತ್ವವನ್ನು ಮೆರ್ಲ್ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಹೊಂದಿದೆ ಮತ್ತು ಇದು ಮಿಡ್ಲ್ಸೆಕ್ಸ್ ಕಂಟ್ರಿ ಕ್ರಿಕೆಟ್ ಕ್ಲಬ್, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ), ಯುರೋಪಿಯನ್ ಕ್ರಿಕೆಟ್ ಕೌನ್ಸಿಲ್ (ಇಸಿಸಿ) ಇದರ ನೆಲೆಯಾಗಿದೆ ಮತ್ತು ಆಗಸ್ಟ್ 2005 ರವರೆಗೆ ಇದು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇದರ ನೆಲೆಯಾಗಿತ್ತು. ಲಾರ್ಡ್ಸ್ ಅನ್ನು ವ್ಯಾಪಕವಾಗಿ "ಕ್ರಿಕೆಟ್ನ ತವರುಮನೆ" ಎನ್ನಲಾಗುತ್ತದೆ ಮತ್ತು ಇದು ವಿಶ್ವದ ಅತ್ಯಂತ ಹಳೆಯ ಕ್ರೀಡಾ ವಸ್ತು ಸಂಗ್ರಹಾಲಯದ ನೆಲೆಯಾಗಿದೆ.ಇಂದಿನ ಲಾರ್ಡ್ಸ್ ಅದರ ಮೂಲ ಸ್ಥಳದಲ್ಲಿಲ್ಲ ಮತ್ತು 1787 ರಿಂದ 1814 ರವರೆಗೆ ಲಾರ್ಡ್ ಅವರು ಸ್ಥಾಪಿಸಿದ ಮೂರು ಮೈದಾನಗಳಲ್ಲಿ ಮೂರನೆಯದಾಗಿದೆ.
ನೊವಾಕ್ ಜೊಕೊವಿಕ್ (Novak Djokovic)
ನೊವಾಕ್ ಜೊಕೊವಿಕ್ (Serbian: [Новак Ђоковић, Novak Đoković] pronounced [ˈnɔvɑk ˈdʑɔːkɔvitɕ] ( ); ಜನನ 22 ಮೇ 1987) ಸರ್ಬಿಯಾ ಮೂಲದ ಒಬ್ಬ ವೃತ್ತಿಪರ ಟೆನಿಸ್ ಆಟಗಾರ. ವೃತ್ತಿಪರ ಟೆನಿಸ್ ಆಟಗಾರರ ಸಂಘ(ಎಟಿಪಿ)ದ ಶ್ರೇಯಾಂಕ ಪಟ್ಟಿಯಲ್ಲಿ ಸದ್ಯಕ್ಕೆ ಮೊದಲನೆ ಸ್ಥಾನದಲ್ಲಿದ್ದಾರೆ.ಅವರು ಎರಡು ಗ್ರ್ಯಾನ್ ಸ್ಲ್ಯಾಮ್ ಸಿಂಗಲ್ಸ್ ಪಂದ್ಯಾವಳಿಗಳನ್ನು (2008 ಮತ್ತು 2011 ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ಷಿಪ್) ಗೆದ್ದಿದ್ದಾರೆ. ಇದರೊಂದಿಗೆ ನೊವಾಕ್ ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿ ಗೆಲ್ಲುವ ಮೊದಲ ಸರ್ಬಿಯನ್ ಹಾಗೂ ಓಪನ್ ಯುಗದಲ್ಲಿ, ವರ್ಷದ ನಾಲ್ಕೂ ಗ್ರ್ಯಾನ್ ಸ್ಲ್ಯಾಮ್ ಟೆನಿಸ್ ಪಂದ್ಯಾವಳಿಗಳ ಸೆಮಿಫೈನಲ್ ತನಕ ಮುನ್ನಡೆದ ಅತಿ ಕಿರಿ ವಯಸ್ಕ ಆಟಗಾರರಾದರು.ಗ್ರ್ಯಾನ್ ಸ್ಲ್ಯಾಮ್ ಪಂದ್ಯಾವಳಿಗಳಲ್ಲಿ ಹಲವು ಬಾರಿ ರೋಜರ್ ಫೆಡರರ್ನ್ನು ಸೋಲಿಸಿದ ಐದು ಪ್ರಮುಖ ಆಟಗಾರರಲ್ಲಿ ನೊವಾಕ್ ಸಹ ಒಬ್ಬರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಹಾರಕವು ಮುಖ್ಯವಾಗಿ ಭಾರತದಲ್ಲಿ ಬೆಳೆಯಲಾದ ಒಂದು ವಾರ್ಷಿಕ ಧಾನ್ಯ, ಜೊತೆಗೆ, ಫ಼ಿಲಿಪೀನ್ಸ್, ಇಂಡೊನೇಷ್ಯಾ, ವಿಯೆಟ್ನಾಮ್, ಥಾಯ್ಲಂಡ್, ಮತ್ತು ಪಶ್ಚಿಮ ಆಫ಼್ರಿಕಾದಲ್ಲೂ (ಇದು ಇಲ್ಲಿ ಹುಟ್ಟಿಕೊಂಡಿತು) ಬೆಳೆಯಲಾಗುತ್ತದೆ. ಈ ಬಹುತೇಕ ಪ್ರದೇಶಗಳಲ್ಲಿ ಇದನ್ನು ಸಣ್ಣ ಬೆಳೆಯಾಗಿ ಬೆಳೆಯಲಾಗುತ್ತದೆ, ದಖ್ಖನ ಪ್ರಸ್ಥಭೂಮಿಯನ್ನು ಹೊರತುಪಡಿಸಿ (ಇಲ್ಲಿ ಇದನ್ನು ಮುಖ್ಯ ಆಹಾರ ಮೂಲವಾಗಿ ಬೆಳೆಯಲಾಗುತ್ತದೆ). ಇದು ಬರವನ್ನು ಸಹಿಸಿಕೊಳ್ಳಬಲ್ಲ, ವಿಪರೀತ ಹವಾಮಾನದಲ್ಲಿ ಬೆಳೆಯಬಲ್ಲ ಬೆಳೆಯಾಗಿದೆ ಮತ್ತು ಇತರ ಬೆಳೆಗಳು ಬದುಕುಳಿಯಲಾಗದಿರುವ ಕೃಷಿ ಮಾಡಲು ಕಷ್ಟವಾದ ಮಣ್ಣುಗಳಲ್ಲಿ ಬದುಕುಳಿಯಬಲ್ಲದು, ಮತ್ತು ಪ್ರತಿ ಹೆಕ್ಟೇರಿಗೆ ೪೫೦-೯೦೦ ಕೆ.ಜಿ.
ಜೀವಶಾಸ್ತ್ರ ಅಥವಾ ಜೀವವಿಜ್ಞಾನವು ಬದುಕಿರುವ ಜೀವಿಗಳ ಮತ್ತು ಜೀವರಾಶಿಗಳ ಬಗೆಗೆ ಅಧ್ಯಯನ ಮಾಡುವ ಒಂದು ನೈಸರ್ಗಿಕ ವಿಜ್ಞಾನ. ಅದು ಜೀವಿಗಳ ರಚನೆ, ಕಾರ್ಯನಿರ್ವಹಣೆ, ಬೆಳವಣಿಗೆ, ವಿಕಾಸ, ಹಂಚಿಕೆ, ಗುರುತಿಸುವಿಕೆ ಮತ್ತು ಜೀವ ವರ್ಗೀಕರಣಗಳ ಅಧ್ಯಯನವನ್ನು ಒಳಗೊಂಡಿದೆ. ಆಧುನಿಕ ಜೀವಶಾಸ್ತ್ರವು ಹಲವು ಶಾಖೆಗಳು ಮತ್ತು ಉಪಶಾಖೆಗಳನ್ನು ಒಳಗೊಂಡ ದೊಡ್ಡ ಮತ್ತು ವಿಶಾಲದೃಷ್ಟಿಯನ್ನು ಹೊಂದಿದ ಕ್ಷೇತ್ರ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು.ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ. ಈ ಶೈಲಿಯಲ್ಲಿ ನವರತ್ನಗಳನ್ನು ಉಪಯೋಗಿಸಿಕೊಂಡು ರಚಿತವಾದ ಆಭರಣ ಹಿಂದೂ ಧರ್ಮ, ಜೈನ್ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮ ಪ್ರಮುಖ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಇತರ ಧರ್ಮಗಳ ನಡುವೆ ಹೊಂದಿದೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವು ಭಾರತದ ಅತ್ಯಂತ ಗಣ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭ, ಮತ್ತು ಫಿಲ್ಮ್ಫೇರ್ ಪ್ರಶಸ್ತಿಗಳ ಜೊತೆಗೆ ದೇಶದ ಅತ್ಯಂತ ಹಳೆಯ ಪ್ರಶಸ್ತಿ ಪ್ರದಾನ ಸಮಾರಂಭವಾಗಿದೆ. ೧೯೫೪ರಲ್ಲಿ ಪ್ರಾರಂಭವಾದ ಈ ಸಮಾರಂಭವನ್ನು ೧೯೭೩ರಿಂದೀಚೆಗೆ ಭಾರತ ಸರ್ಕಾರದ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನಡೆಸುತ್ತ ಬಂದಿದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಜಾಸ್ಮಿನ್ ಮೇರಿ ಜೋಸೆಫ್, ಮೀರಾ ಜಾಸ್ಮಿನ್ ಅವರು ವಿಬಿನ್ ಜೋಸೆಫ್ ಅವರನ್ನು ವಿವಾಹವಾಗಲಿದ್ದಾರೆ. (ಮಲಯಾಳಂ മീര ജാസ്മിന്) (ಜನಿಸಿದ್ದು 1984ರ ಫೆಬ್ರವರಿ 15ರಂದು), ಇವರು ತಮ್ಮ ಸ್ಟೇಜ್ ಹೆಸರಾದ ಮೀರಾ ಜಾಸ್ಮಿನ್ ಹೆಸರಿನಿಂದ ಚಿರಪರಿಚಿತರು, ಇವರು ಭಾರತೀಯ ಚಿತ್ರನಟಿ, 0}ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡ ಭಾಷೆಗಳನ್ನೊಳಗೊಂಡ ಭಾರತೀಯ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. .
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕಾಲ್ಪನಿಕ ಕೃತಿಯಲ್ಲಿ (ಉದಾಹರಣೆಗೆ ಕಾದಂಬರಿ, ನಾಟಕ, ದೂರದರ್ಶನ ಧಾರಾವಾಹಿ, ಚಲನಚಿತ್ರ ಅಥವಾ ವೀಡಿಯೊ ಗೇಮ್), ಪಾತ್ರ (ಕೆಲವೊಮ್ಮೆ ಕಾಲ್ಪನಿಕ ಪಾತ್ರ ಎಂದು ಕರೆಯಲ್ಪಡುತ್ತದೆ) ಎಂದರೆ ಒಬ್ಬ ವ್ಯಕ್ತಿ ಅಥವಾ ಕೃತಿಯಲ್ಲಿನ ಇತರ ಜೀವಿ. ಪಾತ್ರವು ಸಂಪೂರ್ಣವಾಗಿ ಕಾಲ್ಪನಿಕವಾಗಿರಬಹುದು ಅಥವಾ ನಿಜಜೀವನದ ವ್ಯಕ್ತಿಯ ಮೇಲೆ ಆಧಾರಿತವಾಗಿರಬಹುದು, ಈ ಸಂದರ್ಭದಲ್ಲಿ "ಕಾಲ್ಪನಿಕ" ಮತ್ತು "ನೈಜ" ಪಾತ್ರದ ನಡುವೆ ವ್ಯತ್ಯಾಸ ಮಾಡಬಹುದು. ಪಾತ್ರ, ವಿಶೇಷವಾಗಿ ಒಬ್ಬ ನಟನಿಂದ ರಂಗಭೂಮಿ ಅಥವಾ ಚಲನಚಿತ್ರದಲ್ಲಿ ಅಭಿನಯಿಸಲ್ಪಟ್ಟಾಗ, "ಒಬ್ಬ ವ್ಯಕ್ತಿಯಾಗುವ ಕಲ್ಪನೆಯನ್ನು" ಒಳಗೊಳ್ಳುತ್ತದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.