The most-visited ಕನ್ನಡ Wikipedia articles, updated daily. Learn more...
ಅಂಬರೀಶ್ (ಮಳವಳ್ಳಿ ಹುಚ್ಚೇಗೌಡ ಅಮರನಾಥ್) (29 ಮೇ 1952 - 24 ನವೆಂಬರ್ 2018) ಭಾರತೀಯ ಚಲನಚಿತ್ರ ನಟ ಮತ್ತು ಕರ್ನಾಟಕ ರಾಜ್ಯದ ಒಬ್ಬ ರಾಜಕಾರಣಿಯಾಗಿದ್ದರು. ಪುಟ್ಟಣ್ಣ ಕಣಗಾಲ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಾಗರಹಾವು (1972) ನಲ್ಲಿ ಚೊಚ್ಚಲ ನಟನೆಯ ನಂತರ, ಅವರ ನಟನಾ ವೃತ್ತಿಯು ಕನ್ನಡ ಚಿತ್ರಗಳಲ್ಲಿ ಖಳ ನಟ ಮತ್ತು ಪೋಷಕ ಪಾತ್ರಗಳನ್ನು ಚಿತ್ರಿಸುವ ಒಂದು ಸಂಕ್ಷಿಪ್ತ ಹಂತದೊಂದಿಗೆ ಪ್ರಾರಂಭವಾಯಿತು. ವಾಣಿಜ್ಯಿಕವಾಗಿ ಯಶಸ್ಸು ಗಳಿಸಿದ ಅನೇಕ ಚಿತ್ರಗಳಲ್ಲಿ ಸ್ವತಃ ಪ್ರಮುಖ ಖಳನಟನಾಗಿ ಸ್ಥಾಪನೆಗೊಂಡ ನಂತರ, ಅನೇಕ ಸಿನೆಮಾಗಳಲ್ಲಿ ನಾಯಕನಟನಾಗಿ ನಟಿಸಿದರು.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
[[ಚಿತ್ರ:NTR in 1952.jpg|thumb|ನಂದಮೂರಿ ತಾರಕ dghghwhsjhhdjssuxjgxjehsshshhshgurhdyhydhsisjyshshಲ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದರು.ತೆಲುಗು ಜನರು "ಅನ್ನಗಾರು" ಎಂದು ಪ್ರೀತಿಯಿಂದ ಕರೆಯುವ ನಂದಮೂರಿ ತಾರಕ ರಾಮಾರಾವ್ ಅವರು ಒಬ್ಬ ಮಹಾನಟ ಹಾಗೂ ಪ್ರಜೆಗಳ ನಾಯಕರಾಗಿದ್ದರು. ಅವರ ಹೆಸರಿನ ಮೊದಲ ಆಂಗ್ಲ ಅಕ್ಷರಗಳಾದ ಎನ್.ಟಿ.ಆರ್, ಎನ್.ಟಿ.ರಾಮಾರಾವು ಆಗಿಯೂ ಪ್ರಸಿದ್ಧರಾದ ಅವರು ತೆಲುಗು, ತಮಿಳು ಹಾಗೂ ಹಿಂದೀ ಭಾಷೆಗಳಲ್ಲಿ ೪೦೦ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.ನಂದಮೂರಿ ತಾರಕ ರಾಮಾರಾವ್ ಅನೇಕ ಪೌರಾಣಿಕ, ಜಾನಪದ ಹಾಗು ಸಾಮಾಜಿಕ ಚಿತ್ರಗಳಲ್ಲಿ ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ, ಇದಲ್ಲಿದೆ ರಾಮ ಕೃಷ್ಣರ ಪೌರಾಣಿಕ ಪಾತ್ರಗಳಲ್ಲಿ ನಟಿಸಿ ತೆಲುಗು ಜನರ ಪ್ರೀತಿಯನ್ನು ಸಂಪಾದಿಸಿದ್ದಾರೆ. ತಮ್ಮ ೪೪ವರ್ಷಗಳ ಸಿನಿಮಾ ಜೀವನದಲ್ಲಿ ನಂದಮೂರಿ ತಾರಕ ರಾಮಾರಾವ್ ೧೩ ಚಾರಿತ್ರಿಕ, ೫೫ ಜಾನಪದ, ೧೮೬ ಸಾಮಾಜಿಕ ಹಾಗೂ ೪೪ ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ವಿಶ್ವ ಪರಿಸರ ದಿನ ವಿಶ್ವ ಪರಿಸರ ದಿನವನ್ನು ಪ್ರತಿವರ್ಷ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ. 1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಅಭಿಯಾನವಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ, ವಾರ್ಷಿಕವಾಗಿ 143ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆ.
ಗ್ರೀಕ್ἐνέργεια ಮೂಲ ಪದಗಳಾದ ಎನರ್ಜೀಯಾ ' (ಚಟುವಟಿಕೆ, ಕಾರ್ಯಾಚರಣೆ) ಮತ್ತು ἐνεργός ಎನರ್ಗೊಸ್' (ಸಕ್ರಿಯ, ಕಾರ್ಯನಿರತ) ಎಂಬ ಪದಗಳಿಂದ ಭೌತವಿಜ್ಞಾನದ ಶಕ್ತಿ ('ಎನರ್ಜಿ') (=ಇಂಧನ, ಬಲ) ಎಂಬ ಇಂಗ್ಲಿಷ್ ಪದವು ನಿಷ್ಪನ್ನವಾಗಿದೆ. 'ಶಕ್ತಿ' ಎಂಬುದು, ಬಲವು ನಿರ್ವಹಿಸಬಲ್ಲ ಕಾರ್ಯದ ಯಾವುದೇ ಭೌತಿಕ ಅದಿಶ ಪರಿಮಾಣವನ್ನು ಸೂಚಿಸುವುದಾಗಿದೆ. ಸಂರಕ್ಷಣಾ ನಿಯಮಕ್ಕೆ ಒಳಗಾಗುವ ವಸ್ತು ಮತ್ತು ವ್ಯವಸ್ಥೆಗಳ ಲಕ್ಷಣವೂ ಆಗಿದೆ.
ಶ್ರೀನಿವಾಸ ರಾಮಾನುಜನ್ (ಪೂರ್ಣ ಹೆಸರು - ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ್)(ಡಿಸೆಂಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದ ಶ್ರೇಷ್ಠ ಭಾರತೀಯ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.