The most-visited ಕನ್ನಡ Wikipedia articles, updated daily. Learn more...
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಜೂನ್ ೨೧ ಅನ್ನು ಅಂತರಾಷ್ಟ್ರೀಯ ಯೋಗ ದಿನವೆಂದು ಸಂಯುಕ್ತ ರಾಷ್ಟ್ರ ಸಂಸ್ಥೆ ಯು ಘೋಷಿಸಿದೆ.ಯೋಗವು ಭಾರತೀಯ ಮೂಲದ, ೬,೦೦೦ ವರ್ಷ ಹಳೆಯದಾದ, ಭೌತಿಕ, ಮಾನಸಿಕ, ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಸಂಸ್ಥೆಯ ತಮ್ಮ ಭಾಷಣದಲ್ಲಿ ವರ್ಷದ ಅತಿ ದೀರ್ಘ ದಿನವಾದ ಜೂನ್ ೨೧ರಂದು ವಿಶ್ವ ಯೋಗ ದಿನ ಆಚರಿಸುವಂತೆ ಕರೆ ನೀಡಿದರು. ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಹೊಸದಿಲ್ಲಿಯ ರಾಜಪಥ್ನಲ್ಲಿ ನೆಡೆಸಲು ಭಾರತ ಸರಕಾರ ಕಾರ್ಯಕ್ರಮ ರೂಪಿಸಿತ್ತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
[[ಚಿತ್|right|thumb|ಜನ್ಮಾಷ್ಟಮಿಯಂದು ಅವನ ಜನನದ ಸ್ವಲ್ಪ ನಂತರ ವಸುದೇವನಿಂದ ಕೃಷ್ಣನು ಯಮುನಾ ನದಿಯ ಮೇಲೆ ಎತ್ತೊಯ್ಯಲ್ಪಡುತ್ತಿದ್ದಾನೆ]] ಭಾರತೀಯ ಮಹಾಕಾವ್ಯದಲ್ಲಿ, ವಸುದೇವನು ಕೃಷ್ಣನ ತಂದೆ, ಯದು ಮತ್ತು ವೃಷ್ಣಿ ರಾಜವಂಶಗಳ ಶೂರಸೇನನ ಮಗ. ಅವನು ಕೃಷ್ಣನ ಸಾಕು ತಂದೆಯಾದ ರಾಜ ನಂದನ ಸಹೋದರನಾಗಿದ್ದನು. ಅವನ ಸಹೋದರಿ ಕುಂತಿಯು ಪಾಂಡುವನ್ನು ಮದುವೆಯಾಗಿದ್ದಳು.ದೇವಕಿಯ ಎಂಟನೆಯ ಮಗು ಕಂಸನನ್ನು ಕೊಲ್ಲುತ್ತಾನೆಂಬ ವಿಷಯ ಕಂಸನ ಕಿವಿಗೆ ಬೀಳುತ್ತಿದ್ದಂತೆ ಕಂಸನಿಗೆ ತಂಗಿಯ ಮೇಲೆ ವಿಪರೀತ ಕೋಪ ಬಂತು.
ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ. ಸಾವಿರಾರು ವರ್ಷಗಳಿಂದಲೂ ಭಾರತ ದೇಶದಲ್ಲಿ ಆಚರಿಸಲ್ಪಡುತ್ತಿರುವ 'ಯೋಗವಿದ್ಯೆಯು' ಋಷಿ ಮುನಿಗಳಾದಿ ಸಾಧಕರಿಂದ ವಿದ್ಯೆ ಮತ್ತು ಜೀವನ ಶೈಲಿಯಾಗಿ ಹರಿದು ಬಂದಿದೆ. ಯೋಗಶ್ಚಿತ್ತವೃತ್ತಿನಿರೋಧಃ ಎಂದ ಮಹಾ ಯೋಗಾಚಾರ್ಯ ಪತಂಜಲಿ ಮಹರ್ಷಿಗಳು ಯೋಗ ಪ್ರವರ್ತಕರು.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಿಸುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಪ್ರಾಣಾಯಾಮ (ಸಂಸ್ಕೃತ : प्राणायाम prāṇāyāma ) ಸಂಸ್ಕೃತ ಶಬ್ದವಾಗಿದ್ದು, ಪ್ರಾಣಾಯಾಮ ಎಂದರೆ "ಪ್ರಾಣವನ್ನು ಹತೋಟಿಯಲ್ಲಿಡು ಅಥವಾ ಉಸಿರಾಡು" ಎಂದಿದೆ . ಈ ಶಬ್ದವು ಸಂಸ್ಕೃತದ ಎರಡು ಶಬ್ದಗಳಿಂದ ರಚಿಸಲ್ಪಟ್ಟಿದ್ದು, ಪ್ರಾಣ, ಜೀವ ಶಕ್ತಿ, ಅಥವಾ ಮಹತ್ವದ ಶಕ್ತಿ ,ಅದರಲ್ಲಿಯೂ ಮುಖ್ಯವಾಗಿ, ಉಸಿರು, ಮತ್ತು "ಆಯಾಮ", ಮುಂದಕ್ಕೆ ಹಾಕು ಅಥವಾ ಹತೋಟಿಯಲ್ಲಿಡು ಎಂಬುದೇ ಆಗಿದೆ. ಮತ್ತೆ ಬದಲಾಯಿಸಿ ಹೇಳುವುದಾದರೆ 'ಜೀವಶಕ್ತಿಯ ಹಿಡಿತವೇ' ಆಗಿದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.