The most-visited ಕನ್ನಡ Wikipedia articles, updated daily. Learn more...
ಕರಿಶ್ಮಾ ಕಪೂರ್ (ಹಿಂದಿ:करिश्मा कपूर, 1974 ರ ಜೂನ್ 25 ರಂದು ಜನನ), ಲೊಲೊ ಎಂಬ ಮುದ್ದಿನ ಉಪನಾಮದಿಂದ ಕರೆಯಲ್ಪಡುವ ಇವರು, ಬಾಲಿವುಡ್ ನ ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಭಾರತೀಯ ನಟಿಯಾಗಿದ್ದಾರೆ. 1991 ರಲ್ಲಿ ಮೊದಲ ಬಾರಿಗೆ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಕಪೂರ್ ಅವರ ಪೀಳಿಗೆಯ ಅತ್ಯಂತ ಪ್ರಸಿದ್ಧ ನಟಿಯಾದರು. ಕಪೂರ್ ರವರ ವೃತ್ತಿಜೀವನದ ಸಂದರ್ಭದಲ್ಲಿ, ವಾಣಿಜ್ಯದ ದೃಷ್ಟಿ ಮತ್ತು ವಿಮರ್ಶಾತ್ಮಕವಾಗಿ ಯಶಸ್ವಿಯಾದ ಅನೇಕ ಚಿತ್ರಗಳ ಭಾಗವಾಗಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೆಲ ಪರಿಸ್ಥಿತಿಗಳಲ್ಲಿ ಒಂದು ದೇಶದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಹೆಸರು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ನೊಳಂಬ - ಕರ್ನಾಟಕದ ಈಗಿನ ಚಿತ್ರದುರ್ಗ ಜಿಲ್ಲೆ ಮತ್ತು ಅದರ ಸುತ್ತ ಮುತ್ತಣ ಪ್ರದೇಶವನ್ನೊಳಗೊಂಡಿದ್ದ ನೊಳಂಬರಿಗೆ ಸಾಸಿರ ಎಂಬ ಪ್ರಾಂತ್ಯದ ಅಧಿಪತಿಗಳಾಗಿ 8ನೆಯ ಶತಮಾನದಲ್ಲಿ ಆಳ್ವಿಕೆಯನ್ನಾರಂಭಿಸಿ, ಮುಂದಿನ ಎರಡು ಶತಮಾನಗಳಲ್ಲಿ ಪ್ರಾಬಲ್ಯಗಳಿಸಿ, ಈಗಿನ ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು, ಜಿಲ್ಲೆಗಳನ್ನೂ ನೆರೆಯ ಅನಂತಪುರ, ಚಿತ್ತೂರು, ಧರ್ಮಪುರಿ ಜಿಲ್ಲೆಗಳನ್ನೂ ಒಳಗೊಂಡಿದ್ದ ನೊಳಂಬವಾಡಿ 32000 ಪ್ರಾಂತ್ಯದ ಪ್ರಭುಗಳಾಗಿ 11ನೆಯ ಶತಮಾನದ ಮಧ್ಯದವರೆಗೆ ಆಳ್ವಿಕೆ ನಡೆಸಿದ ಸಾಮಂತ ರಾಜರ ಮನೆತನ.ತಲಕಾಡಿನ ಗಂಗರೂ ರಾಷ್ಟ್ರಕೂಟರೂ ಕಲ್ಯಾಣ ಚಾಳುಕ್ಯರೂ ನೊಳಂಬರಿಗೆ ಸ್ವಲ್ಪಕಾಲ ಅಧೀನರಾಗಿದ್ದರು. ಕದಂಬ, ಗಂಗ ಮತ್ತು ಕಲ್ಯಾಣ ಚಾಳುಕ್ಯರೊಂದಿಗೆ ಇವರು ವಿವಾಹ ಸಂಬಂಧ ಬೆಳೆಸಿದ್ದರು. ಬಾಣರು, ವೈದುಂಬರು, ಚೋಳರು ಮುಂತಾದವರಿಗೂ ಇವರಿಗೂ ರಾಜಕೀಯ ಸಂಬಂಧವಿತ್ತು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಆನೆಲೀಸ್ ಮೇರಿ "ಆನ್" ಫ್ರಾಂಕ್ (12 ಜೂನ್ 1929 - ಫೆಬ್ರವರಿ ಅಥವಾ ಮಾರ್ಚ್ 1945) ಇವಳು ಜರ್ಮನ್ ಮೂಲದ ಡಚ್-ಯಹೂದಿ ದಿನಚರಿಗಾರತಿ. ಹತ್ಯಾಕಾಂಡದ ಹೆಚ್ಚು ಚರ್ಚಿಸಲ್ಪಟ್ಟ ಯಹೂದಿ ಬಲಿಪಶುಗಳಲ್ಲಿ ಒಬ್ಬಳಾದ ಅವಳು ದಿ ಡೈರಿ ಆಫ್ ಎ ಯಂಗ್ ಗರ್ಲ್ (ಮೂಲತಃ ಡಚ್ ಭಾಷೆಯಲ್ಲಿ ಹೆಟ್ ಅಚೆರ್ಹುಯಿಸ್; ಇಂಗ್ಲಿಷ್: ದಿ ಸೀಕ್ರೆಟ್ ಅನೆಕ್ಸ್) ಪ್ರಕಟಣೆಯೊಂದಿಗೆ ಮರಣೋತ್ತರವಾಗಿ ಖ್ಯಾತಿಯನ್ನು ಗಳಿಸಿದಳು. ಇದರಲ್ಲಿ ಅವಳು ೧೯೪೨ ರಿಂದ ಅಜ್ಞಾತವಾಸದಲ್ಲಿ ತನ್ನ ಜೀವನವನ್ನು ದಾಖಲಿಸಿದ್ದಾಳೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮನುಷ್ಯನ ಮತ್ತು ಪ್ರಾಣಿಗಳ ದೇಹದ ಬೆಳೆವಣಿಗೆಗೆ ಅತ್ಯಾವಶ್ಯಕವಾದ ಪಿಷ್ಟಪದಾರ್ಥಗಳು, ನೈಟ್ರೊಜನ್, ಮೇದಸ್ಸು, ಜೀವಸತ್ವಗಳು, ಲವಣ, ಕ್ಯಾಲ್ಸಿಯಂ, ಫಾಸ್ಫರಸ್ ಮುಂತಾದ ಪೋಷಕಾಂಶಗಳನ್ನು ಒದಗಿಸುವ, ತಿನ್ನಲು ಯೋಗ್ಯವಾದ ಸಸ್ಯಗಳು. ಈ ಸಸ್ಯಗಳ ಕಾಯಿ ಹಣ್ಣುಗಳನ್ನೋ ನೇರವಾಗಿ ಅವುಗಳ ಸೊಪ್ಪನ್ನೋ ಗೆಡ್ಡೆ ಬೇರು ದಿಂಡುಗಳನ್ನೋ ಬಳಸುವುದು ರೂಢಿ. ಈ ಎಲ್ಲ ಅಂಶಗಳೂ ಒಂದೇ ಜಾತಿಯ ಸಸ್ಯ ಅಥವಾ ಸಸ್ಯಭಾಗದಲ್ಲಿ ಕೂಡಿರುವುದಿಲ್ಲ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಕದಂಬ ಮನೆತನ : ಪಶ್ಚಿಮ ಕರ್ನಾಟಕದಲ್ಲಿ ಪ್ರ.ಶ. 4-7ನೆಯ ಶತಮಾನದವರೆಗೆ ಸ್ವತಂತ್ರರಾಗಿಯೂ 10-13ನೆಯ ಶತಮಾನದವರೆಗೆ ಹಾನುಗಲ್ಲು, ಗೋವ ಮುಂತಾದ ಕಡೆಗಳಲ್ಲಿ ಬಹುತೇಕ ಸಾಮಂತರು ಅಥವಾ ಮಾಂಡಲಿಕರಾಗಿಯೂ ಆಳಿದ ಒಂದು ರಾಜಮನೆತನ. ಈ ಮನೆತನದ ಅರಸರಿಗೆ ಸಂಬಂಧಿಸಿದ ಶಾಸನಗಳು ಮತ್ತು ದಿನಾಂಕಗಳನ್ನು ಆಯಾ ಅರಸರ ಆಳ್ವಿಕೆಯ ವರ್ಷ ಮಾಸ ಪಕ್ಷ ದಿನಗಳ ಎಣಿಕೆಯಲ್ಲಿ ನಿರೂಪಿಸಿರುವುದರಿಂದ ಇವಕ್ಕೆ ಸಮಾನವಾದ ತಾರೀಖುಗಳನ್ನು ನಿಷ್ಕರ್ಷಿಸುವುದು ಕಷ್ಟವೆಂದು ಹೇಳಲಾಗಿದೆ.