The most-visited ಕನ್ನಡ Wikipedia articles, updated daily. Learn more...
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಶಿವಮೊಗ್ಗ ಸುಬ್ಬಣ್ಣ - ಕನ್ನಡದ ಸುಗಮ ಸಂಗೀತ ಕ್ಷೇತ್ರದ ಹಿರಿಯ ಗಾಯಕರಲ್ಲಿ ಒಬ್ಬರಾಗಿದ್ದಾರೆ.ಸುಬ್ಬಣ್ಣ ಅವರ ನಿಜ ನಾಮಧೇಯ "ಜಿ.ಸುಬ್ರಹ್ಮಣ್ಯಂ ".ಶ್ರೀ ಗಣೇಶ್ ರಾವ್ ಹಾಗೂ ರಂಗನಾಯಕಮ್ಮನವರ ಮುದ್ದಿನ ಮಗನಾದ ಸುಬ್ಬಣ್ಣ. ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ ೧೯೩೮ರಲ್ಲಿ ಜನಿಸಿದವರು. ಮನೆಯಲ್ಲಿ ಪ್ರತಿದಿನ ಪೂಜೆ, ಪುರಸ್ಕಾರ, ವೇದ ಮಂತ್ರಗಳ ಝೇಂಕಾರ ಕೇಳಿ ಬೆಳೆದವರು.
ಅಶೋಕ ಚಕ್ರವು ಸಾಮ್ರಾಟ್ ಅಶೋಕನ ಚಿಹ್ನೆಯಾಗಿದ್ದು,ಭಾರತದ ಧ್ವಜದಲ್ಲಿ ಅಳವಡಿಸಿಕೊಳ್ಳಲಾಗಿದೆ.ಅಶೋಕಚಕ್ರದಲ್ಲಿ ವೃತ್ತಾಕಾರದ ಚಕ್ರವು ಧರ್ಮವನ್ನು ಪ್ರತಿನಿಧಿಸಿದರೆ,ಚಕ್ರದಲ್ಲಿನ ೨೪ ಕಂಬಗಳು ಬೌದ್ಧಧರ್ಮದ ಆಚರಣೆಯನ್ನು ಸೂಚಿಸುತ್ತವೆ. ಪ್ರಾಚ್ಯ ಹಾಗೂ ಪಾಶ್ಚಾತ್ಯ ದೇಶಗಳಲ್ಲಿ ಪ್ರಸಿದ್ಧವಾಗಿರುವ ಈ ಚಕ್ರ ಅಶೋಕ ಮಹಾರಾಜನಿಂದ ಸಾರಾನಾಥದಲ್ಲಿ ನಿರ್ಮಾಣವಾದ ಸ್ಮಾರಕಸ್ತಂಭದ ಸಿಂಹಶೀರ್ಷಿಕೆಯಲ್ಲಿದೆ. ಅಶೋಕ ಸಾರಾನಾಥದ ಸ್ತಂಭವನ್ನು ಚೂನಾರ್ ಪರ್ವತಗಳ ಕಲ್ಲಿನಲ್ಲಿ ಅತ್ಯಂತ ಸುಂದರವಾಗಿ ಕಡೆಸಿ ಸಾರಾನಾಥದಲ್ಲಿ ಸ್ಥಾಪಿಸಿ, ಅದರ ತುದಿಯನ್ನು ಧರ್ಮ ಚಕ್ರವನ್ನೊಳಗೊಂಡ ಸಿಂಹ ಶೀರ್ಷಿಕೆಯಿಂದಲಂಕರಿಸಿದ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬಡತನ ಎಂದರೆ ನಿರ್ದಿಷ್ಟ (ಬದಲಾಗಬಹುದಾದ) ಪ್ರಮಾಣದ ಭೌತಿಕ ವಸ್ತುಗಳು ಅಥವಾ ಹಣದ ಕೊರತೆ ಅಥವಾ ಅಭಾವ. ಬಡತನವು ಒಂದು ಬಹುಮುಖಿ ಪರಿಕಲ್ಪನೆಯಾಗಿದೆ, ಮತ್ತು ಇದು ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ಅಂಶಗಳನ್ನು ಒಳಗೊಳ್ಳಬಹುದು. ಸಂಪೂರ್ಣ ಬಡತನ, ಕಡು ಬಡತನ ಅಥವಾ ದಾರಿದ್ರ್ಯ ಪದವು ಆಹಾರ, ಉಡುಗೆ ಮತ್ತು ಆಶ್ರಯದಂತಹ ಮೂಲಭೂತ ವೈಯಕ್ತಿಕ ಆವಶ್ಯಕತೆಗಳನ್ನು ಪೂರೈಸಲು ಅಗತ್ಯವಾದ ಸಾಧನಗಳ ಸಂಪೂರ್ಣ ಕೊರತೆಯನ್ನು ಸೂಚಿಸುತ್ತದೆ.ಸಂಪೂರ್ಣ ಬಡತನವನ್ನು ವ್ಯಾಖ್ಯಾನಿಸಲಾಗುವ ಮಿತಿಯು ವ್ಯಕ್ತಿಯ ಶಾಶ್ವತ ನೆಲೆ ಅಥವಾ ಯುಗದಿಂದ ಸ್ವತಂತ್ರವಾಗಿ, ಬಹುತೇಕ ಸಮಾನವಾಗಿದೆಯೆಂದು ಪರಿಗಣಿಸಲಾಗುತ್ತದೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಭಾರತ ಗಣರಾಜ್ಯವು ಐತಿಹಾಸಿಕ ದಾಖಲೆ, ಧ್ವಜ, ಲಾಂಛನ, ಗೀತೆ, ಸ್ಮಾರಕ ಗೋಪುರ ಮತ್ತು ಹಲವಾರು ರಾಷ್ಟ್ರೀಯ ವೀರರು ಸೇರಿದಂತೆ ಹಲವಾರು ಅಧಿಕೃತ ರಾಷ್ಟ್ರೀಯ ಚಿಹ್ನೆಗಳನ್ನು ಹೊಂದಿದೆ. ಎಲ್ಲಾ ಚಿಹ್ನೆಗಳನ್ನು ವಿವಿಧ ಸಮಯಗಳಲ್ಲಿ ತೆಗೆದುಕೊಳ್ಳಲಾಗಿದೆ. ೧೯೪೭ ರ ಜುಲೈ ೨೨ ರಂದು ರಾಷ್ಟ್ರೀಯ ಧ್ವಜದ ವಿನ್ಯಾಸವನ್ನು ಸಂವಿಧಾನ ಸಭೆಯು ಅಧಿಕೃತವಾಗಿ ಅಂಗೀಕರಿಸಿತು ಮತ್ತು ರಾಷ್ಟ್ರೀಯ ಪ್ರಾಣಿ, ಪಕ್ಷಿ, ಹೂವು, ಹಣ್ಣು ಮತ್ತು ಮರ ಸೇರಿದಂತೆ ಇನ್ನೂ ಹಲವಾರು ಚಿಹ್ನೆಗಳು ಇವೆ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಬಿಟ್ಟು ತೊಲಗಿ ಚಳುವಳಿಯು ಒಂದು ಅಸಹಕಾರ ಚಳುವಳಿಯಾಗಿದ್ದು ಆಗಸ್ಟ್ ೧೯೪೨ರಲ್ಲಿ ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ೮ ಆಗಸ್ಟ್ ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು - ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಪ್ರಾರಂಭವಾಯಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಲಾಲಾ ಲಜಪತ ರಾಯ್ (ಜನವರಿ ೨೮, ೧೮೬೫syed wasiqh- 29th 9 september ನವೆಂಬರ್ ೧೭, ೧೯೨೮) ಭಾರತಕ್ಕಾಗಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರಾಗಿಯೂ, ಶ್ರೇಷ್ಠ ಬರಹಗಾರರಾಗಿಯೂ ಭಾರತೀಯ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಲಾಲಾ ಲಜಪತ ರಾಯ್ ಅವರು ದೇಶದ ಪ್ರಖ್ಯಾತ ತ್ರಿಮೂರ್ತಿಗಳಾದ ‘ಲಾಲ್ – ಬಾಲ್ – ಪಾಲ್’ ಇವರಲ್ಲಿ ಒಬ್ಬರು. ಮತ್ತಿಬ್ಬರು ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲರು.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಕರ್ನಾಟಕ ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಆಯೋಗಗಳನ್ನು ರಚಿಸಿದೆ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಹಿಂದುಳಿದ ವರ್ಗಗಳೆಂಬ ಪರಿಕಲ್ಪನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು. ಅದುವರೆಗೂ ಬ್ರಿಟಿಷರ ನೇರ ಅಧೀನದ ಪ್ರಾಂತಗಳಲ್ಲಿ ಮತ್ತು ಸಂಸ್ಥಾನಗಳಲ್ಲಿ ಸರ್ಕಾರಿ ನೌಕರಿಗಳನ್ನು ವಿವೇಚನೆಯ ಮತ್ತು ಅರ್ಹತೆಯ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿತ್ತು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜಲಿಯನ್ವಾಲಾ ಬಾಗ್ ಹತ್ಯಾಹಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ನೈಸರ್ಗಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
Dr ವಿಕ್ರಂ sarabayi avara bAgge |image = Vikram Sarabhai.jpg |image_size = 220px |caption = ಡಾ. ವಿಕ್ರಂ ಸಾರಾಭಾಯಿ |birth_date = birth date|1919|8|12|df=y |birth_place = ಅಹಮದಾಬಾದ್, ಭಾರತ |death_date = death date and age|1971|12|31|1919|8|12|df=y |death_place = ಹ್ಯಾಲಿಕಾನ್ ಕಾಸ್ಲ್, ಕೋವಳಮ್, ತಿರುವನಂತಪುರ, ಕೇರಳ, ಭಾರತ |residence = ಭಾರತ |nationality = ಭಾರತೀಯ |religion = ಜೈನ |spouse=ಮೃಣಾಲಿನಿ ಸಾರಾಭಾಯಿ |field = ಭೌತಶಾಸ್ತ್ರ |work_institution = ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಭೌತಶಾಸ್ರ ಸಂಶೋಧನಾ ಪ್ರಯೋಗಾಲಯ |alma_mater = ಕೆಂಬ್ರಿಡ್ಜ್ ವಿಶ್ವವಿದ್ಯಾಲಯ |doctoral_advisor = ಸರ್.ಸಿ.ವಿ.ರಾಮನ್ |doctoral_students = |known_for = ಭಾರತೀಯ ಅಂತರಿಕ್ಷ ಕಾರ್ಯಕ್ರಮ ಭಾರತೀಯ ಆಡಳಿತ ನಿರ್ವಹಣಾ ಸಂಸ್ಥೆ ,ಆಹಮದಾಬಾದ್ |prizes = ಪದ್ಮಭೂಷಣ (1966)ಪದ್ಮವಿಭೂಷಣ (ಮರಣೋತ್ತರ) (೧೯೭೨) |religion = ಜೈನ |footnotes = }} ವಿಕ್ರಮ್ ಸಾರಾಭಾಯಿ (೧೨ ಆಗಸ್ಟ್ ೧೯೧೯ - ೨೬ ಡಿಸೆಂಬರ್ ೧೯೭೧) ಭಾರತದ ವಿಜ್ಞಾನಿ ಮತ್ತು ಬಾಹ್ಯಾಕಾಶ ಸಂಶೋಧಕರು., ಇವರನ್ನು ಭಾರತದ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಎಂದು ಕರೆಯುತ್ತಾರೆ.ಸಾರಾಭಾಯಿ, ವಿಕ್ರಮ್ 1919-71. ಭಾರತದ ವ್ಯೋಮ ಸಂಶೋಧನೆ, ಉದ್ಯಮ ಮತ್ತು ಸಾಮಾಜಿಕ ಕಾರ್ಯಗಳಿಗೆ ಚಾಲನೆ ನೀಡಿದ ಭೌತವಿಜ್ಞಾನಿ.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಭಾರತ ಸರ್ಕಾರವು ೧೯೫೦ ಜನವರಿ ೨೬ ರಂದು ಅಧಿಕೃತವಾಗಿ ಸಾರನಾಥದ, ಅಶೋಕ ಸ್ತಂಭದಲ್ಲಿರುವ ನಾಲ್ಕು ಮುಖಗಳ ಸಿಂಹವನ್ನು ತನ್ನ ರಾಷ್ಟ್ರ ಲಾಂಛನವನ್ನಾಗಿ ಆಯ್ದುಕೊಂಡಿತು. ಚಿಹ್ನೆಯಲ್ಲಿ ಮೂರೆ ಮುಖ ಕಾಣಿಸಿದರು, ಲಾಂಛನವು ನಾಲ್ಕು ಸಿಂಹದ ಮುಖಗಳನ್ನು ಹೊಂದಿದ್ದು, ನಾಲ್ಕನೆಯ ಮುಖವು ಹಿಂಬದಿಯಲ್ಲಿರುವುದು. ಈ ಲಾಂಛನವು ಒಂದು ವೃತ್ತಾಕಾರದ ಹಾಸುಗಲ್ಲಿನ ಮೇಲೆ ಅಲಂಕರಿಸಿದ್ದು, ಓಡುತ್ತಿರುವ ಕುದುರೆ, ಏತ್ತು, ಆನೆ ಮತ್ತು ಸಿಂಹದ ಅಕೃತಿಗಳು ಧರ್ಮ ಚಕ್ರದ ಜೊತೆಯಲ್ಲಿ ಪರ್ಯಾಯವಾಗಿ ಹಾಸುಗಲ್ಲಿನ ಮೇಲೆ ಕೆತ್ತಲ್ಪಟ್ಟಿದೆ.