The most-visited ಕನ್ನಡ Wikipedia articles, updated daily. Learn more...
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಜಲಿಯನ್ವಾಲಾ ಬಾಗ್ ಹತ್ಯಾಹಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಅಶೋಕ ಚಕ್ರವು ಸಾಮ್ರಾಟ್ ಅಶೋಕನ ಚಿಹ್ನೆಯಾಗಿದ್ದು,ಭಾರತದ ಧ್ವಜದಲ್ಲಿ ಅಳವಡಿಸಿಕೊಳ್ಳಲಾಗಿದೆ.ಅಶೋಕಚಕ್ರದಲ್ಲಿ ವೃತ್ತಾಕಾರದ ಚಕ್ರವು ಧರ್ಮವನ್ನು ಪ್ರತಿನಿಧಿಸಿದರೆ,ಚಕ್ರದಲ್ಲಿನ ೨೪ ಕಂಬಗಳು ಬೌದ್ಧಧರ್ಮದ ಆಚರಣೆಯನ್ನು ಸೂಚಿಸುತ್ತವೆ. ಪ್ರಾಚ್ಯ ಹಾಗೂ ಪಾಶ್ಚಾತ್ಯ ದೇಶಗಳಲ್ಲಿ ಪ್ರಸಿದ್ಧವಾಗಿರುವ ಈ ಚಕ್ರ ಅಶೋಕ ಮಹಾರಾಜನಿಂದ ಸಾರಾನಾಥದಲ್ಲಿ ನಿರ್ಮಾಣವಾದ ಸ್ಮಾರಕಸ್ತಂಭದ ಸಿಂಹಶೀರ್ಷಿಕೆಯಲ್ಲಿದೆ. ಅಶೋಕ ಸಾರಾನಾಥದ ಸ್ತಂಭವನ್ನು ಚೂನಾರ್ ಪರ್ವತಗಳ ಕಲ್ಲಿನಲ್ಲಿ ಅತ್ಯಂತ ಸುಂದರವಾಗಿ ಕಡೆಸಿ ಸಾರಾನಾಥದಲ್ಲಿ ಸ್ಥಾಪಿಸಿ, ಅದರ ತುದಿಯನ್ನು ಧರ್ಮ ಚಕ್ರವನ್ನೊಳಗೊಂಡ ಸಿಂಹ ಶೀರ್ಷಿಕೆಯಿಂದಲಂಕರಿಸಿದ.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜಲಿಯನ್ ವಾಲಾ ಬಾಗ್(Hindi: जलियांवाला बाग) ಎನ್ನುವ ಹೆಸರು ಪ್ರತೀ ಭಾರತೀಯರನ್ನು ಬೆಚ್ಚಿ ಬೀಳಿಸುವಂತಹ ಹೆಸರು, ಬ್ರಿಟಿಷರ ಕಾಲದಲ್ಲಿ ನಡೆದ ನರಮೇಧವೇ ಇದಕ್ಕಿರುವ ಕಾರಣ. ಸುಮಾರು ಆರುವರೆ ಎಕರೆ ಪ್ರದೇಶದಲ್ಲಿ ವಿಶಾಲವಾಗಿ ಹರಡಿರುವ ಜಲಿಯನ್ ವಾಲಾ ಬಾಗ್ ಈಗ ಸಾರ್ವಜನಿಕ ಉದ್ಯಾನವನವಾಗಿದ್ದು ಭಕ್ತಿ ಪರವಶತೆಗೆ ಹೆಸರಾಗಿರುವ ಪಂಜಾಬಿನ ಅಮೃತಸರ ನಗರದಲ್ಲಿದೆ. ರಾಷ್ಟೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದಿರುವ ಈ ಸ್ಮಾರಕ ಸ್ಥಳವನ್ನು ಪಂಜಾಬ್ ರಾಜ್ಯೋತ್ಸವದ ದಿನವಾದ 13 ಎಪ್ರಿಲ್, 1961ರಂದು ಅಂದಿನ ರಾಷ್ಟ್ರಪತಿ ಡಾ.
ಭಾರತ ಬಿಟ್ಟು ತೊಲಗಿ ಚಳುವಳಿಯು ಒಂದು ಅಸಹಕಾರ ಚಳುವಳಿಯಾಗಿದ್ದು ಆಗಸ್ಟ್ ೧೯೪೨ರಲ್ಲಿ ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ೮ ಆಗಸ್ಟ್ ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು - ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಪ್ರಾರಂಭವಾಯಿತು.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಪಿಂಗಳಿ ವೆಂಕಯ್ಯ ಅವರು ಭಾರತ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರು ಮತ್ತು ಭಾರತದೇಶದ ಧ್ವಜವನ್ನು ಸ್ಥೂಲಕಲ್ಪಿಸಿದರು. ಇವರನ್ನು ಪತ್ತಿ ವೆಂಕಯ್ಯ ಅಂತ ಕರೆಯುತ್ತಿದ್ದರು.ಇವರು ಆಗಸ್ಟ್ ೨, ೧೮೭೬ನೇ ಇಸ್ವಿಯಲ್ಲಿ, ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ದಿವಿ ತಾಲ್ಲೂಕಿನ ಭಟ್ಲಪೆನ್ನುಮಾರು ಗ್ರಾಮದಲ್ಲಿ ಜನಿಸಿದರು. ಇವರ ತಂದೆ ಹನುಮಂತರಾಯುರು, ಇವರ ತಾಯಿಯ ಹೆಸರು ವೆಂಕಟರತ್ನಮ್ಮ.
ಭಾರತದಲ್ಲಿ ೧೮೫೭ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ನಂತರ ಬ್ರಿಟೀಷರು ೧೮೫೮ ರಿಂದ ೧೯೪೭ ರವರಗೆ ನೇರವಾಗಿ ನೆಡೆಸಿದ ಆಳ್ವಿಕೆಯ ಕಾಲವನ್ನು "ಬ್ರಿಟೀಷ್ ಆಳ್ವಿಕೆಯ ಕಾಲ" ಎಂದು ಕರೆಯುತ್ತಾರೆ.ಈ ಕಾಲವನ್ನು ಬ್ರಿಟೀಷ್ ಅಧಿಪತ್ಯದ ಕಾಲವಂತಲೂ ಪರಿಗಣಿಸಲಾಗಿದೆ.೧೮೫೮ರ ನಂತರ ಭಾರತದ ಸಾಮ್ರಾಜ್ಯವೂ ಬ್ರಿಟೀಷ್ ಇಂಡಿಯಾ ಆಗಿ,ಇಡೀ ಭಾರತದ ಬಹುತೇಕ ಪ್ರದೇಶಗಳು ಇವರ ಆಡಳಿತಕ್ಕೆ ಒಳಪಟ್ಟಿದ್ದವು. 'ಲೀಗ್ ಆಫ್ ನೇಷನ್' ಪ್ರಾರಂಭವಾದಾಗ ಭಾರತವು ಇದರ ಗುರುತಿಸಲ್ಪಡುವ ರಾಷ್ಟ್ರಗಳಲ್ಲಿ ಒಂದು.ಇದು ೧೯೦೦,೧೯೨೦,೧೯೨೮,೧೯೩೨,ಮತ್ತು ೧೯೩೬ರಲ್ಲಿ ನಡೆದ ಸಮ್ಮರ್ ಒಲಂಪಿಕ್ಸ್ ಗಳಲ್ಲಿ ಪಾಲ್ಗೊಂಡಿತ್ತು. ೧೮೫೮ರಲ್ಲಿ ಆಡಳಿತ ಎಂಬುವ ಪರಿಕಲ್ಪನೆ ಮೂಲಕ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿ ಅಂದಿನ ಬ್ರಿಟನ್ ರಾಣಿ ವಿಕ್ಟೋರಿಯಾ ಮೂಲಕ ಆಡಳಿತ ಮಾಡಲು ಪ್ರಾರಂಭಿಸಿ,೧೯೪೭ರಲ್ಲಿ ಅಂತ್ಯಗೊಂಡಿತು.ಭಾರತ ಸಾಮ್ರಾಜ್ಯವೂ ಒಡೆದು ಯೂನಿಯನ್ ಆಫ್ ಇಂಡಿಯಾ ಮತ್ತು ಡಾಮಿನಿಯನ್ ಪಾಕ್ ಎಂದು ಎರಡು ಪ್ರತ್ಯೇಕ ದೇಶಗಳಾಗಿ ವಿಭಜಿಸಲ್ಪಟ್ಟವು.ಮುಸ್ಲಿಂಮರು ಸಹ ಪಾಕ್ ಮತ್ತು ಬಾಂಗ್ಲಾ ಗಣರಾಜ್ಯಗಳಲ್ಲಿ ಹಂಚಿಹೋದರು.ಬ್ರಿಟೀಷರು ೧೮೫೮ರಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಉತ್ತರ ಬರ್ಮ ಮತ್ತು ದಕ್ಷಿಣ ಬರ್ಮ ಎಂಬ ಪ್ರದೇಶಗಳು ಸಹ ಇವರ ಆಳ್ವಿಕೆಗೆ ಒಳಪಟ್ಟವು.ಹಾಗೆ,ಇದು ಒಂದು ಬ್ರಿಟೀಷರ ಪ್ರತ್ಯೇಕ ವಸಹತುವಾಗಿ ನಿರ್ಮಾಣಗೂಂಡಿತು.ಆದಕಾರಣ ಇದು ೧೯೪೮ರಲ್ಲಿ ಸ್ವಾತಂತ್ರ್ಯ ಪಡೆಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಗಣರಾಜ್ಯವು ಐತಿಹಾಸಿಕ ದಾಖಲೆ, ಧ್ವಜ, ಲಾಂಛನ, ಗೀತೆ, ಸ್ಮಾರಕ ಗೋಪುರ ಮತ್ತು ಹಲವಾರು ರಾಷ್ಟ್ರೀಯ ವೀರರು ಸೇರಿದಂತೆ ಹಲವಾರು ಅಧಿಕೃತ ರಾಷ್ಟ್ರೀಯ ಚಿಹ್ನೆಗಳನ್ನು ಹೊಂದಿದೆ. ಎಲ್ಲಾ ಚಿಹ್ನೆಗಳನ್ನು ವಿವಿಧ ಸಮಯಗಳಲ್ಲಿ ತೆಗೆದುಕೊಳ್ಳಲಾಗಿದೆ. ೧೯೪೭ ರ ಜುಲೈ ೨೨ ರಂದು ರಾಷ್ಟ್ರೀಯ ಧ್ವಜದ ವಿನ್ಯಾಸವನ್ನು ಸಂವಿಧಾನ ಸಭೆಯು ಅಧಿಕೃತವಾಗಿ ಅಂಗೀಕರಿಸಿತು ಮತ್ತು ರಾಷ್ಟ್ರೀಯ ಪ್ರಾಣಿ, ಪಕ್ಷಿ, ಹೂವು, ಹಣ್ಣು ಮತ್ತು ಮರ ಸೇರಿದಂತೆ ಇನ್ನೂ ಹಲವಾರು ಚಿಹ್ನೆಗಳು ಇವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಲಾಲಾ ಲಜಪತ ರಾಯ್ (ಜನವರಿ ೨೮, ೧೮೬೫syed wasiqh- 29th 9 september ನವೆಂಬರ್ ೧೭, ೧೯೨೮) ಭಾರತಕ್ಕಾಗಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರಾಗಿಯೂ, ಶ್ರೇಷ್ಠ ಬರಹಗಾರರಾಗಿಯೂ ಭಾರತೀಯ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಲಾಲಾ ಲಜಪತ ರಾಯ್ ಅವರು ದೇಶದ ಪ್ರಖ್ಯಾತ ತ್ರಿಮೂರ್ತಿಗಳಾದ ‘ಲಾಲ್ – ಬಾಲ್ – ಪಾಲ್’ ಇವರಲ್ಲಿ ಒಬ್ಬರು. ಮತ್ತಿಬ್ಬರು ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತ ಮಾತೆ ( Sanskrit;भारताम्बा, 'अम्बा' ಅಂಬಾ ಎಂದರೆ 'ತಾಯಿ' ಮತ್ತು ಇಂಗ್ಲೀಷನಲ್ಲಿ ಮದರ್ ಇಂಡಿಯಾ ಎಂದೂ) ಕರೆಯುತ್ತಾರೆ. ಮದರ ಆಫ್ ಇಂಡಿಯಾ ಇದು ಒಂದು ರಾಷ್ಟ್ರೀಯ ವ್ಯಕ್ತೀಕರಣ ರೂಪ ಅಂದರೆ ಮಾತೃ ದೇವಿಯಾಗಿದೆ. ಆಕೆಯನ್ನು ಸಾಮಾನ್ಯವಾಗಿ ಭಾರತೀಯ ರಾಷ್ಟ್ರೀಯ ಧ್ವಜವನ್ನು ಹೊಂದಿರುವ ಕೇಸರಿ ಸೀರೆಯನ್ನು ಧರಿಸಿದ ಮಹಿಳೆಯಂತೆ ಚಿತ್ರಿಸಲಾಗಿದೆ ಮತ್ತು ಕೆಲವೊಮ್ಮೆ ಸಿಂಹದ ಜೊತೆಗೂಡಿಸಲಾಗುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಕರ್ನಾಟಕ ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಆಯೋಗಗಳನ್ನು ರಚಿಸಿದೆ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಹಿಂದುಳಿದ ವರ್ಗಗಳೆಂಬ ಪರಿಕಲ್ಪನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು. ಅದುವರೆಗೂ ಬ್ರಿಟಿಷರ ನೇರ ಅಧೀನದ ಪ್ರಾಂತಗಳಲ್ಲಿ ಮತ್ತು ಸಂಸ್ಥಾನಗಳಲ್ಲಿ ಸರ್ಕಾರಿ ನೌಕರಿಗಳನ್ನು ವಿವೇಚನೆಯ ಮತ್ತು ಅರ್ಹತೆಯ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿತ್ತು.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.