The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇಸ್ಲಾಮಿಕ್, ಪರ್ಷಿಯನ್ ಮತ್ತು ಭಾರತೀಯ ವಾಸ್ತುಶೈಲಿ ಗಳ ಮಿಶ್ರಣವಾದ ಮೊಗಲ್ ವಾಸ್ತುಶೈಲಿ ಯು, ಮೊಗಲರು 16 ಮತ್ತು 17ನೆಯ ಶತಮಾನಗಳಲ್ಲಿ ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಅಭಿವೃದ್ಧಿಗೊಳಿಸಿದ ವಿಶೇಷ ಲಕ್ಷಣದ ಶೈಲಿಯಾಗಿದೆ. ಆರಂಭ ಕಾಲದ ಮೊಗಲ್ ವಾಸ್ತುಶೈಲಿ ಯಲ್ಲಿ ಉಳಿದುಕೊಂಡಿರುವುಗಳಲ್ಲಿ ಮೊದಲ ಹಾಗೂ ವಿಶೇಷ ಗುಣಲಕ್ಷಣಗಳುಳ್ಳವು ಮೊಗಲ್ ವಂಶಕ್ಕೆ ಸಂಬಂಧವಿಲ್ಲದ ಚಕ್ರವರ್ತಿ ಶೇರ್ ಷಾ ಸುರಿಯ ಅಲ್ಪಾವಧಿಯ ಆಳ್ವಿಕೆಯಲ್ಲಿ (1540–1545) ನಿರ್ಮಿಸಲಾಯಿತು. ಇವುಗಳಲ್ಲಿ, ದೆಹಲಿಯ ಬಳಿ ಕಿಲಾ ಇ ಕುಹ್ನಾ ಮಸೀದಿ (1541), ದೆಹಲಿಯಲ್ಲಿರುವ ಪುರಾನಾ ಕಿಲಾ (ಹಳೆಯ ಕೋಟೆ)ಯ ಸೇನಾ ವಾಸ್ತುಶೈಲಿ, ಬಾಂಗ್ಲಾದೇಶದಲ್ಲಿರುವ ಲಾಲ್ಬಾಗ್ ಕೋಟೆ, ಹಾಗೂ ಇಂದಿನ ಪಾಕಿಸ್ತಾನದಲ್ಲಿ ಝೆಲಮ್ ಸಮೀಪದ ರೊಹ್ತಾಸ್ ಕೋಟೆ ಸೇರಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.[೧][೨] 1983ರಲ್ಲಿ ತಾಜ್ ಮಹಲ್ UNESCOದ ವಿಶ್ವ ಪರಂಪರೆ ತಾಣವಾಗಿ ಗುರುತಿಸಲ್ಪಟ್ಟಿತು ಮತ್ತು ಇದನ್ನು "ಭಾರತದಲ್ಲಿರುವ ಮುಸ್ಲಿಂ ಕಲೆಯ ಅನರ್ಘ್ಯ ರತ್ನ ಮತ್ತು ಜಾಗತಿಕವಾಗಿ ಮೆಚ್ಚುಗೆಯನ್ನು ಪಡೆದ ವಿಶ್ವ ಪರಂಪರೆಯ ಮೇರುಕೃತಿಗಳಲ್ಲಿ ಒಂದು" ಎಂದು ಉಲ್ಲೇಖಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಹಾಂಗ್ ಕಾಂಗ್ (ಚೀನಿ: 香港), ಅಧಿಕೃತವಾಗಿ ಹಾಂಗ್ ಕಾಂಗ್ ವಿಶೇಷ ಆಡಳಿತ ಪ್ರದೇಶ, ಚೀನ ದೇಶದ ದಕ್ಷಿಣ ಕಡಲ ತೀರದಲ್ಲಿರುವ ಒಂದು ಪ್ರದೇಶ. ಉತ್ತರದಲ್ಲಿ ಚೀನದ ಗುವಾಂಗ್ಡಾಂಗ್ ಪ್ರಾಂತ್ಯದ ಜೊತೆ ಗಡಿ ಹೊಂದಿದ್ದು, ಉಳಿದ ಮೂರು ದಿಕ್ಕಿನಲ್ಲಿ ದಕ್ಷಿಣ ಚೀನ ಸಮುದ್ರದಿಂದ ಆವ್ರತಗೊಂಡಿದೆ. ಸುಮಾರು ೬.೯ ದಶಲಕ್ಷ ಜನಸಂಖ್ಯೆಯನ್ನು ಹೊಂದಿರುವ ಈ ಪ್ರದೇಶ ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯಾ ಸಾಂದ್ರತೆ ಹೊಂದಿರುವ ಪ್ರದೇಶಗಳಲ್ಲಿ ಒಂದಾಗಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಹಿಂದೂ ಪುರಾಣದ ಒಂದು ಪಾತ್ರವಾದ ದಮಯಂತಿ ವಿದರ್ಭ ರಾಜ್ಯದ ರಾಜಕುಮಾರಿಯಾಗಿದ್ದಳು, ಮತ್ತು ಇವಳು ನಿಷಾದ ರಾಜ್ಯದ ರಾಜ ನಳನನ್ನು ಮದುವೆಯಾಗಿದ್ದಳು, ಮತ್ತು ಇವರ ಕಥೆಯು ಮಹಾಭಾರತದಲ್ಲಿ ಹೇಳಲಾಗಿದೆ. ಅವಳು ಎಷ್ಟು ಸುಂದರಿ ಮತ್ತು ಮೋಹಕಳಾಗಿದ್ದಳೆಂದರೆ ದೇವತೆಗಳು ಕೂಡ ಅವಳನ್ನು ಮೆಚ್ಚಿದ್ದರು. ಅವಳು ನಳನನ್ನು ಕೇವಲ ಒಂದು ಸುವರ್ಣ ಹಂಸದಿಂದ ಅವನ ಸದ್ಗುಣಗಳು ಹಾಗು ಸಾಧನೆಗಳನ್ನು ಕೇಳಿ ಪ್ರೀತಿಸಿದಳು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಿಸುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.