The most-visited ಕನ್ನಡ Wikipedia articles, updated daily. Learn more...
೧೯೪೭ ಆಗಸ್ಟ್ ೧೫ರಂದು ಭಾರತ ಸ್ವತಂತ್ರವಾಯಿತು. ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ") ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು.
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
ಪ್ರಿಯಾ ಆನಂದ್ (ಜನನ ೧೭ ಸೆಪ್ಟೆಂಬರ್ ೧೯೮೬) ಭಾರತೀಯ ಚಲನಚಿತ್ರ ನಟಿ ಮತ್ತು ರೂಪದರ್ಶಿ, ಅವರು ತಮಿಳು, ಮಲಯಾಳಂ, ಹಿಂದಿ, ತೆಲುಗು ಮತ್ತು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಯುಎಸ್ ನಲ್ಲಿ ಉನ್ನತ ವ್ಯಾಸಂಗ ಮಾಡಿದ ನಂತರ, ಅವರು ೨೦೦೮ ರಲ್ಲಿ ಮಾಡೆಲಿಂಗ್ ವೃತ್ತಿಯನ್ನು ಪ್ರಾರಂಭಿಸಿದರು, ತಮಿಳಿನ ವಾಮಾನನ್ (೨೦೦೯) ನಲ್ಲಿ ನಟಿಸಲು ಪ್ರಾರಂಭಿಸಿದರು, ಒಂದು ವರ್ಷದ ನಂತರ ಲೀಡರ್ನಲ್ಲಿ ತೆಲುಗು ಚೊಚ್ಚಲ ಪ್ರವೇಶ ಮಾಡಿದರು. ಇಂಗ್ಲಿಷ್ ವಿಂಗ್ಲಿಷ್ ಚಿತ್ರದಲ್ಲಿ ಪೋಷಕ ಪಾತ್ರದೊಂದಿಗೆ ಅವರು ೨೦೧೨ ರಲ್ಲಿ ಬಾಲಿವುಡ್ಗೆ ಪಾದಾರ್ಪಣೆ ಮಾಡಿದರು ಮತ್ತು ಫಕ್ರಿ (೨೦೧೩) ಚಿತ್ರಗಳಲ್ಲಿ ಪ್ರಿಯಾ ಮತ್ತು ರಂಗ್ರೆಜ್ (೨೦೧೩) ಪಾತ್ರಗಳಲ್ಲಿ ಕಾಣಿಸಿಕೊಂಡರು.
ಉಡುಪಿ (Tulu: ಒಡಿಪು) ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವಿಜಯದಾಸರು ಈ ಎಲ್ಲ ಮಹನೀಯರೂ ಸಹ ಶ್ರೀಮನ್ ಮಧ್ವಾಚಾರ್ಯರನ್ನು ನಿತ್ಯ ಉಪಾಸಿಸುವ, ಅವರ ಅನುಯಾಯಿಗಳೇ.
ಪೆರಿಯಾರ್ ರಾಮಸ್ವಾಮಿ (ಸೆಪ್ಟೆಂಬರ್ ೧೭, ೧೮೭೯–ಡಿಸೆಂಬರ್ ೨೪, ೧೯೭೩) - ಇ.ವಿ.ಆರ್, ಇ.ವಿ. ರಾಮಸ್ವಾಮಿ ನಾಯ್ಕರ್, ತಂತೈ ಪೆರಿಯಾರ್, ಅಥವಾ ಪೆರಿಯಾರ್ ಎಂದು ಹಲವಾರು ಹೆಸರುಗಳಿಂದ ಪ್ರಖ್ಯಾತರಾಗಿದ್ದ "ಪೆರಿಯಾರ್ ರಾಮಸ್ವಾಮಿ" ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂನ ಸ್ಥಾಪಕ ಮತ್ತು "ತಮಿಳು ಸ್ವಾಭಿಮಾನ ಚಳುವಳಿ" ಯ ನಾಯಕರಾಗಿದ್ದರಲ್ಲದೇ, ಸ್ವಾತಂತ್ರ ಹೋರಾಟಗಾರರಾಗಿದ್ದರೂ ನಂತರ ಬ್ರಿಟಿಷರ ವಸಾಹತು ಆಡಳಿತವನ್ನು ಒಪ್ಪಿಕೊಂಡಿದ್ದರು. ತಮಿಳು ಭಾಷೆಯಲ್ಲಿ 'ಪೆರಿಯಾರ್' ಅಂದ್ರೆ ಗೌರವಾನ್ವಿತ, ಅಥವಾ ದೊಡ್ಡವರು ಎಂಬರ್ಥವಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಕರ್ನಾಟಕದ 30 ಜಿಲ್ಲೆಗಳಲ್ಲೊಂದು. 1986ರಲ್ಲಿ ಬೆಂಗಳೂರು ಜಿಲ್ಲೆಯನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಎಂದು ವಿಂಗಡಿಸಿ ರಚಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4 ತಾಲ್ಲೂಕು, 17 ಹೋಬಳಿಗಳು 1122 ಹಳ್ಳಿಗಳು, 3 ನಗರಸಭೆ, 2 ಪುರಸಭೆ, 1 ಪಟ್ಟಣ ಪಂಚಾಯಿತಿ ಮತ್ತು 229 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ, ಅದರಲ್ಲಿ ಬೂದಿಹಾಳ ಗ್ರಾಮ ಪಂಚಾಯಿತಿ ಪ್ರಮುಖವಾ..
ಚಿತ್ರ:ಸಾಂಪ್ರದಾಯಿಕ ವಿವಾಹದ ಉಡುಗೆ ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಶಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. .
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಓಝೋನ್' ('O3 ), ಅಥವಾ ಟ್ರೈಆಕ್ಸಿಜನ್ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಓಝೋನ್ ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ . ಇದು ವಾಯುಮಂಡಲದಲ್ಲಿ ಓಝೋನ್ O3 ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ. ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೇರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಚಿರತೆಯು (ಪಾಂತೇರಾ ಪಾರ್ದೂಸ್) ಆಫ಼್ರಿಕಾ ಹಾಗು ಉಷ್ಣವಲಯ ಏಷ್ಯಾದ ಕೆಲವು ಭಾಗಗಳು, ಸೈಬೀರಿಯಾ, ದಕ್ಷಿಣ ಹಾಗು ಪಶ್ಚಿಮ ಏಷ್ಯಾದಿಂದ ಆಫ಼್ರಿಕಾದ ಉಪ ಸಹಾರಾ ಪ್ರದೇಶಗಳ ಬಹುಪಾಲು ಉದ್ದಗಲದವರೆಗಿನ ವ್ಯಾಪಕ ವ್ಯಾಪ್ತಿಯ ಫ಼ೆಲಿಡೈ ಕುಟುಂಬದ ಒಂದು ಸದಸ್ಯ. ಅವಾಸಸ್ಥಾನದ ನಷ್ಟ ಹಾಗು ಛಿದ್ರೀಕರಣ, ಮತ್ತು ವ್ಯಾಪಾರ ಹಾಗು ಕೀಟ ನಿಯಂತ್ರಣಕ್ಕಾಗಿ ಬೇಟೆಯ ಕಾರಣ ಅದು ಅದರ ವ್ಯಾಪ್ತಿಕ್ಷೇತ್ರದ ಹೆಚ್ಚಿನ ಭಾಗಗಳಲ್ಲಿ ಇಳಿಮುಖವಾಗುತ್ತಿರುವುದರಿಂದ ಅದನ್ನು ಐಯುಸಿಎನ್ ಕೆಂಪು ಪಟ್ಟಿಯಲ್ಲಿ ಬೆದರಿಕೆ ಹತ್ತಿರ ಎಂದು ಪಟ್ಟಿಮಾಡಲಾಗಿದೆ. ಹಾಂಗ್ ಕಾಂಗ್, ಸಿಂಗಪೋರ್, ಕುವೇಟ್, ಸಿರಿಯಾದ ಅರಬ್ ಗಣರಾಜ್ಯ, ಲಿಬ್ಯಾ ಮತ್ತು ಟುನೀಶದಲ್ಲಿ ಅದು ಪ್ರಾದೇಶಿಕವಾಗಿ ನಿರ್ನಾಮವಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಅಶ್ವಿನಿ ಪೊನ್ನಪ್ಪ ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆ ಮೂಲದ ಅಂತರರಾಷ್ಟ್ರೀಯ ಖ್ಯಾತಿಯ ಬ್ಯಾಡ್ಮಿಂಟನ್ ಆಟಗಾರ್ತಿ . ಎಂ.ಎ.ಪೊನ್ನಪ್ಪ ಮತ್ತು ಕಾವೇರಿ ಪೊನ್ನಪ್ಪ ದಂಪತಿಗಳ ಮಗಳಾಗಿ ಈಕೆ ಹುಟ್ಟಿದ್ದು ಬೆಂಗಳೂರು ನಗರದಲ್ಲಿ (ಸೆಪ್ಟೆಂಬರ್ ೧೮ ರ ೧೯೮೯ ನೆಯ ಇಸವಿ) . ತಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ವ್ಯವಸ್ಥಾಪಕರಾಗಿ ಮತ್ತು ತಾಯಿ ನ್ಯೂ ಇಂಡಿಯಾ ಅಸ್ಯೂರೆನ್ಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾರೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ನೈಸರ್ಗಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.