The most-visited ಕನ್ನಡ Wikipedia articles, updated daily. Learn more...
ಸುದೀಪ ಅಥವಾ ಕಿಚ್ಚ ಸುದೀಪ್ (ಜನನ 2 ಸೆಪ್ಟೆಂಬರ್ 1973) ಒಬ್ಬ ಭಾರತೀಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಕಥೆ,ಚಿತ್ರಕಥೆಗಾರ,ವಿತರಕ,ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ, ಇವರು ಮುಖ್ಯವಾಗಿ ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ, ಜೊತೆಗೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಯ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ ನಟ ಕನ್ನಡ ಚಿತ್ರಗಳಾದ ಸ್ಪರ್ಶ (2000), ಹುಚ್ಚಾ (2001), ನಂದಿ (2002), ಕಿಚ್ಚಾ (2003), ಸ್ವಾತಿ ಮುತ್ತು (2003), ಮೈ ಆಟೋಗ್ರಾಫ್ (2006), ನಂ 73, ಶಾಂತಿ ನಿವಾಸ (2007, ನಿರ್ದೇಶಕ), ಮುಸ್ಸಂಜೆ ಮಾತು (2008), ವೀರ ಮದಕರಿ (2009), ಜಸ್ಟ್ ಮಾತ್ ಮಾತಲ್ಲಿ (2010), ಕೆಂಪೇಗೌಡ (2011), ತೆಲುಗು-ತಮಿಳು ದ್ವಿಭಾಷಾ ಈಗ (2012) ಮತ್ತು ಹಿಂದಿ ಚಲನಚಿತ್ರ ದಬಾಂಗ್ 3 (2019). ಹುಚ್ಚಾ, ನಂದಿ ಮತ್ತು ಸ್ವಾತಿ ಮುತ್ತು ಚಿತ್ರಗಳಿಗಾಗಿ ಸತತ ಮೂರು ವರ್ಷಗಳ ಕಾಲ ಕನ್ನಡದ ಅತ್ಯುತ್ತಮ ನಟನೆಗಾಗಿ ಫಿಲ್ಮ್ಫೇರ್ ಪ್ರಶಸ್ತಿ ಪಡೆದರು.
ಇಶಾಂತ್ ಶರ್ಮ (ಜನನ:೨ ಸೆಪ್ಟಂಬರ್,೧೯೮೮, ದೆಹಲಿ) ಇವರು ಭಾರತ ಕ್ರಿಕೆಟ್ ತಂಡದ ಯುವ ವೇಗದ ಬೌಲರರು. ಇವರು ಬಲಗೈ ವೇಗದ ಬೌಲರರು ಮತ್ತು ಸಾಮಾನ್ಯವಾಗಿ ೧೪೪ ಕಿ.ಮೀ(೯೦ ಮೈಲಿ)ವೇಗದಲ್ಲಿ ಚೆಂಡನ್ನು ಎಸೆಯುತ್ತಾರೆ. ೧೭ ಫೆಬ್ರವರಿ ೨೦೦೮ರಂದು ಆಸ್ಟ್ರೇಲಿಯದಲ್ಲಿ ನಡೆದ ಪಂದ್ಯವೊಂದರಲ್ಲಿ ೧೫೨.೬ಕಿ.ಮೀ ವೇಗದಲ್ಲಿ ಚೆಂಡನ್ನು ಎಸೆದು ಭಾರತೀಯ ಬೌಲರ ಎಸೆದ ಅತೀ ವೇಗದ ಎಸೆತವನ್ನು ದಾಖಲಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ (ಟಿ ಸಿ ಎಸ್) ಒಂದು ಭಾರತೀಯ ಮೂಲದ ಟಾಟಾ ಗ್ರುಪ್ಸ್ ಸಮುದಯದ,ತಂತ್ರಾಂಶ ಸಹಾಯ ಮತ್ತು ಕನ್ಸಲ್ಟಿಂಗ್ ಕಂಪನಿ. ಇದು ಪ್ರಪಂಚದ ಮಾಹಿತಿ ತಂತ್ರಜ್ಞಾನ ಮತ್ತು ಬಿಜೆನೆಸ್ ಪ್ರೋಸೆಸ್ ಔಟ್ಸೋರ್ಸಿಂಗ್ ಸೇವೆಗಳಲ್ಲಿ ಅತಿ ಹೆಚ್ಚು ಸಹಾಯಗಳನ್ನು ನೀಡುವ ಕಂಪನಿಗಳಲ್ಲಿ ಒಂದು.ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ೧೯೬೮ ರಲ್ಲಿ ಸ್ತಾಪಿತಗೊಂದಿತು. ೨೦೨೦ರ ಅಂಕಿಅಂಶಗಳ ಪ್ರಕಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಅತಿದೊಡ್ಡ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ yvvಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕ್ಯೋಟೋ ಶಿಷ್ಟಾಚಾರಇಂದು ವಿಶ್ವವು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಜಾಗತಿಕ ತಾಪಮಾನ ಹೊಂದಿದೆ. ಅನೇಕ ವಿಜ್ಞಾನಿಗಳು ಇಂಗಾಲದ ಡೈಆಕ್ಸೈಡ್ ಮತ್ತು ಇತರ ಹಸಿರುಮನೆ ಅನಿಲಗಳನ್ನು ನಮ್ಮ ಉತ್ಪಾದನೆ ವಾತಾವರಣ ಮೇಲೆ ಬಿಸಿ ಪರಿಣಾಮವನ್ನು ಹೊಂದಿದೆ, ಮತ್ತು ಈ ಮಾನವ ಜೀವನದ ತುಂಬಾ ಅಪಾಯಕಾರಿ ಎಂದು ನಂಬುತ್ತಾರೆ. ಈ ಪ್ರಬಂಧ ಜಾಗತಿಕ ತಾಪಮಾನ ಏರಿಕೆಯ ಸಮಸ್ಯೆಯನ್ನು ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸುವ ಕೆಲವು ರೀತಿಯಲ್ಲಿ ಸೂಚಿಸುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಏರೋಬಿಕ್ ವ್ಯಾಯಾಮ ಒಂದು ದೈಹಿಕ ವ್ಯಾಯಾಮ ಹಾಗೂ ಇದು ಆಮ್ಲಜನಕ ಪಧ್ಧತಿಯನ್ನು ಉತ್ತಮಗೊಳಿಸಲು ಉದ್ದೇಶಿಸುತ್ತದೆ. ಏರೋಬಿಕ್ ಎಂದರೆ "ಆಮ್ಲಜನಕದೊಂದಿಗೆ", ಮತ್ತು ಇದು ದೇಹದ ಜೀವರಾಸಾಯನಿಕ ಕ್ರಿಯೆ ಅಥವಾ ಶಕ್ತಿ-ಉತ್ಪನ್ನದ ಪಧ್ಧತಿಯಲ್ಲಿ ಆಮ್ಲಜನಕದ ಬಳಕೆಗೆ ಅನ್ವಯಿಸುತ್ತದೆ. ಅನೇಕ ಥರದ ವ್ಯಾಯಾಮಗಳು ಏರೋಬಿಕ್ ವ್ಯಾಯಾಮಗಳು, ಮತ್ತು ಅರ್ಥ ನಿರೂಪಣೆಯ ಪ್ರಕಾರ ಮಿತವಾದ ಮಟ್ಟದ ತೀವ್ರತೆಯಲ್ಲಿ ವಿಸ್ತಾರವಾದ ಅವಧಿಯಲ್ಲಿ ನಿರ್ವಹಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ತಲೆದಂಡ ಗಿರೀಶ್ ಕಾರ್ನಾಡ್ ಬರೆದ 1990 ರ ಕನ್ನಡ ನಾಟಕವಾಗಿದ್ದು, 12 ನೇ ಶತಮಾನದಲ್ಲಿ ತೀವ್ರವಾದ ಪ್ರತಿಭಟನೆ ಮತ್ತು ಸುಧಾರಣಾ ಆಂದೋಲನದ ಬಗ್ಗೆ ಮಾತನಾಡಲಾದ ಚಳುವಳಿಯ ಬಗ್ಗೆ ನಾಟಕವಾಗಿದೆ. ಅವರಿಗೆ 1994 ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1993) ಮತ್ತು ಕನ್ನಡ ಭಾಷೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಯಿತು, ಮತ್ತು 1998 ರಲ್ಲಿ ಅವರ ಸಾಹಿತ್ಯ ಕಾರ್ಯಕ್ಕಾಗಿ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದರು.
ಕರ್ನಾಟಕ ಜನಪದ ನೃತ್ಯ : ಹಾಡು, ಕಥೆಗಳಂತೆ ನೃತ್ಯವೂ ಜಾನಪದ ಸಂಪತ್ತಿನ ಒಂದು ಮುಖ್ಯ ಅಂಗ. ಕರ್ನಾಟಕದ ವಿವಿಧ ಭಾಗಗಳಲ್ಲಿ ಅನೇಕ ರೀತಿಯ ನೃತ್ಯವಿಧಾನಗಳು ಬಳಕೆಯಲ್ಲಿವೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ- ಈ ಪ್ರದೇಶಗಳಲ್ಲಿ ವೈಶಿಷ್ಟ್ಯ ಪಡೆದಿರುವ ನೃತ್ಯಗಳಲ್ಲಿ ಮುಖ್ಯವಾದವನ್ನು ಮಾತ್ರ ಇಲ್ಲಿ ಪರಿಗಣಿಸಲಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಅಂತರಜಾಲ (ಆಂಗ್ಲ: Internet ಇಂಟರ್ನೆಟ್) ಎನ್ನುವುದು ಕಂಪ್ಯೂಟರ್ ನೆಟ್ವರ್ಕ್ಗಳ (ಜಾಲಬಂಧಗಳ) ಒಂದು ನೆಟ್ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್ವರ್ಕ್ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಆರ್ಥಿಕತೆಯ ಎಲ್ಲ ವಲಯಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸಿದಾಗ ಕೈಗಾರಿಕೆಗಳು 'ದ್ವಿತೀಯ' ವಲಯ (Secondary Sector) ಎನ್ನಿಸಿಕೊಂಡಿದೆ. ಕೈಗಾರಿಕೆಗಳು ಒಂದು ದೇಶದ ಮೂಳೆಗಳಿದ್ದಂತೆ. ಮಾನವ ದೇಹಕ್ಕೆ ಪೂರ್ಣ ಚೈತನ್ಯವನ್ನು ಒದಗಿಸಲು ಮೂಳೆಗಳು ಹೇಗೆ ಅವಶ್ಯಕವೋ ಹಾಗೆಯೇ ಆರ್ಥಿಕತೆಗೆ ಚೇತನ ನೀಡಿ ದೀರ್ಘಕಾಲೀನ ಅಭಿವೃದ್ಢಿ ಸಾಧನೆಗೆ ನೆರವಾಗಲು ಕೈಗಾರಿಕೆಗಳು ಅತ್ಯಂತ ಆವಶ್ಯಕ.