The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಭತ್ತದ ಪದವು ಸಸ್ಯಕ್ಕೂ ಹಾಗೂ ಸಸ್ಯದ ಕಾಳಿಗೂ ಅನ್ವಯಿಸುತ್ತದೆ. ಭತ್ತಕ್ಕೆ ಕನ್ನಡದಲ್ಲಿ ನೆಲ್ಲು ಎಂದು ಸಹ ಇಂಗ್ಲೀಶ್ನಲ್ಲಿ ಪ್ಯಾಡಿ ಬಳಕೆಯಲ್ಲಿದ್ದಾಗ್ಯೂ ರೈಸ್ ಎನ್ನುವ ಪದವನ್ನು ಭತ್ತ (ಕೆಲವೊಮ್ಮೆ ಅನ್ಮಿಲ್ಡ್ ರೈಸ್), ಅಕ್ಕಿ ಹಾಗೂ ಅನ್ನಕ್ಕೂ ಬಳಸಲಾಗುತ್ತದೆ. ಏಷಿಯಾದ ಭತ್ತದ ವೈಜ್ಞಾನಿಕ ಹೆಸರು ಒರಿಜ ಸಟಿವ ಮತ್ತು ಆಫ್ರಿಕಾದ ಬತ್ತದ ವೈಜ್ಞಾನಿಕ ಹೆಸರು ಒರಿಜ ಗ್ಲಾಬಿರ್ರಿಮ.
ಮೈಸೂರು ದಸರಾವು ಭಾರತದಲ್ಲಿ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನ ವಿಜಯದಶಮಿ. ಹಬ್ಬವನ್ನು ಹಿಂದೂ ಕ್ಯಾಲೆಂಡರ್ ತಿಂಗಳ ಅಶ್ವಿನ್ನಲ್ಲಿ ಹತ್ತನೇ ದಿನದಂದು ಆಚರಿಸಲಾಗುತ್ತದೆ, ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಉಡುಪಿ (Tulu: ಒಡಿಪು) ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವಿಜಯದಾಸರು ಈ ಎಲ್ಲ ಮಹನೀಯರೂ ಸಹ ಶ್ರೀಮನ್ ಮಧ್ವಾಚಾರ್ಯರನ್ನು ನಿತ್ಯ ಉಪಾಸಿಸುವ, ಅವರ ಅನುಯಾಯಿಗಳೇ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO - Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಮೌನಿ ರಾಯ್ ಭಾರತೀಯ ಕಿರುತರೆ ನಟಿ, ಮತ್ತು ರೂಪದರ್ಶಿ. ಇವರು ೨೮ ಸೆಪ್ಟೆಂಬರ್ ೧೯೮೫ ರಂದು ಜನಿಸಿದರು. ೨೦೦೬ ರಲ್ಲಿ ಇವರು ಕ್ಯುಂ ಕಿ ಸಾಸ್ ಭಿ ಕಭಿ ಬಹು ಥೀ ಎಂಬ ಧಾರವಾಹಿಯಲ್ಲಿ ಕೃಷ್ಣತುಳಸಿ ಎಂಬ ಪಾತ್ರವನ್ನು ನಿರ್ವಹಿಸಿದರು, ಪೌರಾಣಿಕ ಸರಣಿ ' ದೇವೋಂ ಕೆ ದೇವ್ ಮಹಾದೇವ್ ' ಎಂಬ ಧಾರವಾಹಿಯಲ್ಲಿ ಸತಿ ಎಂಬ ಪಾತ್ರವನ್ನು ಹಾಗೂ ಏಕ್ತ ಕಪೂರ್ರವರ ನಾಗಿನ್ ಎಂಬ ಧಾರವಾಹಿಯಲ್ಲಿ ಶಿವನ್ಯ ಮತ್ತು ಅದರ ಎರಡನೇ ಭಾಗದಲ್ಲಿ ಶಿವಾಂಗಿ ಎಂಬ ಪಾತ್ರವನ್ನು ಕೂಡಾ ನಿರ್ವಹಿಸಿದರು .
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಅಂತರಜಾಲ (ಆಂಗ್ಲ: Internet ಇಂಟರ್ನೆಟ್) ಎನ್ನುವುದು ಕಂಪ್ಯೂಟರ್ ನೆಟ್ವರ್ಕ್ಗಳ (ಜಾಲಬಂಧಗಳ) ಒಂದು ನೆಟ್ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್ವರ್ಕ್ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ನೈಸರ್ಗಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ಲತಾ ಮಂಗೇಶ್ಕರ್ (೨೮ ಸೆಪ್ಟೆಂಬರ್ ೧೯೨೯ - ೬ ಫೆಬ್ರವರಿ ೨೦೨೨) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. ೧೯೬೭ರಲ್ಲಿ ಬಿಡುಗಡೆಯಾದ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಕನ್ನಡ ಚಲನಚಿತ್ರದಲ್ಲಿನ "ಬೆಳ್ಳನೆ ಬೆಳಗಾಯಿತು" ಮತ್ತು "ಎಲ್ಲಾರೆ ಇರತೀರೋ ಎಂದಾರೆ ಬರತೀರೋ" ಹಾಡುಗಳನ್ನು ಹಾಡಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮುಹಮ್ಮದ್ ಇಬ್ನ್ ಆಬ್ದುಲ್ಲಾಹ್ (محمد (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಕಟ್ಟಿದವರಲ್ಲ, ಹೊರತು ಅಲ್ಲಾಹನ ಧರ್ಮವಾದ ಇಸ್ಲಾಮಿನ ಪ್ರಚಾರಕರು..ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ರ ಜನನ ರಬೀಉಲ್ ಅವ್ವಲ್ ೧೨ನೇ ದಿನಾಂಕ ಕ್ರಿ.ಶ. ೫೭೧ರ ಎಪ್ರೀಲ್ ೨೧ ರಂದು ಮಕ್ಕಾ ಪಟ್ಟಣದಲ್ಲಿ ಆಗುತ್ತದೆ.ಇವರು ಇಡೀ ವಿಶ್ವದ ಪ್ರಭುವಾದ ಅಲ್ಲಾಹನ ವತಿಯಿಂದ ಬಂದಂತಹ ಪ್ರವಾದಿಯೂ ಲೋಕನಾಯಕರೂ ಆಗಿದ್ದಾರೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಕರ್ನಾಟಕದ 30 ಜಿಲ್ಲೆಗಳಲ್ಲೊಂದು. 1986ರಲ್ಲಿ ಬೆಂಗಳೂರು ಜಿಲ್ಲೆಯನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಎಂದು ವಿಂಗಡಿಸಿ ರಚಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4 ತಾಲ್ಲೂಕು, 17 ಹೋಬಳಿಗಳು 1122 ಹಳ್ಳಿಗಳು, 3 ನಗರಸಭೆ, 2 ಪುರಸಭೆ, 1 ಪಟ್ಟಣ ಪಂಚಾಯಿತಿ ಮತ್ತು 229 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ, ಅದರಲ್ಲಿ ಬೂದಿಹಾಳ ಗ್ರಾಮ ಪಂಚಾಯಿತಿ ಪ್ರಮುಖವಾ..
ಸೂರ್ಯಾಸ್ತ ಎಂದರೆ ಭೂಮಿಯ ಪರಿಭ್ರಮಣದ ಪರಿಣಾಮವಾಗಿ ದಿಗಂತದ ಕೆಳಗೆ ಸೂರ್ಯ ದೈನಂದಿನ ಮರೆಯಾಗುವುದು. ವರ್ಷಕ್ಕೆ ಕೇವಲ ಒಮ್ಮೆ ಉಂಟಾಗುವ ವಸಂತ ಮತ್ತು ಶರತ್ಕಾಲದ ವಿಷುವತ್ಸಂಕ್ರಾಂತಿಗಳಂದು ಸೂರ್ಯ ಪಶ್ಚಿಮದಲ್ಲಿ ನಿಖರವಾಗಿ ಭೂಮಧ್ಯರೇಖೆಯಲ್ಲಿ ಅಸ್ತವಾಗುತ್ತದೆ. ಖಗೋಳಶಾಸ್ತ್ರದಲ್ಲಿ ಸೂರ್ಯಾಸ್ತದ ಸಮಯವನ್ನು ಸೂರ್ಯನ ಬಿಂಬದ ಹಿಂಭಾಗದ ಅಂಚು ದಿಗಂತದ ಕೆಳಗೆ ಕಣ್ಮರೆಯಾಗುವ ಕ್ಷಣವೆಂದು ವ್ಯಾಖ್ಯಾನಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮುಹಮ್ಮದ್ ಇಬ್ನ್ ಅಬ್ದುಲ್ಲಾಹ್ (محمد (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಸೃಷ್ಟಿಸಿದವರಲ್ಲ; ಆದರೆ ಆಡಮ್, ಅಬ್ರಾಹಮ್ ಇತ್ಯಾದಿ ಪ್ರವಾದಿಗಳಿಂದ ಸೃಷ್ಟಿಸಲಾದ ಮೂಲ ಧರ್ಮವನ್ನು ಪುನರ್ಸ್ಥಾಪನೆ ಮಾಡಿದವರು.ಮುಹಮ್ಮದ್(ಸ) ರ ಜನನ ರಬೀಉಲ್ ಅವ್ವಲ್ ೯ನೇ ದಿನಾಂಕ ಕ್ರಿ.ಶ. ೫೭೧ರ ಎಪ್ರೀಲ್ ೨೦ ರಂದು ಮಕ್ಕಾ ಪಟ್ಟಣದಲ್ಲಿ ಆಗುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ವಸ್ತುಸಂಗ್ರಹಾಲಯವು ಸಾಂಸ್ಕೃತಿಕ, ವೈಜ್ಞಾನಿಕ, ಚಾರಿತ್ರಿಕ ಅಥವಾ ಆಲಂಕಾರಿಕ ಮೌಲ್ಯವುಳ್ಳ ವಸ್ತುಗಳನ್ನು ಸಂಗ್ರಹಿಸುವ, ರಕ್ಷಿಸುವ, ಅಧ್ಯಯನ ಮಾಡುವ, ಪ್ರದರ್ಶಿಸುವ ಮತ್ತು ಶೈಕ್ಷಣಿಕ ಉಪಯೋಗಕ್ಕೆ ಒದಗಿಸುವ ಒಂದು ಸಂಸ್ಥೆ (ಮ್ಯೂಸಿಯಮ್). ವಸ್ತುಗಳನ್ನು ಸಂಗ್ರಹಿಸುವ ಮಾನವನ ಆಸಕ್ತಿ ಅವನಷ್ಟೇ ಪ್ರಾಚೀನ. ವಸ್ತುಸಂಗ್ರಹಾಲಯ ಎಂಬ ಪದವನ್ನು ಇಂಗ್ಲಿಷಿನ ಮ್ಯೂಸಿಯಮ್ ಎಂಬುದಕ್ಕೆ ಸಂವಾದಿಯಾಗಿ ಬಳಸಲಾಗುತ್ತದೆ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ದುರ್ಗದ ಹುಲಿ ಮದಕರಿ ನಾಯಕ , ಭಾರತ ದೇಶದಲ್ಲಿದ್ದ ಹಲವು ಸಂಸ್ಥಾನಗಳಲ್ಲಿ ಒಂದಾದ ಚಿತ್ರದುರ್ಗದ ಕೊನೆಯ ಆರಸನಾಗಿದ್ದ. ಹೈದರ್ ಅಲಿಯ ಮೈಸೂರಿನ ಸೇನೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ನಾಯಕನನ್ನು ಮಾತುಕತೆಗೆಂದು ರಾಜಿಸಂಧಾನವೆಂದು ಕರೆಸಿ ಮೋಸದಿಂದ ಹೈದರ್ ಅಲಿ ಬಂಧಿಸಿ ಶ್ರೀರಂಗಪಟ್ಟಣದ ಸೆರೆಮನೆಯಲ್ಲಿಟ್ಟು ಮತಾಂತರವಾದರೆ ರಾಜ್ಯವನ್ನು ವಾಪಸ್ಸು ನೀಡಿ ಬಿಡುಗಡೆ ಮಾಡುವುದಾಗಿ ಹೇಳಲು ಮದಕರಿ ಜೀವ ನೀಡುತ್ತಾನೆ ಹೊರತು ಧರ್ಮದ್ರೋಹ ಮಾಡುವುದಿಲ್ಲ ಎಂದು ಕೆಚ್ಚೆದೆಯಿಂದ ಹೇಳುತ್ತಾನೆ. ನಂತರ ಹೈದರ್ ಅಲಿಯ ಪುತ್ರ ಟಿಪ್ಪುಸುಲ್ತಾನ್ ಮೈಸೂರಿನ ಮತ್ತು ಚಿತ್ರದುರ್ಗದ ಬೇಡರ ಪಡೆಗಳು ಒಂದಾಗಿ ದಾಳಿ ಮಾಡಬಹುದೆಂಬ ಹೆದರಿ ಸೈನಿಕ ದಂಗೆಯಾದರೆ ನಮಗೆ ಸೋಲು ಖಚಿತವೆಂದು ಭಾವಿಸಿ ಯುದ್ಧಭಯದಿಂದ ಮದಕರಿ ಊಟದಲ್ಲಿ ವಿಷವಿಟ್ಟು ಕೊಲೆ ಮಾಡುತ್ತಾನೆ.
ಪೆಟ್ಲಾ "ಪುರಿ" ಜಗನ್ನಾಥ್ (ಜನನ 28 ಸೆಪ್ಟೆಂಬರ್ 1966) ಒಬ್ಬ ಭಾರತೀಯ ಚಲನಚಿತ್ರ ನಿರ್ದೇಶಕ, ಚಿತ್ರಕಥೆಗಾರ ಮತ್ತು ನಿರ್ಮಾಪಕ, ಇವರು ಪ್ರಾಥಮಿಕವಾಗಿ ತೆಲುಗು ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಾರೆ. ಅವರು ಪವನ್ ಕಲ್ಯಾಣ್, ರೇಣು ದೇಸಾಯಿ ಮತ್ತು ಅಮೀಶಾ ಪಟೇಲ್ ಅಭಿನಯದ ತೆಲುಗು ಚಲನಚಿತ್ರ ಬದ್ರಿಯೊಂದಿಗೆ ತಮ್ಮ ಚೊಚ್ಚಲ ನಿರ್ದೇಶನವನ್ನು ಮಾಡಿದರು. 2006 ರಲ್ಲಿ, ಅವರು ತೆಲುಗು ಚಲನಚಿತ್ರ ಪೋಕಿರಿ ಅನ್ನು ನಿರ್ದೇಶಿಸಿದರು, ಇದು ದುಬೈನಲ್ಲಿ ನಡೆದ 7 ನೇ IIFA ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನಗೊಂಡಿತು.
ಕೊರೊನಾ ವೈರಸ್ ಕಾಯಿಲೆ 2019 ( ಕೋವಿಡ್ ೧೯ ) ಎಂಬುದು ತೀವ್ರವಾದ ಉಸಿರಾಟದ ಸಮಸ್ಯೆಯಾದ ಸಿಂಡ್ರೋಮ್ ಕೊರೊನಾವೈರಸ್ ೨ (ಸಾರ್ಸ್-ಕೋವಿಡ್-೧೯) ನಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ . ಈ ರೋಗ ಮೊದಲು ೨೦೧೯ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿತು. ಈ ಕಾಯಿಲೆಯ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು,ವಾಸನೇ ಮತ್ತು ರುಚಿ ನಷ್ಟ ಉಸಿರಾಟದ ತೊಂದರೆ.
ಚಿತ್ರ:ಸಾಂಪ್ರದಾಯಿಕ ವಿವಾಹದ ಉಡುಗೆ ಕೊಡಗು ಜಿಲ್ಲೆ (ಕೊಡಗನ್ನು ಕೊಡವ ನಾಡ್ ಎಂದು ಕರೆಯಲಾಗುತ್ತದೆ), ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಶಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡವರ ನಾಡಲಾ ಅಲ್ಲೆ ಕೊಡವರ ಬೀಡಲಾ ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. .
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.