The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO - Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೈಸೂರು ದಸರಾವು ಭಾರತದಲ್ಲಿ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನ ವಿಜಯದಶಮಿ. ಹಬ್ಬವನ್ನು ಹಿಂದೂ ಕ್ಯಾಲೆಂಡರ್ ತಿಂಗಳ ಅಶ್ವಿನ್ನಲ್ಲಿ ಹತ್ತನೇ ದಿನದಂದು ಆಚರಿಸಲಾಗುತ್ತದೆ, ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ yvvಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಉಡುಪಿ (Tulu: ಒಡಿಪು) ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವಿಜಯದಾಸರು ಈ ಎಲ್ಲ ಮಹನೀಯರೂ ಸಹ ಶ್ರೀಮನ್ ಮಧ್ವಾಚಾರ್ಯರನ್ನು ನಿತ್ಯ ಉಪಾಸಿಸುವ, ಅವರ ಅನುಯಾಯಿಗಳೇ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ ...
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ದಂತಕಥೆಯು ಜನಪದ ಸಾಹಿತ್ಯದ ಪ್ರಕಾರವಾಗಿದ್ದು ಮಾನವ ಇತಿಹಾಸದಲ್ಲಿ ನಡೆದದ್ದೆಂದು ಹೇಳುವವನು ಹಾಗೂ ಕೇಳುಗರಿಬ್ಬರಿಂದಲೂ ಗ್ರಹಿಸಲಾದ ಅಥವಾ ನಂಬಲಾದ ಮಾನವ ಕ್ರಿಯೆಗಳು ಇರುವ ಕಥೆಯನ್ನು ಹೊಂದಿರುತ್ತದೆ. ಈ ಪ್ರಕಾರದಲ್ಲಿನ ಕಥೆಗಳು ಮಾನವೀಯ ಮೌಲ್ಯಗಳನ್ನು ತೋರ್ಪಡಿಸಬಹುದು, ಮತ್ತು ಕಥೆಗೆ ಸತ್ಯಾಭಾಸವನ್ನು ನೀಡುವ ನಿರ್ದಿಷ್ಟ ಗುಣಗಳನ್ನು ಹೊಂದಿರಬಹುದು. ತನ್ನ ಸಕ್ರಿಯ ಹಾಗೂ ನಿಷ್ಕ್ರಿಯ ಭಾಗಿಗಳಿಗೆ ದಂತಕಥೆಯು "ಸಾಧ್ಯತೆ"ಯ ಲೋಕದಾಚೆಗಿರುವ ಘಟನೆಗಳನ್ನು ಒಳಗೊಂಡಿರುವುದಿಲ್ಲ, ಆದರೆ ಪವಾಡಗಳನ್ನು ಒಳಗೊಂಡಿರಬಹುದು.
ಮುಹಮ್ಮದ್ ಇಬ್ನ್ ಆಬ್ದುಲ್ಲಾಹ್ (محمد (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಕಟ್ಟಿದವರಲ್ಲ, ಹೊರತು ಅಲ್ಲಾಹನ ಧರ್ಮವಾದ ಇಸ್ಲಾಮಿನ ಪ್ರಚಾರಕರು..ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ರ ಜನನ ರಬೀಉಲ್ ಅವ್ವಲ್ ೧೨ನೇ ದಿನಾಂಕ ಕ್ರಿ.ಶ. ೫೭೧ರ ಎಪ್ರೀಲ್ ೨೧ ರಂದು ಮಕ್ಕಾ ಪಟ್ಟಣದಲ್ಲಿ ಆಗುತ್ತದೆ.ಇವರು ಇಡೀ ವಿಶ್ವದ ಪ್ರಭುವಾದ ಅಲ್ಲಾಹನ ವತಿಯಿಂದ ಬಂದಂತಹ ಪ್ರವಾದಿಯೂ ಲೋಕನಾಯಕರೂ ಆಗಿದ್ದಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.೧೯೪೭ರಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ೧೯೯೧ರ ವರೆಗೆ, ಅನುಕ್ರಮದ ಸರ್ಕಾರಗಳು ವ್ಯಾಪಕ ಸರ್ಕಾರಿ ಹಸ್ತಕ್ಷೇಪ ಮತ್ತು ನಿಯಂತ್ರಣವುಳ್ಳ ರಕ್ಷಣಾವಾದಿ ಆರ್ಥಿಕ ನೀತಿಗಳನ್ನು ಪ್ರೋತ್ಸಾಹಿಸಿದವು; ಶೀತಲ ಸಮರದ ಅಂತ್ಯ ಮತ್ತು ೧೯೯೧ ರಲ್ಲಿ ತೀವ್ರ ಪಾವತಿ ಬಾಕಿ ಬಿಕ್ಕಟ್ಟಿನ ಕಾರಣ ಭಾರತವು ಆರ್ಥಿಕ ಉದಾರೀಕರಣದ ವಿಶಾಲ ಕಾರ್ಯಕ್ರಮವನ್ನು ಅಳವಡಿಸಿಕೊಂಡಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಮುಹಮ್ಮದ್ ಇಬ್ನ್ ಅಬ್ದುಲ್ಲಾಹ್ (محمد (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಸೃಷ್ಟಿಸಿದವರಲ್ಲ; ಆದರೆ ಆಡಮ್, ಅಬ್ರಾಹಮ್ ಇತ್ಯಾದಿ ಪ್ರವಾದಿಗಳಿಂದ ಸೃಷ್ಟಿಸಲಾದ ಮೂಲ ಧರ್ಮವನ್ನು ಪುನರ್ಸ್ಥಾಪನೆ ಮಾಡಿದವರು.ಮುಹಮ್ಮದ್(ಸ) ರ ಜನನ ರಬೀಉಲ್ ಅವ್ವಲ್ ೯ನೇ ದಿನಾಂಕ ಕ್ರಿ.ಶ. ೫೭೧ರ ಎಪ್ರೀಲ್ ೨೦ ರಂದು ಮಕ್ಕಾ ಪಟ್ಟಣದಲ್ಲಿ ಆಗುತ್ತದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕರ್ನಾಟಕದ ಸಂಸ್ಕೃತಿ : ‘ಸಂಸ್ಕೃತಿ’ ಎಂಬ ಶಬ್ದದ ಅರ್ಥ ಬಹು ವ್ಯಾಪಕವಾಗಿ ಬೆಳೆಯುತ್ತ ಬಂದಿದೆ; ಹೊಸ ಹೊಸ ಅರ್ಥಗಳನ್ನು ಒಳಗೊಂಡಿದೆ. ಸಮಷ್ಟಿ ಜೀವನದ ಅಂತರಂಗದ ಸಾಧನೆಗೆ ಸಹಕಾರಿಯಾದ ಸಾಮಗ್ರಿಗಳಿಂದ ಹಿಡಿದು, ವ್ಯಷ್ಟಿ ಜೀವನದ ವಿಕಾಸಕ್ಕೆ ಕಾರಣವಾದ ಸಂಸ್ಕಾರದವರೆಗೆ ಈ ಪದದ ಅರ್ಥ ಬೆಳೆದಿದೆ. ವ್ಯಕ್ತಿಯ ವಿಕಾಸಕ್ಕೆ ಕಾರಣವಾಗುವ ಸಾಮಾಜಿಕ ಪರಿಕರಗಳು ಸಹ ಸಂಸ್ಕೃತಿಯಲ್ಲಿಯೇ ಸಮಾವೇಶಗೊಳ್ಳುತ್ತವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.