The most-visited ಕನ್ನಡ Wikipedia articles, updated daily. Learn more...
ಮಮ್ಮುಟ್ಟಿ' (ಮಲಯಾಳಂ:മമ്മൂട്ടി) (ಜನನ ಮುಹಮ್ಮದ್ ಕುಟ್ಟಿ' 1953 ಸೆಪ್ಟೆಂಬರ್ 7ರಂದು) ಭಾರತದ ನಟ ಮತ್ತು ನಿರ್ಮಾಪಕರಾಗಿದ್ದು, ಮುಖ್ಯವಾಗಿ ಮಲೆಯಾಳಂ ಸಿನೆಮಾ ದಲ್ಲಿ ತೊಡಗಿಕೊಂಡಿದ್ದಾರೆ. ಅವರು ಕೆಲವು ತಮಿಳು, ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ದಶಕಗಳಿಗೂ ಹೆಚ್ಚಿನ ಕಾಲದ ಅವರ ವೃತ್ತಿಜೀವನದಲ್ಲಿ ಅವರು 300ಕ್ಕಿಂತ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ."ಶಿಕಾರಿ" ಹೆಸರಿನ ಕನ್ನಡ ಚಿತ್ರ ಇವರ ಮೊದಲ ಕನ್ನಡ ಚಲನಚಿತ್ರ .ಮಮ್ಮುಟ್ಟಿ ತಮ್ಮ ಸಾಧನೆಗಳಿಗಾಗಿ ಅನೇಕ ಪ್ರಮುಖ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.
ಜ್ವಾಲಾ ಗುಟ್ಟಾ (ಜನನ 7 ಸೆಪ್ಟೆಂಬರ್ 1983)ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ವಾರ್ಧಾದಲ್ಲಿ ಭಾರತೀಯ ತಂದೆ ಮತ್ತು ಚೀನೀ ತಾಯಿಗೆ ಜನಿಸಿದ ಅವರು ಚಿಕ್ಕ ವಯಸ್ಸಿನಲ್ಲಿಯೇ ಬ್ಯಾಡ್ಮಿಂಟನ್ ಆಡಲು ಪ್ರಾರಂಭಿಸಿದರು. ಎಡಗೈ ಆಟಗಾರ್ತಿಯಾದ ಜ್ವಾಲಾ, ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನಷಿಪ್ ಅನ್ನು ಹದಿನಾಲ್ಕು ಬಾರಿ ಗೆದ್ದಿದ್ದಾರೆ.೨೦೧೨ರ ಲಂಡನ್ ಒಲಿಂಪಿಕ್ಸ್ ಮತ್ತು ೨೦೧೬ರ ರಿಯೋ ಒಲಿಂಪಿಕ್ಸ್ ನಲ್ಲಿ ಅರ್ಹತೆ ಪಡೆದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಆಗಿದ್ದಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಓಣಮ್ದಕ್ಷಿಣ ಭಾರತದ ಕೇರಳರಾಜ್ಯದಲ್ಲಿ ನಡೆಯುವ ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬವನ್ನು ಮಲಯಾಳೀ ಪಂಚಾಂಗದ ಮೊದಲ ತಿಂಗಳು ಚಿಂಗಮ್(ಆಗಸ್ಟ್-ಸೆಪ್ಟೆಂಬರ್) ತಿಂಗಳಿನಲ್ಲಿ, ಪುರಾಣಪ್ರಸಿದ್ಧ ಸಾಮ್ರಾಟ ಮಹಾಬಲಿಯು ಮನೆಗೆ ಮರಳಿ ಬಂದ ಕುರುಹಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಹತ್ತು ದಿನಗಳವರೆಗೆ ಸಡಗರದಿಂದ ಜರುಗುವ ಈ ಹಬ್ಬವು ಕೇರಳದ ಹಲವಾರು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದೆ.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
{{Infobox UNESCO World He ritage Site |WHS = ಸ್ಮಾರಕಗಳ ಸಮೂಹ, ಹಂಪಿ |Image = Hampi virupa ksha temple.jpg |Location = ವಿಜಯನಗರ ಜಿಲ್ಲೆ, ಕರ್ನಾಟಕ, ಭಾರತ |Criteria = ಸಾಂಸ್ಕೃತಿಕ: i, iii, iv |Includes = ವಿರೂಪಾಕ್ಷ ದೇವಾಲಯ, ಹಂಪೆ |ID = 241 |Year = 1986 |Danger = 1999–2006 |Area = 4,187.24 ಹೆಕ್ಟೇರು |Buffer_zone = 19,453.62 ಹೆಕ್ಟೇರು |Coordinates = 15°20′04″N 76°27′44″E |locmapin = India #India Karnataka |map_caption = Location of Hampi |Website = ಭಾರತೀಯ ಪುರಾತತ್ವ ಇಲಾಖೆ - ಹಂಪೆ }} ಹಂಪೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಂತರಜಾಲ (ಆಂಗ್ಲ: Internet ಇಂಟರ್ನೆಟ್) ಎನ್ನುವುದು ಕಂಪ್ಯೂಟರ್ ನೆಟ್ವರ್ಕ್ಗಳ (ಜಾಲಬಂಧಗಳ) ಒಂದು ನೆಟ್ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್ವರ್ಕ್ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕುತುಬ್ ಮಿನಾರ್ ಸಂಕೀರ್ಣವು ಭಾರತದ ದೆಹಲಿಯಲ್ಲಿರುವ ಸ್ಮಾರಕ ಮತ್ತು ಕಟ್ಟಡಗಳ ಸಮೂಹವಾಗಿದೆ. ಈ ಸಂಕೀರ್ಣದ ಅತಿ ಪ್ರಸಿದ್ಧ ಅಂಗವೆಂದರೆ ಕುತುಬ್ ಮಿನಾರ್ ಗೋಪುರ. ಇದರ ನಿರ್ಮಾಣ ಕಾರ್ಯವನ್ನು ಗುಲಾಮ ಸಂತತಿಯ ಮೊದಲ ಸುಲ್ತಾನ ಕುತ್ಬುದ್ದೀನ್ ಐಬಕ್ ಪ್ರಾರಂಭಿಸಿದನು.ಆದರೆ ಗೋಪುರದ ರಚನೆಯನ್ನು ಇಲ್ತಾಮಿಷ್ ಪೂರ್ಣಗೊಳಿಸಿದನು ನಂತರ ಅಲ್ತ್ಮಷ್ ಮತ್ತು ಅಲ್ಲಾ ಉದ್ದೀನ್ ಖಿಲ್ಜಿ ಇತ್ಯಾದಿ ಸುಲ್ತಾನರು ಬೆಳೆಸಿಕೊಂಡು ಹೋದರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO - Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕ್ಯೋಟೋ ಶಿಷ್ಟಾಚಾರಇಂದು ವಿಶ್ವವು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಜಾಗತಿಕ ತಾಪಮಾನ ಹೊಂದಿದೆ. ಅನೇಕ ವಿಜ್ಞಾನಿಗಳು ಇಂಗಾಲದ ಡೈಆಕ್ಸೈಡ್ ಮತ್ತು ಇತರ ಹಸಿರುಮನೆ ಅನಿಲಗಳನ್ನು ನಮ್ಮ ಉತ್ಪಾದನೆ ವಾತಾವರಣ ಮೇಲೆ ಬಿಸಿ ಪರಿಣಾಮವನ್ನು ಹೊಂದಿದೆ, ಮತ್ತು ಈ ಮಾನವ ಜೀವನದ ತುಂಬಾ ಅಪಾಯಕಾರಿ ಎಂದು ನಂಬುತ್ತಾರೆ. ಈ ಪ್ರಬಂಧ ಜಾಗತಿಕ ತಾಪಮಾನ ಏರಿಕೆಯ ಸಮಸ್ಯೆಯನ್ನು ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸುವ ಕೆಲವು ರೀತಿಯಲ್ಲಿ ಸೂಚಿಸುತ್ತದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಬಾಹ್ಯ ನರ ವ್ಯವಸ್ಥೆಯ ನರಗಳಿಗೆ ಹಾನಿಯಾದರೆ, ಇದಕ್ಕೆ 'ಬಾಹ್ಯ ನರ ರೋಗ ' ಎನ್ನಲಾಗುವುದು. ಮಾನವ ಶರೀರದಲ್ಲಿನ ನರದ ರೋಗಗಳು ಅಥವಾ ಇಡೀ ದೇಹದಲ್ಲಿ ಕಾಯಿಲೆಯ ಅಡ್ಡ-ಪರಿಣಾಮಗಳಿಂದಾಗಿ ಇದು ಸಂಭವಿಸಬಹುದು. 'ಬಹು-ನರರೋಗ', 'ಏಕ-ನರರೋಗ', 'ಮಾನೊನ್ಯೂರಿಟಿಸ್ ಮಲ್ಟಿಪ್ಲೆಕ್ಸ್'(ಒಂದಕ್ಕಿಂತ ಹೆಚ್ಚು ಪ್ರತ್ಯೇಕ ನರದ ಗುಂಪುಗಳಿಗೆ ಹಾನಿ) ಹಾಗೂ 'ಸ್ವನಿಯಂತ್ರಿತ ನರರೋಗ' ಎಂಬ ಬಾಹ್ಯ ನರರೋಗದ ನಾಲ್ಕು ಪ್ರಧಾನ ನಮೂನೆಗಳಿವೆ.