The most-visited ಕನ್ನಡ Wikipedia articles, updated daily. Learn more...
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಎರಡನೇ ಎಲಿಜಬೆಥ್(ಎಲಿಜಬೆಥ್ ಅಲೆಕ್ಸಾಂಡ್ರ ಮೇರಿ ; ೨೧,ಏಪ್ರಿಲ್ ೧೯೨೬-೮ ಸೆಪ್ಟೆಂಬರ್ ೨೦೨೨) ಯುನೈಟೆಡ್ ಕಿಂಗ್ಡಮ್ ನ ಮಹಾರಾಣಿಯಾಗಿ ೬, ಫೆಬ್ರವರಿ ೧೯೫೨ ರಿಂದ ೮, ಸೆಪ್ಟೆಂಬರ್ ೨೦೨೨ ರಲ್ಲಿ ಮರಣಿಸುವವರೆಗೂ ಅಧಿಕಾರದಲ್ಲಿದ್ದರು.[a] (ಜನನ: ಏಪ್ರಿಲ್ ೨೧, ೧೯೨೬-ಮರಣ: ಸೆಪ್ಟೆಂಬರ್ ೮, ೨೦೨೨) ಯುನೈಟೆಡ್ ಕಿಂಗ್ಡಮ್ ಮತ್ತು ೧೫ ಇತರ ದೇಶಗಳ ರಾಣಿ. ಈಕೆ ತಂದೆ ಆರನೇ ಜಾರ್ಜ್ನ ನಿಧನದ ನಂತರ ಯುನೈಟೆಡ್ ಕಿಂಗ್ಡಮ್ನ ಪಟ್ಟಕ್ಕೆ ಬಂದು ಜೂನ್ ೨, ೧೯೫೩ರಂದು ಪಟ್ಟಧಾರಣೆ ಮಾಡಿದರು. ಯುನೈಟೆಡ್ ಕಿಂಗ್ಡಮ್ ಅಲ್ಲದೆ ಕೆನಡ, ಆಸ್ಟ್ರೇಲಿಯ, ನ್ಯೂ ಜೀಲ್ಯಾಂಡ್, ಜಮೈಕ, ಬಾರ್ಬಡೋಸ್, ಬಹಾಮಾಸ್, ಗ್ರೆನಾಡ, ಪಾಪುಅ ನ್ಯೂ ಗಿನಿ, ಸಾಲೊಮನ್ ದ್ವೀಪಗಳು, ತುವಾಲು, ಸೇಂಟ್ ಲೂಷಿಯ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೀನ್ಸ್, ಬೆಲೀಜ್, ಆಂಟಿಗುವ ಮತ್ತು ಬಾರ್ಬುಡ ಮತ್ತು ಸೇಂಟ್ ಕಿಟ್ಸ್ ಮತ್ತು ನೆವಿಸ್ ರಾಷ್ಟ್ರಗಳ ರಾಣಿ ಕೂಡ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮನೀಶ್ ಪಾಂಡೆ (ಜನನ ೧೦ ಸೆಪ್ಟೆಂಬರ್ ೧೯೮೯) ಒಬ್ಬ ಭಾರತೀಯ ಅಂತರರಾಷ್ಟ್ರೀಯ ಕ್ರಿಕೆಟಿಗ. ಅವರು ಮುಖ್ಯವಾಗಿ ದೇಶೀಯ ಕ್ರಿಕೆಟ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಬಲಗೈ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಮತ್ತು ಅವರು ತಮ್ಮ ಮಾಜಿ ಐಪಿಎಲ್ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಆರಂಭಿಕ ಬ್ಯಾಟ್ಸ್ಮನ್ ಆಗಿ ಆಡಿದರು ಮತ್ತು 2009 ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಐಪಿಎಲ್ನಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO - Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಎಲಿಜಬೆತ್ I (7 ಸೆಪ್ಟೆಂಬರ್ 1533 - 24 ಮಾರ್ಚ್ 1603) ಇಂಗ್ಲೆಂಡ್ ಮತ್ತು ಐರ್ಲೆಂಡ್ನ ರಾಣಿ 17 ನವೆಂಬರ್ 1558 ರಿಂದ ಅವಳ ಮರಣದವರೆಗೆ. ಕೆಲವೊಮ್ಮೆ ವರ್ಜಿನ್ ಕ್ವೀನ್, ಗ್ಲೋರಿಯಾನಾ ಅಥವಾ ಗುಡ್ ಕ್ವೀನ್ ಬೆಸ್ ಎಂದು ಕರೆಯಲ್ಪಡುವ, ಮಕ್ಕಳಿಲ್ಲದ ಎಲಿಜಬೆತ್ ಟ್ಯೂಡರ್ ಸಾಮ್ರಾಜ್ಯದ ಕೊನೆಯ ರಾಜನಾಗಿದ್ದ.ಎಲಿಜಬೆತ್ ಹೆನ್ರಿ VIII ರ ಮಗಳು ಮತ್ತು ಅವರ ಎರಡನೆಯ ಹೆಂಡತಿಯಾದ ಅನ್ನಿ ಬೊಲಿನ್, ಎಲಿಜಬೆತ್ ಹುಟ್ಟಿದ ನಂತರ ಎರಡು ಮತ್ತು ಒಂದೂವರೆ ವರ್ಷಗಳ ನಂತರ ಮರಣದಂಡನೆ ವಿಧಿಸಲಾಯಿತು. ಹೆನ್ರಿ VIII ಗೆ ಅನ್ನಿಯ ಮದುವೆಯನ್ನು ರದ್ದುಗೊಳಿಸಲಾಯಿತು, ಮತ್ತು ಎಲಿಜಬೆತ್ರನ್ನು ನ್ಯಾಯಸಮ್ಮತವಲ್ಲದವನಾಗಿ ಘೋಷಿಸಲಾಯಿತು.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಓಣಮ್ದಕ್ಷಿಣ ಭಾರತದ ಕೇರಳರಾಜ್ಯದಲ್ಲಿ ನಡೆಯುವ ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬವನ್ನು ಮಲಯಾಳೀ ಪಂಚಾಂಗದ ಮೊದಲ ತಿಂಗಳು ಚಿಂಗಮ್(ಆಗಸ್ಟ್-ಸೆಪ್ಟೆಂಬರ್) ತಿಂಗಳಿನಲ್ಲಿ, ಪುರಾಣಪ್ರಸಿದ್ಧ ಸಾಮ್ರಾಟ ಮಹಾಬಲಿಯು ಮನೆಗೆ ಮರಳಿ ಬಂದ ಕುರುಹಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಹತ್ತು ದಿನಗಳವರೆಗೆ ಸಡಗರದಿಂದ ಜರುಗುವ ಈ ಹಬ್ಬವು ಕೇರಳದ ಹಲವಾರು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಅಂತರಜಾಲ (ಆಂಗ್ಲ: Internet ಇಂಟರ್ನೆಟ್) ಎನ್ನುವುದು ಕಂಪ್ಯೂಟರ್ ನೆಟ್ವರ್ಕ್ಗಳ (ಜಾಲಬಂಧಗಳ) ಒಂದು ನೆಟ್ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್ವರ್ಕ್ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕ್ಯೋಟೋ ಶಿಷ್ಟಾಚಾರಇಂದು ವಿಶ್ವವು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಜಾಗತಿಕ ತಾಪಮಾನ ಹೊಂದಿದೆ. ಅನೇಕ ವಿಜ್ಞಾನಿಗಳು ಇಂಗಾಲದ ಡೈಆಕ್ಸೈಡ್ ಮತ್ತು ಇತರ ಹಸಿರುಮನೆ ಅನಿಲಗಳನ್ನು ನಮ್ಮ ಉತ್ಪಾದನೆ ವಾತಾವರಣ ಮೇಲೆ ಬಿಸಿ ಪರಿಣಾಮವನ್ನು ಹೊಂದಿದೆ, ಮತ್ತು ಈ ಮಾನವ ಜೀವನದ ತುಂಬಾ ಅಪಾಯಕಾರಿ ಎಂದು ನಂಬುತ್ತಾರೆ. ಈ ಪ್ರಬಂಧ ಜಾಗತಿಕ ತಾಪಮಾನ ಏರಿಕೆಯ ಸಮಸ್ಯೆಯನ್ನು ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸುವ ಕೆಲವು ರೀತಿಯಲ್ಲಿ ಸೂಚಿಸುತ್ತದೆ.