The most-visited ಕನ್ನಡ Wikipedia articles, updated daily. Learn more...
ಶಿವಕುಮಾರ ಸ್ವಾಮಿ (ಜನನ- ಶಿವಣ್ಣ, ೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.ಹಿಂದೂಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ ದೇವರು ಎಂದು ಕೂಡ ಉಲ್ಲೇಖಿಸಲಾಗಿದೆ.ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಸಿ ಎರಡನೇ ವಿವೇಕಾನಂದ ಎನಿಸಿದ್ದಾರೆ. ನಡೆದಾಡುವ ದೇವರು, ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ ಎಂಬ ಹತ್ತು ಹಲವಾರು ನಾಮಾವಳಿಗಳಿಂದ ಜಗಪ್ರಸಿದ್ದರಾಗಿದ್ದರು, ಹಾಗೂ ಅಪಾರ ಭಕ್ತ ಸಾಗರವನ್ನು ಹೊಂದಿದ್ದರು. ಜೈನ ಧರ್ಮದಂತೆ ಆಹಾರ ಮತ್ತು ಜಲವನ್ನು ತ್ಯಾಗ ಮಾಡಿ ವೈಕುಂಠ ಏಕಾದಶಿಯಂದು ಇಚ್ಛಾಮರಣ ಹೊಂದಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
'ಅಮೆರಿಕದ ಪಾಪ್ ಸಂಗೀತ ಪದ್ಧತಿ'ಯಲ್ಲಿ ತನ್ನ ಅದ್ಭುತ ಕಂಠಸಿರಿಯಿಂದ ಹಾಡುತ್ತಾ ಮುಗಿಲೆತ್ತರಕ್ಕೆ ಏರಿದ ಅತ್ಯಂತ ಜನಪ್ರಿಯ ಗಾಯಕಿಯಾಗಿ ಗುರುತಿಸಲ್ಪಟ್ಟಿರುವ ವಿಟ್ನಿ ಹ್ಯೂಸ್ಟನ್, ೮೦ ರ ದಶಕದಲ್ಲಿ 'ಐವಿಲ್ ಆಲ್ವೇಸ್ ಲವ್ ಯು' ಎಂಬ ಗೀತೆಯಿಂದ ಜನಪ್ರಿಯತೆಯ ಶಿಖರವನ್ನೇರಿದರು. ಅಂತಹದೇ ಹಲವಾರು ಗೀತೆಗಳನ್ನು ಹಾಡಿ ಜಗತ್ತಿನ ಎಲ್ಲಾ ವಯೋಮಾನದ ಸಂಗೀತ ರಸಿಕರ ಕಣ್ಮಣಿಯಾದರು. ಅತ್ಯಂತ ಹೆಚ್ಚಿನ ಪ್ರಶಸ್ತಿವಿಜೇತೆಯೆಂಬ ತಲೆಗರಿಯನ್ನು ತಮ್ಮದಾಗಿರಿಸಿಕೊಂಡಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಅಡಾಲ್ಫ್ ಹಿಟ್ಲರ್ , (೨೦ ಏಪ್ರಿಲ್ ೧೮೮೯ - ೩೦ ಏಪ್ರಿಲ್ ೧೯೪೫) ಆಸ್ಟ್ರಿಯಾದಲ್ಲಿ ಜನಿಸಿದ ಜರ್ಮನ್ ರಾಜಕಾರಣಿ ಹಾಗೂ ನಾಜಿ ಪಕ್ಷವೆಂದೇ ಖ್ಯಾತವಾದ ನ್ಯಾಶನಲ್ ಸೋಶಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ (ಸಂಕ್ಷಿಪ್ತ ರೂಪ NSDAP) ನೇತಾರನಾಗಿದ್ದವನು. ಈತನು ೧೯೩೩ರಿಂದ ೧೯೪೫ರ ವರೆಗೆ ಜರ್ಮನಿಯನ್ನು ಆಳಿದನು. ೧೯೩೩ರಿಂದ ೧೯೪೫ರವರೆಗೆ ಚಾನ್ಸೆಲರ್ ಆಗಿ ಹಾಗೂ ೧೯೩೪ರಿಂದ ೧೯೪೫ರವರೆಗೆ ರಾಷ್ಟ್ರದ ಮುಖ್ಯಸ್ಥನಾಗಿ ಆಡಳಿತ ನಡೆಸಿದನು.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕಾವ್ಯಮೀಮಾಂಸೆ ಎಂದರೆ ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯಪ್ರಭೇದಗಳು, ಕಾವ್ಯಗಳಲ್ಲಿ ಅಲಂಕಾರ, ರೀತಿ, ರಸ, ಧ್ವನಿ ಮೊದಲಾದುವುಗಳ ಸ್ಥಾನ, ಕಾವ್ಯದ ವಸ್ತು ಮತ್ತು ಆತ್ಮಗಳ ಪರಿಶೀಲನ--ಇತ್ಯಾದಿಯಾಗಿ ಕಾವ್ಯವಿದ್ಯೆಗೆ ಸಂಬಂಧಿಸಿದ ವಿಷಯಗಳ ಶಾಸ್ತ್ರೀಯ ನಿರೂಪಣೆ. ಸಂಸ್ಕೃತದಲ್ಲಿ ಕಾವ್ಯಮೀಮಾಂಸೆ ಕ್ರಿಸ್ತಶಕದ ಆರಂಭದ ವೇಳೆಗೆ ಸ್ವತಂತ್ರ ಶಾಸ್ತ್ರವೆನಿಸುತ್ತಿದ್ದುದನ್ನು ರುದ್ರದಾಮನ ಶಿಲಾಲೇಖ, ಪತಂಜಲಿಯ ಮಹಾಭಾಷ್ಯ ಭರತನ ನಾಟ್ಯಶಾಸ್ತ್ರ ಮುಂತಾದವು ಸೂಚಿಸುತ್ತವೆ. ಆದರೆ ಕ್ರಿ.ಶ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಹೃದಯ ಸ್ನಾಯುವಿನ ಊತಕ ಸಾವು (MI ) ಅಥವಾ ತೀವ್ರ ಹೃದಯ ಸ್ನಾಯುವಿನ ಊತಕ ಸಾವು (AMI ) ಎಂದರೆ ಹೃದಯದ ಒಂದು ಭಾಗಕ್ಕೆ ರಕ್ತ ಪೂರೈಕೆಯಲ್ಲಿ ಅಡ್ಡಿಯುಂಟಾಗಿ ಅಲ್ಲಿನ ಹೃದಯದ ಜೀವಕೋಶಗಳು ಸಾಯುವುದು ಎಂದರ್ಥ, ಇದನ್ನು ಸಾಮಾನ್ಯವಾಗಿ ಹೃದಯಾಘಾತ ಎಂದು ಕರೆಯುತ್ತಾರೆ. ಇದಕ್ಕೆ ಮುಖ್ಯ ಕಾರಣ ಸುಲಭವಾಗಿ ಘಾಸಿಗೊಳಗಾಗುವ ಅಪಧಮನಿಯ-ಕಾಠಿಣ್ಯದ ಪ್ಲೇಕ್(ತಂತುಯುಕ್ತವಾದ ಊತಕದ ಶೇಖರಣೆ)ಯ ಛಿದ್ರವಾಗುವುದರಿಂದ ಉಂಟಾಗುವ ಪರಿಧಮನಿಯ ಮುಚ್ಚಿಕೊಳ್ಳುವಿಕೆ (ತಡೆಗಟ್ಟುವಿಕೆ). ಈ ಪ್ಲೇಕ್ ಅಪಧಮನಿಯ ಪೊರೆಯಲ್ಲಿ ಲಿಪಿಡ್ಗಳು (ಕೊಬ್ಬಿನಾಮ್ಲಗಳು) ಮತ್ತು ಬಿಳಿರಕ್ತಕಣಗಳ (ವಿಶೇಷವಾಗಿ ಮ್ಯಾಕ್ರೊಫೇಜ್ಗಳು) ಅಸ್ಥಿರ ಸಂಗ್ರಹವಾಗಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ನ್ಯಾಷನಲ್ ಲೈಬ್ರರಿ ಇಸ್ರೇಲ್ (הספרייה הלאומית - HaSifria HaLeumit - National Library of Israel) ಆಫ್ ಇಸ್ರೇಲ್ ರಾಜ್ಯದ ರಾಷ್ಟ್ರೀಯ ಗ್ರಂಥಾಲಯ. ಇದು ಹೀಬ್ರೂ ವಿಶ್ವವಿದ್ಯಾಲಯದ ಜೆರುಸಲೆಮ್ ರಲ್ಲಿ ಕ್ಯಾಂಪಸ್ ಮೇಲೆ. ನ್ಯಾಷನಲ್ ಲೈಬ್ರರಿ ಆಫ್ ಯಹೂದಿ ವಿಶ್ವದ ಅತಿದೊಡ್ಡ ಸಂಗ್ರಹಣೆಯ ಹೊಂದಿದ್ದಾರೆ, ಮತ್ತು ಅನೇಕ ಅಪರೂಪದ ಮತ್ತು ಅನನ್ಯ ಹಸ್ತಪ್ರತಿಗಳು, ಪುಸ್ತಕಗಳು ಮತ್ತು ಹಸ್ತಕೃತಿಗಳು ಭಂಡಾರ.
ಮೇಧಾ ಪಾಟ್ಕರ್ ಪ್ರಖ್ಯಾತ ಪರಿಸರವಾದಿ.ಡಿಸೆಂಬರ್ ೧,೧೯೫೪ ರಲ್ಲಿ ಜನಿಸಿದ ಇವರು ನರ್ಮದಾ ಬಚಾವ್ ಅಂದೋಳನದ ಮೂಲಕ ಪ್ರಪಂಚದಾದ್ಯಂತ ಪ್ರಸಿದ್ಧರಾದರು.ಸ್ವಾತಂತ್ರ್ಯಯೋಧ ತಂದೆ,ಸಾಮಾಜಿಕ ಕಾರ್ಯಕರ್ತೆ ತಾಯಿಯ ಮಗಳಾದ ಪಾಟ್ಕರ್, ಪರಿಸರ ಹೋರಾಟ,ರೈತ ಚಳುವಳಿಗಳಲ್ಲಿ ಸಕ್ರಿಯವಾಗಿದ್ದಾರೆ.ಇವರ ಈ ಸಾಮಾಜಿಕ ಕಾರ್ಯವನ್ನು ಗುರುತಿಸಿ ಪ್ರಪಂಚದ ಹಲವಾರು ಸಂಘಸಂಸ್ಥೆಗಳು ಪ್ರಶಸ್ತಿಗಳನ್ನಿತ್ತು ಗೌರವಿಸಿವೆ.ಅವುಗಳಲ್ಲಿ ರೈಟ್ ಲೈವ್ಲಿಹುಡ್ ಪ್ರಶಸ್ತಿ,ಗ್ರೀನ್ ರಿಬ್ಬನ್ ಪ್ರಶಸ್ತಿ ಮುಂತಾದವುಗಳು ಪ್ರಮುಖವಾದವುಗಳು. ಮೇಧಾ ಪಾಟ್ಕರ್ ಭಾರತೀಯ ಸಾಮಾಜಿಕ ಕಾರ್ಯಕರ್ತೆ ಹೊಂದಿದೆ (1954 ಡಿಸೆಂಬರ್ 1 ರಂದು ಜನನ) ಮತ್ತು ಸಾಮಾಜಿಕ ಸುಧಾರಕ ರಾಜಕಾರಣಿ ತಿರುಗಿ . ಅವರು ನರ್ಮದಾ ಬಚಾವೊ ಆಂದೋಲನ ಸಂಸ್ಥೆಯ ಸ್ಥಾಪಕ ಸದಸ್ಯರಾಗಿದ್ದು ಮತ್ತು ಪೀಪಲ್ಸ್ ಮೂವ್ಮೆಂಟ್ ನ್ಯಾಷನಲ್ ಅಲಯನ್ಸ್ ( NAPM ) , ಪ್ರಗತಿಪರ ಜನರ ಸಂಘಟನೆಗಳು ಮೈತ್ರಿ ರಾಷ್ಟ್ರೀಯ ಸಂಚಾಲಕ ಆಗಿತ್ತು .
ಡಿಸ್ನಿ+ ಡಿಸ್ನಿ + (ಡಿಸ್ನಿ ಪ್ಲಸ್ ಎಂದು ಉಚ್ಚರಿಸಲಾಗುತ್ತದೆ) ಎಂಬುದು ಅಮೆರಿಕಾದ ಚಂದಾದಾರಿಕೆ ವೀಡಿಯೊವಾಗಿದ್ದು, ದಿ ವಾಲ್ಟ್ ಡಿಸ್ನಿ ಕಂಪನಿಯ ಮಾಧ್ಯಮ ಮತ್ತು ಮನರಂಜನಾ ವಿತರಣಾ ವಿಭಾಗದ ಒಡೆತನದ ಮತ್ತು ನಿರ್ವಹಿಸುತ್ತಿರುವ ಓವರ್-ದಿ-ಟಾಪ್ ಸ್ಟ್ರೀಮಿಂಗ್ ಸೇವೆಯಾಗಿದೆ. ಈ ಸೇವೆಯು ಪ್ರಾಥಮಿಕವಾಗಿ ದಿ ವಾಲ್ಟ್ ಡಿಸ್ನಿ ಸ್ಟುಡಿಯೋಸ್ ಮತ್ತು ವಾಲ್ಟ್ ಡಿಸ್ನಿ ಟೆಲಿವಿಷನ್ ನಿರ್ಮಿಸಿದ ಚಲನಚಿತ್ರಗಳು ಮತ್ತು ದೂರದರ್ಶನ ಸರಣಿಗಳನ್ನು ವಿತರಿಸುತ್ತದೆ, ಯುನೈಟೆಡ್ ಸ್ಟೇಟ್ಸ್ನ ಹೊರಗಿನ ಆಯ್ದ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಡಿಸ್ನಿ, ಪಿಕ್ಸರ್, ಮಾರ್ವೆಲ್, ಸ್ಟಾರ್ ವಾರ್ಸ್, ನ್ಯಾಷನಲ್ ಜಿಯಾಗ್ರಫಿಕ್ ಮತ್ತು ಸ್ಟಾರ್ ಬ್ರಾಂಡ್ಗಾಗಿ ಮೀಸಲಾದ ವಿಷಯ ಹಬ್ಗಳೊಂದಿಗೆ. ಮೂಲ ಚಲನಚಿತ್ರಗಳು ಮತ್ತು ದೂರದರ್ಶನ ಸರಣಿಗಳನ್ನು ಡಿಸ್ನಿ + ನಲ್ಲಿ ವಿತರಿಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜರ್ಮನ್ ಭಾಷೆ ([Deutsch] Error: {{Lang}}: text has italic markup (help), [ಡಾಯ್ಶ್ ) ಪ್ರಪಂಚದ ಪ್ರಮುಖ ಭಾಷೆಗಳಲ್ಲಿ ಒಂದು. ಇಂಡೊ-ಯುರೋಪಿಯನ್ ಭಾಷಾ ಕುಟುಂಬಕ್ಕೆ ಸೇರಿರುವ ಈ ಭಾಷೆಯು ಆಂಗ್ಲ ಭಾಷೆ ಮತ್ತು ಡಚ್ ಭಾಷೆಗಳಿಗೆ ಅತ್ಯಂತ ಸಮೀಪ ಸಂಬಂಧ ಹೊಂದಿದೆ. ವಿಶ್ವಾದ್ಯಂತ, ಸುಮಾರು 120 ದಶಲಕ್ಷ ಜನರು ಜರ್ಮನ್ ಭಾಷೆ ಮಾತನಾಡುವರು, ಅಲ್ಲದೆ 80 ದಶಲಕ್ಷ ಪರಸ್ಥಳೀಯರೂ ಸಹ ಜರ್ಮನ್ ಭಾಷೆ ಮಾತನಾಡಬಲ್ಲರು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಚೈನೀಸ್ : 李安; pinyin: Lǐ Ān; (ಜ:ಅಕ್ಟೋಬರ್ ೨೩,೧೯೫೪) ಸನ್.೨೦೧೨ ರಲ್ಲಿ,ಅಮೆರಿಕದ 'ಲಾಸ್ ಏಂಜಲಿಸ್:' ನ,ಲೈಫ್ ಆಫ್ ಪೈಚಲನಚಿತ್ರಕ್ಕಾಗಿ ನಾಲ್ಕು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ನಿರ್ದೇಶಕ, ಆಂಗ್ ಲೀ ಅವರಿಗೆ ಈಗ ಬಹಳ ಸಂಭ್ರಮ. ಆಸ್ಕರ್ ಪ್ರಶಸ್ತಿ ಸಮಾರಂಭದ ಬಳಿಕ ಲ್ಯೂರ್ನಲ್ಲಿ ನಡೆದ 'ಟೆಂಟ್ವಿಯತ್ ಸೆಂಚುರಿ ಫಾಕ್ಸ್ ಎಂಡ್ ಫಾಕ್ಸ್ ಸರ್ಚ್ಲೈಟ್ ಪಿಕ್ಚರ್ ಅಕಾಡೆಮಿ ಅವಾರ್ಡ್ ನಾಮಿನಿಗಳ ಪಾರ್ಟಿ'ಯಲ್ಲಿ ಆಂಗ್ ಲೀ,ಜೊತೆಗೆ, ಎನಿಮೇಶನ್ ನಿರ್ದೇಶಕ, 'ಎರಿಕ್ ಜಾನ್ ಡಿ ಬೋರ್', ಭಾರತೀಯ ನಟ, ಸೂರಜ್ ಶರ್ಮಾ, ಗೀತರಚನಕಾರ, ಮೈಕೆಲ್ ಡಾನಾ, ಮತ್ತು ಸಿನೆಮಾಟೋಗ್ರಾಫರ್, ಕ್ಲಾಡಿಯೋ ಮಿರಾಂಡಾ,ರವರೂ ಜತೆಗೂಡಿದರು. ಆಸ್ಕರ್ ಪ್ರಶಸ್ತಿ ವಿಜೇತರಿಗೆ ಇತರ ಪ್ರಶಸ್ತಿಗಳೂ ಬೆನ್ನುಹತ್ತಿಬಂದು ಅವರೆಲ್ಲಾ ಅತಿ ಸಂತೋಷಪಡುತ್ತಿದ್ದಾರೆ.