The most-visited ಕನ್ನಡ Wikipedia articles, updated daily. Learn more...
ಭಾರತದಲ್ಲಿ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಸಮಾಜದಲ್ಲಿ ಹುಡುಗಿಯರು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಾರಂಭಿಸಿತು. "ಹೆಣ್ಣು ಮಗುವನ್ನು ಉಳಿಸಿ" ಪ್ರಚಾರ , ಮಕ್ಕಳ ಲಿಂಗ ಅನುಪಾತಗಳು ಮತ್ತು ಹೆಣ್ಣುಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸುವ ಕುರಿತು ಜಾಗೃತಿ ಅಭಿಯಾನಗಳನ್ನು ಒಳಗೊಂಡಂತೆ ಸಂಘಟಿತ ಕಾರ್ಯಕ್ರಮಗಳೊಂದಿಗೆ ದಿನವನ್ನು ಆಚರಿಸಲಾಗುತ್ತದೆ.
ಜಯಂತ ಗೌರೀಶ ಕಾಯ್ಕಿಣಿ(ಜನನ : ೨೪,ಜನವರಿ, ೧೯೫೫) ಕನ್ನಡದ ಸಮಕಾಲೀನ ಕಥೆಗಾರರಲ್ಲಿ ಪ್ರಮುಖರು.ಜಯಂತ್ ಅವರ ಕತೆ-ಕಾವ್ಯಗಳಲ್ಲಿ ಸೂಕ್ಷ್ಮಸಂವೇದನೆ ಬಹುತೇಕ ಕಾಣಸಿಗುವ ವಸ್ತು. ಇಳಿಸಂಜೆಯ ಬಿಸಿಲು, ಬಿಸಿಲುಕೋಲು, ಪಾತರಗಿತ್ತಿ, ಬಣ್ಣ ಅವರ ಬರಹಗಳಲ್ಲಿ ಸಾಮಾನ್ಯವಾಗಿ ಪ್ರತಿಫಲಿಸುತ್ತಲೇ ಇರುತ್ತವೆ. ಮೆದುಮಾತಿನ, ಮೆಲುದನಿಯ ವ್ಯಕ್ತಿತ್ವ ಅವರದು.ಸಾಹಿತ್ಯ ಪ್ರಕಾರಗಳ ಹಲವು ವಿಭಾಗಗಳಲ್ಲಿ, ಕವಿಯಾಗಿ, ಈಟಿವಿ ಕನ್ನಡ ವಾಹಿನಿಯಲ್ಲಿ ಸಂದರ್ಶಕನಾಗಿ, ಸಿನೆಮಾ ಹಾಡುಗಳ ಸಾಹಿತಿ, ಸಂಭಾಷಣೆಗಾರನಾಗಿ, ಅಂಕಣಕಾರನಾಗಿ, ನಾಟಕಕಾರನಾಗಿ, ಕಥೆಗಾರನಾಗಿ ಕನ್ನಡಿಗರ (ಸಾಗರದಾಚೆಗೂ ನೆಲೆ ನಿಂತಿರುವ ಕನ್ನಡಿಗರ) ಅಚ್ಚುಮೆಚ್ಚಿನ ಲೇಖಕರಾಗಿದ್ದಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.