The most-visited ಕನ್ನಡ Wikipedia articles, updated daily. Learn more...
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ನಿಂದೆ ಲೇಖನಕ್ಕಾಗಿ ಇಲ್ಲಿ ನೋಡಿ.ಅಮೇರಿಕದ ಕಾನೂನಿನಲ್ಲಿ, ಆಕ್ಷೇಪಣೆಯು ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಕ್ಷ್ಯಾಧಾರ ನಿಯಮಗಳು ಅಥವಾ ಇತರ ಕಾರ್ಯವಿಧಾನದ ಕಾನೂನನ್ನು ಉಲ್ಲಂಘಿಸಬಹುದಾದ ಒಂದು ಸಾಕ್ಷಿಯ ಪುರಾವೆ ಅಥವಾ ಇತರ ಸಾಕ್ಷ್ಯಾಧಾರವನ್ನು ತಡೆಹಿಡಿಯಲು ಎತ್ತಲಾದ ಒಂದು ಔಪಚಾರಿಕೆ ವಿರೋಧ. ವಿರೋಧಿ ಪಕ್ಷವು ಸಾಕ್ಷಿಗೆ ಒಂದು ಪ್ರಶ್ನೆ ಕೇಳಿದ ನಂತರ, ಆದರೆ ಸಾಕ್ಷಿಯು ಉತ್ತರಿಸುವ ಮೊದಲು, ಅಥವಾ ವಿರೋಧಿ ಪಕ್ಷವು ಸಾಕ್ಷ್ಯಾಧಾರದಲ್ಲಿ ಏನನ್ನಾದರೂ ನಮೂದಿಸುವಷ್ಟರಲ್ಲಿ ಒಂದು ಆಕ್ಷೇಪಣೆಯನ್ನು ಸಾಮಾನ್ಯವಾಗಿ ಎತ್ತಲಾಗುತ್ತದೆ. ಆಗ ನ್ಯಾಯಾಧೀಶನು ಆಕ್ಷೇಪಣೆಯನ್ನು ಎತ್ತಿಹಿಡಿಯಲಾಗಿದೆಯೇ (ನ್ಯಾಯಾಧೀಶನು ಆಕ್ಷೇಪಣೆಯನ್ನು ಒಪ್ಪಿ ಪ್ರಶ್ನೆ, ಪುರಾವೆ, ಅಥವಾ ಸಾಕ್ಷ್ಯಾಧಾರವನ್ನು ತಡೆಹಿಡಿಯುತ್ತಾನೆ) ಅಥವಾ ತಳ್ಳಿಹಾಕಲಾಗಿದೆಯೇ (ನ್ಯಾಯಾಧೀಶನು ಆಕ್ಷೇಪಣೆಯನ್ನು ಒಪ್ಪುವುದಿಲ್ಲ ಮತ್ತು ಪ್ರಶ್ನೆ, ಪುರಾವೆ, ಅಥವಾ ಸಾಕ್ಷ್ಯಾಧಾರಕ್ಕೆ ಅನುಮತಿ ನೀಡುತ್ತಾನೆ) ಎಂದು ನಿರ್ಣಯ ಮಾಡುತ್ತಾನೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಓರ್ವ ಲೇಖಕ ನನ್ನು (ಕೆಲವೊಮ್ಮೆ, ಓರ್ವ ಮಹಿಳಾ ಲೇಖಕರಿಗೆ ಉಲ್ಲೇಖಿಸುವಾಗ, ಲೇಖಕಿ ಯನ್ನು) "ಏನೋ ಒಂದು ಸಂಗತಿಯನ್ನು ಸೃಷ್ಟಿಸುವ ಅಥವಾ ಅದಕ್ಕೆ ಅಸ್ತಿತ್ವವನ್ನು ಕೊಡುವ ವ್ಯಕ್ತಿಯಾಗಿ" ವ್ಯಾಪಕವಾಗಿ ವ್ಯಾಖ್ಯಾನಿಸಲಾಗುತ್ತದೆ ಮತ್ತು ಹೀಗೆ ಸೃಷ್ಟಿಸಲ್ಪಟ್ಟಿದ್ದಕ್ಕೆ ಸಂಬಂಧಿಸಿದ ಹೊಣೆಗಾರಿಕೆಯನ್ನು ಆ ಕರ್ತೃತ್ವ ಅಥವಾ ಬರಹಗಾರಿಕೆಯು ನಿರ್ಣಯಿಸುತ್ತದೆ. ಪರಿಮಿತವಾಗಿ ವ್ಯಾಖ್ಯಾನಿಸಲಾಗುವ ಪ್ರಕಾರ, ಓರ್ವ ಲೇಖಕನು ಬರಹ ರೂಪದ ಯಾವುದೇ ಕೃತಿಯ ಪ್ರವರ್ತಕನಾಗಿರುತ್ತಾನೆ.
ಪೆರಗ್ವೆ, (ಅಧಿಕೃತವಾಗಿ ಪರಾಗ್ವೆ ಗಣರಾಜ್ಯ),ದಕ್ಷಿಣ ಅಮೆರಿಕದ ಸರಿಸುಮಾರು ಮಧ್ಯಭಾಗದಲ್ಲಿರುವ ಒಂದು ರಾಷ್ಟ್ರ. ಪೆರಗ್ವೆ ನದಿಯ ಎರಡೂ ದಂಡೆಗಳ ಮೇಲಿರುವ ಇದು ದಕ್ಷಿಣ ಮತ್ತು ನೈರುತ್ಯಗಳಲ್ಲಿ ಅರ್ಜೆಂಟೀನವನ್ನು, ಈಶಾನ್ಯದಲ್ಲಿ ಬ್ರೆಜಿಲ್ ದೇಶವನ್ನು ಮತ್ತು ವಾಯವ್ಯದಲ್ಲಿ ಬೊಲಿವಿಯ ದೇಶಗಳನ್ನು ಹೊಂದಿ ದಕ್ಷಿಣ ಅಮೆರಿಕ ಖಂಡದ ಹೃದಯ ಭಾಗದಲ್ಲಿದೆ. ಗ್ವರಾನಿ ಭಾಷೆಯಲ್ಲಿ ಇದರ ಅರ್ಥ "ದೊಡ್ಡ ನದಿಯಿಂದ" ಎಂದು.
ಬಂಗಾಳಿ ವಿಕಿಪೀಡಿಯ ಅಥವಾ ಬಾಂಗ್ಲಾ ವಿಕಿಪೀಡಿಯ (ಬಂಗಾಳಿ : বাংলা উইকিপিডিয়া) ಉಚಿತ ಆನ್ಲೈನ್ ವಿಶ್ವಕೋಶವಾದ ವಿಕಿಪೀಡಿಯದ ಬಂಗಾಳಿ ಭಾಷಾ ಆವೃತ್ತಿಯಾಗಿದೆ. ಜನವರಿ 27, 2004 ರಂದು ಪ್ರಾರಂಭವಾದ ಇದು ಅಕ್ಟೋಬರ್ 2006 ರಲ್ಲಿ 10,000 ಲೇಖನಗಳನ್ನು ಮೀರಿದೆ, ಹಾಗೆ ಮಾಡಿದ ದಕ್ಷಿಣ ಏಷ್ಯಾದ ಎರಡನೇ ಭಾಷೆಯಾಗಿದೆ. ೧೬ ಫೆಬ್ರವರಿ ೨೦೨೩, ಒಟ್ಟು ಲೇಖನವು ತಿಂಗಳಿಗೆ 1,348 ಸಕ್ರಿಯ ಸಂಪಾದಕರೊಂದಿಗೆ 90,419 ಲೇಖನಗಳನ್ನು ದಾಟಿದೆ ಮತ್ತು ವಿಕಿಪೀಡಿಯಗಳಲ್ಲಿ ಆಳದ ದೃಷ್ಟಿಯಿಂದ 4 ನೇ ಸ್ಥಾನದಲ್ಲಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಹಾರ್ವರ್ಡ್ ವಿಶ್ವವಿದ್ಯಾನಿಲಯ' (ಅಧಿಕೃತವಾಗಿ ದಿ ಪ್ರೆಸಿಡೆಂಟ್ ಅಂಡ್ ಫೆಲೋಸ್ ಆಫ್ ಹಾರ್ವರ್ಡ್ ಕಾಲೇಜ್ ) ಎಂಬುದು ಕೇಂಬ್ರಿಡ್ಜ್, ಮಸಾಚ್ಯೂಸೆಟ್ಸ್' ನಲ್ಲಿ ನೆಲೆಯಾಗಿರುವ ಒಂದು ಖಾಸಗಿ ವಿಶ್ವವಿದ್ಯಾಲಯ, ಜೊತೆಗೆ ಇದು ಐವಿ ಲೀಗ್ ನ ಸದಸ್ಯ. ಮಸಾಚ್ಯೂಸೆಟ್ಸ್ ವಸಾಹತು ಶಾಸನ ಸಭೆಯಿಂದ 1636ರಲ್ಲಿ ಸ್ಥಾಪನೆಗೊಂಡ ಹಾರ್ವರ್ಡ್ ಅಮೆರಿಕ ಸಂಯುಕ್ತ ಸಂಸ್ಥಾನದ ಮೊದಲ ಕಾರ್ಪೋರೇಶನ್ ಆಗಿರುವುದರ ಜೊತೆಗೆ ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಉನ್ನತ ಶಿಕ್ಷಣಕ್ಕಿರುವ ಅತ್ಯಂತ ಹಳೆಯ ಸಂಸ್ಥೆಯಾಗಿದೆ.ವಿಶ್ವವಿದ್ಯಾಲಯವು ಪ್ರಸಕ್ತ ಹತ್ತು ಪ್ರತ್ಯೇಕ ಶೈಕ್ಷಣಿಕ ಘಟಕಗಳನ್ನು ಒಳಗೊಂಡಿದೆ. ಹಾರ್ವರ್ಡ್ ವಿಶ್ವದಲ್ಲಿ ಯಾವುದೇ ಶಿಕ್ಷಣ ಸಂಸ್ಥೆಗಿಂತ ಅತ್ಯಂತ ಹೇರಳವಾಗಿ ಹಣಕಾಸಿನ ದತ್ತಿಯನ್ನು ಹೊಂದಿದೆ.
ಒಂದು ಪುಸ್ತಕ, ಮ್ಯಾಗಜ಼ೀನ್, ಸುದ್ದಿಪತ್ರಿಕೆ, ಅಥವಾ ಹಾಳೆಗಳ ಇತರ ಸಂಗ್ರಹದಲ್ಲಿ, ಪುಟವು ಕಾಗದ, ಚರ್ಮದ ಕಾಗದ ಅಥವಾ ಇತರ ವಸ್ತುವಿನ (ಅಥವಾ ವಿದ್ಯುನ್ಮಾನ ಮಾಧ್ಯಮ) ಹಾಳೆಯ ಒಂದು ಬದಿಯಾಗಿರುತ್ತದೆ. ದಸ್ತಾವೇಜನ್ನು ಸೃಷ್ಟಿಸಲು ಇದರ ಮೇಲೆ ಪಠ್ಯ ಅಥವಾ ಚಿತ್ರಗಳನ್ನು ಮುದ್ರಿಸಬಹುದು, ಬರೆಯಬಹುದು ಅಥವಾ ಬಿಡಿಸಬಹುದು. ಇದನ್ನು ಮಾಹಿತಿಯ ಸಾಮಾನ್ಯ ಪ್ರಮಾಣವನ್ನು ("ಆ ವಿಷಯವು ಹನ್ನೆರಡು ಪುಟಗಳನ್ನು ಒಳಗೊಳ್ಳುತ್ತದೆ") ಅಥವಾ ಹೆಚ್ಚು ನಿರ್ದಿಷ್ಟ ಪ್ರಮಾಣವನ್ನು (ಒಂದು ಸಾಮಾನ್ಯ ಪುಟದಲ್ಲಿ ಹನ್ನೆರಡು ಬಿಂದು ಫ಼ಾಂಟ್ ಪ್ರಕಾರದಲ್ಲಿ ೫೩೫ ಶಬ್ದಗಳಿವೆ) ತಿಳಿಸುವ ಅಳತೆಯಾಗಿ ಬಳಸಬಹುದು.
ಮಫ್ತಿ ೨೦೧೭ರ ಕನ್ನಡ ಭಾಷೆಯ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರ. ನಾರ್ಥನ್ ರವರು ನಿರ್ದೇಶಿರುವ ಮೊದಲ ಚಿತ್ರ ಇದಾಗಿದೆ, ಜಯಣ್ಣ ಕಂಬೈನ್ಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರವು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿರುವ ಶ್ರೀಮುರುಳಿಯು ಭೂಗತ ದೊರೆ ಪಾತ್ರದಲ್ಲಿ ನಟಿಸಿರುವ ಶಿವರಾಜಕುಮಾರ್ ಅವರನ್ನು ಹುಡುಕಿಕೊಂಡು ಹೋಗುವ ಕಥೆಯಾಗಿದೆ.ಜುಲೈ ೨೦೧೬ ರಲ್ಲಿ ಚಿತ್ರದ ನಿರ್ಮಾಣ ಪ್ರಾರಂಭವಾಯಿತು ಮತ್ತು ೧ ಡಿಸೆಂಬರ್ ೨೦೧೭ ರಂದು ಚಿತ್ರ ಬಿಡುಗಡೆಯಾಯಿತು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜೆಸ್ವಿಟರು ಎಂಬುವವರು ಕ್ರೈಸ್ತ ಕಥೋಲಿಕ ಧರ್ಮಕ್ಕೆ ಸೇರಿದ ಒಂದು ಪುರುಷ ಧಾರ್ಮಿಕ ಪ್ರಾರ್ಥನಾ ಗುಂಪಾಗಿದೆ.ಈ ಗುಂಪಿಗೆ ಯೇಸುವಿನ ಸೊಸೈಟಿ ಎಂದು ಸಹ ಕರೆಯಲಾಗುತ್ತದೆ. (ಲ್ಯಾಟಿನ್: ಸೊಸೈಟಸ್ Iesu, ಎಸ್ಜೆ, ಎಸ್ಜೆ ಅಥವಾ ಎಸ್ ಜೆ).ಜೆಸ್ವಿತ್ ಸದಸ್ಯರನ್ನು ಜೆಸ್ವಿಟರು ಎಂದು ಕರೆಯಲಾಗುತ್ತದೆ. ಜೆಸ್ವಿಟರು ಸಮಾಜದ ಆರು ಖಂಡಗಳಲ್ಲಿ 112 ರಾಷ್ಟ್ರಗಳಲ್ಲಿ ಸುವಾರ್ತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
'ಗುಣ ಸಾಗರಿ" ಚಿತ್ರದ ಯಶಸ್ಸಿನಿಂದ ಪುಳಕಿತಗೊಂಡ ಗುಬ್ಬಿವೀರಣ್ಣ (ಕರ್ನಾಟಕ ಗುಬ್ಬಿ ಫಿಲಂಸ್) 'ಬೇಡರ ಕಣ್ಣಪ್ಪ" ಚಿತ್ರ ತಯಾರಿಕೆಗೆ ಅಣಿಯಾಗುತ್ತಿದ್ದರು. ಚಿತ್ರದ ನಾಯಕ 'ಕಣ್ಣಪ್ಪ"ನ ಪಾತ್ರಕ್ಕೆ ಭಕ್ತಿ-ವಿನಯದ, ಗಟ್ಟಿ-ಮುಟ್ಟಾದ, ಸ್ಪುರದ್ರೂಪಿ ಯುವಕನನ್ನು ಹುಡುಕಿಕೊಡಲು ಸಿಂಹರಿಗೆ ಹೇಳಿದ್ದರಂತೆ. ಪಾತ್ರಧಾರಿಯ ಹುಡುಕಾಟದಲ್ಲಿದ್ದ ಸಿಂಹ ಅವರಿಗೆ ಬಸ್ಸಲ್ಲಿ ಸಿಕ್ಕ ರಾಜ್ ಮೇಲೆ ಮನಸ್ಸು ಹರಿಯಿತು.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
Wii (ウィー, pronounced /ˈwiː/, like the pronoun we)ವೈ ನಿಂಟೆಂಡೊ ಮೂಲಕ ನವೆಂಬರ್ 19, 2006ರಲ್ಲಿ ಬಿಡುಗಡೆಯಾದ ಮನೆಮಂದಿಯೆಲ್ಲ ಆಡಬಹುದಾದ ವಿಡಿಯೋ ಗೆಮ್ ಆಗಿದೆ. ಏಳನೆ ಪೀಳಿಗೆಯ ಕನ್ಸೊಲ್ ಆಗಿ, ವೈ ಪ್ರಾಥಮಿಕವಾಗಿ ಮೈಕ್ರೊಸಾಫ್ಟ್ನ Xbox 360 ಮತ್ತು ಸೋನಿಯ ಪ್ಲೇಸ್ಟೇಷನ್ 3ಯೊಂದಿಗೆ ಸ್ಪರ್ಧಿಸುತ್ತದೆ. ನಿಂಟೆಂಡೊ ಹೀಗೆ ಹೇಳಿಕೆ ನೀಡಿದ್ದಾರೆ ಅದರ ಕನ್ಸೊಲ್ ಇತರೆ ಎರಡಕ್ಕಿಂತ ಒಂದು ವಿಸ್ತಾರವಾದ ಜನಸಂಖ್ಯೆಯನ್ನು ಗುರಿಯಾಗಿಸಿದೆ.