The most-visited ಕನ್ನಡ Wikipedia articles, updated daily. Learn more...
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳ ನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
೧೯೭೦ : ಭಾರತೀಯ ವಿಜ್ಞಾನಿ ಸರ್ ಚಂದ್ರಶೇಖರ ವೆಂಕಟ ರಾಮನ್ ರವರು ಸಣ್ಣ ಕಣದ ಮೂಲಕ ಬೆಳಕನ್ನು ಹಾಯಿಸಿದಾಗ ಅದರಲ್ಲಿ ಉಂಟಾಗುವ ವ್ಯತ್ಯಾಸವನ್ನು (ಚದುರುವಿಕೆ) ಕಂಡು ಹಿಡಿದರು. ಬೆಳಕಿನ ವರ್ತನೆ ಬಗ್ಗೆ ನಡೆಸಿದ ಸಂಶೋಧನೆಗಾಗಿ ೧೯೩೦ ರಲ್ಲಿ ಅವರು ಭೌತ ವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದರು.ನೊಬೆಲ್ ಪಾರಿತೋಷಕಕ್ಕೆ ಭಾಜನರಾದ ಪ್ರಪ್ರಥಮ ಭಾರತೀಯ ವಿಜ್ಞಾನಿ ರಾಮನ್ ಅವರ ಈ ಸಂಶೋಧನೆ `ರಾಮನ್ ಎಫೆಕ್ಟ್' ಎಂದೇ ಖ್ಯಾತಿ ಪಡೆದಿದೆ. ೧೯೮೭ ರಲ್ಲಿ, 'ರಾಮನ್ ಅವರ ಶತಮಾನೋತ್ಸವದ ಸಂದರ್ಭ'ದಲ್ಲಿ ಕೃತಜ್ಞತೆಯಿಂದ ಕೂಡಿದ ಭಾರತ, ಫೆಬ್ರುವರಿ, ೨೮ ನ್ನು 'ರಾಷ್ಟ್ರೀಯ ವಿಜ್ಞಾನ ದಿನ'ವೆಂದು ಘೋಷಿಸಿ, ಆ ದಿನವನ್ನು `ರಾಷ್ಟ್ರೀಯ ವಿಜ್ಞಾನ ದಿನ' ವಾಗಿ ಆಚರಿಸಲಾಗುತ್ತಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಯ್ಯಪ್ಪನನ್ನು ಧರ್ಮಶಾಸ್ತಾ ಮತ್ತು ಮಣಿಕಂಠ ಎಂದೂ ಕರೆಯುತ್ತಾರೆ, ದಕ್ಷಿಣ ಭಾರತದಲ್ಲಿ ಜನಪ್ರಿಯವಾಗಿರುವ ಹಿಂದೂ ದೇವತೆ, ಅವನನ್ನು ಸಾಕಾರವಾಗಿ ಪರಿಗಣಿಸಲಾಗಿದೆ. ಧರ್ಮ, ಸತ್ಯ ಮತ್ತು ಸದಾಚಾರ ಮತ್ತು ಕೆಟ್ಟದ್ದನ್ನು ತೊಡೆದುಹಾಕಲು ಆಗಾಗ್ಗೆ ಕರೆಯುತ್ತಾರೆ. ಅಯ್ಯಪ್ಪನ ಮೇಲಿನ ಭಕ್ತಿಯು ದಕ್ಷಿಣ ಭಾರತದಲ್ಲಿ ಮೊದಲು ಪ್ರಚಲಿತದಲ್ಲಿದ್ದರೂ, ಅವನ ಜನಪ್ರಿಯತೆಯು ೨೦ ನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರ ಹೆಚ್ಚಾಯಿತು.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮಹಾವಿಷ್ಣು ವಿಷ್ಣುವಿನ ಒಂದು ಅಂಶ, ಮಾನವ ಗ್ರಹಿಕೆಗೆ ಮೀರಿದ ಮತ್ತು ಎಲ್ಲ ಗುಣಲಕ್ಷಣಗಳನ್ನು ಮೀರಿದ ಪರಮ ರೂಪ. ವೈಷ್ಣವ ಪಂಥದ ಒಂದು ಪರಂಪರೆಯಾದ ಗೌಡೀಯ ವೈಷ್ಣವ ಪಂಥದಲ್ಲಿ, ಸಾತ್ವತ ತಂತ್ರವು ವಿಷ್ಣುವಿನ ಮೂರು ಭಿನ್ನ ರೂಪಗಳನ್ನು ವಿವರಿಸುತ್ತದೆ: ಮಹಾವಿಷ್ಣು, ಗರ್ಭೋದಕಷಾಯಿ ವಿಷ್ಣು ಮತ್ತು ಕ್ಷೀರೋದಕಷಾಯಿ ವಿಷ್ಣು. ಮಹಾವಿಷ್ಣು ಪದವು ಬ್ರಹ್ಮನ್ ಪದವನ್ನು ಹೋಲುತ್ತದೆ, ಮತ್ತು ದೇವರ ಪರಮೋಚ್ಚ ವ್ಯಕ್ತಿತ್ವವಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
(ಸೂಚನೆ : ನಮ್ಮ ನುಡಿಯಲ್ಲಿ ಜ್ವಾಲಾಮುಖಿ ಮತ್ತು ಅಗ್ನಿಪರ್ವತ ಈ ಎರಡೂ ಪದಗಳು ಸಮಾನಾರ್ಥಕವಾಗಿ ಬಳಸಲ್ಪಡುತ್ತವೆ. ಈ ಲೇಖನದಲ್ಲಿ ಎರಡೂ ಪದಗಳನ್ನು ಬಳಸಲಾಗಿದೆ) ಉರಿಬೆಟ್ಟ (ಜ್ವಾಲಾಮುಖಿ) ಭೂಮಿಯ ಮೇಲ್ಮೈ ಅಥವಾ ಚಿಪ್ಪಿನಲ್ಲಿರುವ ಒಂದು ಬಿರುಕು. ಇಂತಹ ಬಿರುಕಿನ ಮೂಲಕ ಭೂಗರ್ಭದಿಂದ ಕುದಿಯುವ ದ್ರವರೂಪದಲ್ಲಿನ ಕಲ್ಲುಗಳು, ಬೂದಿ ಮತ್ತು ಇತರ ಅನಿಲಗಳು ಹೊರಗೆ ಚಿಮ್ಮುತ್ತವೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕರ್ಮಧಾರಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:- (i) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶ ಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸರ್ ಐಸಾಕ್ ನ್ಯೂಟನ್ FRS (4 ಜನವರಿ 1643– 31 ಮಾರ್ಚ್ 1727 [OS: 25 ಡಿಸೆಂಬರ್ 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ , ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಲ ಚಕ್ರ ಅಥವಾ ಜಲವಿಜ್ಙಾನ ಚಕ್ರ ದ ಪರಿಕಲ್ಪನೆಯು ಭೂಮಿಯಲ್ಲಿರುವ ನೀರಿನ ಸಂಪತ್ತು, ಭೂ ಮೇಲ್ ಮೈಯ ಹೊರಗೆ (ವಾತಾವರಣದಲ್ಲಿ) ಮತ್ತು ಒಳಗೆ (ನೆಲದ ಕೆಳಗೆ) ಹಂತ ಹಂತವಾಗಿ ನಿರಂತರವಾಗಿ ನಡೆಯುವ ನೀರಿನ ಚಕ್ರೀಯ ಪರಿಚಲನೆಯನ್ನು ವಿವರಿಸುತ್ತದೆ. ಭೂಮಿಯ ಮೇಲೆ ಲಭ್ಯವಿರುವ ಒಟ್ಟು ನೀರಿನ ಪ್ರಮಾಣವು ಹೆಚ್ಚುಕಡಿಮೆ ನಿರ್ದಿಷ್ಟವಾಗಿದ್ದರೂ, ಜಲಚಕ್ರದ ವಿವಿಧ ಹಂತಗಳಲ್ಲಿ ಚಲಿಸುವ ನೀರು ವಿವಿಧ ಪ್ರಮಾಣಗಳಲ್ಲಿ ದ್ರವ, ಅನಿಲ ಅಥವಾ ಘನ (ಹಿಮ) ಸ್ಥಿತಿಗಳಿಗೆ, ಹಾಗೆಯೇ, ಸಿಹಿನೀರು, ಉಪ್ಪುನೀರು, ಹಿಮದಲ್ಲಿ ಅಡಕವಾದ ನೀರು, ವಾತಾವರಣದ ನೀರು ಇತ್ಯಾದಿ ವಿಭಿನ್ನ ರೂಪ-ಸ್ಥಿತಿಗಳಿಗೆ ಬದಲಾವಣೆಯಾಗಬಹುದು. ಜಲಚಕ್ರದ ನೀರು ಒಂದು ಜಲಸಂಗ್ರಹದಿಂದ ಇನ್ನೊಂದಕ್ಕೆ ಅಂದರೆ ನದಿಗಳಿಂದ ಸಮುದ್ರಕ್ಕೆ , ಸಮುದ್ರದಿಂದ ವಾತಾವರಣಕ್ಕೆ ವಾತಾವರಣದಿಂದ ಮತ್ತೆ ಭೂಮಿಗೆ ಚಲಿಸಲು, ಸಹಕರಿಸುವ ಭೌತಿಕ ಪ್ರಕ್ರಿಯೆಗಳೆಂದರೆ ಬಾಷ್ಪೀಕರಣ (evapotranspiration), ಸಾಂದ್ರೀಕರಣ(condensation), ವರ್ಷಾವತರಣ(precipitation), ಒಳಸೋಸುವಿಕೆ(infiltration), ಮೇಲಿನ ಹರಿವು(surface flow) ಮತ್ತು ನೆಲದಡಿಯ ಹರಿವು(subsurface flow).