The most-visited ಕನ್ನಡ Wikipedia articles, updated daily. Learn more...
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕ್ರಿಸ್ಟಿಯಾನೋ ರೊನಾಲ್ಡೊ ಡಾಸ್ಸ್ಯಾಂಟೋಸ್ ಅವೇರೊ (ಜನನ ೦೫ ಫೆಬ್ರವರಿ ೧೯೮೫) ಒಬ್ಬ ಫ್ರಸಿದ್ದ ಪೋರ್ಚುಗೀಸ್ ಫುಟ್ಬಾಲ್ ಆಟಗಾರ. ಸ್ಪ್ಯಾನಿಷ್ ಲೀಗಿನ ರಿಯಲ್ ಮ್ಯಾಡ್ರಿಡ್ ಮತ್ತು ಪೋರ್ಚುಗಲ್ ಲಿನ ರಾಷ್ಟ್ರೀಯತಂಡಕ್ಕೆ ಆಟವಾಡುತ್ತಾನೆ. ಅವರು ಫಾರ್ವಡ್ ಮತ್ತು ಪೋರ್ಚುಗಲಿನ ನಾಯಕನನ್ನಾಗಿ ಕಾರ್ಯನಿರ್ವಹಿಸುತ್ತದೆ.೨೦೦೮ ರಲ್ಲಿ, ತನ್ನ ಮೊದಲ ಬ್ಯಾಲನ್ ಡಿ'ಓರ್ ಮತ್ತು ವರ್ಷದ ಅತ್ಯತ್ತಮ ಫಿಫಾ ವಿಶ್ವ ಆಟಗಾರ ಪ್ರಶಸ್ತಿ ದೊರಕಿದ .ನಂತರ ೨೦೧೩ ಮತ್ತು ೨೦೧೪ ರಲ್ಲಿ ಫಿಫಾ ಬ್ಯಾಲನ್ ಡಿ'ಓರ್ ಸಾಧಿಸಿದೆ.೨೦೧೫ ರಲ್ಲಿ ರೊನಾಲ್ಡೊ ಕ್ಲಬ್ ಮತ್ತು ದೇಶಕ್ಕೆ ತನ್ನ 500 ನೇ ಗೋಲನ್ನು ಒಡೆದ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಮಾನವ ಯಾವುದನ್ನು ಪವಿತ್ರ ಭಾವನೆಯಿಂದ ನೋಡುವನೋ ಅದರೊಡನೆ ಇರಿಸಿಕೊಳ್ಳುವ ಸಂಬಂಧವೇ ಧರ್ಮವೆಂಬ (ರಿಲಿಜನ್) ಶಬ್ದದ ವಿಶಾಲಾರ್ಥ. ಪವಿತ್ರವೆನಿಸತಕ್ಕುದು ಅತಿಮಾನುಷವೇ ಇರಬೇಕೆಂಬ ನಿಯಮವಿಲ್ಲ; ಮಾನವಾಕೃತಿಯಲ್ಲಿಯೇ ಇರಬೇಕೆಂದೂ ಇಲ್ಲ; ವೈಯಕ್ತಿಕ ಭಾವನೆ ಮಾತ್ರವೆಂದೂ ಅದರರ್ಥವಲ್ಲ. ದೇವರು ಎಂಬ ಶಬ್ದವನ್ನು ವೈಯಕ್ತಿಕ ಇಲ್ಲವೆ ಅತಿಮಾನುಷವೆಂಬ ಅಭಿಪ್ರಾಯದಲ್ಲಿ ಬಳಸುವುದಾದರೆ, ಅಂಥ ದೇವತಾಸ್ವರೂಪಗಳೊಡನೆ ಮಾನವನ ಸಂಬಂಧ ಧರ್ಮವೆನಿಸುವಂತೆ, ಅಂಥವುಗಳಲ್ಲದ ಪವಿತ್ರ ವಸ್ತುಗಳೊಂದಿಗೆ ಅವನ ಸಂಬಂಧಕ್ಕೂ ಅನ್ವಯಿಸುವಷ್ಟು ಅದು ವಿಶಾಲವಾಗಿದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ರಾಜಕಾರಣಿಯು ಪಕ್ಷ ರಾಜಕೀಯದಲ್ಲಿ ಸಕ್ರಿಯವಾಗಿರುವ ವ್ಯಕ್ತಿ, ಅಥವಾ ಸರ್ಕಾರದಲ್ಲಿ ಹುದ್ದೆಯನ್ನು ಹೊಂದಿರುವ ಅಥವಾ ಅರಸುತ್ತಿರುವ ವ್ಯಕ್ತಿ. ರಾಜಕಾರಣಿಗಳು ಆ ನಾಡಿನಲ್ಲಿ, ಮತ್ತು, ಪರಿಣಾಮವಾಗಿ ಜನರ ಮೇಲೆ ಜಾರಿಗೊಳ್ಳುವ ಕಾನೂನುಗಳನ್ನು ಪ್ರಸ್ತಾಪಿಸಿ, ಬೆಂಬಲಿಸಿ ಸೃಷ್ಟಿಸುತ್ತಾರೆ. ಸ್ಥೂಲವಾಗಿ ಹೇಳುವುದಾದರೆ, "ರಾಜಕಾರಣಿ"ಯು ಯಾವುದೇ ಅಧಿಕಾರಶಾಹಿ ಸಂಸ್ಥೆಯಲ್ಲಿ ರಾಜಕೀಯ ಅಧಿಕಾರವನ್ನು ಸಾಧಿಸಲು ಪ್ರಯತ್ನಿಸುವ ಯಾರಾದರೂ ಆಗಿರಬಹುದು.
ಸಾಂದ್ರತೆ ಎಂದರೆ ವಸ್ತುವಿನ ಏಕಮಾನ ಗಾತ್ರದಲ್ಲಿರುವ ದ್ರವ್ಯರಾಶಿಯ ಅಳತೆ. ಗಾತ್ರ V, ರಾಶಿ m, ಸಾಂದ್ರತೆ D ಆದಲ್ಲಿ D = m / V {\displaystyle D=m/V} .ಒಂದು ಘನಮೀಟರ್ನಲ್ಲಿ ಇಂತಿಷ್ಟು ಕಿ.ಗ್ರಾಂ (Kg/m2) ಅಥವಾ ಒಂದು ಘನ ಸೆಂಟಿಮೀಟರ್ನಲ್ಲಿ ಇಂತಿಷ್ಟು ಗ್ರಾಮ್ (g/cm2)ಎಂದು ಅಳೆಯಲಾಗುತ್ತದೆ. ವಸ್ತುವಿನ ಸಾಂದ್ರತೆ, ಅಥವಾ ಹೆಚ್ಚು ನಿಖರವಾಗಿ, ವಾಲ್ಯೂಮೆಟ್ರಿಕ್ ದ್ರವ್ಯರಾಶಿ ಸಾಂದ್ರತೆಯು ಪ್ರತಿ ಯುನಿಟ್ ಪರಿಮಾಣಕ್ಕೆ ಅದರ ದ್ರವ್ಯರಾಶಿಯಾಗಿದೆ.
ಪರಿಷತ್ತು (ಮಂಡಳಿ) ಸಮಾಲೋಚಿಸಲು, ಪರ್ಯಾಲೋಚಿಸಲು ಅಥವಾ ತೀರ್ಮಾನಗಳನ್ನು ಮಾಡಲು ಒಟ್ಟಿಗೆ ಬರುವ ಜನರ ಗುಂಪು. ಪರಿಷತ್ತು ಶಾಸಕಾಂಗವಾಗಿ ಕಾರ್ಯನಿರ್ವಹಿಸಬಹುದು, ವಿಶೇಷವಾಗಿ ಪಟ್ಟಣ, ನಗರ, ಕೌಂಟಿ/ಶಾಯರ್ನ ಸ್ತರದಲ್ಲಿ, ಆದರೆ ಬಹುತೇಕ ರಾಜ್ಯ/ಪ್ರಾಂತೀಯ ಅಥವಾ ರಾಷ್ಟ್ರ ಮಟ್ಟದಲ್ಲಿನ ಶಾಸನ ಮಂಡಲಗಳನ್ನು ಪರಿಷತ್ತುಗಳೆಂದು ಪರಿಗಣಿಸಲಾಗುವುದಿಲ್ಲ. ಅಂತಹ ಸ್ತರಗಳಲ್ಲಿ, ಯಾವುದೇ ಪ್ರತ್ಯೇಕ ಕಾರ್ಯಾಂಗ ಶಾಖೆಗಳಿರದಿರಬಹುದು, ಮತ್ತು ಪರಿಷತ್ತು ಕಾರ್ಯಕಾರಿಯಾಗಿ ಸಂಪೂರ್ಣ ಸರಕಾರವನ್ನು ಪ್ರತಿನಿಧಿಸಬಹುದು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಬಲಾತ್ಕಾರದ ಸಂಭೋಗವು (ಅತ್ಯಾಚಾರ) ಒಂದು ಬಗೆಯ ಲೈಂಗಿಕ ಅಪರಾಧವಾಗಿದೆ. ಇದರಲ್ಲಿ ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ಮೇಲೆ ಅವನ/ಅವಳ ಸಮ್ಮತಿಯಿಲ್ಲದೆಯೇ ಸಂಭೋಗ ಅಥವಾ ಇತರ ರೂಪದ ಲೈಂಗಿಕ ಪ್ರವೇಶವನ್ನು ಎಸಗಲಾಗುತ್ತದೆ. ಈ ಕ್ರಿಯೆಯನ್ನು ಶಾರೀರಿಕ ಬಲ, ಬಲಾತ್ಕಾರ, ಅಧಿಕಾರದ ದುರುಪಯೋಗದಿಂದ ನಡೆಸಬಹುದು, ಅಥವಾ ಸಕ್ರಮ ಸಮ್ಮತಿಯನ್ನು ನೀಡಲು ಅಸಮರ್ಥವಾಗಿರುವ ವ್ಯಕ್ತಿಯ (ಉದಾಹರಣೆಗೆ ಪ್ರಜ್ಞೆ ತಪ್ಪಿದ, ಅಶಕ್ತನಾಗಿಸಿದ, ಬೌದ್ಧಿಕ ಅಶಕ್ತತೆಯಿರುವ, ಸಮ್ಮತಿಯ ವಯಸ್ಸಿಗಿಂತ ಕಡಿಮೆ ವಯಸ್ಸಿನ ವ್ಯಕ್ತಿ) ವಿರುದ್ಧ ನಡೆಸಬಹುದು.ಅತ್ಯಾಚಾರದ ವರದಿ ಒಪ್ಪಿಸುವ, ಅದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮತ್ತು ಶಿಕ್ಷೆ ನೀಡುವ ಪ್ರಮಾಣ ಕಾನೂನುವ್ಯಾಪ್ತಿಗಳ ನಡುವೆ ಬದಲಾಗುತ್ತದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕರ್ನಾಟಕದ ಸಂಸ್ಕೃತಿ : ‘ಸಂಸ್ಕೃತಿ’ ಎಂಬ ಶಬ್ದದ ಅರ್ಥ ಬಹು ವ್ಯಾಪಕವಾಗಿ ಬೆಳೆಯುತ್ತ ಬಂದಿದೆ; ಹೊಸ ಹೊಸ ಅರ್ಥಗಳನ್ನು ಒಳಗೊಂಡಿದೆ. ಸಮಷ್ಟಿ ಜೀವನದ ಅಂತರಂಗದ ಸಾಧನೆಗೆ ಸಹಕಾರಿಯಾದ ಸಾಮಗ್ರಿಗಳಿಂದ ಹಿಡಿದು, ವ್ಯಷ್ಟಿ ಜೀವನದ ವಿಕಾಸಕ್ಕೆ ಕಾರಣವಾದ ಸಂಸ್ಕಾರದವರೆಗೆ ಈ ಪದದ ಅರ್ಥ ಬೆಳೆದಿದೆ. ವ್ಯಕ್ತಿಯ ವಿಕಾಸಕ್ಕೆ ಕಾರಣವಾಗುವ ಸಾಮಾಜಿಕ ಪರಿಕರಗಳು ಸಹ ಸಂಸ್ಕೃತಿಯಲ್ಲಿಯೇ ಸಮಾವೇಶಗೊಳ್ಳುತ್ತವೆ.