The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.ಭೂಮಿಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ 'ಮಾರ್ಸ್'(Mars) ಎಂದು ಕರೆಯುತ್ತಾರೆ.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಚಿಪ್ಪಿನ ಆಕಾರ ಹೊಂದಿರುವ ಆಮೆಗಳು ಸರೀಸೃಪ ಜಾತಿಗೆ ಸೇರಿದವು. (ಇವುಗಳಲ್ಲಿ ಮೇಲು ವರ್ಗದ ದೊಡ್ಡ ಗಾತ್ರದ ಗುಂಪಿಗೆ ಸೇರಿದ್ದು ಚಿಪ್ಪಿರುವ ಪ್ರಾಣಿ -ಕೆಲೋನಿಯಾ-) ವಿಶೇಷ ಎಲುಬು ಅಥವಾ ಮೃದುವಾದ ಎಲುಬಿನ ಚಿಪ್ಪು ಅವುಗಳ ಪಕ್ಕೆಲಬುಗಳಿಂದ ಬೆಳವಣಿಗೆ ಹೊಂದಿ ಅವು ಕವಚದ ಆಕಾರದಲ್ಲಿ ಕಾರ್ಯನಿರ್ವಹಿಸುತ್ತವೆ. "ಆಮೆ"ಗಳನ್ನು ಇಡಿಯಾಗಿ ಚಿಪ್ಪಿರುವ ಪ್ರಾಣಿವರ್ಗಕ್ಕೆ ಸೇರಿಸಬಹುದು ಅಥವಾ ಒಂದೇ ಸ್ವಭಾವ ಇರುವ ಚಿಪ್ಪಿರುವ ಪ್ರಾಣಿಗಳ ವರ್ಗಕ್ಕೂ ಸೇರಿಸಬಹುದು - ಸಮುದ್ರ ಆಮೆ, ಸಿಹಿ ನೀರಿನ ಆಮೆ, ಕೂರ್ಮ ಮತ್ತು ಕೆಳಗಿನ ಚರ್ಚೆಯನ್ನೂ ನೋಡಿ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ವಜಾಗೊಳಿಸುವಿಕೆ ಎಂದರೆ ಉದ್ಯೋಗದಾತನು ಉದ್ಯೋಗಿಯ ಇಚ್ಛೆಯ ವಿರುದ್ಧ ಅವನ ಉದ್ಯೋಗವನ್ನು ಸಮಾಪ್ತಿಗೊಳಿಸುವುದು. ಅಂತಹ ನಿರ್ಧಾರವನ್ನು ಉದ್ಯೋಗದಾತನು ಆರ್ಥಿಕ ಕುಸಿತದಿಂದ ಹಿಡಿದು ಉದ್ಯೋಗಿಯ ಕಡೆಯಿಂದ ಕಾರ್ಯನಿರ್ವಹಣೆ ಸಂಬಂಧಿತ ಸಮಸ್ಯೆಗಳವರೆಗೆ ವ್ಯಾಪಿಸುವ ವಿವಿಧ ಕಾರಣಗಳಿಂದ ಮಾಡಬಹುದಾದರೂ, ಕೆಲವು ಸಂಸ್ಕೃತಿಗಳಲ್ಲಿ ವಜಾಗೊಳ್ಳುವುದು ಪ್ರಬಲವಾದ ಕಳಂಕವನ್ನು ಹೊಂದಿರುತ್ತದೆ. ಸ್ವಯಂಪ್ರೇರಿತವಾಗಿ ಕೆಲಸ ಬಿಡುವುದರಿಂದ (ಅಥವಾ ಹಂಗಾಮಿ ವಜಾ) ವಿಭಿನ್ನವಾಗಿ, ವಜಾಗೊಳ್ಳುವುದು ಹಲವುವೇಳೆ ಉದ್ಯೋಗಿಯ ತಪ್ಪಾಗಿರುತ್ತದೆಂದು ತಿಳಿದುಕೊಳ್ಳಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ರೋಗನಿದಾನ ಎಂದರೆ ರೋಗವನ್ನು ನಿರ್ದಿಷ್ಟವಾಗಿ ಪತ್ತೆಹಚ್ಚುವ ವಿಧಾನ (ಡಯಾಗ್ನೋಸಿಸ್). ಇದೊಂದು ನಿಪುಣಕಲೆ ಹಾಗೂ ವಿಶಿಷ್ಟ ವಿಜ್ಞಾನ. ರೋಗಿಯ ಹೇಳಿಕೆಯನ್ನು ಕೇಳಿ, ಸಂದರ್ಭಗಳನ್ನು ಗಮನಿಸಿ, ಆತನನ್ನು ವ್ಯವಸ್ಥಿತವಾಗಿ ಸಾಮಾನ್ಯ ಮತ್ತು ವಿಶಿಷ್ಟವಾದ ಪರೀಕ್ಷೆಗಳಿಗೆ ಒಳಪಡಿಸಿ, ಎಲ್ಲ ಬಗೆಗಳಿಂದಲೂ ಗ್ರಹಿಸಿದ ಮಾಹಿತಿಗಳನ್ನು ಕೂಲಂಕಷವಾಗಿ ತುಲನೆಮಾಡಿ, ಸ್ವಂತಾನುಭವಕ್ಕೆ ಒರೆಹಚ್ಚಿ, ರೋಗ ಇಂಥದೆಂದು ಕೊಟ್ಟ ಕೊನೆಯದಾಗಿ ನಿಷ್ಕರ್ಷಿಸುವುದೇ ರೋಗನಿದಾನ ಕ್ರಮ.
ಜನಸಾಮಾನ್ಯರಿಗೆ ಮತ್ತು ಉದ್ಯಮ/ವ್ಯವಹಾರ ಬಳಕೆಗೆ ಸೂಕ್ತವಾದ ವಿವಿಧ ಅಂರ್ತಜಾಲ ಸೇವೆಗಳನ್ನು ನೀಡುವುದು, ಅಂತರಜಾಲ ಸೇವಾ ಸಂಸ್ಥೆಗಳ ಪ್ರಮುಖ ಉದ್ದೇಶವಾಗಿದೆ. ಭಾರತ ಸರ್ಕಾರವು ೧೯೯೬-೯೮ರಲ್ಲಿ ಭಾರತದಲ್ಲಿ ಖಾಸಗಿ ಸಂಸ್ಥೆಗಳು ಇ-ಅಂಚೆ ಸೇವೆಯನ್ನು ನೀಡಲು ಅನುಮತಿ ನೀಡಿತು. ಹೀಗೆ ಅನುಮತಿ ಪಡೆದ ಮೊದಲ ಸಂಸ್ಥೆಗಳಲ್ಲಿ ಬೆಂಗಳೂರಿನ ಮಣಿಪಾಲ್ ಕಂಟ್ರೋಲ್ ಡಾಟಾ ಸಂಸ್ಥೆಯಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮಫ್ತಿ ೨೦೧೭ರ ಕನ್ನಡ ಭಾಷೆಯ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರ. ನಾರ್ಥನ್ ರವರು ನಿರ್ದೇಶಿರುವ ಮೊದಲ ಚಿತ್ರ ಇದಾಗಿದೆ, ಜಯಣ್ಣ ಕಂಬೈನ್ಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರವು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿರುವ ಶ್ರೀಮುರುಳಿಯು ಭೂಗತ ದೊರೆ ಪಾತ್ರದಲ್ಲಿ ನಟಿಸಿರುವ ಶಿವರಾಜಕುಮಾರ್ ಅವರನ್ನು ಹುಡುಕಿಕೊಂಡು ಹೋಗುವ ಕಥೆಯಾಗಿದೆ.ಜುಲೈ ೨೦೧೬ ರಲ್ಲಿ ಚಿತ್ರದ ನಿರ್ಮಾಣ ಪ್ರಾರಂಭವಾಯಿತು ಮತ್ತು ೧ ಡಿಸೆಂಬರ್ ೨೦೧೭ ರಂದು ಚಿತ್ರ ಬಿಡುಗಡೆಯಾಯಿತು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.