The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ಕರ್ನಾಟಕದಲ್ಲಿ ಇದ್ದಾರೆ.ಮೂಲತ ಶ್ರವಣ ಬೆಳಗೊಳದ ಜೈನ ಮಠದ ಸ್ವಾಮೀಜಿಗಳಿಗೆ ೧೩ನೆ ಶತಮಾನದಲ್ಲಿ (1118-19)ಹೊಯ್ಸಳ ದೊರೆ ಬಲ್ಲಾಳರಾಯನು ನೀಡಿದ ಬಿರುದು" ಚಾರುಕೀರ್ತಿ" ಆಗಿನಿಂದ ಆ ಪೀಠದ ಸ್ವಾಮೀಜಿಗಳಿಗೆ ಸ್ವಸ್ಥಿ ಶ್ರಿ ಚಾರುಕೀರ್ತಿ"ಎಂದೆ ಕರೆಯಲಾಗುತ್ತಿದೆ.ಅದೇ ಸ್ವಾಮೀಜಿಗಳು ದಕ್ಷಿಣ ಕನ್ನಡದ (ಕಾರ್ಕಳ ಸಮೀಪ) ನಲ್ಲೂರು ಗ್ರಾಮದಲ್ಲಿ ಜೈನಮಠ ವನ್ನು ಸ್ಥಾಪನೆ ಮಾಡುತ್ತಾರೆ .ಅಲ್ಲಿಂದ ಮುಂದೆ ಹೋಗಿ ಮುಡುಬಿದ್ರೆಯಲ್ಲಿ ಮತ್ತೆ ಒಂದು ಮಠವನ್ನು ಸ್ಥಾಪನೆ ಮಾಡುತ್ತಾರೆ.ಅವರೆ ಆಧ್ಯಶ್ರಿ ಚಾರುಕೀತಿ೯ ಭಟ್ಟಾರಕ ಪ೦ಡಿತಾಚಯ೯ವಯ೯ ಮಹಾಸ್ವಾಮೀಜಿ ಗಳವರು ಕೆಲ ಕಾಲ ನ೦ತರ ಅವರ ನಲ್ಲೂರಿ ನಲ್ಲಿ ಸಮಾಧಿ ಸಲ್ಲೇಖನ ವಾಗುತ್ತದೆ ಇದಕ್ಕೆ ಜೈನ ಪರಿ ಭಾಷೆ ಯಲ್ಲಿ ವ್ರತ ಮರಣ ಎ೦ದು ಹೇಳುತ್ತಾರೆ.ಇದು ಶಾ೦ತಿ ಪೊರ್ವಕ ಮರಣ ವನ್ನು ಗೆಲ್ಲುವ ಅಗಮ ದ ನಿಯಮ ಪ್ರಕಾರ ಕೈಗೊಳ್ಳುವ ಜೈನ ಮರಣ ಕಲೆ ಯಾಗಿದೆ ಈಗಲೊ ಅಲ್ಲಿ ಸಮಾದಿ ಸ್ಥಾನ ವನ್ನು ಕಾಣಬಹುದು ಅಲ್ಲಿರುವ ಆನೆಯ ಕಲ್ಲಿ ನ ಶಿಲ್ಪ ೧೯೯೯ರ ಮೂಡಬಿದರೆ ಜೈನ ಕಾಶಿ ಯ ಮಧಬಿನವ ಚಾರುಕೀತಿ೯ ಭಟ್ಟಾರಕ ಪ೦ಡಿತಾಚಯ೯ವಯ೯ ಮಹಾಸ್ವಾಮೀಜಿ ಗಳವರ ನೇತ್ರತ್ವದಲ್ಲಿ ತಮ್ಮ ದೀಕ್ಷಾಗುರು ಶ್ರವಣ ಬೆಳಗೊಳ ದ ಸ್ವಸ್ಥಿ ಶ್ರಿ ಚಾರುಕೀರ್ತಿ ಭಟ್ಟಾರಕಪಟ್ಟಚಾಯ೯ವರ್ಯ ಸ್ವಾಮೀಜಿ ಗಳವರ ಚಾತುಮಾ೯ಸ ದಲ್ಲಿ ಸ್ಥಾಪಿಸಲಾಗಿದೆ ಶ್ರವಣ ಬೆಳಗೊಳದ ಈ ಎರಡು ಮಠಗಳುಸ್ವಸ್ಥಿ ಶ್ರೀ ಜಗದ್ಗುರು ಮಠ ವಾಗಿದ್ದು ಈ ಎರಡುಮಠಗಳು ಸ್ವತಂತ್ರ ಸ೦ಸ್ಥಾನ ಮೂಡಬಿದಿರೆ ಜಗದ್ಗುರು ಸ್ವಸ್ಥಿ ಶ್ರಿ ಚಾರುಕೀತಿ೯ ಭಟ್ಟಾರಕ ಪ೦ಡಿತಾಚಯ೯ವಯ೯ ಮಹಾಸ್ವಾಮೀಜಿ ತನ್ನ ಶಾಖಾಮ ಠ ವಾದ ನಲ್ಲೂರು ಹಾಗೊ ಮೂಡಬಿದಿರೆಯ ೧೮ ಬಸದಿ ಗಳ ಅಡಳ್ತೆ ದಾರರೊ,ಅಧ್ಯಕ್ಷರೂ ಆಗಿದ್ದುತಮ್ಮ ಮಾರ್ಗದರ್ಶನ ದಲ್ಲಿ ಸ೦ಸ್ಥಾನ ಸ್ವತಂತ್ರ ಆಡಳಿತ ವನ್ನು ನಿರ್ವಹಿಸುತ್ತಿದೆ
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕಾನ್ಸ್ಟಾಂಟಿನ್ ಸ್ಟಾನಿಸ್ಲಾವಸ್ಕಿ ಕಾನ್ಸ್ಟಾಂಟಿನ್ ಸ್ಟಾನಿಸ್ಲಾವಸ್ಕಿ Bundesarchiv ಬಿಲ್ಡ್ 183-18073-0003, ಕಾನ್ಸ್ಟಾಂಟಿನ್ Sergejewitsch Stanislawski.jpg 1936 ರಲ್ಲಿ ಸ್ಟಾನಿಸ್ಲಾವಸ್ಕಿ. ಬಾರ್ನ್ ಕಾನ್ಸ್ಟಾಂಟಿನ್ Sergeievich ಸ್ಟಾನಿಸ್ಲಾವಸ್ಕಿ 17 ಜನವರಿ 1863 ಮಾಸ್ಕೋ, ರಷ್ಯನ್ ಸಾಮ್ರಾಜ್ಯ ಮರಣ 1938 7 ಆಗಸ್ಟ್ (75 ನೇ ವಯಸ್ಸಿನಲ್ಲಿ) ಮಾಸ್ಕೋ, ಸೋವಿಯತ್ ಒಕ್ಕೂಟದ ಉದ್ಯೋಗ ಥಿಯೇಟರ್ ನಿರ್ದೇಶಕ, ನಟ, ರಂಗಭೂಮಿ ಸಿದ್ಧಾಂತಿ ಸಾಹಿತ್ಯ ಚಳುವಳಿ ಯಥಾರ್ಥ, ಮನೋವೈಜ್ಞಾನಿಕ ವಾಸ್ತವಿಕತೆ, ಸಾಮಾಜಿಕ ನಂಬಿಕೆ, ರಷ್ಯಾದ ಸಂಕೇತ ಸಂಗಾತಿ ಮಾರಿಯಾ Petrovna Perevostchikova ಕಾನ್ಸ್ಟಾಂಟಿನ್ Sergeievich ಸ್ಟಾನಿಸ್ಲಾವಸ್ಕಿ (ರಷ್ಯನ್: Константин Сергеевич Станиславский; IPA: [kənstɐnʲtʲin sʲɪrgʲejɪvʲɪtɕ stənʲɪslafskʲɪj]; 17 ಜನವರಿ [ಓಎಸ್ 5 ಜನವರಿ] 1863 - 1938 ರ ಆಗಸ್ಟ್ 7). ರಷ್ಯಾದ ನಟ ಮತ್ತು ರಂಗಭೂಮಿ ನಿರ್ದೇಶಕ ಸ್ಟಾನಿಸ್ಲಾವಸ್ಕಿ ಸಿಸ್ಟಮ್ನ ಒಂದು ವ್ಯಾಪಕವಾದ ಪ್ರಭಾವವನ್ನು ಹೊಂದಿತ್ತು ವಿಶೇಷವಾಗಿ ಎರಡನೇ ಮಹಾಯುದ್ಧದ ನಂತರ ಅವಧಿಯಲ್ಲಿ.
ವಿಪತ್ತು ವ್ಯಾಪಕ ಮಾನವ, ಸಾಮಗ್ರಿ, ಆರ್ಥಿಕ ಅಥವಾ ಪಾರಿಸರಿಕ ನಷ್ಟ ಮತ್ತು ಪರಿಣಾಮಗಳನ್ನು ಒಳಗೊಂಡ ಒಂದು ಸಮುದಾಯ ಅಥವಾ ಸಮಾಜದ ಕಾರ್ಯಚಟುವಟಿಕೆಗೆ ಗಂಭೀರ ಅಡೆತಡೆ. ಆದ ನಷ್ಟವು ತನ್ನ ಸ್ವಂತ ಸಂಪನ್ಮೂಲಗಳನ್ನು ಬಳಸಿ ನಿಭಾಯಿಸುವ ಬಾಧಿತ ಸಮುದಾಯ ಅಥವಾ ಸಮಾಜದ ಸಾಮರ್ಥ್ಯವನ್ನು ಮೀರುತ್ತದೆ. ಸಮಕಾಲೀನ ಶೈಕ್ಷಣಿಕ ಸಮುದಾಯದಲ್ಲಿ, ವಿಪತ್ತುಗಳನ್ನು ಅಸಮಂಜಸವಾಗಿ ನಿರ್ವಹಿಸಲಾದ ಅಪಾಯದ ಪರಿಣಾಮವೆಂದು ಕಾಣಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಡಿಯೇಗೊ ಮೆರಡೋನ (ಜನನ ಅಕ್ಟೋಬರ್ ೩೦, ೧೯೬೦ - ಮರಣ ನವೆಂಬರ್ ೨೫, ೨೦೨೦) ಅರ್ಜೆ೦ಟಿನಾದ ಮಾಜಿ ಫುಟ್ಬಾಲ್ ಕ್ರೀಡಾಪಟು ಮತ್ತು ನವೆ೦ಬರ್ ೨೦೦೮ರಿ೦ದ ಜುಲೈ ೨೦೧೦ರವರೆಗೆ ಅರ್ಜೆ೦ಟಿನಾ ರಾಷ್ಟ್ರೀಯ ಫುಟ್ಬಾಲ್ ತ೦ಡದ ಮ್ಯಾನೇಜರರಾಗಿದ್ದರು. ಇವರು ಜಗತ್ತಿನ ಮಹಾನ್ ಫುಟ್ಬಾಲ್ ಆಟಗಾರರಲ್ಲಿ ಒಬ್ಬರೆಂದು ಹೇಳಲಾದರು, ಅದೇ ದನಿಯಲ್ಲಿ, ಇವರು ಅತ್ಯ೦ತ ವಿವಾದಾಸ್ಪದ, ಸುದ್ದಿಯೋಗ್ಯವಾದ ವ್ಯಕ್ತಿ ಎಂದೂ ಹೇಳಲಾಗುತ್ತದೆ. ಇವರ ಅ೦ತರಾಷ್ಟ್ರಿಯ ವೃತ್ತಿ ಜೀವನದಲ್ಲಿ ತಮ್ಮ ದೇಶವನ್ನು ೯೧ ಬಾರಿ ಪ್ರತಿನಿಧಿಸಿ ೩೪ ಗೋಲ್-ಗಳನ್ನು ಹೊಡೆದಿರುವರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಏಂಜೆಲಿನಾ ಜೋಲೀ (ಜನನ ಏಂಜೆಲಿನಾ ಜೋಲೀ ವೈಯಟ್ , ಜೂನ್ ೪, ೧೯೭೫) ಅವರು ಅಮೇರಿಕಾದ ನಟಿ ಹಾಗೂ ಯುಎಸ್ ರೆಫ್ಯೂಜಿ ಎಜೆನ್ಸಿಯ ಹಿತಚಿಂತನ ರಾಯಭಾರಿ ಆಗಿದ್ದಾರೆ. ಅವರು ಮೂರು ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳು, ಎರಡು ಸ್ಕ್ರೀನ್ ಆಯ್ಕ್ಟರ್ಸ್ ಗಿಲ್ಡ್ ಪ್ರಶಸ್ತಿಗಳು ಮತ್ತು ಒಂದು ಅಕಾಡೆಮಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಜೋಲೀ ಮಾನವತಾವಾದಿಯ ಧ್ಯೇಯಗಳನ್ನು ವಿಶ್ವದಾದ್ಯಂತ ಪ್ರಚಾರಮಾಡಿದರು ಮತ್ತು ಯುಎನ್ಎಚ್ಸಿಆರ್ ಮೂಲಕ ನಿರಾಶ್ರಿತರೊಂದಿಗಿನ ಅವರ ಕೆಲಸದಿಂದ ಪ್ರಖ್ಯಾತರಾದರು.
ಸಂಗೀತ ನಿರ್ಮಾಪಕ ಧ್ವನಿಮುದ್ರಣದ ಮೇಲ್ವಿಚಾರಣೆ, ನಿರ್ವಹಣೆ ಮತ್ತು ವಾದ್ಯವೃಂದ ಅಥವಾ ಸಂಗೀತಗಾರರ ಸಂಗೀತ ಉತ್ಪಾದನೆಯನ್ನು ನಿರ್ವಹಿಸುತ್ತಾರೆ. ನಿರ್ಮಾಪಕನ ಪಾತ್ರಗಳು ಬದಲಾಗುತ್ತವೆ. ಅವರು ಯೋಜನೆಗಾಗಿ ಸಂಗೀತದ ಕಲ್ಪನೆಗಳನ್ನು ಸಂಗ್ರಹಿಸಬಹುದು, ಕಲಾವಿದರ ಮೂಲಕ ಮೂಲ ಗೀತೆಗಳನ್ನು ಆಯ್ಕೆ ಮಾಡಲು ಸಹಕರಿಸುತ್ತಾರೆ, ಕಲಾವಿದರೊಂದಿಗೆ ಕೆಲಸ ಮಾಡುತ್ತಾರೆ ಮತ್ತು ಅವರ ಹಾಡುಗಳು, ಸಾಹಿತ್ಯ ಅಥವಾ ವ್ಯವಸ್ಥೆಗಳನ್ನು ಸುಧಾರಿಸಲು ಅವರಿಗೆ ಸಹಾಯ ಮಾಡಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ವಿಕಿ ಎನ್ನುವುದು ತಂತ್ರಜ್ಞಾನವಾಗಿದ್ದು ಅದು ಬಳಕೆದಾರರಿಗೆ ಲಭ್ಯವಿರುವ ಮಾಹಿತಿಯನ್ನು ಸೇರಿಸಲು ಅನುವು ಮಾಡಿಕೊಡುತ್ತದೆ, ಜೊತೆಗೆ ಬಳಕೆದಾರರಿಗೆ ಬದಲಾವಣೆಗಳನ್ನು ಅಥವಾ ತಿದ್ದುಪಡಿಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ. ಸಾಮಾನ್ಯವಾಗಿ ಅಂತರ್ಜಾಲದಲ್ಲಿ ಒದಗಿಸುವ ಪುಟಗಳು (ಜಾಲ ಪುಟಗಳು) ಮಾಹಿತಿಯನ್ನು ಪುಟದ ಓದುಗರಿಂದ ಬದಲಾಯಿಸಲಾಗುವುದಿಲ್ಲ. ವಿಕಿ ತಂತ್ರಜ್ಞಾನವನ್ನು ಆಧರಿಸಿದ ಪುಟಗಳಲ್ಲಿನ ಮಾಹಿತಿಯನ್ನು ಓದುಗರಿಂದ ಬದಲಾಯಿಸಬಹುದು.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಒಂದು ಕಾಯದ ಮೇಲೆ ಪ್ರಯೋಗವಾಗುವ ನಿವ್ವಳ ಬಲವು ಚಲನೆತಯ ನೇರದಲ್ಲಿ ವರ್ತಿಸಿದಾಗ ಆಥವ ಶೂನ್ಯವಾದಾಗ ಆ ಕಾಯವು ಸರಳ ರೇಖೆಯಲ್ಲಿ ಚಲಿಸುತ್ತದೆ.ನಿವ್ವಳ ಬಲವು ಚಲನೆಯ ನೇರಕ್ಕೆ ಯಾವಾಗಲೂ ಒಂದು ಕೋನದಲ್ಲಿ ಅ೦ದರೆ ಓರೆಯಾಗಿ ವರ್ತಿಸಿದಾಗ ಕಾಯವು ತನ್ನ ಚಲನೆ ನೇರವನ್ನು ಬದಲಿಸಿ ವಕ್ರಪಥದಲ್ಲಿ ಚಲಿಸತೊಡಗುತ್ತದೆ.ವಕ್ರಪಥದಲ್ಲಿನ ಚಲನೆಗೆ ಅತಿ ಸರಳ ಉದಾಹರಣೆಯೆ೦ದರೆ ಏಕರೂಪ ವೃತ್ತೀಯ ಚಲನೆ.ವೃತೀಯ ಪಥದಲ್ಲಿ ಸ್ಥಿರ ಜವದಿ೦ದ ಆಗುತ್ತಿರುವ ಚಲನೆಯೇ ಏಕರೂಪ ವೃತ್ತೀಯ ಚಲನೆ. ಒಂದು ಸಣ್ಣ ಕಲ್ಲು ಅಥವಾ ಚೆ೦ಡಿಗೆ ದಾರ ಕಟ್ಟಿ ನಿಮ್ಮ ತಲೆಯ ಸುತ್ತ ಅದನ್ನು ಒ೦ದೇ ರೀತಿಯಲ್ಲಿ ಸುತ್ತಿಸಿದ್ದೇ ಆದರೆ ಅದು ವೃತೀಯ ಚಲನೆ ಆಗುತ್ತದೆ ಚ೦ದ್ರ ಭೂಮಿಯ ಸುತ್ತ ಪರಿಭ್ರಮಿಸುತ್ತದೆ.ಭೂಮಿಯು ಸೂರ್ಯನ ಸುತ್ತ ಪರಿಭ್ರಮಿಸುತ್ತದೆ.ಇವುಗಳ ಪಥಗಳು ಸರಿ ಸುಮಾರು ವೃತ್ತಗಳು.ಇವು ಏಕವೃತ್ತೀಯ ಚಲನೆಗೆ ಕೆಲವು ಉದಾಹರಣೆಗಳು. ವೃತ್ತೀಯ ಚಲನೆ ಒಂದು ಸ್ಥಳೀಯ ಚಿಲ್ಲರೆ ವ್ಯಾಪಾರ ಮಾಡುತ್ತಿರುವ ವೈದ್ಯಕೀಯ ಪೂರೈಕೆಗಳನ್ನು ಮತ್ತು ಉಪಕರಣವನ್ನು ಒದಗಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮಫ್ತಿ ೨೦೧೭ರ ಕನ್ನಡ ಭಾಷೆಯ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರ. ನಾರ್ಥನ್ ರವರು ನಿರ್ದೇಶಿರುವ ಮೊದಲ ಚಿತ್ರ ಇದಾಗಿದೆ, ಜಯಣ್ಣ ಕಂಬೈನ್ಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರವು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿರುವ ಶ್ರೀಮುರುಳಿಯು ಭೂಗತ ದೊರೆ ಪಾತ್ರದಲ್ಲಿ ನಟಿಸಿರುವ ಶಿವರಾಜಕುಮಾರ್ ಅವರನ್ನು ಹುಡುಕಿಕೊಂಡು ಹೋಗುವ ಕಥೆಯಾಗಿದೆ.ಜುಲೈ ೨೦೧೬ ರಲ್ಲಿ ಚಿತ್ರದ ನಿರ್ಮಾಣ ಪ್ರಾರಂಭವಾಯಿತು ಮತ್ತು ೧ ಡಿಸೆಂಬರ್ ೨೦೧೭ ರಂದು ಚಿತ್ರ ಬಿಡುಗಡೆಯಾಯಿತು.
ಪ್ರವಾಸೋದ್ಯಮ ಅಥವಾ ಯೋಜಿತ ಪ್ರವಾಸವು ಮನರಂಜನೆ, ವಿರಾಮ ಅಥವಾ ವ್ಯಾಪಾರದ ಉದ್ದೇಶಗಳಿಗಾಗಿ ಮಾಡುವ ಪ್ರಯಾಣವಾಗಿದೆ. ವಿಶ್ವ ಪ್ರವಾಸೋದ್ಯಮ ಸಂಸ್ಥೆಯು ಪ್ರವಾಸಿಗರು ಎಂಬ ಪದವನ್ನು, "ವಿರಾಮ, ವ್ಯವಹಾರ ಮತ್ತು ಇತರ ಉದ್ದೇಶಗಳಿಗಾಗಿ ತನ್ನ ಎಂದಿನ ಪರಿಸರದಿಂದ ಹೊರಗಿನ ಸ್ಥಳಗಳಿಗೆ ಪ್ರಯಾಣಿಸಿ, ಅಲ್ಲಿ ಇಪ್ಪತ್ನಾಲ್ಕು (24) ಗಂಟೆಗಳಿಗಿಂತ ಹೆಚ್ಚು ಅವಧಿಗೆ ಉಳಿಯುವ ಮತ್ತು ಒಂದು ಸತತ ವರ್ಷಕ್ಕಿಂತ ಹೆಚ್ಚಾಗಿ ಉಳಿಯದ ಹಾಗೂ ತಾವು ಭೇಟಿ ನೀಡಿದ ಪ್ರದೇಶಗಳಲ್ಲಿ ಸಂಭಾವನೆ ಗಳಿಸುವ ಅಥವಾ ಪ್ರತಿಫಲ ಅಪೇಕ್ಷಿಸುವ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದ ವ್ಯಕ್ತಿಗಳು" ಎಂಬುದಾಗಿ ವ್ಯಾಖ್ಯಾನಿಸಿದೆ. ಪ್ರವಾಸೋದ್ಯಮವು ವಿಶ್ವವ್ಯಾಪಕವಾಗಿ ಜನಪ್ರಿಯವಾಗಿರುವ ಒಂದು ವಿರಾಮದ ಚಟುವಟಿಕೆಯಾಗಿ ಮಾರ್ಪಟ್ಟಿದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.