The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಪ್ರವಾಸೋದ್ಯಮ ಅಥವಾ ಯೋಜಿತ ಪ್ರವಾಸವು ಮನರಂಜನೆ, ವಿರಾಮ ಅಥವಾ ವ್ಯಾಪಾರದ ಉದ್ದೇಶಗಳಿಗಾಗಿ ಮಾಡುವ ಪ್ರಯಾಣವಾಗಿದೆ. ವಿಶ್ವ ಪ್ರವಾಸೋದ್ಯಮ ಸಂಸ್ಥೆಯು ಪ್ರವಾಸಿಗರು ಎಂಬ ಪದವನ್ನು, "ವಿರಾಮ, ವ್ಯವಹಾರ ಮತ್ತು ಇತರ ಉದ್ದೇಶಗಳಿಗಾಗಿ ತನ್ನ ಎಂದಿನ ಪರಿಸರದಿಂದ ಹೊರಗಿನ ಸ್ಥಳಗಳಿಗೆ ಪ್ರಯಾಣಿಸಿ, ಅಲ್ಲಿ ಇಪ್ಪತ್ನಾಲ್ಕು (24) ಗಂಟೆಗಳಿಗಿಂತ ಹೆಚ್ಚು ಅವಧಿಗೆ ಉಳಿಯುವ ಮತ್ತು ಒಂದು ಸತತ ವರ್ಷಕ್ಕಿಂತ ಹೆಚ್ಚಾಗಿ ಉಳಿಯದ ಹಾಗೂ ತಾವು ಭೇಟಿ ನೀಡಿದ ಪ್ರದೇಶಗಳಲ್ಲಿ ಸಂಭಾವನೆ ಗಳಿಸುವ ಅಥವಾ ಪ್ರತಿಫಲ ಅಪೇಕ್ಷಿಸುವ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದ ವ್ಯಕ್ತಿಗಳು" ಎಂಬುದಾಗಿ ವ್ಯಾಖ್ಯಾನಿಸಿದೆ. ಪ್ರವಾಸೋದ್ಯಮವು ವಿಶ್ವವ್ಯಾಪಕವಾಗಿ ಜನಪ್ರಿಯವಾಗಿರುವ ಒಂದು ವಿರಾಮದ ಚಟುವಟಿಕೆಯಾಗಿ ಮಾರ್ಪಟ್ಟಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತದ ಸಂವಿಧಾನದ ಪ್ರಕಾರ ಭಾರತದ ರಾಜಕೀಯ ಪಕ್ಷಗಳು ಭಾರತದ ವಿವಿಧ ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರಕ್ಕೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರವನ್ನು ಹೊಂದಿರುವ ಸದಸ್ಯರಿರುವ ಪಕ್ಷಗಳು ರಾಷ್ಟ್ರೀಯ ಪಕ್ಷಗಳೆಂದು ಕರೆಯಲಾಗುತ್ತವೆ. ಇವುಗಳಲ್ಲಿ ಮುಖ್ಯವಾದವು: ಬಹುಜನ ಸಮಾಜ ಪಕ್ಷ (BSP) - ಮಾಯಾವತಿ ಕುಮಾರಿ ಅವರ ನೇತೃತ್ವದಲ್ಲಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಎಂದು ಈಗ ಪ್ರಸಿದ್ಧರಾಗಿರುವ ಯದುವೀರರನ್ನು ಯದುವಂಶದ ೨೭ನೆಯ ಅಧಿಕಾರಿಯಾಗಿ, 'ಮಹಾರಾಣಿ ಪ್ರಮೋದಾದೇವಿ'ಯವರು ೨೦೧೫ ರ, ಫೆಬ್ರವರಿ ೨೩, ರಂದು ದತ್ತುಪುತ್ರನಾಗಿ ಸ್ವೀಕರಿಸಿದರು. ಯದುವೀರರ ಮೊದಲಹೆಸರು, 'ಯದುವೀರ್ ಗೋಪಾಲರಾಜೇ ಅರಸ್,' ಎಂದು. ದತ್ತು ಸ್ವೀಕಾರ ಸಮಾರಂಭದ ಸಮಯದಲ್ಲಿ ಈ ಹೆಸರನ್ನು ಬದಲಾಯಿಸಲಾಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ವಿಲಿಯಂ ಷೇಕ್ಸ್ಪಿಯರ್ ಜನನ ವಿವಿಧ ದಾಖಲೆ ಮತ್ತು ಸಾಂದರ್ಭಿಕ ಪುರಾವೆಗಳ ಆಧಾರದ ಊಹೆಯಂತೆ ೨೩ ಏಪ್ರಿಲ್ ೧೫೬೪ (ಕ್ರೈಸ್ತಮತದ ಸಂಪ್ರದಾಯದಂತೆ ಹೋಲಿ ಟ್ರಿನಿಟಿ ಚರ್ಚ್ ನಲ್ಲಿ ನಾಮಕರಣ ೨೬ ಏಪ್ರಿಲ್ ೧೫೬೪ - ಮರಣ - ೨೩ ಏಪ್ರಿಲ್ ೧೬೧೬ ) [೧] ಇಂಗ್ಲಿಷ್ ಕವಿ ಮತ್ತು ನಾಟಕಕಾರ ; ಇಂಗ್ಲಿಷ್ ಭಾಷೆಯ ಅತಿ ಶ್ರೇಷ್ಠ ಕವಿ-ಬರಹಗಾರ ಎಂದೂ ಜಗತ್ತಿನ ಸರ್ವಶ್ರೇಷ್ಠ ನಾಟಕಕಾರರಲ್ಲಿ ಒಬ್ಬನು ಎಂದೂ ಸಾಮಾನ್ಯವಾಗಿ ಗೌರವಿಸಲಾಗುತ್ತದೆ. ಅವನನ್ನು ಇಂಗ್ಲೆಂಡಿನ ರಾಷ್ಟ್ರೀಯ ಕವಿ ಎಂದು ಕರೆಯುತ್ತಾರೆ.
ಅಂಡರ್ಹಿಲ್ ವುಲ್ವರ್ಹ್ಯಾಂಪ್ಟನ್ ನಲ್ಲಿ ಜನಿಸಿದರು. ಅವರು ಕವಿ ಮತ್ತು ಕಾದಂಬರಿಕಾರರಾಗಿದ್ದರು, ಹಾಗೆಯೇ ಶಾಂತಿಪ್ರಿಯ ಮತ್ತು ಅತೀಂದ್ರಿಯರಾಗಿದ್ದರು. ಏಕೈಕ ಮಗು, ತನ್ನ ಆರಂಭಿಕ ಅತೀಂದ್ರಿಯ ಒಳನೋಟಗಳನ್ನು ವಿವರಿಸುತ್ತಾ, "ಮಿಸ್ಟಿಕ್ನ" ಇನ್ನೂ ಮರುಭೂಮಿ "ನಂತಹ ಶಾಂತಿಯುತ, ಭಿನ್ನಾಭಿಪ್ರಾಯವಿಲ್ಲದ ಸಮತಲದ ರಿಯಾಲಿಟಿ ನ ಹಠಾತ್ ಅನುಭವಗಳು-ಇದರಲ್ಲಿ ಬಹುಸಂಖ್ಯೆಯ ಅಥವಾ ವಿವರಣೆಯ ಅಗತ್ಯವಿರಲಿಲ್ಲ".ಈ ಅನುಭವಗಳ ಅರ್ಥವು ಆಜೀವ ಅನ್ವೇಷಣೆ ಮತ್ತು ಖಾಸಗಿ ತಲ್ಲಣದ ಒಂದು ಮೂಲವಾಗಿ ಮಾರ್ಪಟ್ಟಿತು, ಸಂಶೋಧನೆ ಮತ್ತು ಬರೆಯಲು ಅವಳನ್ನು ಪ್ರಚೋದಿಸಿತು.ಎವೆಲಿನ್ ಅಂಡರ್ಹಿಲ್ (೬ ಡಿಸೆಂಬರ್ ೧೮೭೫ - ೧೫ ಜೂನ್ ೧೯೪೧) ಒಬ್ಬ ಇಂಗ್ಲಿಷ್ ಆಂಗ್ಲೋ-ಕ್ಯಾಥೋಲಿಕ್ ಬರಹಗಾರ ಮತ್ತು ಧರ್ಮಪ್ರಜ್ಞೆಯಾಗಿದ್ದು, ಧರ್ಮ ಮತ್ತು ಆಧ್ಯಾತ್ಮಿಕ ಆಚರಣೆಗೆ ಸಂಬಂಧಿಸಿದ ಹಲವಾರು ಕೃತಿಗಳಿಗಾಗಿ ಹೆಸರುವಾಸಿಯಾಗಿದ್ದಾನೆ, ನಿರ್ದಿಷ್ಟ ಕ್ರಿಶ್ಚಿಯನ್ ಆಧ್ಯಾತ್ಮ.ಇಂಗ್ಲಿಷ್-ಮಾತನಾಡುವ ಜಗತ್ತಿನಲ್ಲಿ, ಅವರು ೨೦ ನೆಯ ಶತಮಾನದ ಮೊದಲಾರ್ಧದಲ್ಲಿ ಇಂತಹ ವಿಷಯಗಳ ಬಗ್ಗೆ ವ್ಯಾಪಕವಾಗಿ ಓದಿದ ಬರಹಗಾರರಾಗಿದ್ದರು.
ಕೋಫಿ ಅಟ್ಟಾ ಅನ್ನನ್ (8 ಏಪ್ರಿಲ್ 1938 - 18 ಆಗಸ್ಟ್ 2018) ಜನವರಿ 1997 ರಿಂದ ಡಿಸೆಂಬರ್ 2006 ರವರೆಗೆ ವಿಶ್ವಸಂಸ್ಥೆಯ ಏಳನೇ ಪ್ರಧಾನ-ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಘಾನಾದ ರಾಜತಾಂತ್ರಿಕರಾಗಿದ್ದರು.ಯುಎನ್ 2001 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಸಹ ಪಡೆದವರು. ಅವರು ಕೋಫಿ ಅನ್ನಾನ್ ಪ್ರತಿಷ್ಠಾನದ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದರು ಮತ್ತು ನೆಲ್ಸನ್ ಮಂಡೇಲಾ ಸಂಸ್ಥಾಪಿಸಿದ ಅಂತರರಾಷ್ಟ್ರೀಯ ಸಂಘಟನೆಯ ದಿ ಎಲ್ಡರ್ಸ್ನ ಅಧ್ಯಕ್ಷರಾಗಿದ್ದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಡೇವಿಡ್ ಕ್ರೇನ್ ಹಾಗೂ ಮಾರ್ಟಾ ಕಾಫ಼್ಮಾನ್ ರಿಂದ ತಯಾರಿತ ಫ಼್ರೆಂಡ್ಸ್, ಅಮೇರಿಕಾದ ಒಂದು ಧಾರಾವಾಹಿಯಾಗಿದೆ. ಸಾಂದರ್ಭಿಕ ಹಾಸ್ಯ ಧಾರಾವಾಹಿಯಾಗಿರುವ ಇದು ಎನ್.ಬಿ.ಸಿ ವಾಹಿನಿಯಲ್ಲಿ ಸೆಪ್ಟಂಬರ್ ೨೨, ೧೯೯೪ ರಿಂದ ಮೇ ೬, ೨೦೦೪ ರ ವರೆಗೆ ಪ್ರಸಾರಗೊಂಡಿತು. ಮೆನ್ಹಾಟನ್ ನ ಒಂದು ಸ್ನೇಹಿತರ ಬಳಗದ ಕಥೆಯ ಸುತ್ತ ತಿರುಗುವ ಈ ಸರಣಿಯು ವಾರ್ನರ್ಸ್ ಬ್ರದರ್ಸ್ ಟೆಲಿವಿಶನ್ ನ ಸಹಯೋಗದೊಂದಿಗೆ ಬ್ರೈಟ್/ಕಾಫ಼್ಮಾನ್/ಕ್ರೇನ್ ಪ್ರೊಡಕ್ಶನ್ಸ್ ನಿಂದ ನಿರ್ಮಿಸಲ್ಪಟ್ಟಿದೆ.
ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ (ಚಲನಚಿತ್ರ)
ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ (ಅನುವಾದ: ಉದಾರ ಮನಸ್ಸಿನವನು ವಧುವನ್ನು ಕರೆದೊಯ್ಯುವನು) (ಡಿಡಿಎಲ್ಜೆ ಎಂಬ ಆದ್ಯಕ್ಷರ ಗುಚ್ಛದಿಂದಲೂ ಪರಿಚಿತವಾಗಿದೆ) ಒಂದು ಹಿಂದಿ ಪ್ರಣಯಪ್ರಧಾನ ಚಲನಚಿತ್ರವಾಗಿದೆ. ಇದನ್ನು ಆದಿತ್ಯ ಚೋಪ್ರಾ ನಿರ್ದೇಶಿಸಿದ್ದಾರೆ (ತಮ್ಮ ಚೊಚ್ಚಲ ನಿರ್ದೇಶನದ ಚಿತ್ರ) ಮತ್ತು ಅವರ ತಂದೆ ಯಶ್ ಚೋಪ್ರಾ ನಿರ್ಮಾಣ ಮಾಡಿದ್ದಾರೆ ಮತ್ತು ಜಾವೇದ್ ಸಿದ್ದೀಕಿ ಹಾಗೂ ಆದಿತ್ಯ ಚೋಪ್ರಾ ಬರೆದಿದ್ದಾರೆ. ೨೦ ಅಕ್ಟೋಬರ್ ೧೯೯೫ರಂದು ಬಿಡುಗಡೆಯಾದ ಈ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ಕಾಜೊಲ್ ನಟಿಸಿದ್ದಾರೆ.
ಪದವಿ ಎಂದರೆ ಕಾಲೇಜು ಅಥವಾ ವಿಶ್ವವಿದ್ಯಾಲಯ ತಾನು ನಿಷ್ಕರ್ಷಿಸಿರುವ ಪಠ್ಯಕ್ರಮವನ್ನು ಯಶಸ್ವಿಯಾಗಿ ವ್ಯಾಸಂಗ ಮಾಡಿ ಪಾರಂಗತರಾದವರಿಗೆ ನೀಡುವ ಪ್ರಶಸ್ತಿ. ಸದ್ಯದಲ್ಲಿ ಪ್ರಚಾರದಲ್ಲಿರುವ ಪದವಿಗಳು ಹದಿಮೂರನೆಯ ಶತಮಾನದಿಂದ ಪ್ರಚಾರದಲ್ಲಿರುವ ಪದವಿಗಳು ಹದಿಮೂರನೆಯ ಶತಮಾನದಿಂದ ಪ್ರಚಾರದಲ್ಲಿದ್ದರೂ ಅವುಗಳ ಮೂಲ ಅದಕ್ಕೂ ಹಿಂದೆ ಯೂರೋಪಿನ ಗಿಲ್ಡುಗಳು ನೀಡುತ್ತಿದ್ದ ಪ್ರಶಸ್ತಿಗಳಲ್ಲಿದೆ. ವಿಶ್ವವಿದ್ಯಾಲಯ ಅಥವಾ ಕಾಲೇಜು ನೀಡುವ ಪ್ರಥಮ ಪದವಿ ಬ್ಯಾಚಲರ್ ಪದವಿ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.