The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮಹಾರಾಜ ದಶರಥ, ಅವನಾಳಿದ ರಾಜ್ಯದ ಹೆಸರು ಅಯೋಧ್ಯೆ, ಇದು ಸರಯೂ ನದಿತೀರದಲ್ಲಿದೆ. ಮಾನವೇಂದ್ರನಾದ ಮನುವಿನಿಂದ ನಿರ್ಮಿತವಾದ ರಾಜ್ಯ. ಮನುನಾ "ಮಾನವೇಂದ್ರೇಣ ಯಾ ಪುರೀ ನಿರ್ಮಿತಾ" ಸ್ವಯಂ (ವಾಲ್ಮೀಕಿ ರಾಮಾಯಣ, ಬಾಲಕಾಂಡ, ೫ನೆ ಸರ್ಗ) ಸಮೃದ್ಧವಾದ ರಾಜ್ಯ, ಸಮರ್ಥ ಮಂತ್ರಿಗಳು, ವಸಿಷ್ಠ ವಾಮದೇವರು ತಪಸ್ವಿಗಳಾದ ಗುರುಗಳು, ಪುರೋಹಿತರು, ಮನಮೆಚ್ಚಿದ ಮೂವರು ಮಡದಿಯರು, ಕೌಸಲ್ಯಾ, ಸುಮಿತ್ರಾ, ಕೈಕೇಯಿ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಶ್ಯಾಮನೂರ್ ಶಿವಶಂಕರಪ್ಪರವರು ೧೬ ಜೂನ್ ೧೯೩೧ರಂದು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರ ಹೆಂಡತಿ ಎಸ್ ಎಸ್ ಪಾರ್ವತಮ್ಮ, ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯ ದಕ್ಶಿಣ ಭಾಗದಿಂದ ಚುನಾವಣೆಯಲ್ಲಿ ಕಳೆದ ಸುಮಾರು ೧೦ ವರ್ಷಗಳಿಂದ ಸ್ಪರ್ಧಿಸುತ್ತಿದ್ದಾರೆ. ಶಿವಶಂಕರಪ್ಪನವರು ಕಳೆದ ೩ ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೈತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪ್ರವಾಸೋದ್ಯಮ ಅಥವಾ ಯೋಜಿತ ಪ್ರವಾಸವು ಮನರಂಜನೆ, ವಿರಾಮ ಅಥವಾ ವ್ಯಾಪಾರದ ಉದ್ದೇಶಗಳಿಗಾಗಿ ಮಾಡುವ ಪ್ರಯಾಣವಾಗಿದೆ. ವಿಶ್ವ ಪ್ರವಾಸೋದ್ಯಮ ಸಂಸ್ಥೆಯು ಪ್ರವಾಸಿಗರು ಎಂಬ ಪದವನ್ನು, "ವಿರಾಮ, ವ್ಯವಹಾರ ಮತ್ತು ಇತರ ಉದ್ದೇಶಗಳಿಗಾಗಿ ತನ್ನ ಎಂದಿನ ಪರಿಸರದಿಂದ ಹೊರಗಿನ ಸ್ಥಳಗಳಿಗೆ ಪ್ರಯಾಣಿಸಿ, ಅಲ್ಲಿ ಇಪ್ಪತ್ನಾಲ್ಕು (24) ಗಂಟೆಗಳಿಗಿಂತ ಹೆಚ್ಚು ಅವಧಿಗೆ ಉಳಿಯುವ ಮತ್ತು ಒಂದು ಸತತ ವರ್ಷಕ್ಕಿಂತ ಹೆಚ್ಚಾಗಿ ಉಳಿಯದ ಹಾಗೂ ತಾವು ಭೇಟಿ ನೀಡಿದ ಪ್ರದೇಶಗಳಲ್ಲಿ ಸಂಭಾವನೆ ಗಳಿಸುವ ಅಥವಾ ಪ್ರತಿಫಲ ಅಪೇಕ್ಷಿಸುವ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದ ವ್ಯಕ್ತಿಗಳು" ಎಂಬುದಾಗಿ ವ್ಯಾಖ್ಯಾನಿಸಿದೆ. ಪ್ರವಾಸೋದ್ಯಮವು ವಿಶ್ವವ್ಯಾಪಕವಾಗಿ ಜನಪ್ರಿಯವಾಗಿರುವ ಒಂದು ವಿರಾಮದ ಚಟುವಟಿಕೆಯಾಗಿ ಮಾರ್ಪಟ್ಟಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಭ್ರಷ್ಟಾಚಾರವು ಯಾವುದೇ ವ್ಯಕ್ತಿ ನಿಯಮಬಾಹಿರವಾದ ಮತ್ತು ತನಗೆ ತಮ್ಮವರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ವಸ್ತು ಯಾ ಹಣ ಪಡೆಯುವುದು ಅಥವಾ ಲಾಭಮಾಡಿಕೊಳ್ಳುವುದು ಎನ್ನಬಹುದು. ಸಾರ್ವಜನಿಕ ಸೇವಾ ಸ್ಥಾನದಲ್ಲಿರುವವರು, ಜನ ಪ್ರತಿನಿಧಿಗಳು ಅಥವಾ ಸರಕಾರದ ಅಧಿಕಾರಿಗಳು ಯಾ ಸೇವಕರು ನಿಯಮ ಬಾಹಿರವಾಗಿ ಅಥವಾ ತಮ್ಮ ಆ ಸ್ಥಾನವನ್ನು ಉಪಯೋಗಿಸಿಕೊಂಡು ನಿಯಮಕ್ಕಿಂತ ಹೆಚ್ಚಿನ ಅಥವಾ ತಮಗೆ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ಲಾಭ ಪಡೆಯುವುದು. ತಮ್ಮ ಅಧಿಕಾರವನ್ನು ನಿಯಮಕ್ಕೆ ವಿರುದ್ಧವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳುವುದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಕಾನೂನಿನಲ್ಲಿ, ಸೆರೆವಾಸ (ಬಂಧನ) ಎಂದರೆ ಕಾರಾಗೃಹದಂತಹ ಸಾಂಸ್ಥಿಕ ಸ್ಥಳದಲ್ಲಿ ಬಂಧಿಸಲಾಗಿರುವ ಅಥವಾ ಕೂಡಿ ಹಾಕಲಾಗಿರುವ ನಿರ್ದಿಷ್ಟ ಸ್ಥಿತಿ. ಒಂದು ನ್ಯಾಯಾಲಯವು ವಾಸ್ತವವಾಗಿ ವಿಧಿಸಿದ ಅನಿರ್ದಿಷ್ಟ ದಂಡನೆಯಲ್ಲಿನ ಕನಿಷ್ಠ ಅವಧಿಯು ಅಧಿಕೃತ ಸೆರೆವಾಸದ ಅವಧಿ ಎಂದು ಅಮೇರಿಕದ ಸರ್ವೋಚ್ಚ ನ್ಯಾಯಾಲಯ ಸೇರಿದಂತೆ ಅಮೇರಿಕ ಸಂಯುಕ್ತ ಸಂಸ್ಥಾನದ ನ್ಯಾಯಾಲಯಗಳು ಗುರುತಿಸಿವೆ. ಬೇರೆ ರೀತಿ ಹೇಳುವುದಾದರೆ, ಪ್ರತಿವಾದಿಯ ಅನಿರ್ದಿಷ್ಟ ದಂಡನೆಯ ಭಾಗವಾಗಿ ನ್ಯಾಯಾಲಯವು ಆದೇಶಿಸಿದ ಯಾವುದೇ "ಬೀದಿ ಸಮಯ"ವು (ಅಂದರೆ, ಪರೀಕ್ಷಾರ್ಥ ಶಿಕ್ಷಾಸ್ಥಗನ, ಪರೋಲ್ ಅಥವಾ ಮೇಲ್ವಿಚಾರಿತ ಬಿಡುಗಡೆ) ಸೆರೆವಾಸದ ಅವಧಿ ಎಂದು ಅನಿಸಿಕೊಳ್ಳುವುದಿಲ್ಲ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
೧೯೬೦ರ ದಶಕದಿಂದ ಆಚಾರ್ಯ ರಜನೀಶ' ಎಂದು, ೧೯೭೦ರ ದಶಕ ಹಾಗು ೧೯೮೦ರ ದಶಕಗಳಲ್ಲಿ ಭಗವಾನ್ ಶ್ರೀ ರಜನೀಶ್ ಎಂದು, ಮತ್ತು ೧೯೮೯ರಿಂದ osho ಎಂದೂ ಪರಿಚಿತವಾಗಿದ್ದ ಚಂದ್ರ ಮೋಹನ್ ಜೈನ್ (೧೧ ಡಿಸೆಂಬರ್ ೧೯೩೧ – ೧೯ ಜನವರಿ ೧೯೯೦) ಅಂತರರಾಷ್ಟ್ರೀಯ ಅನುಯಾಯಿಗಳನ್ನು ಹೊಂದಿರುವ ಒಬ್ಬ ಭಾರತೀಯ ಅನುಭಾವಿ, ಗುರು ಹಾಗು ಆಧ್ಯಾತ್ಮಿಕ ಶಿಕ್ಷಕರಾಗಿದ್ದರು. ತತ್ವಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಅವರು ೧೯೬೦ರ ದಶಕದಲ್ಲಿ ಒಬ್ಬ ಸಾರ್ವಜನಿಕ ಭಾಷಣಕಾರರಾಗಿ ಭಾರತದಾದ್ಯಂತ ಪ್ರಯಾಣ ಮಾಡಿದರು. ಸಮಾಜವಾದ, ಮಹಾತ್ಮಾ ಗಾಂಧಿ ಮತ್ತು ಸಾಂಸ್ಥಿಕ ಧರ್ಮದ ಬಗ್ಗೆ ಅವರ ಮುಚ್ಚುಮರೆಯಿಲ್ಲದ ಟೀಕೆ ಅವರನ್ನು ವಿವಾದಾತ್ಮವಾಗಿಸಿದವು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ .
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ರುಮಾಲು ಬಟ್ಟೆಯ ಸುತ್ತುವಿಕೆಯನ್ನು ಆಧರಿಸಿದ ಒಂದು ಬಗೆಯ ತಲೆಯುಡುಗೆ. ಅನೇಕ ಸ್ವರೂಪಗಳನ್ನು ಹೊಂದಿರುವ ಇದನ್ನು ವಿವಿಧ ದೇಶಗಳ ಪುರುಷರು ಸಾಂಪ್ರದಾಯಿಕ ತಲೆಯುಡುಗೆಯಾಗಿ ಧರಿಸುತ್ತಾರೆ. ರುಮಾಲು ಧರಿಸುವ ಮಹತ್ವದ ಸಂಪ್ರದಾಯಗಳನ್ನು ಹೊಂದಿರುವ ಸಮುದಾಯಗಳನ್ನು ಭಾರತೀಯ ಉಪಖಂಡ, ಅಫ಼್ಘಾನಿಸ್ತಾನ, ಆಗ್ನೇಯ ಏಷ್ಯಾ, ಅರಬ್ಬೀ ಪರ್ಯಾಯದ್ವೀಪ, ಮಧ್ಯಪ್ರಾಚ್ಯ, ನಿಕಟಪ್ರಾಚ್ಯ, ಮಧ್ಯ ಏಷ್ಯಾ, ಉತ್ತರ ಆಫ಼್ರಿಕಾ, ಆಫ಼್ರಿಕಾದ ಕೊಂಬು, ಉತ್ತರ ಅಮೇರಿಕಾ, ಮತ್ತು ಸ್ವಾಹಿಲಿ ಕರಾವಳಿಯ ಭಾಗಗಳಲ್ಲಿ ಕಾಣಬಹುದು.
ಒಂದು ಕಾಯದ ಮೇಲೆ ಪ್ರಯೋಗವಾಗುವ ನಿವ್ವಳ ಬಲವು ಚಲನೆತಯ ನೇರದಲ್ಲಿ ವರ್ತಿಸಿದಾಗ ಆಥವ ಶೂನ್ಯವಾದಾಗ ಆ ಕಾಯವು ಸರಳ ರೇಖೆಯಲ್ಲಿ ಚಲಿಸುತ್ತದೆ.ನಿವ್ವಳ ಬಲವು ಚಲನೆಯ ನೇರಕ್ಕೆ ಯಾವಾಗಲೂ ಒಂದು ಕೋನದಲ್ಲಿ ಅ೦ದರೆ ಓರೆಯಾಗಿ ವರ್ತಿಸಿದಾಗ ಕಾಯವು ತನ್ನ ಚಲನೆ ನೇರವನ್ನು ಬದಲಿಸಿ ವಕ್ರಪಥದಲ್ಲಿ ಚಲಿಸತೊಡಗುತ್ತದೆ.ವಕ್ರಪಥದಲ್ಲಿನ ಚಲನೆಗೆ ಅತಿ ಸರಳ ಉದಾಹರಣೆಯೆ೦ದರೆ ಏಕರೂಪ ವೃತ್ತೀಯ ಚಲನೆ.ವೃತೀಯ ಪಥದಲ್ಲಿ ಸ್ಥಿರ ಜವದಿ೦ದ ಆಗುತ್ತಿರುವ ಚಲನೆಯೇ ಏಕರೂಪ ವೃತ್ತೀಯ ಚಲನೆ. ಒಂದು ಸಣ್ಣ ಕಲ್ಲು ಅಥವಾ ಚೆ೦ಡಿಗೆ ದಾರ ಕಟ್ಟಿ ನಿಮ್ಮ ತಲೆಯ ಸುತ್ತ ಅದನ್ನು ಒ೦ದೇ ರೀತಿಯಲ್ಲಿ ಸುತ್ತಿಸಿದ್ದೇ ಆದರೆ ಅದು ವೃತೀಯ ಚಲನೆ ಆಗುತ್ತದೆ ಚ೦ದ್ರ ಭೂಮಿಯ ಸುತ್ತ ಪರಿಭ್ರಮಿಸುತ್ತದೆ.ಭೂಮಿಯು ಸೂರ್ಯನ ಸುತ್ತ ಪರಿಭ್ರಮಿಸುತ್ತದೆ.ಇವುಗಳ ಪಥಗಳು ಸರಿ ಸುಮಾರು ವೃತ್ತಗಳು.ಇವು ಏಕವೃತ್ತೀಯ ಚಲನೆಗೆ ಕೆಲವು ಉದಾಹರಣೆಗಳು. ವೃತ್ತೀಯ ಚಲನೆ ಒಂದು ಸ್ಥಳೀಯ ಚಿಲ್ಲರೆ ವ್ಯಾಪಾರ ಮಾಡುತ್ತಿರುವ ವೈದ್ಯಕೀಯ ಪೂರೈಕೆಗಳನ್ನು ಮತ್ತು ಉಪಕರಣವನ್ನು ಒದಗಿಸುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.