The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು. ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ಧಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ.
ರಂಗಭೂಮಿ ಚಟುವಟಿಕೆ ನಿರತರಿಗೂ ಒಂದು ಸ್ಮರಣೀಯ ದಿನ ಬೇಕು ಎನ್ನುವ ಕಾರಣಕ್ಕೆ 1962ರಿಂದ ವಿಶ್ವ ರಂಗಭೂಮಿ ದಿನವನ್ನು ಮಾರ್ಚ್ 27ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಪ್ಯಾರಿಸ್ನಲ್ಲಿ ಮುಖ್ಯ ಕಚೇರಿ ಹೊಂದಿರುವ ಅಂತರರಾಷ್ಟ್ರೀಯ ರಂಗಸಂಸ್ಥೆಯು ಪ್ರತಿವರ್ಷ ವಿಶ್ವದ ಯಾವುದಾದರೊಂದು ಭಾಷೆಯ ಹೆಸರಾಂತ ನಟ, ನಾಟಕಕಾರ, ನಿರ್ದೇಶಕ ಅಥವಾ ಸಂಘಟಕನಿಗೆ ಒಂದು ಸಂದೇಶ ಕೊಡುವಂತೆ ಕೇಳಿಕೊಂಡು ಅದನ್ನು ವಿಶ್ವದೆಲ್ಲೆಡೆ ಪಸರಿಸುತ್ತದೆ. ಕನ್ನಡಕ್ಕೂ ಒಮ್ಮೆ ಈ ಗೌರವ ಸಂದಿತ್ತು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕೀರ್ತನೆಕಾರರು ಮತ್ತು ಅವರ ಅಂಕಿತನಾಮಗಳು
೧೨ ನೆ ಶತಮಾನದ ಮೂಲ ಕೀರ್ತನೆಕಾರರಿಂದಿಡಿದು, ೨೦ನೇ ಶತಮಾನದ ಕೀರ್ತನೆಕಾರರವರೆವಿಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ಕೀರ್ತನೆಗಳನ್ನು ರಚಿಸಿ, ಅಂಕಿತನಾಮಗಳಿಂದ ತಮ್ಮನ್ನು ಗುರ್ತಿಸಿ ಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ಕೆಲವು ಕೀರ್ತನೆಕಾರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಥಾಮಸ್ ಜೆಫ್ರಿ "ಟಾಮ್" ಹ್ಯಾಂಕ್ಸ್ (ಜನನ ಜುಲೈ 9, 1956 ) ಒಬ್ಬ ಅಮೆರಿಕದ ನಟ, ನಿರ್ಮಾಪಕ, ಲೇಖಕ, ಮತ್ತು ನಿರ್ದೇಶಕ. ಹ್ಯಾಂಕ್ಸ್ ಮೊದಲಿಗೆ ಟೆಲಿವಿಷನ್ ಮತ್ತು ಕುಟುಂಬ-ನೋಡಲು ಯೋಗ್ಯವಾದ ಹಾಸ್ಯಪಾತ್ರಗಳಲ್ಲಿ ಅಭಿನಯಿಸಲು ಆರಂಭಿಸಿ, ನಂತರ ಭಾವಪೂರ್ಣ ಅಭಿನಯಕ್ಕೆ ಖ್ಯಾತಿ ಪಡೆದು, ಗಮನಾರ್ಹವಾದ ಪಾತ್ರಗಳಾದ ಫಿಲಡೆಲ್ಫಿಯಾ ಚಿತ್ರದಲ್ಲಿನ ಆಂಡ್ರೂ ಬೆಕೆಟ್, ಫಾರೆಸ್ಟ್ ಗಂಪ್ ನ ಫಾರೆಸ್ಟ್ ಗಂಪ್, ಅಪೋಲೋ 13 ರ ಕಮ್ಯಾಂಡರ್ ಜೇಮ್ಸ್ ಎ.ಲೊವೆಲ್, ಸೇವಿಂಗ್ ಪ್ರೈವೇಟ್ ರಿಯಾನ್ ನ ಕ್ಯಾಪ್ಟನ್ ಜಾನ್ ಹೆಚ್.ಮಿಲ್ಲರ್, ಡಿಸ್ನೀ ಯಲ್ಲಿನ ಷೆರೀಫ್ ವುಡಿಯ ಪಾತ್ರ, ಟಾಯ್ ಸ್ಟೋರಿ ಯಲ್ಲಿನ ಪಿಕ್ಸರ್ ಮತ್ತು ಕ್ಯಾಸ್ಟ್ ಎವೇ ಯಲ್ಲಿನ ಚಕ್ ನೋಲ್ಯಾಂಡ್ ಗಳಲ್ಲಿ ಭಾವಪೂರ್ಣ ಅಭಿನಯದ ಮೂಲಕ ಜನಪ್ರಿಯರಾಗಿದ್ದಾರೆ. ಹ್ಯಾಂಕ್ಸ್ ಸತತವಾಗಿ ಅತ್ಯುತ್ತಮ ನಟ ಎಂದು ಅಕಾಡೆಮಿ ಪ್ರಶಸ್ತಿ ಪಡೆದರು; 1993ರಲ್ಲಿ ಫಿಲಡೆಲ್ಫಿಯಾ ಚಿತ್ರದ ಅಭಿನಯಕ್ಕೆ ಮತ್ತು 1994ರಲ್ಲಿ ಫಾರೆಸ್ಟ್ ಗಂಪ್ ನ ಪಾತ್ರಕ್ಕೆ.
ತೋಟ ಸಸ್ಯಗಳು ಮತ್ತು ಪ್ರಕೃತಿಯ ಇತರ ರೂಪಗಳ ಪ್ರದರ್ಶನ, ಕೃಷಿ ಮತ್ತು ಅವುಗಳನ್ನು ಆನಂದಿಸುವುದಕ್ಕೆ ಮೀಸಲಿಡಲಾದ, ಸಾಮಾನ್ಯವಾಗಿ ಹೊರಾಂಗಣದಲ್ಲಿರುವ ಒಂದು ಯೋಜಿತ ಸ್ಥಳ. ತೋಟವು ನೈಸರ್ಗಿಕ ಮತ್ತು ಮಾನವ ನಿರ್ಮಿತ ವಸ್ತುಗಳು ಎರಡನ್ನೂ ಒಳಗೊಂಡಿರಬಹುದು. ಇಂದು, ಅತ್ಯಂತ ಸಾಮಾನ್ಯ ರೂಪವನ್ನು ನಿವಾಸದ ತೋಟವೆಂದು ಕರೆಯಲಾಗುತ್ತದೆ, ಆದರೆ ಸಾಂಪ್ರದಾಯಿಕವಾಗಿ ತೋಟ ಪದವು ಹೆಚ್ಚು ವಿಸ್ತೃತವಾಗಿದೆ.
ವಿವರಣೆ ಎಂದರೆ ಸಾಮಾನ್ಯವಾಗಿ ವಾಸ್ತವಾಂಶಗಳ ಒಂದು ಸಮೂಹವನ್ನು ವಿವರಿಸಲು ರಚಿಸಲಾದ ವಾಕ್ಯಗಳ ಸಮೂಹ. ಇದು ಆ ವಾಸ್ತವಾಂಶಗಳ ಕಾರಣಗಳು, ಸಂದರ್ಭ ಮತ್ತು ಪರಿಣಾಮಗಳನ್ನು ಸ್ಪಷ್ಟೀಕರಿಸುತ್ತದೆ. ವಾಸ್ತವಾಂಶಗಳು ಇತ್ಯಾದಿಗಳ ವಿವರಣೆಯು ನಿಯಮಗಳನ್ನು ಅಥವಾ ಸೂತ್ರಗಳನ್ನು ಸ್ಥಾಪಿಸಬಹುದು, ಮತ್ತು ಯಾವುದೇ ವಸ್ತುಗಳು, ಅಥವಾ ಪರೀಕ್ಷಿಸಲಾದ ವಿದ್ಯಮಾನಗಳ ಸಂಬಂಧದಲ್ಲಿ, ಅಸ್ತಿತ್ವದಲ್ಲಿರುವ ನಿಯಮಗಳು ಅಥವಾ ಸೂತ್ರಗಳನ್ನು ಸ್ಪಷ್ಟೀಕರಿಸಬಹುದು.
ಮೊಬೈಲ್ ಅಪ್ಲಿಕೇಶನ್ (Mobile app) ಒಂದು ತಂತ್ರಾಂಶ, ಮೊಬೈಲ್ ಸಾಧನಗಳಲ್ಲಿ ಮತ್ತು ಟ್ಯಾಬ್ಲೆಟ್, ಕಂಪ್ಯೂಟರ್ಗಳಲ್ಲಿ ಕೆಲಸ ಮಾಡಲು ವಿನ್ಯಾಸಗೊಳಿಸಲಾಗಿದೆ. ಮೊಬೈಲ್ ಕಂಪನಿಗಳು ಗ್ರಾಹಕರಿಗೆ ಇಮೇಲ್, ಕ್ಯಾಲೆಂಡರ್, ಮ್ಯಾಪಿಂಗ್ ಪ್ರೋಗ್ರಾಂ ಮತ್ತು ಸಂಗೀತ, ಮೊಬೈಲ್ ಅಪ್ಲಿಕೇಶನ್ಗಳನ್ನು ಪ್ರಿ ಇನ್ಸ್ಟಾಲ್ ಮಾಡಿ ಮಾರಾಟ ಮಾಡುತ್ತವೆ.ಕೆಲವು ಪೂರ್ವ ಅನುಸ್ಥಾಪಿತವಾದ ಅಪ್ಲಿಕೇಶನ್ಗಳು ಡಿಲೀಟ್ ಮಾಡಬಹುದು ಮತ್ತು ಕೆಲವೊಂದು ಸಾಧನಗಳಲ್ಲಿ ಅನಪೇಕ್ಷಿತ ಅಪ್ಲಿಕೇಶನ್ಗಳು ತೊಡೆದುಹಾಕಲು ಸಾಫ್ಟ್ವೇರ್ ಅನುಮತಿಸುವುದಿಲ್ಲ.ಅನಪೇಕ್ಷಿತ ಅಪ್ಲಿಕೇಶನ್ಗಳು ತೊಡೆದುಹಾಕಲು ಮೊಬೈಲ್ ರೂಟ್ ಮಾಡಬೇಕಾಗುತ್ತದೆ. ಪ್ರಿ ಇನ್ಸ್ಟಾಲ್ಲ್ಡ್ ಅಲ್ಲದ ಅಪ್ಪ್ಲಿಕೇಷನ್ಸ್ಗಳನ್ನು ವಿತರಣೆ ವೇದಿಕೆಗಳಾದ, ಅಪ್ಲಿಕೇಶನ್ ಅಂಗಡಿಗಳ(ಆಪ್ ಸ್ಟೋರ್) ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.ಇವು 2008 ರಲ್ಲಿ ಕಾಣಿಸಿಕೊಳ್ಳತೊಡಗಿದವು ಮತ್ತು ಮೊಬೈಲ್ ಆಪರೇಟಿಂಗ್ ಸಿಸ್ಟಂ ಮಾಲೀಕರಿಂದ ನಿರ್ವಹಿಸಲ್ಪಡುತ್ತಿದ್ದವು, ಆಪಲ್ ಆಪ್ ಸ್ಟೋರ್, ಗೂಗಲ್ ಪ್ಲೇ, ವಿಂಡೋಸ್ ಫೋನ್ ಸ್ಟೋರ್ ಮತ್ತು ಬ್ಲ್ಯಾಕ್ಬೆರಿ ಆಪ್ ವರ್ಲ್ಡ್.
ನುಡಿಗಟ್ಟು ಒಂದು ಭಾಷೆಯನ್ನಾಡುವ ಜನ ತಮ್ಮ ನಿತ್ಯೋಪಯೋಗದಲ್ಲಿ ಹಿಂದೆ ತಾವು ಹೇಳಿರದ, ಇನ್ನೊಬ್ಬ ಹೇಳಿದುದನ್ನು ಕೇಳಿರದ ಎಷ್ಟೋ ಹೊಸ ಮಾತುಗಳನ್ನು ಪ್ರಯೋಗಿಸಲು ಶಕ್ತರು. ಆದರೂ, ಆ ಮಾತುಗಳು ಕೇಳುವವನಿಗೆ ಅರ್ಥವಾಗುತ್ತದೆ. ಆ ಮಾತಿನ ಸಂದರ್ಭ ಮತ್ತು ಆ ಭಾಷೆಯ ಮೂಲಭೂತವಾದ ಕೆಲವು ಸಾಮಾನ್ಯ ನಿಯಮ, ಇದರ ಮೂಲಕ ಮಾತಾಡುವವನಿಗೂ ಕೇಳುವವನಿಗೂ ಇರುವ ಅನುಭವ ಸಾಮ್ಯದಿಂದ-ಹಿಂದೆ ಹೇಳದ, ಕೇಳದ ಮಾತುಗಳ ಅರ್ಥ ವೇದ್ಯವಾಗುತ್ತದೆ.
ಕೇಟಿ ಪೆರಿ (ಜನ್ಮನಾಮ ಕ್ಯಾಥರಿನ್ ಎಲಿಝಬೆತ್ ಹಡ್ಸನ್ ; ಜನನ ಅಕ್ಟೋಬರ್ ೨೫, ೧೯೮೪) ಅಮೆರಿಕದ ಗೀತರಚನಕಾರ್ತಿ, ಗಾಯಕಿ ಮತ್ತು ನಟಿಯಾಗಿದ್ದಾರೆ. ಕ್ಯಾಲಿಫೋರ್ನಿಯಾದ ಸಾಂತಾ ಬಾರ್ಬರಾದಲ್ಲಿ ಜನಿಸಿ, ಕ್ರಿಶ್ಚಿಯನ್ ಪ್ಯಾಸ್ಟರ್ ಮಾತಾಪಿತೃಗಳ ಆಸರೆಯಲ್ಲಿ ಬೆಳೆದ ಪೆರಿ ಕೇವಲ ಗಾಸ್ಪೆಲ್ ಸಂಗೀತವನ್ನು ಮಾತ್ರ ಕೇಳುತ್ತಾ ಬೆಳೆದರು ಹಾಗೂ ಬಾಲ್ಯದಲ್ಲಿ ತನ್ನ ಸ್ಥಳೀಯ ಚರ್ಚ್ ನಲ್ಲಿ ಹಾಡುತ್ತಿದ್ದರು. ಪ್ರೌಢಶಾಲೆಯ ಫ್ರೆಷ್ ಮನ್ ವರ್ಷದಲ್ಲಿ (ಮೊದಲ ವರ್ಷದಲ್ಲಿ) GED ಸಂಪಾದಿಸಿ ಸಂಗೀತ ವೃತ್ತಿಜೀವನವನ್ನು ಹಿಂಬಾಲಿಸಿ ಹೊರಟರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ. ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ,ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು ಅಂಕಿತನಾಮವೆನಿಸುತ್ತದೆ.
ಮಂಜಮ್ಮ ಜೋಗತಿ (ಜನನ ಮಂಜುನಾಥ ಶೆಟ್ಟಿ ; 20 ಮೇ 1957), ಉತ್ತರ ಕರ್ನಾಟಕದ ಜಾನಪದ ನೃತ್ಯ ರೂಪವಾದ ಜೋಗತಿ ನೃತ್ಯದ ಭಾರತೀಯ ಕನ್ನಡ ರಂಗಭೂಮಿ ನಟಿ, ಗಾಯಕಿ ಮತ್ತು ನರ್ತಕಿ. 2019 ರಲ್ಲಿ, ಅವರು ಜನಪದ ಕಲೆಗಳ ರಾಜ್ಯದ ಉನ್ನತ ಸಂಸ್ಥೆಯಾದ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಟ್ರಾನ್ಸ್ ವುಮನ್ ಆಗಿದ್ದಾರೆ. ಜನವರಿ 2021 ರಲ್ಲಿ , ಭಾರತ ಸರ್ಕಾರವು ಜನಪದ ಕಲಾಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.