The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮಫ್ತಿ ೨೦೧೭ರ ಕನ್ನಡ ಭಾಷೆಯ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರ. ನಾರ್ಥನ್ ರವರು ನಿರ್ದೇಶಿರುವ ಮೊದಲ ಚಿತ್ರ ಇದಾಗಿದೆ, ಜಯಣ್ಣ ಕಂಬೈನ್ಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರವು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿರುವ ಶ್ರೀಮುರುಳಿಯು ಭೂಗತ ದೊರೆ ಪಾತ್ರದಲ್ಲಿ ನಟಿಸಿರುವ ಶಿವರಾಜಕುಮಾರ್ ಅವರನ್ನು ಹುಡುಕಿಕೊಂಡು ಹೋಗುವ ಕಥೆಯಾಗಿದೆ.ಜುಲೈ ೨೦೧೬ ರಲ್ಲಿ ಚಿತ್ರದ ನಿರ್ಮಾಣ ಪ್ರಾರಂಭವಾಯಿತು ಮತ್ತು ೧ ಡಿಸೆಂಬರ್ ೨೦೧೭ ರಂದು ಚಿತ್ರ ಬಿಡುಗಡೆಯಾಯಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಎರಡು ಅಥವಾ ಅನೇಕ ನಾಮಪದಗಳು ಸೇರಿ ಸಮಸ್ತ ಪದವಾದಾಗ ಬೇರೊಂದು ಪದದ (ಅನ್ಯ ಪದದ) ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಎಂಬ ಹೆಸರು. ಹಣೆಗಣ್ಣ , ಮುಕ್ಕಣ್ಣ , ನಿಡುಮೂಗ - ಈ ಪದಗಳನ್ನು ಬಿಡಿಸಿ ಬರೆದರೆ , ಹಣೆಯಲ್ಲಿ + ಕಣ್ಣು ಉಳ್ಳವನು ಯಾರೋ ಅವನು - ಹಣೆಗಣ್ಣ (ಶಿವ) ಮೂರು + ಕಣ್ಣು ಉಳ್ಳವನು ಯಾರೋ ಅವನು - ಮುಕ್ಕಣ್ಣ (ಶಿವ)ನಿಡಿದು + ಮೂಗನ್ನು ಉಳ್ಳವನು ಯಾರೋ ಅವನು - ನಿಡುಮೂಗಹಣೆಯಲ್ಲಿ + ಕಣ್ಣು ಉಳ್ಳವ - ಈ ಎರಡೂ ಪದಗಳ ಅರ್ಥ ಇಲ್ಲಿ ಮುಖ್ಯವಲ್ಲ . ಈ ಎರಡೂ ಪದಗಳ ಅರ್ಥದಿಂದ ಹೊಳೆಯುವ ಅನ್ಯ ಪದ ಶಿವ ಮುಖ್ಯ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
[ರಾಜ್ಯ]ಗಳ ಅಥವಾ ದೊಡ್ಡ ಗುಂಪುಗಳ ಮಧ್ಯ ಆಯುಧಗಳ ಉಪಯೋಗದೊಂದಿಗೆ ನಡೆಯುವ ಕಾಳಗಗಳಿಗೆ 'ಯುದ್ಧ ಎಂದು ಹೆಸರು. ಯುದ್ಧಗಳು ಮುಖ್ಯವಾಗಿ [ಸಾರ್ವಭೌಮತ್ವ]ಕ್ಕಾಗಿ, ಪ್ರದೇಶಕ್ಕಾಗಿ, ಪದಾರ್ಥಗಳಿಗಾಗಿ, [ಧರ್ಮ]ಕ್ಕಾಗಿ ಅಥವಾ ಸಿದ್ಧಾಂತ(ideology)ಗಳಿಗಾಗಿ ನಡೆಯುತ್ತವೆ. ಒಂದು [ರಾಜ್ಯ]ದೊಳಗಿನ ಪಂಗಡಗಳ ಮಧ್ಯ ನಡೆಯುವ ಯುದ್ಧಗಳು [ಅಂತಃಕಲಹ] ಅಥವಾ ಒಳಯುದ್ಧ ಎಂದು ಕರೆಯಲ್ಪಡುತ್ತವೆ.
ಆರೋನ್ ಎಚ್. ಸ್ವಾರ್ಟ್ಜ್ (ಇಂಗ್ಲೀಷ್ನಲ್ಲಿ:Aaron H. Swartz, ನವೆಂಬರ್ ೮, ೧೯೮೬ – ಜನವರಿ ೧೧, ೨೦೧೩) ಒಬ್ಬ ಅಮೇರಿಕನ್ ಕಂಪ್ಯೂಟರ್ ಪ್ರೋಗ್ರಾಮರ್, ಲೇಖಕ, ಕ್ರಾಂತಿಕಾರಿ, ರಾಜಕೀಯ ದಾಖಲೆಕಾರ, ರಾಜಕೀಯ ಸಂಘಟಕ, ಮತ್ತು ಇಂಟರ್ನೆಟ್ ಕ್ರಾಂತಿಕಾರಿ ಆಗಿದ್ದರು. ಸ್ವಾರ್ಟ್ಜ್ RSSನ ರೂಪುರೇಷಗಳ ಸಂಗ್ರಹ "RSS 1.0"ದ ಸಹ ಲೇಖಕ ಕೂಡ, ಮತ್ತು ವೆಬ್ಸೈಟ್ ಫ್ರೇಮ್ವರ್ಕ್ web.py ಹಾಗೂ ಮುಕ್ತ ಗ್ರಂಥಾಲಯದ ಅರ್ಕಿಟೆಕ್ಚರ್ ಕೂಡ ಅಭಿವೃದ್ದಿ ಪಡಿಸಿದರು.
ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ. ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ.
ಗುಡುಗು ಮಿಂಚಿನಿಂದ ಉಂಟಾಗುವ ಧ್ವನಿ. ಮಿಂಚಿನಿಂದ ಇರುವ ದೂರ ಮತ್ತು ಅದರ ಸ್ವರೂಪವನ್ನು ಅವಲಂಬಿಸಿ, ಗುಡುಗು ತೀಕ್ಷ್ಣ, ಜೋರಾದ ಕರ್ಕಶ ಧ್ವನಿಯಿಂದ ಹಿಡಿದು ದೀರ್ಘ, ಕಡಿಮೆ ಮಟ್ಟದ ಶಬ್ದದವರೆಗೆ ವ್ಯಾಪಿಸಬಹುದು. ಮಿಂಚಿನಿಂದ ಉಂಟಾದ ಒತ್ತಡ ಹಾಗೂ ತಾಪಮಾನದಲ್ಲಿನ ಹಠಾತ್ ಹೆಚ್ಚಳವು ಮಿಂಚಿನ ಹೊಳಪಿನ ಸುತ್ತಲಿನ ಮತ್ತು ಅದರೊಳಗಿನ ಗಾಳಿಯು ಕ್ಷಿಪ್ರವಾಗಿ ಹಿಗ್ಗುವಂತೆ ಮಾಡುತ್ತದೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ರಾಷ್ಟ್ರೀಯ ಟೆಲಿವಿಷನ್ ವ್ಯವಸ್ಥಾ ಸಮಿತಿ ಅಥವಾ NTSC ಯು ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಜಪಾನ್, ದಕ್ಷಿಣ ಕೊರಿಯಾ, ತೈವಾನ್, ಬರ್ಮಾ ಮತ್ತು ಕೆಲವು ಶಾಂತಿಸಾಗರದ ದ್ವೀಪರಾಜ್ಯಗಳಲ್ಲಿ ಮತ್ತು ಪ್ರಾಂತ್ಯಗಳಲ್ಲಿ (ಭೂಪಟ ನೋಡಿ) ಚಾಲ್ತಿಯಲ್ಲಿರುವ ಕ್ರಮಾವಳಿ ಟೆಲಿವಿಷನ್ ವ್ಯವಸ್ಥೆ. NTSC ಎಂಬುದು ಪ್ರಸರಣದ ಗುಣಮಟ್ಟವನ್ನು ವೃದ್ಧಿಗೊಳಿಸಿದ ಯು.ಎಸ್.ನ ಮಾನದಂಡ ನಿರ್ಧರಿಸುವ ಸಂಸ್ಥೆಯ ಹೆಸರೂ ಹೌದು. ಮೊದಲ ಎನ್ ಟಿ ಎಸ್ ಸಿ ನೆಲೆಗಟ್ಟು 1941ರಲ್ಲಿ ಅಭಿವೃದ್ಧಿಗೊಳಿಸಲಾಗಿದ್ದು, ಆಗ ಬಣ್ಣದ ಟಿವಿಗೆ ಯಾವುದೇ ಏರ್ಪಾಡು ಇರಲಿಲ್ಲ.
ಐಸಾಕ್ ಅಸಿಮೋವ್ ರವರ ರೋಬಾಟ್ ಸರಿಣಿ
ಐಸಾಕ್ ಅಸಿಮೋವ್ ರವರ ಪಾಸಿಟ್ರಾನ್ ಚಾಲಿತ ರೋಬಾಟ್ ವಿಷಯಕ ಸಣ್ಣ ಕಥೆಗಳು ಮತ್ತು ಕಾದಂಬರಿಗಳು ರೋಬಾಟ್ ಸರಣಿಗಳಡಿ ಸೇರುತ್ತವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಪೆರಿಯಾರ್ ರಾಮಸ್ವಾಮಿ (ಸೆಪ್ಟೆಂಬರ್ ೧೭, ೧೮೭೯–ಡಿಸೆಂಬರ್ ೨೪, ೧೯೭೩) - ಇ.ವಿ.ಆರ್, ಇ.ವಿ. ರಾಮಸ್ವಾಮಿ ನಾಯ್ಕರ್, ತಂತೈ ಪೆರಿಯಾರ್, ಅಥವಾ ಪೆರಿಯಾರ್ ಎಂದು ಹಲವಾರು ಹೆಸರುಗಳಿಂದ ಪ್ರಖ್ಯಾತರಾಗಿದ್ದ "ಪೆರಿಯಾರ್ ರಾಮಸ್ವಾಮಿ" ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂನ ಸ್ಥಾಪಕ ಮತ್ತು "ತಮಿಳು ಸ್ವಾಭಿಮಾನ ಚಳುವಳಿ" ಯ ನಾಯಕರಾಗಿದ್ದರಲ್ಲದೇ, ಸ್ವಾತಂತ್ರ ಹೋರಾಟಗಾರರಾಗಿದ್ದರೂ ನಂತರ ಬ್ರಿಟಿಷರ ವಸಾಹತು ಆಡಳಿತವನ್ನು ಒಪ್ಪಿಕೊಂಡಿದ್ದರು. ತಮಿಳು ಭಾಷೆಯಲ್ಲಿ 'ಪೆರಿಯಾರ್' ಅಂದ್ರೆ ಗೌರವಾನ್ವಿತ, ಅಥವಾ ದೊಡ್ಡವರು ಎಂಬರ್ಥವಿದೆ.
ರುಮಾಲು ಬಟ್ಟೆಯ ಸುತ್ತುವಿಕೆಯನ್ನು ಆಧರಿಸಿದ ಒಂದು ಬಗೆಯ ತಲೆಯುಡುಗೆ. ಅನೇಕ ಸ್ವರೂಪಗಳನ್ನು ಹೊಂದಿರುವ ಇದನ್ನು ವಿವಿಧ ದೇಶಗಳ ಪುರುಷರು ಸಾಂಪ್ರದಾಯಿಕ ತಲೆಯುಡುಗೆಯಾಗಿ ಧರಿಸುತ್ತಾರೆ. ರುಮಾಲು ಧರಿಸುವ ಮಹತ್ವದ ಸಂಪ್ರದಾಯಗಳನ್ನು ಹೊಂದಿರುವ ಸಮುದಾಯಗಳನ್ನು ಭಾರತೀಯ ಉಪಖಂಡ, ಅಫ಼್ಘಾನಿಸ್ತಾನ, ಆಗ್ನೇಯ ಏಷ್ಯಾ, ಅರಬ್ಬೀ ಪರ್ಯಾಯದ್ವೀಪ, ಮಧ್ಯಪ್ರಾಚ್ಯ, ನಿಕಟಪ್ರಾಚ್ಯ, ಮಧ್ಯ ಏಷ್ಯಾ, ಉತ್ತರ ಆಫ಼್ರಿಕಾ, ಆಫ಼್ರಿಕಾದ ಕೊಂಬು, ಉತ್ತರ ಅಮೇರಿಕಾ, ಮತ್ತು ಸ್ವಾಹಿಲಿ ಕರಾವಳಿಯ ಭಾಗಗಳಲ್ಲಿ ಕಾಣಬಹುದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.