The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಆಧುನಿಕ ಮಾರುಕಟ್ಟೆ ಸಿದ್ಧಾಂತವು ಗ್ರಾಹಕನನ್ನು ಮಾರುಕಟ್ಟೆಯ 'ರಾಜ'ನೆಂದು ಪರಿಗಣಿಸಿದೆ. ಮಾರುಕಟ್ಟೆಯ ಎಲ್ಲಾ ಕಾರ್ಯಚಟುವಟಿಕೆಗಳು ಗ್ರಾಹಕನ ಅವಶ್ಯಕತೆಗಳು ಮತ್ತು ಅಭಿಲಾಷೆಗಳನ್ನು ತೃಪ್ತಿಪಡಿಸುವ ಉದ್ದೇಶವನ್ನು ಹೊಂದಿದೆ. ಆದರೆ, ವ್ಯವಹಾರ ಸಂಘಟನೆಗಳು ಹೆಚ್ಚುತ್ತಿರುವ ಪೈಪೋಟಿ, ಮಾರಾಟದ ಪ್ರಮಾಣವನ್ನು ಹೆಚ್ಚಿಸಿಕೊಳ್ಳುವ ಹಾಗೂ ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ ಅನುಚಿತ ವ್ಯಾಪಾರ ಪದ್ಧತಿಗಳಾದ ಕಲಬೆರಕೆ, ಕಾಳಸಂತೆ ವ್ಯಾಪಾರ, ತಪ್ಪು ಮಾಹಿತಿ ನೀಡುವ ಜಾಹಿರಾತು, ಮುಂತಾದವುಗಳಿಂದ ಗ್ರಾಹಕರನ್ನು ವಂಚಿಸುತ್ತಿದ್ದು, ಅವನ ರಕ್ಷಣೆ ಅತ್ಯಗತ್ಯವಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಯೋಜನಾ ಆಯೋಗ ಸ್ವತಂತ್ರ ಭಾರತದಲ್ಲಿ ಯೋಜನಾಬದ್ಧ ಆರ್ಥಿಕ ಬೆಳವಣಿಗೆಗೆ ಸರಕಾರಕ್ಕೆ ಸಲಹೆ ನೀಡಲು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಸ್ಥಾಪಿಸಲಾಗಿದ್ದ ಸಂಸ್ಥೆ.ಇದನ್ನು ಮಾರ್ಚ್ ೧೫,೧೯೫೦ರಲ್ಲಿ ಸ್ಥಾಪಿಸಲಾಯಿತು.ಜವಾಹರ್ಲಾಲ್ ನೆಹರೂಇದರ ಪ್ರಥಮ ಆಧ್ಯಕ್ಷರು.ಇದನ್ನು ಪ್ರಧಾನಿ ನರೇಂದ್ರ ಮೋದಿಯವರ ಆಶಯಕ್ಕೆ ಅನುಗುಣವಾಗಿ ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ ಎಂದು ಬದಲಾಯಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕೊರೊನಾ ವೈರಸ್ ಕಾಯಿಲೆ 2019 ( ಕೋವಿಡ್ ೧೯ ) ಎಂಬುದು ತೀವ್ರವಾದ ಉಸಿರಾಟದ ಸಮಸ್ಯೆಯಾದ ಸಿಂಡ್ರೋಮ್ ಕೊರೊನಾವೈರಸ್ ೨ (ಸಾರ್ಸ್-ಕೋವಿಡ್-೧೯) ನಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ . ಈ ರೋಗ ಮೊದಲು ೨೦೧೯ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿತು. ಈ ಕಾಯಿಲೆಯ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು,ವಾಸನೇ ಮತ್ತು ರುಚಿ ನಷ್ಟ ಉಸಿರಾಟದ ತೊಂದರೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಗ್ರಾಹಕನ ಅರ್ಥ: ಹಣವನ್ನು ಪಾವತಿಸಿ ಅಥವಾ ಪಾವತಿಸುವ ವಾಗ್ದಾನದ ಮೇರೆಗೆ ಸರಕು ಅಥವಾ ಸೇವೆಗಳನ್ನು ಸ್ವ೦ತ ಅಥವ ಅನ್ಯರ ಉಪಯೋಗಕ್ಕಾಗಿ ಖರೀದಿಸುವವನನ್ನು ಗ್ರಾಹಕ ಎ೦ದು ಕರೆಯುತ್ತಾರೆ. ಗ್ರಾಹಕನ ವ್ಯಾಖ್ಯೆ: ಗ್ರಾಹಕರ ಹಿತರಕ್ಷಣಾ ಕಾಯ್ದೆ ೧೯೮೬ರ ಪ್ರಕಾರ ಗ್ರಾಹಕನೆ೦ದರೆ, ೧. ಹಣ ಪಾವತಿಸಿ ಅಥವಾ ಪಾವತಿಸುವ ವಾಗ್ದಾನದ ಅನ್ವಯ ಸ್ವ೦ತ ಉಪಯೋಗಕ್ಕಾಗಿ ಸರಕುಗಳನ್ನು ಖರೀದಿಸುವವ ಅಥವಾ ಬಾಡಿಗೆಗೆ ಪಡೆಯುವವ ಅಥವಾ ಯಾವುದೇ ಸೇವೆಗಳನ್ನು ಪಡೆಯುವವ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
Maruthi H.B G.F.G.C Tumakur ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ನೈಸರ್ಗಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ .
ಸಮಾಜಶಾಸ್ತ್ರವು ಸಮಾಜ ವಿಜ್ಞಾನಗಳಲ್ಲಿ ಹೊಸದಾದ ಮತ್ತು ಬಹುಶೀಘ್ರವಾಗಿ ಬೆಳೆಯುತ್ತಿರುವ ಜ್ಞಾನ ಶಾಖೆಗಳಲ್ಲೊಂದು (ಸೋಷಿಯಾಲಜಿ). ಈ ಪರಿಕಲ್ಪನೆಯನ್ನು ಪ್ರಥಮಬಾರಿಗೆ ಫ್ರಾನ್ಸ್ನ ಸಾಮಾಜಿಕ ತತ್ತ್ವಜ್ಞಾನಿ ಆಗಸ್ಟ್ ಕಾಂಟ್ ಪ್ರಯೋಗಿಸಿದ (1829). ಮಾನವ ಮತ್ತು ಸಮಾಜದ ನಡುವಿನ ಪರಸ್ಪರ ಸಂಬಂಧ ಮತ್ತು ಪ್ರಭಾವ ಸ್ವರೂಪವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡುವ ಈ ವಿಷಯ ವ್ಯಾಪ್ತಿಯಲ್ಲಿ ಸಮಾಜದ ಎಲ್ಲ ಸಂಸ್ಥೆಗಳೂ ಆ ಸಂಸ್ಥೆಗಳಲ್ಲಿ ನಡೆಯುವ ಚಟವಟಿಕೆಗಳೂ ಕಾಲದಿಂದ ಕಾಲಕ್ಕೆ ಸಮಾಜದಲ್ಲಿ ತಲೆದೋರುವ ಬದಲಾವಣೆಗಳೂ ಪ್ರಮುಖ ಸ್ಥಾನ ಪಡೆದಿವೆ.
ಬ್ಯಾಂಕುಗಳು ಮುಖ್ಯವಾಗಿ ಜನರಿಂದ ಉಳಿತಾಯದ ಹಣವನ್ನು ಸಂಗ್ರಹಿಸಿ,ಅವಶ್ಯ ವಿರುವವರಿಗೆ ಸಾಲಗಳನ್ನು ನೀಡುತ್ತವೆ.ಠೇವಣೆದಾರರಿಗೆ ಬ್ಯಾಂಕುಗಳು ಬಡ್ದಿಯನ್ನು ಬೇಕಾಗಿರುವುದರಿಂದ ಅವರು ಸಾಲ ಕೊಟ್ಟು ಲಾಭವನ್ನು ಗಲಿಸಬೇಕು. ಠೇವಣಿಗಳನ್ನು ಚಾಲ್ತಿ ಠೇವಣಿ, ಉಳಿತಾಯ ಬ್ಯಾಂಕು ಖಾತೆ ಠೇವಣಿ ಮತ್ತು ಸ್ಥಿರ ಠೇವಣಿ ಎಂದು ಮೂರು ವಿಧವಾಗಿ ವರ್ಗೀಕರಿಸಲಾಗುತ್ತದೆ. ಸಾಮಾನ್ಯವಾಗಿ ಮಾಧ್ಯಮವರ್ಗದ ಜನರು ಬಡ್ದಿಯ ನಿರೀಕ್ಶೆಯಿಂದ ತಮ್ಮ ಹಣವನ್ನು ಉಳಿತಾಯ ಬ್ಯಾಂಕು ಖಾತೆ ಅಥವ ಸ್ಥಿರ ಠೇವಣಿಗಳಲ್ಲಿ ತೊಡಗಿಸುತ್ತಾರೆ.ಹೆಚ್ಹಿನ ಹಣಕಾಸು ವ್ಯವಹಾರವಿರುವ ಗ್ರಾಹಕರು ಅಥವಾ ಸಂಸ್ಥೆಗಳು ಚಾಲ್ತಿ ಖಾತೆಯನ್ನು ತೆರೆಯುತ್ತಾರೆ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ರಾ.ಹ.ದೇಶಪಾಂಡೆ ಯವರಿಂದ ಸ್ಥಾಪಿತವಾದ ಕರ್ನಾಟಕ ವಿದ್ಯಾವರ್ಧಕ ಸಂಘ ನಾಡು ನುಡಿಗಳ ಸೇವೆಯನ್ನೇ ಉದ್ದೇಶವಾಗಿಟ್ಟುಕೊಂಡು ಧಾರವಾಡದಲ್ಲಿ ೧೮೯೦ರ ಜುಲೈ ೨೦ರಂದು ಪ್ರಾರಂಭವಾದ ಒಂದು ಮುಖ್ಯ ಸಂಸ್ಥೆ. ಅಖಿಲ ಕರ್ನಾಟಕದ ವ್ಯಾಪ್ತಿಯನ್ನುಳ್ಳ ಸಂಸ್ಥೆಗಳಲ್ಲಿ ಮೊಟ್ಟ ಮೊದಲಿನದೆನಿಸಿದ ಈ ಸಾಂಸ್ಕೃತಿಕ ಸಂಸ್ಥೆಯ ಪ್ರಥಮ ಅಧ್ಯಕ್ಷ ಶಾಮರಾವ್ ಕೈಕಿಣಿ, ಪ್ರಥಮ ಕಾರ್ಯದರ್ಶಿ ರಾ.ಹ.ದೇಶಪಾಂಡೆ ಮುಂಬಯಿ, ಮದ್ರಾಸ್, ಪೂನಾ, ಅಹಮ್ಮದನಗರ, ಹೈದ್ರಾಬಾದ್, ಕಾರವಾರ, ಮಂಗಳೂರು, ಮೈಸೂರು,ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಮಡಿಕೇರಿ ಇತ್ಯಾದಿ ಕರ್ನಾಟಕದ ಒಳ ಹೊರಗಿನ ಪಟ್ಟಣಗಳ ಕನ್ನಡಿಗರು. ಕನ್ನಡಾಭಿಮಾನಿಗಳು ಇದರ ಆಜೀವ ಸದಸ್ಯರಾಗಿ ಅಂದಿಗೆ ಈ ಸಂಸ್ಥೆಯನ್ನು ಇಡೀ ಕರ್ನಾಟಕದ ಪ್ರಾತಿನಿಧಿಕ ಸಂಸ್ಥೆಯನ್ನಾಗಿ ಮಾಡಿದರು.