The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
Maruthi H.B G.F.G.C Tumakur ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ನೈಸರ್ಗಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಎಲೆಕ್ಟ್ರಾನಿಕ್ ಕಾಮರ್ಸ್, ಸಾಮಾನ್ಯವಾಗಿ (ಇ-ಶಾಪಿಂಗ್)ಇ-ಕಾಮರ್ಸ್ ಅಥವಾ eCommerce ಎಂದೇ ಪರಿಚಿತ. ಇದರಲ್ಲಿ ಯಾವುದೇ ವಸ್ತು ಗಳನ್ನು ಅಥವಾ ಸೇವೆಗಳನ್ನು ಎಲೆಕ್ಟ್ರಾನಿಕ್ ವ್ಯವಸ್ಥೆಗಳಾದ ಅಂತರಜಾಲ ಹಾಗು ಇತರ ಕಂಪ್ಯೂಟರ್ ಜಾಲಗಳ ಮೂಲಕ ಕೊಂಡುಕೊಳ್ಳುವುದು ಅಥವಾ ಮಾರಾಟಮಾಡುವುದು. ಇಲೆಕ್ಟ್ರಾನಿಕವಾಗಿ ನಡೆಸಲಾಗುತ್ತಿರುವ ವ್ಯಾಪಾರದ ಪ್ರಮಾಣವು ವ್ಯಾಪಕವಾದ ಅಂತರಜಾಲದ ಬಳಕೆಯಿಂದ ಅಸಾಧಾರಣ ರೀತಿಯಲ್ಲಿ ಅಭಿವೃದ್ಧಿಯಾಗಿದೆ.
ಇದು ವೀರಶೈವರ ಪೀಠ ಪಂಚಪೀಠಗಳಲ್ಲಿ ಮೊದಲನೆಯದು. ರಂಭಾಪುರಿ ಪೀಠವು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೋನ್ನೂರಿನಲ್ಲಿ ಸ್ಥಾಪಿತಗೊಂಡಿದೆ. ಶ್ರೀ ರಂಭಾಪುರಿ ಪೀಠದ ಪರಂಪರೆ ಶ್ರೀ ಜಗದ್ಗುರು ರೇವಣಾರಾಧ್ಯ (ರೇವಣಸಿದ್ಧ)ರು - ಶ್ರೀ ಕೊಲನುಪಾಕದ (ಕೊಲ್ಲಿಪಾಕಿ) ಶ್ರೀ ಸೋಮೇಶ್ವರ ಶಿವಲಿಂಗದಿಂದ ಆವಿರ್ಭವಿಸಿದ ಶ್ರೀ ಜಗದ್ಗುರು ರೇವಣಾರಾಧ್ಯರು ಪ್ರತಿಯೊಂದು ಯುಗದಲ್ಲೂ ಅವತರಿಸುತ್ತಾ ಬಂದಿದ್ದಾರೆ.
ಆಹಾರ ಸರಪಳಿಗಳನ್ನು ಮೊದಲು ೯ ನೇ ಶತಮಾನದ ಆಫ್ರಿಕನ್ ಅರಬ್ ವಿಜ್ಞಾನಿ ಮತ್ತು ತತ್ವಜ್ಞಾನಿ ಅಲ್ ಜಹಿಜ್ ಪರಿಚಯಿಸಿದರು. ನಂತರ ೧೯೨೭ ರಲ್ಲಿ ಪ್ರಕಟವಾದ ಚಾರ್ಲ್ಸ್ ಎಲ್ಟನ್ರ ಪುಸ್ತಕದಲ್ಲಿ ಜನಪ್ರಿಯಗೊಳಿಸಲಾಯಿತು. ಇದರಲ್ಲಿ ಆಹಾರ ಜಾಲದ ಪರಿಕಲ್ಪನೆಯನ್ನು ಪರಿಚಯಿಸಲಾಯಿತು.ಒಂದು ಸರಪಣಿಯ ಉದ್ದವು ಪೌಷ್ಟಿಕಾಂಶಗಳ ಗ್ರಾಹಕ ಮತ್ತು ಜಾಲ ತಳದ ನಡುವಿನ ಕೊಂಡಿಗಳ ಸಂಖ್ಯೆಯಾಗಿರುತ್ತದೆ ಮತ್ತು ಒಂದು ಸಂಪೂರ್ಣ ಜಾಲದ ಸರಾಸರಿ ಸರಪಣಿ ಉದ್ದವು ಆಹಾರ ಜಾಲದಲ್ಲಿನ ಎಲ್ಲಾ ಸರಪಣಿಗಳ ಉದ್ದಗಳ ಅಂಕಗಣಿತ ಸರಾಸರಿಯಾಗಿರುತ್ತದೆ.
ಏಷ್ಯಾ ಪ್ರಪಂಚದ ಅತಿ ದೊಡ್ಡ ಹಾಗೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಖಂಡವಾಗಿದೆ. ಭೂಗೋಳದ ಸುಮಾರು ೮.೭% ಪ್ರದೇಶವನ್ನು ಈ ಖಂಡ ಆವರಿಸಿದೆ ಮತ್ತು ಪ್ರಪಂಚದ ಸುಮಾರು ೬೦% ಜನಸಂಖ್ಯೆಯನ್ನು ಹೊಂದಿದೆ. ಪಾರಂಪರಿಕವಾಗಿ ಏಷ್ಯಾದ ಪಶ್ಚಿಮದ ಪರಿಮಿತಿಯು ಸುಯೆಜ್ ಕಾಲುವೆ, ಯೂರಲ್ ಪರ್ವತ ಶ್ರೇಣಿಯೆಂದು ಹಾಗು ಉತ್ತರ ಪರಿಮಿತಿಯು ಕಾವ್ಕಸಸ್ ಪರ್ವತ ಶ್ರೇಣಿ ಹಾಗು ಕ್ಯಾಸ್ಪಿಯನ್ ಸಮುದ್ರ ಮತ್ತು ಕಪ್ಪು ಸಮುದ್ರ(ಬ್ಲ್ಯಕ್ ಸೀ)ಗಳೆಂದು ಪರಿಗಣಿಸಲ್ಪಡುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ದಂಡಯಾತ್ರೆ ಎಂದರೆ ಯುದ್ಧದಲ್ಲಿ ಒಂದು ನಿರ್ದಿಷ್ಟ ಘಟ್ಟವಾಗಿ ಕೈಗೊಂಡ ಸೇನಾಕಾರ್ಯಾಚರಣೆ ಯಾ ಪರಸ್ಪರ ಸಂಬಂಧಿತ ಕಾರ್ಯಾಚರಣೆಗಳು ಅಥವಾ ಒಟ್ಟಾರೆ ಯುದ್ಧನೀತಿಯ (ಸ್ಟ್ರ್ಯಾಟಜಿ) ಕಾರ್ಯಾಚರಣೆ (ಕೇಂಪೇನ್). ವಿಶೇಷ ಕಾರಣಕ್ಕಾಗಿ ನಡೆಸುವ ಸೇನಾ ಮುನ್ನಡೆಗೂ ಈ ಹೆಸರುಂಟು. ದೀರ್ಘಾವಧಿಯ ಯುದ್ಧದಲ್ಲಿ ಒಂದು ಮಹಾನಾಯಕತ್ವದ ಅಧೀನವಾಗಿ ಹಲವಾರು ಉಪನಾಯಕತ್ವಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ವಿವಿಧ ಬಗೆಯ ಕದನಗಳಲ್ಲಿ ಉದ್ಯುಕ್ತವಾಗಿರಬಹುದು.
ಮಯನ್ಮಾರ್ ( ಅಧಿಕೃತವಾಗಿ ಮಯನ್ಮಾರ್ ಒಕ್ಕೂಟ -- ಉಚ್ಛಾರ:-Myanmar:(myan-mar/ Listeni/miɑːnˈmɑr/ mee-ahn-mar, /miˈɛnmɑr/ mee-en-mar or /maɪˈænmɑr/ my-an-mar (also with the stress on first syllable); Burmese pronunciation:ಮೀಯಾನ್ಮಾರ್ [mjəmà])೧,officially the Republic of the Union of Myanmar and also known as Burma) ಆಗ್ನೇಯ ಏಷ್ಯಾದ ಮುಖ್ಯಭೂಭಾಗದಲ್ಲಿನ ಅತ್ಯಂತ ದೊಡ್ಡ ರಾಷ್ಟ್ರವಾಗಿದೆ. ೧೯೪೮ರ ಜನವರಿ ೪ ರಂದು ಯುನೈಟೆಡ್ ಕಿಂಗ್ಡಂ ఇంದ ಸ್ವಾತಂತ್ರ್ಯ ಪಡೆದ ಈ ನಾಡು ಅಂದು ಬರ್ಮಾ ಒಕ್ಕೂಟವೆಂದು ಕರೆಯಲ್ಪಟ್ಟಿತು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಆಂಟನ್ ಪವ್ಲೋವಿಚ್ ಚೆಕೊವ್ (Russian: Антон Павлович Чехов, pronounced [ɐnˈton ˈpavləvʲɪtɕ ˈtɕɛxəf]; 29 January [O.S. 17 January] 1860 – 15 July [O.S. 2 July] 1904) ರಷ್ಯನ್ ಸಣ್ಣ ಕಥೆಗಾರ, ನಾಟಕಕಾರ ಹಾಗು ವೈದ್ಯ. ಇವರನ್ನು ವಿಶ್ವದ ಸಾಹಿತ್ಯ ಇತಿಹಾಸದಲ್ಲೇ ಅತ್ಯುತ್ತಮ ಸಣ್ಣ ಕಥೆಗಾರನೆಂದು ಪರಿಗಣಿಸಲಾಗಿದೆ. ನಾಟಕಕಾರರಾಗಿ ಅವರ ವೃತ್ತಿಜೀವನದಲ್ಲಿ ನಾಲ್ಕು ಪ್ರಸಿದ್ಧ ನಾಟಕಗಳನ್ನು ಬರೆದಿದ್ದಾರೆ ಹಾಗು ಅವರ ಅತ್ಯುತ್ತಮ ಸಣ್ಣ ಕಥೆಗಳಿಗೆ ಬರಹಗಾರರು ಹಾಗು ವಿಮರ್ಶಕರು ಅತೀವ ಮನ್ನಣೆಯನ್ನು ನೀಡುತ್ತಾರೆ.
ಹೋಟೆಲ್ ಅಲ್ಪ ಅವಧಿಗೆ ಸಂದಾಯಿತ ವಸತಿಯನ್ನು ಒದಗಿಸುವ ಒಂದು ನೆಲೆ. ಹಿಂದೆ ಒದಗಿಸಲಾಗುತ್ತಿದ್ದ ಒಂದು ಹಾಸಿಗೆ, ಒಂದು ಬೀರು, ಒಂದು ಸಣ್ಣ ಮೇಜು ಮತ್ತು ಒಂದು ವಾಶ್ ಬೇಸಿನ್ ಇರುವ ಕೇವಲ ಒಂದು ಕೋಣೆಯನ್ನು ಒಳಗೊಂಡ ಮೂಲ ವಸತಿ ಸೌಕರ್ಯದ ವ್ಯವಸ್ಥೆಯನ್ನು ಸ್ನಾನಗೃಹಗಳು ಮತ್ತು ಹವಾನಿಯಂತ್ರಣ ಅಥವಾ ವಾಯುಗುಣ ನಿಯಂತ್ರಣವನ್ನು ಒಳಗೊಂಡ ಆಧುನಿಕ ಸೌಲಭ್ಯಗಳಿರುವ ಕೋಣೆಗಳಿಂದ ಬದಲಿಸಲಾಗಿದೆ. ದೂರವಾಣಿ, ಅಲಾರಂ ಗಡಿಯಾರ, ಟೀವಿ, ತಿಜೋರಿ, ಲಘು ಆಹಾರ ಮತ್ತು ಪಾನೀಯಗಳಿರುವ ಮಿನಿ-ಬಾರ್, ಮತ್ತು ಚಹಾ ಹಾಗು ಕಾಫ಼ಿ ತಯಾರಿಸಲು ಇರುವ ಸೌಲಭ್ಯಗಳು ಹೋಟೆಲ್ ಕೋಣೆಗಳಲ್ಲಿ ಕಾಣುವ ಹೆಚ್ಚುವರಿ ಸಾಮಾನ್ಯ ವಸ್ತುಗಳಾಗಿವೆ.ಈಗಿನ ಕಾಲದ ಗಣನೀಯ ಹೋಟೆಲ್ಗಳಲ್ಲಿ ಈಜು ಕೊಳಗಳನ್ನು ಸಹ ಕಾಣಬಹುದು.ಅದಲ್ಲದೆ ಈ ನಡುವೆ ಅಧಿಕೃತ ಸಭೆಗಳನ್ನು ಹೋಟೆಲ್ಗಳಲ್ಲಿಯೇ ನಡೆಸುತ್ತಾರೆ.
ಮರ್ಸಿಡಿಸ್-ಬೆನ್ಜ್ ಎಂಬುದು ಐಷಾರಾಮಿ ವಾಹನಗಳು/ಕಾರುಗಳು, ಬಸ್ಗಳು, ಸಾರೋಟು/ಜಟಕಾ/ಕೋಚುಗಳು, ಹಾಗೂ ಟ್ರಕ್ಗಳ ಜರ್ಮನ್ ಉತ್ಪಾದಕ ಸಂಸ್ಥೆ. ಪ್ರಸ್ತುತ ಇದು ಮೂಲ ಕಂಪೆನಿ, ಡೈಮ್ಲರ್ AG (ಹಿಂದಿನ ಡೈಮ್ಲರ್ ಕ್ರಿಸ್ಲರ್ AG)ನ ವಿಭಾಗ ಮಾತ್ರವೇ ಆಗಿದ್ದು, ಹಿಂದೆ ಡೈಮ್ಲರ್ -ಬೆನ್ಝ್/ಬೆನ್ಜ್ನ ಮಾಲೀಕತ್ವದಲ್ಲಿತ್ತು. ಮರ್ಸಿಡಿಸ್-ಬೆನ್ಜ್ ಕಾರ್ಲ್ ಬೆನ್ಝ್/ಬೆನ್ಜ್'ರ ೧೮೮೬ರ, ಜನವರಿಯಲ್ಲಿ ನಿರ್ಮಿಸಲಾದ ಪ್ರಥಮ ಪೆಟ್ರೋಲ್-ಚಾಲಿತ ಮೋಟರ್ಸೈಕಲ್/ಮೋಟಾರುದ್ವಿಚಕ್ರ/ದ್ವಿಚಕ್ರವಾಹನ ಹಾಗೂ ಗಾಟ್ಲೀಬ್ ಡೈಮ್ಲರ್ರ ವಾಹನ ಹಾಗೂ ಅದೇ ವರ್ಷದಲ್ಲಿ ವಾಸ್ತುಶಿಲ್ಪಿ/ಎಂಜಿನಿಯರ್ ವಿಲ್ಹೆಲ್ಮ್ ಮೇಬ್ಯಾಚ್/ಮೇಬಾಷ್'ರು ೧೮೭೩ರ ಬೊಲ್ಲೀ ಹಬೆ-ಎಂಜಿನ್ ವಾಹನಕ್ಕೆ ಪೆಟ್ರೋಲ್ ಎಂಜಿನ್ ಸೇರಿಸಿ ನಿರ್ಮಿಸಿದ ಪರಿವರ್ತಿತ ವಾಹನಗಳನ್ನು ಆಧರಿಸಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಸ್ಮಾರ್ಟ್ ಫೋನ್ ೧೯೯೯ ರಲ್ಲಿ ಜಪಾನಿನ ಕಂಪನಿ ಎನ್.ಟಿ.ಟಿ ಡೊಕೊಮೋ ಅವರು ಮೊದಲ ಬಾರಿಗೆ ಬಿಡುಗಡೆ ಮಾಡಿದರು. ಸ್ಮಾರ್ಟ್ ಫೋನ್ ಮೊಬೈಲ್ ಬಳಕೆಗೆ ಉಪಯುಕ್ತವಾಗಿದೆ. ಹಾಗು ಇತರ ಲಕ್ಷಣಗಳು ಹೊಂದಿದೆ ಸಾಮಾನ್ಯವಾಗಿ ಒಂದು ಕ್ಯಾಲೆಂಡರ್, ಮೀಡಿಯಾ ಪ್ಲೇಯರ್, ಜಿಪಿಎಸ್ ಸಂಚರಣೆ ಘಟಕ, ಡಿಜಿಟಲ್ ಕ್ಯಾಮೆರಾ ಮತ್ತು ಡಿಜಿಟಲ್ ವೀಡಿಯೊ ಕ್ಯಾಮರಾ ನೇಮಕಾತಿಗಳನ್ನು ಮಾಡುವ ಒಂದು ವೈಯಕ್ತಿಕ ಡಿಜಿಟಲ್ ಸಹಾಯಕ ಪಿಡಿಎ ಸೇರಿವೆ.
ದಿ ಮೆಟ್ರಿಕ್ಸ್ ಒಂದು(West Frisian) ವೈಜ್ಞಾನಿಕ ಕಾಲ್ಪನಿಕ ಕತೆ-ಸಾಹಸಪ್ರಧಾನ ಚಲನಚಿತ್ರವಾಗಿದ್ದು, ಇದನ್ನು ಬರೆದು ನಿರ್ದೇಶನ ಮಾಡಿದವರು ಲಾರ್ರಿ ಮತ್ತು ಎಂಡೀ ವಾಚೋಸ್ಕಿ ಮತ್ತು ಅಭಿನಯಿಸಿದವರು ಕೀನು ರೀವ್ಸ್, ಲಾರೆನ್ಸ್ ಫೀಶ್ಬರ್ನ್, ಕೇರ್ರೀ-ಆಯ್ನೆ ಮೊಸ್ ಜೋ ಪೆಂಟೋಲಿಯಾನೊ ಮತ್ತು ಹ್ಯೂಗೋ ವೀವಿಂಗ್. ಇದು ಮೊದಲು ಅಮೇರಿಕಾ ದೇಶದದಲ್ಲಿ ಮಾರ್ಚ್ 31, 1999 ರಂದು ಬಿಡುಗಡೆಗೊಂಡಿತು ಮತ್ತು ಇದು ಈ ಚಲನಚಿತ್ರ ಸರಣಿಯ, ಹಾಸ್ಯ ಪುಸ್ತಕಗಳು, ವಿಡಿಯೊ ಆಟಗಳು ಮತ್ತು ಎನಿಮೇಶನ್ಗಳ ಮೊದಲ ಭಾಗವಾಗಿದೆ. ಈ ಚಲನಚಿತ್ರವು ಭವಿಷ್ಯವೊಂದನ್ನು ವಿವರಿಸುತ್ತಿದ್ದು, ಅದರಲ್ಲಿ ನಿಜವಾಗಿ ಮನುಷ್ಯರು ತಿಳಿದುಕೊಳ್ಳುವ ವಾಸ್ತವಿಕತೆ ಮೆಟ್ರಿಕ್ಸ್ ಆಗಿರುತ್ತದೆ: ಇದು ಸಚೇತನ ಯಂತ್ರಗಳು ನಕಲು ಮಾಡಿದ ವಾಸ್ತವಿಕತೆಯಾಗಿದ್ದು, ಇದನ್ನು ಮನುಷ್ಯರನ್ನು ತಣಿಸಲು ಮತ್ತು ವಶಪಡಿಸಿಕೊಳ್ಳಲು, ಮತ್ತು ಅದೇ ಸಮಯದಲ್ಲಿ ಅವರ ದೇಹದ ಶಾಖ ಮತ್ತು ವಿದ್ಯಚ್ಛಕ್ತಿಯನ್ನು ಶಕ್ತಿಯ ಆಕರಗಳಾಗಿ ಬಳಸಿಕೊಳ್ಳಲು ಮಾಡಲಾಗಿರುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಐರನ್ ಮ್ಯಾನ್ ಅದೇ ಹೆಸರಿನ ಮಾರ್ವಲ್ ಕಾಮಿಕ್ಸ್ ಪಾತ್ರದ ಮೇಲೆ ಆಧಾರಿತವಾದ ೨೦೦೮ರ ಒಂದು ಅಮೇರಿಕಾದ ಸೂಪರ್ಹೀರೊ ಚಿತ್ರ. ಅದು ಮಾರ್ವಲ್ ಸಿನಮಾ ಪ್ರಪಂಚ ಮತ್ತು ಐರನ್ ಮ್ಯಾನ್ ಚಲನಚಿತ್ರ ಸರಣಿಯ ಮೊದಲ ಕಂತು. ಜಾನ್ ಫ಼ಾವ್ರೊ ನಿರ್ದೇಶಿತ ಈ ಚಿತ್ರದ ತಾರಾಗಣದಲ್ಲಿ ಟೋನಿ ಸ್ಟಾರ್ಕ್ ಪಾತ್ರದಲ್ಲಿ ರಾಬರ್ಟ್ ಡೌನಿ ಜೂನಿಯರ್ ಇದ್ದಾರೆ, ಒಂದು ಶಕ್ತಿಚಾಲಿತ ಹೊರಕವಚವನ್ನು ನಿರ್ಮಿಸುವ ಮತ್ತು ತಾಂತ್ರಿಕವಾಗಿ ಮುಂದುವರೆದ ಸೂಪರ್ಹೀರೊ ಐರನ್ ಮ್ಯಾನ್ ಆಗುವ ಒಬ್ಬ ಉದ್ಯಮಿ ಮತ್ತು ಕುಶಲ ಇಂಜಿನಿಯರ್ ಆಗಿ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.