The most-visited ಕನ್ನಡ Wikipedia articles, updated daily. Learn more...
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತೀಯ ಸಶಸ್ತ್ರ ದಳದ ಅತಿ ದೊಡ್ಡ ವಿಭಾಗವಾಗಿರುವ ಭಾರತೀಯ ಭೂಸೇನೆಯು ನೆಲದ ಮೇಲಿನ ಸೈನಿಕ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತದೆ. ರಾಷ್ಟ್ರೀಯ ಭದ್ರತೆ, ಬಾಹ್ಯ ಆಕ್ರಮಣ ಹಾಗೂ ಅಪಾಯಗಳಿಂದ ಭಾರತದ ರಕ್ಷಣೆ ಹಾಗೂ ತನ್ನ ಸರಹದ್ದಿನ ಒಳಗೆ ಶಾಂತಿ ಹಾಗೂ ಭದ್ರತೆಯನ್ನು ಕಾಪಾಡುವುದು ಇದರ ಪ್ರಾಥಮಿಕ ಗುರಿಯಾಗಿದೆ. ಇಬ್ಬರು ಅಧಿಕಾರಿಗಳಿಗೆ ಪಂಚತಾರಾ ದರ್ಜೆಯಾದ ಫೀಲ್ಡ್ ಮಾರ್ಷಲ್ ದರ್ಜೆಯನ್ನು ಪ್ರದಾನ ಮಾಡಲಾಗಿದೆ, ಇದೊಂದು ಶ್ರೇಷ್ಠ ಗೌರವದ ವಿಧ್ಯುಕ್ತ ಸ್ಥಾನವಾಗಿದೆ.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷಿಣಿಸುತಿದ್ದೆ , ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೊರೊನಾ ವೈರಸ್ ಕಾಯಿಲೆ 2019 ( ಕೋವಿಡ್ ೧೯ ) ಎಂಬುದು ತೀವ್ರವಾದ ಉಸಿರಾಟದ ಸಮಸ್ಯೆಯಾದ ಸಿಂಡ್ರೋಮ್ ಕೊರೊನಾವೈರಸ್ ೨ (ಸಾರ್ಸ್-ಕೋವಿಡ್-೧೯) ನಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ . ಈ ರೋಗ ಮೊದಲು ೨೦೧೯ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿತು. ಈ ಕಾಯಿಲೆಯ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು,ವಾಸನೇ ಮತ್ತು ರುಚಿ ನಷ್ಟ ಉಸಿರಾಟದ ತೊಂದರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಆಧುನಿಕ ಮಾರುಕಟ್ಟೆ ಸಿದ್ಧಾಂತವು ಗ್ರಾಹಕನನ್ನು ಮಾರುಕಟ್ಟೆಯ 'ರಾಜ'ನೆಂದು ಪರಿಗಣಿಸಿದೆ. ಮಾರುಕಟ್ಟೆಯ ಎಲ್ಲಾ ಕಾರ್ಯಚಟುವಟಿಕೆಗಳು ಗ್ರಾಹಕನ ಅವಶ್ಯಕತೆಗಳು ಮತ್ತು ಅಭಿಲಾಷೆಗಳನ್ನು ತೃಪ್ತಿಪಡಿಸುವ ಉದ್ದೇಶವನ್ನು ಹೊಂದಿದೆ. ಆದರೆ, ವ್ಯವಹಾರ ಸಂಘಟನೆಗಳು ಹೆಚ್ಚುತ್ತಿರುವ ಪೈಪೋಟಿ, ಮಾರಾಟದ ಪ್ರಮಾಣವನ್ನು ಹೆಚ್ಚಿಸಿಕೊಳ್ಳುವ ಹಾಗೂ ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ ಅನುಚಿತ ವ್ಯಾಪಾರ ಪದ್ಧತಿಗಳಾದ ಕಲಬೆರಕೆ, ಕಾಳಸಂತೆ ವ್ಯಾಪಾರ, ತಪ್ಪು ಮಾಹಿತಿ ನೀಡುವ ಜಾಹಿರಾತು, ಮುಂತಾದವುಗಳಿಂದ ಗ್ರಾಹಕರನ್ನು ವಂಚಿಸುತ್ತಿದ್ದು, ಅವನ ರಕ್ಷಣೆ ಅತ್ಯಗತ್ಯವಾಗಿದೆ.
ನುಡಿಗಟ್ಟು ಒಂದು ಭಾಷೆಯನ್ನಾಡುವ ಜನ ತಮ್ಮ ನಿತ್ಯೋಪಯೋಗದಲ್ಲಿ ಹಿಂದೆ ತಾವು ಹೇಳಿರದ, ಇನ್ನೊಬ್ಬ ಹೇಳಿದುದನ್ನು ಕೇಳಿರದ ಎಷ್ಟೋ ಹೊಸ ಮಾತುಗಳನ್ನು ಪ್ರಯೋಗಿಸಲು ಶಕ್ತರು. ಆದರೂ, ಆ ಮಾತುಗಳು ಕೇಳುವವನಿಗೆ ಅರ್ಥವಾಗುತ್ತದೆ. ಆ ಮಾತಿನ ಸಂದರ್ಭ ಮತ್ತು ಆ ಭಾಷೆಯ ಮೂಲಭೂತವಾದ ಕೆಲವು ಸಾಮಾನ್ಯ ನಿಯಮ, ಇದರ ಮೂಲಕ ಮಾತಾಡುವವನಿಗೂ ಕೇಳುವವನಿಗೂ ಇರುವ ಅನುಭವ ಸಾಮ್ಯದಿಂದ-ಹಿಂದೆ ಹೇಳದ, ಕೇಳದ ಮಾತುಗಳ ಅರ್ಥ ವೇದ್ಯವಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ.ಹೆಣ್ಣು ಮತ್ತು ಗಂಡು ಎಂಬ ಜೈವಿಕ ಲಕ್ಷಣಗಳು ಲಿಂಗ ಎಂಬುದಾಗಿ ವ್ಯಕ್ತಿಯ ಹುಟ್ಟಿನಿಂದಲೇ ನಿರ್ಧರವಾಗುತ್ತದೆ. ಲಿಂಗವು ಸೃಷ್ಟಿಯ ಸಹಜ ಸ್ಥಿ ತಿ. ದೈಹಿಕ ರಚನೆ ಹಾಗೂ ಸಂತಾನೋತ್ಪತಿಯ ಕ್ರಿಯೆಗಳಲ್ಲಿ ಹೆಣ್ಣು ಹಾಗು ಗಂಡು ವಿಶೇಷವಾದ ಗುಣಗಳನ್ನು ಹೊಂದಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಐರನ್ ಮ್ಯಾನ್ ಅದೇ ಹೆಸರಿನ ಮಾರ್ವಲ್ ಕಾಮಿಕ್ಸ್ ಪಾತ್ರದ ಮೇಲೆ ಆಧಾರಿತವಾದ ೨೦೦೮ರ ಒಂದು ಅಮೇರಿಕಾದ ಸೂಪರ್ಹೀರೊ ಚಿತ್ರ. ಅದು ಮಾರ್ವಲ್ ಸಿನಮಾ ಪ್ರಪಂಚ ಮತ್ತು ಐರನ್ ಮ್ಯಾನ್ ಚಲನಚಿತ್ರ ಸರಣಿಯ ಮೊದಲ ಕಂತು. ಜಾನ್ ಫ಼ಾವ್ರೊ ನಿರ್ದೇಶಿತ ಈ ಚಿತ್ರದ ತಾರಾಗಣದಲ್ಲಿ ಟೋನಿ ಸ್ಟಾರ್ಕ್ ಪಾತ್ರದಲ್ಲಿ ರಾಬರ್ಟ್ ಡೌನಿ ಜೂನಿಯರ್ ಇದ್ದಾರೆ, ಒಂದು ಶಕ್ತಿಚಾಲಿತ ಹೊರಕವಚವನ್ನು ನಿರ್ಮಿಸುವ ಮತ್ತು ತಾಂತ್ರಿಕವಾಗಿ ಮುಂದುವರೆದ ಸೂಪರ್ಹೀರೊ ಐರನ್ ಮ್ಯಾನ್ ಆಗುವ ಒಬ್ಬ ಉದ್ಯಮಿ ಮತ್ತು ಕುಶಲ ಇಂಜಿನಿಯರ್ ಆಗಿ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ನಿಮಿಷ ಎಂಬುವುದು ಕಾಲದ ಒಂದು ಏಕಮಾನವಾಗಿದ್ದು ಸಾಮಾನ್ಯವಾಗಿ ಒಂದು ಗಂಟೆಯ 1⁄60 ಭಾಗಕ್ಕೆ (ಅರುವತ್ತರ ಮೊದಲ ಭಿನ್ನರಾಶಿ) ಅಥವಾ ೬೦ ಸೆಕೆಂಡುಗಳಿಗೆ ಸಮಾನವಾಗಿರುತ್ತದೆ. ಯುಟಿಸಿ ಸಮಯ ಸ್ತರದಲ್ಲಿ, ಅಪರೂಪದ ಸಂದರ್ಭಗಳಲ್ಲಿ ನಿಮಿಷವು ೬೧ ಸೆಕೆಂಡುಗಳನ್ನು ಹೊಂದಿರುತ್ತದೆ. ಇದು ಅಧಿಕ ಸೆಕೆಂಡುಗಳ ಪರಿಣಾಮವಾಗಿರುತ್ತದೆ (ಋಣಾತ್ಮಕ ಅಧಿಕ ಸೆಕೆಂಡನ್ನು ಸೇರಿಸುವ ನಿಯಮವಿದೆ, ಇದರಿಂದ ೫೯ ಸೆಕೆಂಡುಗಳ ನಿಮಿಷವಾಗುತ್ತದೆ, ಆದರೆ ಈ ವ್ಯವಸ್ಥೆಯಡಿ ೪೦ ವರ್ಷಗಳಿಗಿಂತ ಹೆಚ್ಚು ಸಮಯದಲ್ಲಿ ಇದು ಎಂದೂ ಆಗಿಲ್ಲ).
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಕಾನೂನಿನಲ್ಲಿ, ಆರೋಪವು ಲಿಖಿತ ಹೇಳಿಕೆ, ಆಪಾದನೆ, ಅಥವಾ ಪ್ರತಿವಾದದಲ್ಲಿ ಒಂದು ಪಕ್ಷದಿಂದ ವಾಸ್ತವಾಂಶದ ಹಕ್ಕುಸಾಧನೆ. ಆರೋಪಗಳನ್ನು ಸಾಬೀತುಪಡಿಸುವವರೆಗೆ, ಅವು ಕೇವಲ ಪ್ರತಿಪಾದನೆಗಳಾಗಿ ಉಳಿಯುತ್ತವೆ.ವೈವಾಹಿಕ ಆರೋಪಗಳೂ ಇರುತ್ತವೆ: ಪರವಾನಗಿಯ ಮೂಲಕ ಮದುವೆಯಾಗಲು ಅರ್ಜಿ ಸಲ್ಲಿಸಿದ ದಂಪತಿಗಳಿಗಾಗಿ ಮದುವೆ ಮುಚ್ಚಳಿಕೆಗಳು ಮತ್ತು ಆರೋಪಗಳು ಇರುತ್ತವೆ. ಪ್ರಕಟಣೆ ಮೂಲಕ ವಿವಾಹವಾದ ದಂಪತಿಗಳಿಗೆ ಇವು ಇರುವುದಿಲ್ಲ.
ಹಾಡು (ಗೀತೆ) ಎಂದರೆ ಸಾಮಾನ್ಯವಾಗಿ ಮಾನವರು ತಮ್ಮ ಧ್ವನಿಯಿಂದ ಹಾಡಲು ಉದ್ದೇಶಿತವಾದ ಒಂಟಿ (ಮತ್ತು ಹಲವುವೇಳೆ ಸ್ವತಂತ್ರ) ಸಂಗೀತ ಕೃತಿ. ಇದರಲ್ಲಿ ಧ್ವನಿ ಹಾಗೂ ಮೌನದ ಬಳಕೆಯಿರುವ ವಿಶಿಷ್ಟ ಹಾಗೂ ಸ್ಥಿರ ಮಟ್ಟಗಳು ಮತ್ತು ವಿನ್ಯಾಸಗಳು ಮತ್ತು ಹಲವುವೇಳೆ ವಿಭಾಗಗಳ ಪುನರಾವರ್ತನೆಯನ್ನು ಒಳಗೊಂಡಿರುವ ವಿವಿಧ ರೂಪಗಳಿರುತ್ತವೆ. ಅರ್ಥ ವಿಸ್ತರಣೆಯ ಮೂಲಕ, "ಹಾಡು" ಶಬ್ದದ ಹೆಚ್ಚು ವಿಶಾಲವಾದ ಅರ್ಥವು ವಾದ್ಯಸಂಗೀತವನ್ನು ಸೂಚಿಸಬಹುದು.ನಿರ್ದಿಷ್ಟವಾಗಿ ಸಂಗೀತಕ್ಕಾಗಿ ಸೃಷ್ಟಿಸಲಾದ ಲಿಖಿತ ಶಬ್ದಗಳು ಅಥವಾ ಯಾವುದಕ್ಕಾಗಿ ನಿರ್ದಿಷ್ಟವಾಗಿ ಸಂಗೀತವನ್ನು ಸೃಷ್ಟಿಸಲಾಗುತ್ತದೊ ಅದನ್ನು ಗೀತಸಾಹಿತ್ಯ ಎಂದು ಕರೆಯಲಾಗುತ್ತದೆ.
ಸೂಶಿ ಬೇಯಿಸಿದ ವಿನಿಗರ್ ಸೇರಿಸಿದ ಅಕ್ಕಿ ಜೊತೆಗೆ ಇತರ ಪದಾರ್ಥಗಳು, ಹಸಿ ಬೇಯಿಸದ ಕಡಲಾಹಾರ, ತರಕಾರಿಗಳು ಮತ್ತು ಕೆಲವೊಮ್ಮೆ ಉಷ್ಣವಲಯದ ಹಣ್ಣುಗಳನ್ನು ಹೊಂದಿರುವ ಒಂದು ಜ್ಯಾಪನೀಸ್ ಖಾದ್ಯ. ಪದಾರ್ಥಗಳು ಮತ್ತು ಸೂಶಿಯ ಪ್ರಸ್ತುತಿಯ ರೂಪಗಳು ವ್ಯಾಪಕವಾಗಿ ಬದಲಾಗುತ್ತವೆ, ಆದರೆ ಎಲ್ಲ ಸೂಶಿ ಸಮಾನವಾಗಿ ಹೊಂದಿರುವ ಪದಾರ್ಥವೆಂದರೆ ಅನ್ನ. ಸೂಶಿಯನ್ನು ಕಂದು ಅಕ್ಕಿ ಅಥವಾ ಬಿಳಿ ಅಕ್ಕಿಯಿಂದ ತಯಾರಿಸಬಹುದು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತೀಯ ಜಾತಿ ಪದ್ದತಿ ಯು ಸಾಮಾಜಿಕ ಶ್ರೇಣೀಕರಣವನ್ನು ವಿವರಿಸುತ್ತದೆ.ಅದಲ್ಲದೇ ಸಾಮಾಜಿಕ ನಿರ್ಭಂಧಗಳಡಿ ಭಾರತ ಉಪಖಂಡದ ಸಾವಿರಾರು ಪಂಗಡದ ಪ್ರವರ್ಗಗಳನ್ನು, ವಂಶವಾಹಿನಿಗಳ ಸಮೂಹವನ್ನು ವ್ಯಾಖ್ಯಾನಿಸುತ್ತದೆ.ಇದನ್ನೇ ಜಾತಿ ಗಳು ಅಥವಾ ಕೋಮು ಗಳೆಂದು ಹೇಳಲಾಗುತ್ತದೆ. ಈ ಜಾತಿಯಲ್ಲಿಯೇ ಅನ್ಯಗೋತ್ರ ಗುಂಪುಗಳ ಅಸ್ತಿತ್ವ ಇದೆ,ಇದನ್ನು ಗೋತ್ರಗಳು,ವಂಶವಾಹಿನಿ ಅಥವಾ ಕುಟುಂಬದ ಕುಲಗೋತ್ರವನ್ನು ವೈಯಕ್ತಿಕ ನೆಲೆಯಲ್ಲಿ ಗುರುತಿಸಲಾಗುತ್ತದೆ. ಹಲವಾರು ಉಪ-ಜಾತಿಗಳಲ್ಲಿ ಶಾಕಾದ್ವಿಪಿ,ಕೂಡಾ ಒಂದು,ಒಂದೇ ಗೋತ್ರದಲ್ಲಿ ವಿವಾಹ ಅನುಮತಿಸಿದ್ದರೂ ಅದನ್ನು ಪರ್ಯಾಯ ನಿರ್ಭಂದಿತ ಸಗೋತ್ರ ವಿವಾಹಕ್ಕೆ ಪರಿಗಣಿಸಲಾಗುತ್ತದೆ.(ಉದಾಹರಣೆಗೆ ಅಡ್ಡಹೆಸರುಗಳು ಒಂದೇ ಆಗಿದ್ದರೆ ಅಲ್ಲಿ ವಿವಾಹ ನಿಷಿದ್ದದ ನಿಯಮ ಉಂಟು) ಹಿಂದುತ್ವದೊಂದಿಗೆ ಗುರುತಿಸಿಕೊಂಡಿರುವ ಇತರ ಮುಸ್ಲಿಮರ ಕೆಲವು ಗುಂಪುಗಳು ಮತ್ತು ಕ್ರಿಶ್ಚನ್ ರು ಕೂಡಾ ಇದೇ ತೆರನಾದ ಗುಂಪು ಪ್ರಭೇದವನ್ನು ಹೊಂದಿರುವುದು ಭಾರತದ ಉಪಖಂಡದಲ್ಲಿ ಕಾಣುತ್ತದೆ.