The most-visited ಕನ್ನಡ Wikipedia articles, updated daily. Learn more...
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಇಯಾನ್ ರೊನಾಲ್ಡ್ ಬೆಲ್ MBE (ಜನನ ೧೧ ಏಪ್ರಿಲ್ ೧೯೮೨) ಒಬ್ಬ ಇಂಗ್ಲೆಂಡ್ ನಟೆಸ್ಟ್ ಕ್ರಿಕೆಟ್ ಆಟಗಾರರಾಗಿದ್ದಾರೆ. ಅಲ್ಲದೆ ಅವರು ವಾರ್ವಿಕ್ ಷೈರ್ ಕೌಂಟಿ ಕ್ರಿಕೆಟ್ ಕ್ಲಬ್ ಪರವಾಗಿ ಕೌಂಟಿ ಕ್ರಿಕೆಟ್ ಸಹ ಆಡುತ್ತಾರೆ. ಅವರು ಉತ್ತಮ/ಮಧ್ಯಮ ಕ್ರಮಾಂಕದ ಬಲಗೈ ಬ್ಯಾಟ್ಸ್ ಮನ್ ಆಗಿದ್ದು, ದ ಟೈಮ್ಸ್ ಅವರನ್ನು "ಶ್ರೇಷ್ಠ ಅಸ್ತ್ರ" ಎಂದು ಬಣ್ಣಿಸಿದೆ; ಬೆಲ್ ಆಗಾಗ್ಗೆ ಮಧ್ಯಮವೇಗದಲ್ಲಿ ಬೋಲ್ ಮಾಡುವಂತಹ ಬಲಗೈ ಬೋಲರ್ ಸಹ ಆಗಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅಧ್ಯಾಯ ಗದ್ಯ, ಕಾವ್ಯ, ಅಥವಾ ಕಾನೂನಿನ ಪುಸ್ತಕದಂತಹ ತುಲನಾತ್ಮಕ ಉದ್ದದ ಬರವಣಿಗೆ ಖಂಡದ ಮುಖ್ಯ ವಿಭಾಗಗಳಲ್ಲಿ ಒಂದು. ಅಧ್ಯಾಯ ಪುಸ್ತಕವು ಹಲವು ಅಧ್ಯಾಯಗಳನ್ನು ಹೊಂದಿರಬಹುದು ಮತ್ತು ಆ ನಿರ್ದಿಷ್ಟ ಅಧ್ಯಾಯದ ಮುಖ್ಯ ವಿಷಯವಾಗಿರಬಹುದಾದ ಅನೇಕ ವಸ್ತುಗಳನ್ನು ಸೂಚಿಸಬಹುದು. ಪ್ರತಿ ಸಂದರ್ಭದಲ್ಲೂ, ಅಧ್ಯಾಯಗಳಿಗೆ ಸಂಖ್ಯೆ ಕೊಡಬಹುದು ಅಥವಾ ಅವುಗಳನ್ನು ಹೆಸರಿಸಬಹುದು ಅಥವಾ ಎರಡನ್ನೂ ಮಾಡಬಹುದು.
ಭಾರತದ ಸಂಸತ್ತು ಭಾರತದ ಗಣರಾಜ್ಯದ ಒಕ್ಕೂಟ ಸರ್ಕಾರದ ಎರಡು ಶಾಸನಸಭೆಗಳುಳ್ಳ (ಉಭಯ ಸದನಿಕ) ಸರ್ವೋಚ್ಚ ವಿಧಾಯಕ ಘಟಕವಾಗಿದೆ. ಭಾರತದ ರಾಷ್ಟ್ರಪತಿಯವರ ಕಚೇರಿ, "ರಾಜ್ಯಸಭಾ" ಎಂದು ಕರೆಯಲ್ಪಡುವ ರಾಜ್ಯಗಳ ಪರಿಷತ್ತು ಆಗಿರುವ ಒಂದು ಮೇಲ್ಮನೆ, ಮತ್ತು "ಲೋಕಸಭಾ" ಎಂದು ಕರೆಯಲ್ಪಡುವ ಪ್ರಜಾಪ್ರತಿನಿಧಿಗಳ ಸಭೆಯಾಗಿರುವ ಒಂದು ಕೆಳಮನೆಯನ್ನು ಇದು ಒಳಗೊಂಡಿದೆ. ನವದೆಹಲಿಯಲ್ಲಿನ ಸಂಸದ್ ಭವನದಲ್ಲಿರುವ (ಇದನ್ನು ಸಾಮಾನ್ಯವಾಗಿ ಸಂಸದ್ ಮಾರ್ಗ ಎಂದು ಕರೆಯಲಾಗುತ್ತದೆ) ಪ್ರತ್ಯೇಕ ಶಾಸನಸಭೆಗಳಲ್ಲಿ ಎರಡೂ ಸದನಗಳು ಸಭೆ ಸೇರುತ್ತವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕಲಾ ನಿರ್ದೇಶಕರು ರಂಗಭೂಮಿ, ಜಾಹೀರಾತು, ಮಾರ್ಕೆಟಿಂಗ್, ಪ್ರಕಾಶನ, ಫ್ಯಾಷನ್, ಚಲನಚಿತ್ರ ದೂರದರ್ಶನ, ಇಂಟರ್ನೆಟ್ ಮತ್ತು ವೀಡಿಯೋ ಗೇಮ್ಗಳಲ್ಲಿ ವಿವಿಧ ರೀತಿಯ ಉದ್ಯೋಗ ಕಾರ್ಯಗಳಿಗೆ ಶೀರ್ಷಿಕೆಯಾಗಿದೆ. ಕಲಾತ್ಮಕ ನಿರ್ಮಾಣದ ದೃಷ್ಟಿಯನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಏಕೀಕರಿಸುವುದು ಏಕೈಕ ಕಲಾ ನಿರ್ದೇಶಕರ ಜವಾಬ್ದಾರಿಯಾಗಿದೆ. ನಿರ್ದಿಷ್ಟವಾಗಿ ಹೇಳುವುದಾದರೆ ಅವರು ಅದರ ಒಟ್ಟಾರೆ ದೃಶ್ಯ ಗೋಚರತೆಯ ಉಸ್ತುವಾರಿ ವಹಿಸುತ್ತಾರೆ.
ಚಲನಚಿತ್ರ ನಿರ್ದೇಶಕನು ಚಲನಚಿತ್ರದ ತಯಾರಿಕೆಯನ್ನು ನಿರ್ದೇಶಿಸುವ ಒಬ್ಬ ವ್ಯಕ್ತಿ. ಸಾಮಾನ್ಯವಾಗಿ, ಚಲನಚಿತ್ರ ನಿರ್ದೇಶಕನು ಒಂದು ಚಲನಚಿತ್ರದ ಕಲಾತ್ಮಕ ಹಾಗು ನಾಟಕೀಯ ಅಂಶಗಳನ್ನು ನಿಯಂತ್ರಿಸುತ್ತಾನೆ, ಮತ್ತು ಚಿತ್ರಕಥೆಯನ್ನು ದೃಶ್ಯೀಕರಿಸುತ್ತಾನೆ ಹಾಗು ಆ ದೃಷ್ಟಿಯ ಈಡೇರಿಕೆಯಲ್ಲಿ ತಾಂತ್ರಿಕ ಸಿಬ್ಬಂದಿ ಮತ್ತು ನಟರನ್ನು ಮಾರ್ಗದರ್ಶಿಸುತ್ತಾನೆ. ಚಲನಚಿತ್ರ ನಿರ್ದೇಶಕರು ಒಟ್ಟಾರೆ ದೃಷ್ಟಿಯನ್ನು ಸೃಷ್ಟಿಸುತ್ತಾರೆ ಮತ್ತು ಇದರ ಮೂಲಕ ಚಲನಚಿತ್ರವನ್ನು ಅಂತಿಮವಾಗಿ ಸಾಧಿಸಲಾಗುತ್ತದೆ.
ಪ್ಲ್ಯಾಟಿಹೆಲ್ಮಿಂಥೆಸ್ (ಚಪ್ಪಟೆ ಹುಳುಗಳು)ನೊಂದಿಗೆ ನಿಕಟ ಸಂಬಂಧ ಹೊಂದಿರುವ ದುಂಡು ಹುಳುಗಳು (ಇದನ್ನು ಅಶೆಲ್ಮಿಂಥೆಸ್,ಎಸ್ಚೆಲ್ಮಿಂಥೆಸ್, ನೆಮಾಥೆಲ್ಮಿಂಥೆಸ್, ನೆಮಟೋಡ್ಸ್ ಎಂದೂ ಕರೆಯುತ್ತಾರೆ) ಮಿಥ್ಯ ದೇಹಾಂತರಾವಕಾಶವನ್ನು ಹೊಂದಿವೆ. ಅಸ್ಚೆಲ್ಮಿಂಥ್ ಎಂಬ ಪದವನ್ನು ಈಗ ಸಾಮಾನ್ಯವಾಗಿ ಅಶೆಲ್ಮಿಂಥೆಸ್ನಲ್ಲಿ ಸೇರಿಸಲಾದ ಸುಮಾರು ಹತ್ತು ವಿಭಿನ್ನ ಅಕಶೇರುಕ ವಂಶಗಳ ಯಾವುದೇ ಸದಸ್ಯರಿಗೆ ಅನೌಪಚಾರಿಕ ಹೆಸರಾಗಿ ಮಾತ್ರ ಬಳಸಲಾಗುತ್ತದೆ. ಇದು ಪಾಲಿಫೈಲೆಟಿಕ್ ಗುಂಪು.
ಆಲ್ಬರ್ಟ್ ಕಾಮೂ(French: [albɛʁ kamy] ( ); ೭ ನವೆಂಬರ್ ೧೯೧೩ – ೪ ಜನವರಿ ೧೯೬೦)ಫ್ರಾನ್ಸ್ ದೇಶದ ಲೇಖಕ,ಪತ್ರಕರ್ತ ಮತ್ತು ತತ್ವಜ್ಞಾನಿ. ಇವರಿಗೆ ೧೯೫೭ರ ಸಾಲಿನ ಸಾಹಿತ್ಯದ ನೋಬೆಲ್ ಪ್ರಶಸ್ತಿ ದೊರೆತಿದೆ.. ಇವರ ದೃಷ್ಟಿಕೋನವು ತತ್ವಶಾಸ್ತ್ರದಲ್ಲಿ ಅಸಂಗತತೆಯ ಪರಿಕಲ್ಪನೆಯು ಬೆಳೆಯುವಲ್ಲಿ ಸಹಾಯ ಮಾಡಿತು.ವ್ಯಕ್ತಿಗತ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವುದರೊಂದಿಗೆ ನಿರಾಕರಣವಾದವನ್ನು ತನ್ನ ಜೀವಮಾನ ಪೂರ್ತಿ ವಿರೋಧಿಸಿಕೊಂಡು ಬಂದುದಾಗಿ ತನ್ನ ಪುಸ್ತಕ ದಿ ರೆಬೆಲ್ ನಲ್ಲಿ ಬರೆದುಕೊಂಡಿದ್ದಾರೆ.
ಬಾಹ್ಯಾಕಾಶ ನಿಲ್ದಾಣ, ಒಂದು ಕಕ್ಷೀಯ ಕೇಂದ್ರ ಅಥವಾ ಕಕ್ಷಾ ಹೊರಬಾನು ನಿಲ್ದಾಣ ಎಂದು ಕರೆಯಲಾಗುತ್ತದೆ, ಬಾಹ್ಯಾಕಾಶ ತಂಡದವರಿಗೆ ಬೆಂಬಲಿಸುವ ಸಾಮರ್ಥ್ಯವನ್ನು ನೀಡುತ್ತದೆ,ಇದು ಒಂದು ವಿಸ್ತರಿಸಲ್ಪಟ್ಟ ಅವಧಿಯವರೆಗೆ ಬಾಹ್ಯಾಕಾಶದಲ್ಲಿ ಉಳಿಯಲು ಮೀಸಲಿಡಲಾಗಿದೆ (ಸಾಮಾನ್ಯವಾಗಿ ಕಡಿಮೆ ಭೂಮಿಯ ಕಕ್ಷೆಯಲ್ಲಿ ಮಾಡಿದ ಅಟ್ಟುಕ/ಕೃತಕ ಉಪಗ್ರಹ) ಮತ್ತು ಇತರ ಹೊರಬಾನು ಹಡಗು ಢಕ್ಕೆ ಇರಳು ವಿನ್ಯಾಸಗೊಳಿಸಲಾಗಿದೆ. ಒಂದು ಬಾಹ್ಯಾಕಾಶವು ನಿಲ್ದಾಣ ಪ್ರಮುಖ ನೋದನ ಅಥವಾ ಲ್ಯಾಂಡಿಂಗ್ ವ್ಯವಸ್ಥೆಗಳ ಕೊರತೆಯಿಂದ ಮಾನವ ಅಂತರಿಕ್ಷ ಯಾನದ ಬಳಕೆಯಿಂದ ಇತರ ಗಗನನೌಕೆಯನ್ನು ವಿಂಗಡಿಸಲಾಗಿದೆ. ಇದರ ಬದಲಿಗೆ, ಇತರ ವಾಹನಗಳು ಜನರನ್ನು ಮತ್ತು ಸರಕುಗಳನ್ನು ನಿಲ್ದಾಣದಿಂದ ನಿಲ್ದಾಣದ ವರೆಗೂ ಸಾಗಿಸುತ್ತಾರೆ.
ಸಿಡ್ನಿ ಲ್ಯೂಮೆಟ್ (/[unsupported input]luːˈmɛt/ loo-met; ಜೂನ್ ೨೫, ೧೯೨೪– ಏಪ್ರಿಲ್ ೯, ೨೦೧೧) ಎಂಬಾತ ಓರ್ವ ಅಮೇರಿಕದ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರರಾಗಿದ್ದು ೫೦ಕ್ಕೂ ಹೆಚ್ಚಿನ ಸಂಖ್ಯೆಯ ಚಲನಚಿತ್ರಗಳು ಅವರ ಹೆಸರಿನೊಂದಿಗೆ ತಳಕು ಹಾಕಿಕೊಂಡಿವೆ. ೧೨ ಆಂಗ್ರಿ ಮೆನ್ (೧೯೫೭), ಡಾಗ್ ಡೇ ಆಫ್ಟರ್ನೂನ್ (೧೯೭೫), ನೆಟ್ವರ್ಕ್ (೧೯೭೬) ಮತ್ತು ದ ವರ್ಡಿಕ್ಟ್ (೧೯೮೨) ಚಲನಚಿತ್ರಗಳ ನಿರ್ದೇಶನಕ್ಕಾಗಿ ಅತ್ಯುತ್ತಮ ನಿರ್ದೇಶಕ ಅಕಾಡೆಮಿ ಪ್ರಶಸ್ತಿಗಳಿಗೆ ನಾಮಾಂಕಿತಗೊಂಡಿದ್ದರು. ಅವರು ಯಾವುದೇ ವೈಯಕ್ತಿಕ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿರಲಿಲ್ಲವಾದರೂ ಒಂದು ಅಕಾಡೆಮಿ ಗೌರವಾರ್ಥ ಪ್ರಶಸ್ತಿಯನ್ನು ಪಡೆದಿದ್ದು ೧೦ ಕ್ಷೇತ್ರಗಳಲ್ಲಿ ನಾಮಾಂಕಿತಗೊಂಡು, ೪ ಪ್ರಶಸ್ತಿಗಳನ್ನು ಗೆದ್ದ ನೆಟ್ವರ್ಕ್ ನಂತಹಾ ತಮ್ಮ ಚಲನಚಿತ್ರಗಳಲ್ಲಿ ೧೪ ಚಿತ್ರಗಳಲ್ಲಿ ಹಲವು ಆಸ್ಕರ್ ಪ್ರಶಸ್ತಿಗಳಿಗಾಗಿ ನಾಮಾಂಕಿತಗೊಂಡಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮರ್ಲಿನ್ ಮನ್ರೋ(ಜೂನ್ 1, 1926 - ಆಗಸ್ಟ್ 4, 1962), ಅಮೆರಿಕದ ಅತ್ಯಂತ ಜನಪ್ರಿಯ ನಟಿ, ಗಾಯಕಿ. ಚಲನಚಿತ್ರ ಮತ್ತು ಮಾಧ್ಯಮಗಳಲ್ಲಿ ನಗ್ನತೆ ಮತ್ತು ಮೈಮಾಟ ಪ್ರದರ್ಶನ ವಿಚಾರಗಳ ಬಗೆಗಿದ್ದ ಬಹುಪಾಲು ನಂಬಿಕೆಗಳನ್ನು ಬದಲು ಮಾಡಿದ ರೂಪದರ್ಶಿ ಮನ್ರೋ. ಸತ್ತು ದಶಕಗಳೇ ಕಳೆದರೂ ಜನಪ್ರಿಯತೆ ಸ್ವಲ್ಪವೂ ಮಾಸಿಲ್ಲ ಎಂಬುದಕ್ಕೆ ಇಂದಿಗೂ ಮರ್ಲಿನ್ ಬಳಸಿದ ವಸ್ತುಗಳನ್ನು ಲಕ್ಷಗಟ್ಟಲೆ ಹಣ ನೀಡಿ ಮುಗಿಬಿದ್ದು ಕೊಳ್ಳುವ ಸುದ್ದಿಗಳೇ ಸಾಕ್ಷಿ.
ಒಂದು ಪುಸ್ತಕ, ಮ್ಯಾಗಜ಼ೀನ್, ಸುದ್ದಿಪತ್ರಿಕೆ, ಅಥವಾ ಹಾಳೆಗಳ ಇತರ ಸಂಗ್ರಹದಲ್ಲಿ, ಪುಟವು ಕಾಗದ, ಚರ್ಮದ ಕಾಗದ ಅಥವಾ ಇತರ ವಸ್ತುವಿನ (ಅಥವಾ ವಿದ್ಯುನ್ಮಾನ ಮಾಧ್ಯಮ) ಹಾಳೆಯ ಒಂದು ಬದಿಯಾಗಿರುತ್ತದೆ. ದಸ್ತಾವೇಜನ್ನು ಸೃಷ್ಟಿಸಲು ಇದರ ಮೇಲೆ ಪಠ್ಯ ಅಥವಾ ಚಿತ್ರಗಳನ್ನು ಮುದ್ರಿಸಬಹುದು, ಬರೆಯಬಹುದು ಅಥವಾ ಬಿಡಿಸಬಹುದು. ಇದನ್ನು ಮಾಹಿತಿಯ ಸಾಮಾನ್ಯ ಪ್ರಮಾಣವನ್ನು ("ಆ ವಿಷಯವು ಹನ್ನೆರಡು ಪುಟಗಳನ್ನು ಒಳಗೊಳ್ಳುತ್ತದೆ") ಅಥವಾ ಹೆಚ್ಚು ನಿರ್ದಿಷ್ಟ ಪ್ರಮಾಣವನ್ನು (ಒಂದು ಸಾಮಾನ್ಯ ಪುಟದಲ್ಲಿ ಹನ್ನೆರಡು ಬಿಂದು ಫ಼ಾಂಟ್ ಪ್ರಕಾರದಲ್ಲಿ ೫೩೫ ಶಬ್ದಗಳಿವೆ) ತಿಳಿಸುವ ಅಳತೆಯಾಗಿ ಬಳಸಬಹುದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಸಭೆಯಲ್ಲಿ, ಇಬ್ಬರು ಅಥವಾ ಹೆಚ್ಚು ಜನರು, ಹಲವುವೇಳೆ ಒಂದು ಔಪಚಾರಿಕ ವ್ಯವಸ್ಥೆಯಲ್ಲಿ, ಒಂದು ಅಥವಾ ಹೆಚ್ಚು ವಿಷಯಗಳನ್ನು ಚರ್ಚಿಸಲು ಒಟ್ಟಾಗಿ ಸೇರುತ್ತಾರೆ. ಸಭೆಯು ಮೌಖಿಕ ಮಾತಾಟದ ಮೂಲಕ ಮಾಹಿತಿ ಹಂಚಿಕೆ ಅಥವಾ ಒಪ್ಪಂದಕ್ಕೆ ಬರುವಿಕೆಯಂತಹ ಒಂದು ಸಾಮಾನ್ಯ ಗುರಿ ಸಾಧಿಸುವ ಉದ್ದೇಶಕ್ಕಾಗಿ ನಡೆಸಲಾದ ಎರಡು ಅಥವಾ ಹೆಚ್ಚು ಜನರ ಕೂಟ. ಸಭೆಗಳು ಮುಖಾಮುಖಿಯಾಗಿ ಆಗಬಹುದು ಅಥವಾ ದೂರವಾಣಿ ಸಮಾಲೋಚನಾ ಕರೆ, ಸ್ಕೈಪ್ ಕರೆ ಅಥವಾ ವೀಡಿಯೊ ಸಮಾಲೋಚನೆಯಂತಹ ಸಂಪರ್ಕ ತಂತ್ರಜ್ಞಾನದ ಮಧ್ಯಸ್ತಿಕೆಯಿಂದ ಆಗಬಹುದು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕುಮಾರರಾಮ: 13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ ಕುಮಾರರಾಮ ವಾಲ್ಮೀಕಿ/ಬೇಡ [೧] ಸಮುದಾಯಕ್ಕೆ ಸೇರಿದ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಲಿಷ್ಠ ಹಿಂದೂ ಸಾಮ್ರಾಜ್ಯದ ಕನಸುಕಂಡವನು ಈ ಕುಮಾರ ರಾಮ.13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ.
ಶ್ಯಾಮನೂರ್ ಶಿವಶಂಕರಪ್ಪರವರು ೧೬ ಜೂನ್ ೧೯೩೧ರಂದು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರ ಹೆಂಡತಿ ಎಸ್ ಎಸ್ ಪಾರ್ವತಮ್ಮ, ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯ ದಕ್ಶಿಣ ಭಾಗದಿಂದ ಚುನಾವಣೆಯಲ್ಲಿ ಕಳೆದ ಸುಮಾರು ೧೦ ವರ್ಷಗಳಿಂದ ಸ್ಪರ್ಧಿಸುತ್ತಿದ್ದಾರೆ. ಶಿವಶಂಕರಪ್ಪನವರು ಕಳೆದ ೩ ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೈತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.