The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬೆರಿಲಿಯಂ ಮತ್ತು ಅಲ್ಯೂಮಿನಂ ಹಾಗೂ ಸಿಲಿಕೇಟುಳ್ಳ ಖನಿಜ ದ ವೈವಿಧ್ಯ ವಸ್ತು ಪಚ್ಚೆ (Be3Al2(SiO3)6,) ಇದು ಹಸಿರು ಬಣ್ಣವುಳ್ಳದಾಗಿದ್ದು ಇದರಲ್ಲಿ ಕ್ರೋಮಿಯಂ ನ ಜಾಡು ಇರುತ್ತದೆ ಮತ್ತು ಕೆಲವು ಸಾರಿ ವನೇಡಿಯಂ ಕೂಡ ಇರುತ್ತದೆ. ಖನಿಜ ಕಾಠಿಣ್ಯ ಮೋಹ್ಸ್ ಮಾಪನದ 10 ಪಾಯಿಂಟ್ನಲ್ಲಿ ಬೆರಿಲ್ನ ಕಾಠಿಣ್ಯ 7.5–8ರಷ್ಟು ಇರುತ್ತದೆ. ಅನೇಕ ಪಚ್ಚೆಗಳು ಅಂತರ್ಗತವಾಗಿರುತ್ತದೆ, ಆದುದರಿಂದ ಅವುಗಳ ಕಾಠಿಣ್ಯತೆ (ಮುರಿಯುವುದಕ್ಕೆ ಇರುವ ಪ್ರತಿರೋಧ) ಪಚ್ಚೆಯಲ್ಲಿ ಉತ್ತಮವಾಗಿಲ್ಲ, ಸಾಧಾರಣವಾಗಿದೆ ಎಂದು ವರ್ಗೀಕರಿಸಲಾಗಿದೆ.
ಪ್ರಭುದೇವ (ಜನನ ೩ ಏಪ್ರಿಲ್ ೧೯೭೩) ಒಬ್ಬ ಭಾರತೀಯ ನೃತ್ಯ ಸಂಯೋಜಕ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಮತ್ತು ನಟ, ಇವರು ಪ್ರಧಾನವಾಗಿ ತಮಿಳು, ಹಿಂದಿ, ತೆಲುಗು ಮತ್ತು ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ೩೨ ವರ್ಷಗಳ ವೃತ್ತಿಜೀವನದಲ್ಲಿ, ಅವರು ವ್ಯಾಪಕ ಶ್ರೇಣಿಯ ನೃತ್ಯ ಶೈಲಿಗಳನ್ನು ಪ್ರದರ್ಶಿಸಿದ್ದಾರೆ ಮತ್ತು ವಿನ್ಯಾಸಗೊಳಿಸಿದ್ದಾರೆ. ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಗಳಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತಿಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ ) ಭಾರತದ ಸ್ವಾಯತ್ತ ಸಾರ್ವಜನಿಕ ಆಡಳಿತ ಮಾನವ ಹಕ್ಕುಗಳ 28 ಸುಗ್ರೀವಾಜ್ಞೆಯ ಸೆಪ್ಟೆಂಬರ್ 1993 ರಕ್ಷಣೆಯ ಅಡಿಯಲ್ಲಿ ಅಕ್ಟೋಬರ್ 1993 ರ12 ರಂದು ರಚಿಸಲ್ಪಟ್ಟದೆ ಇದು ಮಾನವ ಹಕ್ಕು ಕಾಯಿದೆ 1993 (TPHRA) ರಕ್ಷಣೆಯಿಂದ ಒಂದು ಶಾಸನಬದ್ಧ ಆಧಾರವನ್ನು ನೀಡಿತು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೊಗ ಮಾನವ ಹಕ್ಕುಗಳ ರಕ್ಷಣೆ ಮತ್ತು ಉತ್ತೇಜನಕ್ಕಾಗಿ ಜವಾಬ್ದಾರನಾಗಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಕಾಯಿದೆ ವ್ಯಾಖ್ಯಾನಿಸಿರುವಂತೆ "ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಸಂವಿಧಾನದ ಭರವಸೆಯ ವ್ಯಕ್ತಿಯ ಘನತೆಗೆ ಸಂಬಂಧಿಸಿದ ಹಕ್ಕುಗಳು ಅಥವಾ ಅಂತರಾಷ್ಟ್ರಿಯ ಕರಾರುಗಳು.
ಸಾರಿಗೆ (ಸಾಗಣೆ, ರವಾನೆ) ಎಂದರೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಮನುಷ್ಯರು, ಪ್ರಾಣಿಗಳು ಹಾಗೂ ಸರಕುಗಳ ಚಲನೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಾಗಣೆಯ ಕ್ರಿಯೆಯನ್ನು ಬಿಂದು ಅ ದಿಂದ ಬಿಂದು ಬ ವರೆಗೆ ಒಂದು ಜೀವಿ ಅಥವಾ ವಸ್ತುವಿನ ನಿರ್ದಿಷ್ಟ ಚಲನೆ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಧನೆಯ ವಿಧಾನಗಳಲ್ಲಿ ವಾಯು, ಭೂ (ರೈಲು ಹಾಗೂ ರಸ್ತೆ), ಜಲ, ಕೇಬಲ್, ಕೊಳವೆ ಮಾರ್ಗ ಮತ್ತು ಬಾಹ್ಯಾಕಾಶ ಸೇರಿವೆ.
ಜಗತ್ತಿನ ಎಲ್ಲ ಮಾನವರು ಪಡೆದ ಮೂಲ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಮಾನವ ಹಕ್ಕುಗಳು ಎನ್ನುವರು. ಸಾಮಾನ್ಯವಾಗಿ ಮಾನವ ಹಕ್ಕುಗಳು ಎಂದು ಕರೆಯಲಾಗುವ ಹಕ್ಕುಗಳಲ್ಲಿ ನಾಗರಿಕ ಮತ್ತು ರಾಜಕೀಯ ಹಕ್ಕುಗಳು ಹಾಗೂ ಸಾಮಾಜಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಹಕ್ಕುಗಳು ಮುಖ್ಯವಾಗಿವೆ. ನಾಗರಿಕ ಮತ್ತು ರಾಜಕೀಯ ಹಕ್ಕುಗಳಲ್ಲಿ ಜೀವನದ ಹಕ್ಕು, ಸ್ವಾತಂತ್ರ್ಯ, ಆಸ್ತಿ, ಅಭಿವ್ಯಕ್ತಿ ಸ್ವಾತಂತ್ರ್ಯ ಸಂತೋಷದ ಅನ್ವೇಷಣೆ ಕಾನೂನು ಸಮಾನತೆಯ ಹಕ್ಕುಗಳು ಒಳಗೊಂಡಿವೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಆಟಿಸಮ್ ಎನ್ನುವುದು ಸಾಮಾಜಿಕ ಸಂವಹನ ಮತ್ತು ಸಂವಹನಗಳೊಂದಿಗಿನ ತೊಂದರೆಗಳು ಹಾಗೂ ನಿರ್ಬಂಧಿತ ಮತ್ತು ಪುನರಾವರ್ತಿತ ನಡವಳಿಕೆಯಿಂದ ಉಂಟಾಗುವ ಬೆಳವಣಿಗೆಯ ಅಸ್ವಸ್ಥತೆಯಾಗಿದೆ. ಇದನ್ನು ಸ್ವಲೀನತೆ ಅಥವಾ ತಂತಾನಿಕೆ ಎಂದು ಕರೆಯುತ್ತಾರೆ. ಪಾಲಕರು ಸಾಮಾನ್ಯವಾಗಿ ತಮ್ಮ ಮಗುವಿನ ಜೀವನದ ಮೊದಲ ಎರಡು ಅಥವಾ ಮೂರು ವರ್ಷಗಳಲ್ಲಿ ಆಟಿಸಮ್ ಅಸ್ವಸ್ಥತೆಯ ಚಿಹ್ನೆಗಳನ್ನು ಗಮನಿಸುತ್ತಾರೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ನಂಜುಂಡೇಶ್ವರ ದೇವಸ್ಥಾನ, ನಂಜನಗೂಡು
ನಂಜುಂಡೇಶ್ವರ ದೇವಸ್ಥಾನ ( ಶ್ರೀಕಂಠೇಶ್ವರ ದೇವಸ್ಥಾನ ಎಂದೂ ಕರೆಯುತ್ತಾರೆ). ಇದು ಕರ್ನಾಟಕ ರಾಜ್ಯ, ದಕ್ಷಿಣ ಭಾರತದ ಹಿಂದೂ ತೀರ್ಥಯಾತ್ರೆಯ ಪಟ್ಟಣವಾದ ನಂಜನಗೂಡುನಲ್ಲಿರುವ ಪುರಾತನ ದೇವಾಲಯವಾಗಿದೆ. ಇದು ನಂಜುಂಡೇಶ್ವರ ದೇವರ ಪುರಾತನ ದೇವಾಲಯಕ್ಕೆ ಹೆಸರುವಾಸಿಯಾಗಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಪ್ರವಾಸೋದ್ಯಮ ಅಥವಾ ಯೋಜಿತ ಪ್ರವಾಸವು ಮನರಂಜನೆ, ವಿರಾಮ ಅಥವಾ ವ್ಯಾಪಾರದ ಉದ್ದೇಶಗಳಿಗಾಗಿ ಮಾಡುವ ಪ್ರಯಾಣವಾಗಿದೆ. ವಿಶ್ವ ಪ್ರವಾಸೋದ್ಯಮ ಸಂಸ್ಥೆಯು ಪ್ರವಾಸಿಗರು ಎಂಬ ಪದವನ್ನು, "ವಿರಾಮ, ವ್ಯವಹಾರ ಮತ್ತು ಇತರ ಉದ್ದೇಶಗಳಿಗಾಗಿ ತನ್ನ ಎಂದಿನ ಪರಿಸರದಿಂದ ಹೊರಗಿನ ಸ್ಥಳಗಳಿಗೆ ಪ್ರಯಾಣಿಸಿ, ಅಲ್ಲಿ ಇಪ್ಪತ್ನಾಲ್ಕು (24) ಗಂಟೆಗಳಿಗಿಂತ ಹೆಚ್ಚು ಅವಧಿಗೆ ಉಳಿಯುವ ಮತ್ತು ಒಂದು ಸತತ ವರ್ಷಕ್ಕಿಂತ ಹೆಚ್ಚಾಗಿ ಉಳಿಯದ ಹಾಗೂ ತಾವು ಭೇಟಿ ನೀಡಿದ ಪ್ರದೇಶಗಳಲ್ಲಿ ಸಂಭಾವನೆ ಗಳಿಸುವ ಅಥವಾ ಪ್ರತಿಫಲ ಅಪೇಕ್ಷಿಸುವ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದ ವ್ಯಕ್ತಿಗಳು" ಎಂಬುದಾಗಿ ವ್ಯಾಖ್ಯಾನಿಸಿದೆ. ಪ್ರವಾಸೋದ್ಯಮವು ವಿಶ್ವವ್ಯಾಪಕವಾಗಿ ಜನಪ್ರಿಯವಾಗಿರುವ ಒಂದು ವಿರಾಮದ ಚಟುವಟಿಕೆಯಾಗಿ ಮಾರ್ಪಟ್ಟಿದೆ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಶಿವಕುಮಾರ ಸ್ವಾಮಿ (ಜನನ- ಶಿವಣ್ಣ, ೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.ಹಿಂದೂಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ ದೇವರು ಎಂದು ಕೂಡ ಉಲ್ಲೇಖಿಸಲಾಗಿದೆ.ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಪಾಮ್ ಸಂಡೆ ಯಾವಾಗಲು ಈಸ್ಟರ್ ಭಾನುವಾರದ ಹಿಂದಿನ ಭಾನುವಾರ ಬೀಳುವ ಕ್ರೈಸ್ತ ಮತದ ಚರಹಬ್ಬವಾಗಿದೆ. ಈ ಹಬ್ಬ ಎಲ್ಲಾ ನಾಲ್ಕು ಶಾಸ್ತ್ರಸಮ್ಮತ ಸುವಾರ್ತೆಗಳಲ್ಲಿ(ಟೆಂಪ್ಲೇಟು:Bible verse, ಟೆಂಪ್ಲೇಟು:Bible verse, ಟೆಂಪ್ಲೇಟು:Bible verse,ಮತ್ತು ಟೆಂಪ್ಲೇಟು:Bible verse) ಹೇಳಿರುವ ಘಟನೆಯನ್ನು ನೆನಪಿಗೆ ತರುತ್ತದೆ: ಯೇಸುಕ್ರಿಸ್ತ ನು ಶಿಲುಬೆಯಲ್ಲಿ ಯಾತನೆ ಪಡುವ ಮುಂಚಿನ ದಿನಗಳಲ್ಲಿ ಜರೂಸಲಮ್ಗೆ ಪರಮೋತ್ಸಾಹದಿಂದ ಪ್ರವೇಶ ಮಾಡುವ ಘಟನೆ. ಆದ್ದರಿಂದ ಇದನ್ನು ಲೆಂಟ್ ಉಪವಾಸ ವ್ರತದ ಐದನೆಯ ಭಾನುವಾರ ಅಥವಾ ಶಿಲುಬೆಯ ಮೇಲೆ ಯೇಸುಕ್ರಿಸ್ತನ ಯಾತನೆಯ ಪಾಮ್ ಸಂಡೆ ಎಂದು ಕರೆಯಲಾಗುತ್ತದೆ.
ಪ್ರಾಚೀನ ಕನ್ನಡ ಕವಿಗಳು ಉಭಾಯಭಾಷಾ ವಿಶಾರದರೂ, ಸಂಸ್ಕ್ರತ ಪಕ್ಷಾಪಾತಿಗಳೂ ಆಗಿದ್ದುದರಿಂದ ಅವರು ತಮ್ಮ ಕನ್ನಡ ಕಾವ್ಯಗಳಲ್ಲಿ ಸಂಸ್ಕ್ರತದ ವಸ್ತು, ಭಾಷಾ ಶೈಲಿಯ ಜೊತೆಗೆ ಸಂಸ್ಕೃತ ಛಂದಸ್ಸನ್ನು ಬಳಸಿದರು. ಚಂಪೂ ಸ್ವರೂಪದ ಇವರ ಕಾವ್ಯಗಳಲ್ಲಿ ಗದ್ಯಕ್ಕಿಂತ ಪದ್ಯದ ಪ್ರಮಾಣ ಅಧಿಕವಾಗಿದ್ದು, ಪದ್ಯದಲ್ಲಿ ಕಂದ ಮತ್ತು ವೃತ್ತಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಸಂಸ್ಕ್ರತದ ಲೌಕಿಕ ಛಂದಸ್ಸಿನಲ್ಲಿ ಒಂದು ಅಕ್ಷರದ ಉಕ್ತೆಯಿಂದ ಇಡಿದು ಇಪ್ಪಾತ್ತಾರು ಅಕ್ಷರಗಳ ಉತ್ಪತ್ತಿಯವರೆಗಿನ ಛಂದಸ್ಸಿನದಿಂದ ಹೊರಡುವ ಸಮವೃತ್ತಗಳು ನೂರಾರಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ನಮ್ಮ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹತ್ವದ ಸ್ಥಾನ ಪಡೆದಿರುವ ಮೇಲುಕೋಟೆಯಲ್ಲಿನ ಬ್ರಹ್ಮೋತ್ಸವ ಕಾರ್ಯಕ್ರಮಗಳು ಪ್ರಸಿದ್ಧವಾಗಿವೆ. ಭೂ ವೈಕುಂಠ ಎಂಬ ಖ್ಯಾತಿಯ ಮಂಡ್ಯ ಜಿಲ್ಲೆ ಮೇಲುಕೋಟೆ ಹಲವು ಹತ್ತು ಪುರಾಣೇತಿಹಾಸಗಳನ್ನು ತನ್ನೊಡಲಲ್ಲಿ ತುಂಬಿಕೊಂಡ ಪ್ರಮುಖ ಧಾರ್ಮಿಕ ಕ್ಷೇತ್ರ. ಯಾದವಾದ್ರಿ, ನಾರಾಯಣಾದ್ರಿ, ಯತಿಶೈಲ, ತಿರುನಾರಾಯಣಪುರ, ಯದುಗಿರಿ, ದಕ್ಷಿಣ ಬದರಿ ಕ್ಷೇತ್ರ ...
ಕಾಂತಾರ: ಒಂದು ದಂತಕಥೆ ಅಥವಾ ಕಾಂತಾರ (ಅನುವಾದ. "ನಿಗೂಢವಾದ ಕಾಡು") ಸೆಪ್ಟೆಂಬರ್ ೩೦, ೨೦೨೨ರಲ್ಲಿ ಬಿಡುಗಡೆಯಾದ ಕನ್ನಡ ಭಾಷೆಯ ಚಲನಚಿತ್ರವಾಗಿದೆ. ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ, ಶೆಟ್ಟಿ, ಭೂತಕೋಲ ಕಲಾವಿದ ಮತ್ತು ಕಂಬಳ ಚಾಂಪಿಯನ್ ಆಗಿ ನಟಿಸಿದ್ದಾರೆ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಅಜಯ್ ದೇವ್ ಗನ್ (ಹಿಂದಿ:अजय देवगन, ಉರ್ದು: اجے دیوگن, ಪಂಜಾಬಿ: ਅਜੈ ਦੇਵਗਨ), ಜನ್ಮ ನಾಮ ವಿಶಾಲ್ ವೀರೂ ದೇವ್ ಗನ್ (ಹಿಂದಿ:विशाल वीरू देवगन, ಉರ್ದು: وشال ویرو دیوگن, ಪಂಜಾಬಿ: ਵਿਸ਼ਾਲ ਵੀਰੂ ਦੇਵਗਨ), ೨ ಏಪ್ರಿಲ್ ಎರಡನೆಯ ದಿನಾಂಕ ೧೯೬೯ ರಲ್ಲಿ ನವದೆಹಲಿ, ಭಾರತ), ದಲ್ಲಿ ಜನಿಸಿದರು. ಅಜಯ್ ದೇವ್ ಗನ್ ಎಂದೇ ಹಿಂದೆ ಖ್ಯಾತರಾದ ಇವರು ಭಾರತದ ಒಬ್ಬ ಪ್ರಮುಖ ಚಿತ್ರನಟ, ನಿರ್ದೇಶಕ, ಹಾಗೂ ನಿರ್ಮಾಪಕರಾಗಿದ್ದಾರೆ. ಅವರು ಫೂಲ್ ಔರ್ ಕಾಂಟೆ ಎಂಬ ಚಿತ್ರದ ಮೂಲಕ, ೧೯೯೧ರಲ್ಲಿ, ಚಲನಚಿತ್ರಜಗತ್ತಿಗೆ ಪಾದಾರ್ಪಣೆ ಮಾಡಿದರು ಮತ್ತು ಚೊಚ್ಚಲ ಚಿತ್ರದಲ್ಲಿನ ನಟನೆಗೆ ನೀಡುವ ಫಿಲ್ಮ್ ಫೇರ್ ಶ್ರೇಷ್ಠನಟ ಪ್ರಶಸ್ತಿಯನ್ನು ಈ ಚಿತ್ರದಲ್ಲಿನ ಅಭಿನಯದ ಮೂಲಕ ತಮ್ಮದಾಗಿಸಿಕೊಂಡರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತದಲ್ಲಿ ಬಡತನ ಬಹುವ್ಯಾಪಕವಾಗಿದ್ದು, ವಿಶ್ವದ ಒಟ್ಟು ಬಡವರ ಸಂಖ್ಯೆಯಲ್ಲಿ ಮೂರನೇ ಒಂದು ಭಾಗ ರಾಷ್ಟ್ರದಲ್ಲಿದ್ದಾರೆಂದು ಅಂದಾಜು ಮಾಡಲಾಗಿದೆ. ಭಾರತದ ಯೋಜನಾ ಆಯೋಗ ಬಳಸಿದ ಮಾನದಂಡದ ಅನ್ವಯ 2004-2005ರಲ್ಲಿ ಜನಸಂಖ್ಯೆಯ 27.5% ಬಡತನ ರೇಖೆ ಕೆಳಗೆ(ಕಡುಬಡತನ)ವಾಸಿಸಿದ್ದು, 1977-1978ರಲ್ಲಿ 51.3%ಗಿಂತ ಮತ್ತು 1993-1994ರಲ್ಲಿ 36%ಗಿಂತ ಕೆಳಮುಖದಲ್ಲಿದೆ. UN ಅಭಿವೃದ್ಧಿ ಕಾರ್ಯಕ್ರಮ, ಮಾನವ ಅಭಿವೃದ್ಧಿ ಸೂಚ್ಯಂಕದ(HDI)ಪ್ರಕಾರ,ಭಾರತದ ಜನಸಂಖ್ಯೆಯಲ್ಲಿ 75.6% ದಿನಕ್ಕೆ $2ಗಿಂತ ಕಡಿಮೆ ಆದಾಯದಲ್ಲಿ ಜೀವಿಸುತ್ತಿದ್ದಾರೆ.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.