The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಸಾಮಾನ್ಯ ಬಳಕೆಯಲ್ಲಿ, ಬೆಲೆಯು ಒಂದು ಪಕ್ಷದಿಂದ ಮತ್ತೊಂದಕ್ಕೆ ಸರಕುಗಳು ಅಥವಾ ಸೇವೆಗಳ ಪ್ರತಿಯಾಗಿ ನೀಡಲಾದ ಸಂದಾಯ ಅಥವಾ ಪರಿಹಾರದ ಪ್ರಮಾಣ.ಆಧುನಿಕ ಅರ್ಥವ್ಯವಸ್ಥೆಗಳಲ್ಲಿ, ಬೆಲೆಗಳನ್ನು ಸಾಮಾನ್ಯವಾಗಿ ಚಲಾವಣೆಯ ಯಾವುದೋ ರೂಪದ ಏಕಮಾನಗಳಲ್ಲಿ ವ್ಯಕ್ತಪಡಿಸಲಾಗುತ್ತದೆ. (ಸರಕುಗಳಿಗೆ, ಅವನ್ನು ಸರಕಿನ ಏಕಮಾನ ತೂಕಕ್ಕೆ ಚಲಾವಣೆಯಾಗಿ ವ್ಯಕ್ತಪಡಿಸಲಾಗುತ್ತದೆ, ಉದಾ. ಕೆ.ಜಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಂಡೋಸ್ ೧೦ ಎನ್ನುವುದು ಮೈಕ್ರೋಸಾಫ್ಟ್ ತನ್ನ ವಿಂಡೋಸ್ ಎನ್ಟಿ ಫ್ಯಾಮಿಲಿ ಆಫ್ ಆಪರೇಟಿಂಗ್ ಸಿಸ್ಟಂನ ಭಾಗವಾಗಿ ನಿರ್ಮಿಸಿದ ವೈಯಕ್ತಿಕ ಕಂಪ್ಯೂಟರ್ ಆಪರೇಟಿಂಗ್ ಸಿಸ್ಟಮ್ಗಳ ಸರಣಿಯಾಗಿದೆ. ಇದು ವಿಂಡೋಸ್ ೮.೧ ರ ಉತ್ತರಾಧಿಕಾರಿಯಾಗಿದೆ, ಮತ್ತು ಇದನ್ನು ಜುಲೈ ೧೫, ೨೦೧೯ ರಂದು ಉತ್ಪಾದನೆಗೆ ಬಿಡುಗಡೆ ಮಾಡಲಾಯಿತು ಮತ್ತು ಜುಲೈ ೨೯, ೨೦೧೫ ರಂದು ವ್ಯಾಪಕವಾಗಿ ಮಾರಾಟಕ್ಕೆ ಬಿಡುಗಡೆ ಮಾಡಲಾಯಿತು. ವಿಂಡೋಸ್ ೧೦ ಹೊಸ ನಿರ್ಮಾಣಗಳನ್ನು ನಡೆಯುತ್ತಿರುವ ಆಧಾರದ ಮೇಲೆ ಪಡೆಯುತ್ತದೆ.
ರಾಷ್ಟ್ರೀಯ ಟೆಲಿವಿಷನ್ ವ್ಯವಸ್ಥಾ ಸಮಿತಿ ಅಥವಾ NTSC ಯು ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಜಪಾನ್, ದಕ್ಷಿಣ ಕೊರಿಯಾ, ತೈವಾನ್, ಬರ್ಮಾ ಮತ್ತು ಕೆಲವು ಶಾಂತಿಸಾಗರದ ದ್ವೀಪರಾಜ್ಯಗಳಲ್ಲಿ ಮತ್ತು ಪ್ರಾಂತ್ಯಗಳಲ್ಲಿ (ಭೂಪಟ ನೋಡಿ) ಚಾಲ್ತಿಯಲ್ಲಿರುವ ಕ್ರಮಾವಳಿ ಟೆಲಿವಿಷನ್ ವ್ಯವಸ್ಥೆ. NTSC ಎಂಬುದು ಪ್ರಸರಣದ ಗುಣಮಟ್ಟವನ್ನು ವೃದ್ಧಿಗೊಳಿಸಿದ ಯು.ಎಸ್.ನ ಮಾನದಂಡ ನಿರ್ಧರಿಸುವ ಸಂಸ್ಥೆಯ ಹೆಸರೂ ಹೌದು. ಮೊದಲ ಎನ್ ಟಿ ಎಸ್ ಸಿ ನೆಲೆಗಟ್ಟು 1941ರಲ್ಲಿ ಅಭಿವೃದ್ಧಿಗೊಳಿಸಲಾಗಿದ್ದು, ಆಗ ಬಣ್ಣದ ಟಿವಿಗೆ ಯಾವುದೇ ಏರ್ಪಾಡು ಇರಲಿಲ್ಲ.
ಕ್ಯಾಸ್ಪಿಯನ್ ಸಮುದ್ರ ವು (Azerbaijani: [Xəzər dənizi] Error: {{Lang}}: text has italic markup (help), Russian: Каспийское море, Kazakh: Каспий теңізі, Turkmen: [Hazar deňzi] Error: {{Lang}}: text has italic markup (help), ಪರ್ಷಿಯನ್: دریای خزر or دریای گیلان ) ಪ್ರದೇಶಾನುಸಾರವಾಗಿ ಭೂಮಿಯ ಮೇಲೆ ಆವರಿಸಿರುವ ಅತ್ಯಂತ ದೊಡ್ಡ ಜಲರಾಶಿಯಾಗಿದೆ, ಇದನ್ನು ವಿಶ್ವದ ಅತ್ಯಂತ ದೊಡ್ಡ ಸರೋವರ ಅಥವಾ ಪೂರ್ಣಮಟ್ಟದ ಸಮುದ್ರವೆಂದು ವಿಧವಿಧವಾಗಿ ವರ್ಗೀಕರಿಸಲಾಗಿದೆ. ಸಮುದ್ರ 371,000 km2 (143,200 sq mi)ರಷ್ಟು ಮೇಲ್ಮೈ ಪ್ರದೇಶವನ್ನು ಹೊಂದಿದೆ (ಇದರಲ್ಲಿ ಗರಬೋಗಜ್ಕೊಲ್ ಅಯ್ಲಗಿ ಸೇರ್ಪಡೆಯಾಗಿಲ್ಲ) ಹಾಗು 78,200 km3 (18,800 cu mi)ರಷ್ಟು ಗಾತ್ರವನ್ನು ಹೊಂದಿದೆ. ಇದು ಒಂದು ಎಂಡೋರ್ಹೆಯಿಕ್ ಬೇಸಿನ್(ಇದಕ್ಕೆ ಹೊರಹರಿವಿನ ಮಾರ್ಗಗಳಿರುವುದಿಲ್ಲ) ಆಗಿರುವುದರ ಜೊತೆಗೆ, ಉತ್ತರದಲ್ಲಿ ಇರಾನ್ ನಿಂದ, ದಕ್ಷಿಣದಲ್ಲಿ ರಷ್ಯಾದಿಂದ, ಪಶ್ಚಿಮದಲ್ಲಿ ಕಜಾಕ್ ಸ್ತಾನ್ ಹಾಗು ತುರ್ಕಮೆನಿಸ್ತಾನ್ ನಿಂದ, ಹಾಗು ಪೂರ್ವದಲ್ಲಿ ಅಜೆರ್ಬೈಜಾನ್ ನಿಂದ ಸುತ್ತುವರೆದಿದೆ.
ಸ್ಟಾಕ್ ಎಕ್ಸ್ಚೇಂಜ್ ಎಂದರೆ ಷೇರು ದಲ್ಲಾಳಿಗಳು ಮತ್ತು ವ್ಯಾಪಾರಸ್ಥರು ಷೇರುಗಳ ಮತ್ತು ಇನ್ನಿತರ ಭದ್ರತೆಗಳ ವ್ಯವಹಾರ ಮಾಡಲು "ವ್ಯಾಪಾರ"ದ ಅವಕಾಶಗಳನ್ನು ಒದಗಿಸಿಕೊಡುವ ಒಂದು ಸಂಸ್ಥೆ. ಸ್ಟಾಕ್ ಎಕ್ಸ್ಚೇಂಜ್ ಇನ್ನಿತರೆ ಯಾವುದೇ ಹಣಕಾಸು ವ್ಯವಸ್ಥೆ ಮತ್ತು ಮೂಲಧನದ ಆಗು ಹೋಗುಗಳೊಂದಿಗೆ ಆದಾಯ ಮತ್ತು ಡಿವಿಡೆಂಡ್ಗಳನ್ನು ಪಾವತಿಸುವುದರೊಂದಿಗೆ ಕೊಡುವ ಮತ್ತು ಮರು ಖರೀದಿಸುವ ಸುರಕ್ಷತೆಗಳನ್ನು ಒದಗಿಸುತ್ತದೆ. ಸೆಕ್ಯೂರಿಟಿಗಳು ತಂತಾನೆ ಕೊಳ್ಳುವ ಮತ್ತು ಮಾರುವುದನ್ನು ಒಳಗೊಂಡಿರುತ್ತದೆ: ಕಂಪನಿಯಿಂದ ವಿತರಿಸಲ್ಪಟ್ಟ ಶೇರುಗಳು, ಯುನಿಟ್ ಟ್ರಸ್ಟ್ಗಳು, ಡಿರೈವೇಟಿವ್ಸ್ಗಳು, ಒಂದು ವ್ಯವಸ್ಥೆ ಅಡಿಯಲ್ಲಿ ಸ್ಪರ್ಧಾತ್ಮಕವಾಗಿ ತೊಡಗಿಸಿದ ಉತ್ಪನ್ನಗಳು ಹಾಗೂ ಬಾಂಡುಗಳು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಶೈಕ್ಷಣಿಕ ಹಂತಗಳು ಎಂದರೆ ವಿಧ್ಯುಕ್ತ ಕಲಿಕೆಯ ಉಪವಿಭಾಗಗಳು ಮತ್ತು ಸಾಮಾನ್ಯವಾಗಿ ಮುಂಚಿನ ಬಾಲ್ಯದ ಶಿಕ್ಷಣ, ಪ್ರಾಥಮಿಕ ಶಿಕ್ಷಣ, ಪ್ರೌಢ ಶಿಕ್ಷಣ ಮತ್ತು ತೃತೀಯಕ (ಅಥವಾ ಉನ್ನತ) ಶಿಕ್ಷಣವನ್ನು ಒಳಗೊಳ್ಳುತ್ತವೆ. ತನ್ನ ಅಂತರರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಯ ಪ್ರಮಾಣಕ ವರ್ಗೀಕರಣದಲ್ಲಿ (ಐಎಸ್ಸಿಇಡಿ) ಯುನೆಸ್ಕೊ ಏಳು ಸ್ತರಗಳ ಶಿಕ್ಷಣವನ್ನು ಗುರುತಿಸುತ್ತದೆ, ಸ್ತರ ೦ (ಪ್ರಾಥಮಿಕಪೂರ್ವ ಶಿಕ್ಷಣ) ಇಂದ ಸ್ತರ ೬ ರವರೆಗೆ (ಉನ್ನತ ಶಿಕ್ಷಣದ ಎರಡನೇ ಹಂತ). ಯುನೆಸ್ಕೊದ ಅಂತರರಾಷ್ಟ್ರೀಯ ಶಿಕ್ಷಣ ವಿಭಾಗವು ದೇಶ-ನಿರ್ದಿಷ್ಟ ಶಿಕ್ಷಣ ವ್ಯವಸ್ಥೆಗಳು ಮತ್ತು ಅವುಗಳ ಹಂತಗಳ ದತ್ತಸಂಚಯವನ್ನು ನಿರ್ವಹಿಸುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಡ್ಯೂಷೆ ಲುಫ್ಥಾನ್ಸ AG (FWB: LHA) (German pronunciation: [ˈdɔʏt͡ʃə ˈlʊfthanza]) ಎಂಬುದು, ಒಟ್ಟಾರೆ ಸಾಗಣೆ ಮಾಡಿದ ಪ್ರಯಾಣಿಕರ ಸಂಖ್ಯೆಯ ಪರಿಭಾಷೆಯಲ್ಲಿ ಹೇಳುವುದಾದರೆ ಯುರೋಪ್ನಲ್ಲಿನ ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿದೆ, ಮತ್ತು ಜರ್ಮನಿಯ ಅಗ್ರಗಣ್ಯ ವಿಮಾನವಾಹಕವಾಗಿದೆ. ಲುಫ್ತ್ ("ಗಾಳಿ" ಎಂಬುದಕ್ಕಾಗಿರುವ ಜರ್ಮನ್ ಪದ), ಮತ್ತು ಹಾನ್ಸಾ (ಹಾನ್ಸಿಯಾಟಿಕ್ ಲೀಗ್ ಎಂಬ ಮಧ್ಯಯುಗದ ಪ್ರಬಲವಾದ ವ್ಯಾಪಾರೀ ಸಮೂಹದ ಹೆಸರು) ಎಂಬ ಎರಡು ಪದಗಳಿಂದ ಕಂಪನಿಯ ಹೆಸರು ಜನ್ಯವಾಗಿದೆ. ಸಾಗಿಸಲ್ಪಟ್ಟ ಒಟ್ಟಾರೆ ಪ್ರಯಾಣಿಕರ ಸಂಖ್ಯೆಯ ಪರಿಭಾಷೆಯಲ್ಲಿ ಹೇಳುವುದಾದರೆ, ಈ ವಿಮಾನಯಾನ ಸಂಸ್ಥೆಯು ವಿಶ್ವದ ಐದನೇ-ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿದ್ದು, 18 ಸ್ವದೇಶಿ ಗಮ್ಯಸ್ಥಾನಗಳು ಹಾಗೂ ಆಫ್ರಿಕಾ, ಅಮೆರಿಕಾ ಖಂಡಗಳು, ಏಷ್ಯಾ ಹಾಗೂ ಯುರೋಪ್ ಖಂಡಗಳಾದ್ಯಂತದ 183 ಅಂತರರಾಷ್ಟ್ರೀಯ ಗಮ್ಯಸ್ಥಾನಗಳಿಗೆ ಅದು ತನ್ನ ಸೇವೆಗಳನ್ನು ನಿರ್ವಹಿಸುತ್ತಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವರಮಾನದ ಲೆಕ್ಕಾಚಾರ ವಿಧಾನಗಳುಯಾವುದೇ ರಾಷ್ಟ್ರದ ಜನತೆಯ ಕಲ್ಯಾಣವು ಆ ರಾಷ್ಟ್ರವು ಉತ್ಪಾದಿಸುವ ಸರಕು ಸೇವೆಗಳ ಪ್ರಮಾಣ,ಅವುಗಳ ಸಂಯೋಜನ ಮತ್ತು ಅವುಗಳ ಹಂಚಿಕೆಗಳನ್ನು ಅವಲಂಬಿಸಿರುತ್ತದೆ.ಒಂದು ವರ್ಷದಲ್ಲಿ ರಾಷ್ಟ್ರವು ಉತ್ಪಾದಿಸುವ ಸರಕು ಸೇವೆಗಳ ಒಟ್ಟು ಮೌಲ್ಯವೇ ಆ ರಾಷ್ಟ್ರದ ರಾಷ್ಟ್ರೀಯ ವರಮಾನವಾಗಿದೆ.ಇತರ ಸ್ಥಿತಿ-ಗತಿಳೆಲ್ಲವೂ ಸ್ಥಿರವಾಗಿದ್ದು,ರಾಷ್ಟ್ರೀಯ ವರಮಾನವು ಅಧಿಕವಾಗುತ್ತಿದ್ದರೆ,ಜನತೆಯ ಕಲ್ಯಾಣವು ಅಧಿಕವಾಗುತ್ತಿರುತ್ತದೆ.
ಅಕ್ಷಯ ತೃತೀಯಾ (ಕನ್ನಡದಲ್ಲಿ: ಅಕ್ಷಯ ತದಿಗೆ) ಹಿಂದೂ ಮತ್ತು ಜೈನ ಧರ್ಮೀಯರಿಗೆ ಮಂಗಳಕರವಾದ ದಿನವಾಗಿದ್ದು, ವೈಶಾಖ ಮಾಸದ ಶುಕ್ಲ ಪಕ್ಷ ಮೂರನೆಯ ದಿನ(ತದಿಗೆ)ದಂದು ಅಕ್ಷಯ ತೃತೀಯಾವನ್ನು ಆಚರಿಸಲಾಗುತ್ತದೆ. ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂಬ ನಂಬಿಕೆ ಹಿಂದೂ ಧರ್ಮದಲ್ಲಿ ಶಾಶ್ವತ ಇದೆ. ಶ್ರೇಷ್ಠವಾದ ಕೆಲಸಗಳನ್ನು ಈ ದಿನ ಕೈಗೊಂಡರೆ ಎಂದಿಗೂ ಮುಗಿಯದಂತಹ (ಅ-ಕ್ಷಯ) ಮಂಗಳಕರವಾದ ಸಿದ್ಧಿಗಳು ಉಂಟಾಗುವವು ಎಂಬ ನಂಬಿಕೆಯಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತದ ರಾಷ್ಟ್ರಪತಿಯ ನಂತರ ಭಾರತದ ಉಪ ರಾಷ್ಟ್ರಪತಿಯರು ಭಾರತ ಸರ್ಕಾರದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಕಚೇರಿಯಾಗಿದ್ದಾರೆ. ಭಾರತದ ಸಂವಿಧಾನದ 63 ನೇ ವಿಧಿಗೆ ಅನುಸಾರವಾಗಿ, ರಾಜೀನಾಮೆ, ತೆಗೆದುಹಾಕುವಿಕೆ, ಮರಣ, ದೋಷಾರೋಪಣೆ ಅಥವಾ ಅಧ್ಯಕ್ಷರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥತೆಯಿಂದಾಗಿ ಅನಿಶ್ಚಿತತೆ ಉಂಟಾದಾಗ ಉಪ ರಾಷ್ಟ್ರಪತಿಯರು ರಾಷ್ಟ್ರಪತಿಯರ ಕಾರ್ಯಗಳನ್ನು ನಿರ್ವಹಿಸುತ್ತಾರೆ. ಅವರು ಭಾರತದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿದ್ದಾರೆ.
ಅಧ್ಯಾಯ ಗದ್ಯ, ಕಾವ್ಯ, ಅಥವಾ ಕಾನೂನಿನ ಪುಸ್ತಕದಂತಹ ತುಲನಾತ್ಮಕ ಉದ್ದದ ಬರವಣಿಗೆ ಖಂಡದ ಮುಖ್ಯ ವಿಭಾಗಗಳಲ್ಲಿ ಒಂದು. ಅಧ್ಯಾಯ ಪುಸ್ತಕವು ಹಲವು ಅಧ್ಯಾಯಗಳನ್ನು ಹೊಂದಿರಬಹುದು ಮತ್ತು ಆ ನಿರ್ದಿಷ್ಟ ಅಧ್ಯಾಯದ ಮುಖ್ಯ ವಿಷಯವಾಗಿರಬಹುದಾದ ಅನೇಕ ವಸ್ತುಗಳನ್ನು ಸೂಚಿಸಬಹುದು. ಪ್ರತಿ ಸಂದರ್ಭದಲ್ಲೂ, ಅಧ್ಯಾಯಗಳಿಗೆ ಸಂಖ್ಯೆ ಕೊಡಬಹುದು ಅಥವಾ ಅವುಗಳನ್ನು ಹೆಸರಿಸಬಹುದು ಅಥವಾ ಎರಡನ್ನೂ ಮಾಡಬಹುದು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.