The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕುಡುಗೋಲು ಕೈಯಿಂದ ಬಳಸಲು ವಿಧವಿಧವಾದ ಬಾಗಿದ ಅಲಗುಗಳೊಂದಿಗೆ ವಿನ್ಯಾಸಗೊಳಿಸಲಾಗಿರುವ ಒಂದು ಕೃಷಿ ಉಪಕರಣ. ಇದನ್ನು ಸಾಮಾನ್ಯವಾಗಿ ಧಾನ್ಯ ಬೆಳೆಗಳ ಕಟಾವಿಗಾಗಿ ಅಥವಾ ಕೊಯ್ಲಿಗಾಗಿ, ಅಥವಾ ಮುಖ್ಯವಾಗಿ ಜಾನುವಾರುಗಳಿಗೆ ಆಹಾರವಾಗಿ ನೀಡಲು ರಸವತ್ತಾದ ಮೇವನ್ನು (ಹಸಿಯಾಗಿ ಕತ್ತರಿಸಿದ್ದು ಅಥವಾ ಹುಲ್ಲಾಗಿ ಒಣಗಿಸಿದ್ದು) ಕತ್ತರಿಸಲು ಬಳಸಲಾಗುತ್ತದೆ. ಕಬ್ಬಿಣ ಯುಗದ ಆರಂಭದಿಂದ, ಕುಡುಗೋಲಿನ ನೂರಾರು ಪ್ರದೇಶ ನಿರ್ದಿಷ್ಟ ರೂಪಾಂತರಗಳು ವಿಕಸನಗೊಂಡಿವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಒಂಟೆಯು ಅದರ ಬೆನ್ನ ಮೇಲೆ "ಡುಬ್ಬ"ಗಳೆಂದು ಕರೆಯಲಾಗುವ ವಿಶಿಷ್ಟ ಕೊಬ್ಬಿನ ಸಂಗ್ರಹವನ್ನು ಹೊಂದಿರುವ, ಕಮೇಲುಸ್ ಜಾತಿಯಲ್ಲಿನ ಒಂದು ಸಮ ಕಾಲ್ಬೆರಳುಗಳಿರುವ ಗೊರಸುಳ್ಳ ಪ್ರಾಣಿ. ಮಧ್ಯಪ್ರಾಚ್ಯ ಹಾಗು ಆಫ಼್ರಿಕಾದ ಕೊಂಬಿನಲ್ಲಿ ನೆಲೆಸಿರುವ ಡ್ರಮಿಡರಿ ಅಥವಾ ಒಂಟಿ ಡುಬ್ಬದ ಒಂಟೆ (ಕಮೇಲುಸ್ ಡ್ರೋಮೆಡೇರಿಯಸ್) ಮತ್ತು ಮಧ್ಯ ಏಷ್ಯಾದಲ್ಲಿ ನೆಲೆಸಿರುವ ಬ್ಯಾಕ್ಟ್ರಿಯನ್ ಅಥವಾ ಎರಡು ಡುಬ್ಬಗಳ ಒಂಟೆ (ಕಮೇಲುಸ್ ಬ್ಯಾಕ್ಟ್ರಿಯೇನಸ್) ಒಂಟೆಯ ಎರಡು ಜೀವಂತವಿರುವ ಪ್ರಜಾತಿಗಳಾಗಿವೆ. ಎರಡೂ ಪ್ರಜಾತಿಗಳನ್ನು ಪಳಗಿಸಲಾಗಿದೆ; ಅವು ಹಾಲು, ಮಾಂಸ, ಬಟ್ಟೆಗಳು ಅಥವಾ ಉಣ್ಣೆಬಟ್ಟೆ ಸಂಚಿಗಳಂತಹ ಸರಕುಗಳಿಗೆ ಕೂದಲನ್ನು ಒದಗಿಸುತ್ತವೆ, ಮತ್ತು ಅವು ಮಾನವ ಸಾರಿಗೆಯಿಂದ ಭಾರ ಹೊರುವವರೆಗೆ ವ್ಯಾಪಿಸುವ ಕಾರ್ಯಗಳಲ್ಲಿ ಕೆಲಸದ ಪ್ರಾಣಿಗಳಾಗಿವೆ.
ಚಿಮಣಿಯು (ಹೊಗೆಕೊಳವೆ, ಹೊಗೆನಳಿಕೆ, ಹೊಗೆಗೂಡು) ಕಲ್ಲುಗಳು, ಜೇಡಿಮಣ್ಣು ಅಥವಾ ಲೋಹದಿಂದ ತಯಾರಿಸಲ್ಪಟ್ಟ ಒಂದು ವಾಸ್ತುಶಿಲ್ಪೀಯ ವಾತಾಯನ ರಚನೆ. ಇದು ಬಾಯ್ಲರ್, ಒಲೆ, ಕುಲುಮೆ, ದಹನ ಸಾಧನ ಅಥವಾ ಅಗ್ನಿಸ್ಥಳವು ಉತ್ಪತ್ತಿ ಮಾಡಿದ ಬಿಸಿ ವಿಷಯುಕ್ತ ನಿಷ್ಕಾಸ ಅನಿಲಗಳು ಅಥವಾ ಹೊಗೆಯನ್ನು ಮನುಷ್ಯರಿರುವ ಪ್ರದೇಶಗಳಿಂದ ಪ್ರತ್ಯೇಕಿಸುತ್ತದೆ. ಸಾಮಾನ್ಯವಾಗಿ ಅನಿಲಗಳು ಸರಾಗವಾಗಿ ಹರಿಯುವುದನ್ನು ಖಚಿತಪಡಿಸಲು ಚಿಮಣಿಗಳು ಲಂಬವಾಗಿರುತ್ತವೆ, ಅಥವಾ, ಸಾಧ್ಯವಾದಷ್ಟು ಲಂಬವಾಗಿರುತ್ತವೆ.
ಒಬ್ಬ ವ್ಯಕ್ತಿಯ ಜೀವನೋಪಾಯ ಎಂದರೆ ಅವನ ಜೀವನದ ಮೂಲಭೂತ ಅಗತ್ಯಗಳನ್ನು (ಆಹಾರ, ನೀರು, ಆಶ್ರಯ ಮತ್ತು ಬಟ್ಟೆ) ಪಡೆದುಕೊಳ್ಳುವ ಸಾಧನ. ಜೀವನೋಪಾಯ ಪದವನ್ನು ಸಮರ್ಥನೀಯ ಆಧಾರದಲ್ಲಿ ಘನತೆಯೊಂದಿಗೆ ತನ್ನ ಮತ್ತು ತನ್ನ ಮನೆಯವರ ಅಗತ್ಯಗಳನ್ನು ಪೂರೈಸಲು ನೀರು, ಆಹಾರ, ಮೇವು, ಔಷಧಿ, ಆಶ್ರಯ, ಬಟ್ಟೆಬರೆಯನ್ನು ಪಡೆಯುವುದನ್ನು ಮತ್ತು (ಮಾನವ ಹಾಗೂ ವಸ್ತು ಸಂಬಂಧಿ ಎರಡೂ ಬಗೆಯ) ದತ್ತಿಗಳನ್ನು ಬಳಸಿ ಪ್ರತ್ಯೇಕವಾಗಿ ಅಥವಾ ಒಂದು ಗುಂಪಾಗಿ ಕಾರ್ಯನಿರ್ವಹಿಸಿ ಮೇಲೆ ಹೇಳಲಾದ ಅಗತ್ಯಗಳನ್ನು ಸಂಪಾದಿಸುವ ಸಾಮರ್ಥ್ಯವನ್ನು ಒಳಗೊಂಡ ಚಟುವಟಿಕೆಗಳ ಸಮೂಹವೆಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯವಾಗಿ ಈ ಚಟುವಟಿಕೆಗಳನ್ನು ಮತ್ತೆಮತ್ತೆ ಮಾಡಲಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಗುರು (ಸಂಸ್ಕೃತ:गुरु,ಅಂದರೆ ಒಂದು ನಿರ್ದಿಷ್ಟ ವಿಭಾಗದಲ್ಲಿ ಹೆಚ್ಚಿನ ಜ್ಞಾನ, ಬುದ್ಧಿವಂತಿಕೆ ಮತ್ತು ನಿಪುಣತೆಯನ್ನು ಹೊಂದಿರುವ, ಮತ್ತು ಇತರರಿಗೆ ನಿರ್ದೇಶನವನ್ನು ನೀಡಲು (ಶಿಕ್ಷಕ) ಈ ಬುದ್ಧಿವಂತಿಕೆಗಳನ್ನು ಬಳಸುವ ವ್ಯಕ್ತಿಯಾಗಿರುತ್ತಾನೆ. ಸಂಸ್ಕೃತದಲ್ಲಿ ಗು ಅಂದರೆ ಅಂಧಕಾರ ಮತ್ತು ರು ಅಂದರೆ ಬೆಳಕು. ಅರಿವಿನ ಅಭಿವೃದ್ಧಿಯ ಒಂದು ಮೂಲತತ್ವವಾಗಿ ಇದು ಕಾಲ್ಪನಿಕತೆಯಿಂದ ನಿಜಸ್ಥಿತಿಯ ನಿರ್ಮಾಣಕ್ಕೆ, ಅಜ್ಞಾನದ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುತ್ತದೆ.
ಕಣಿವೆ : ವಿಸ್ತಾರವೂ ಕಡಿದೂ ಮುಮ್ಮೈ ಉಳ್ಳದ್ದೂ ಆದ ದಿಣ್ಣೆಗಳ ನಡುವೆಯೋ ಬೆಟ್ಟಗಳ ಅಥವಾ ಪರ್ವತಗಳ ಶ್ರೇಣಿಗಳ ನಡುವೆಯೋ ಇರುವ, ಸಾಮಾನ್ಯವಾಗಿ ಹೊರಕ್ಕೆ ತೆರೆದುಕೊಂಡಿರುವ, ಉದ್ದನೆಯ ತಗ್ಗು (ವ್ಯಾಲಿ). ಭೂಮಿಯ ಮೇಲ್ಪದರ ತಳಾಭಿಮುಖವಾಗಿ ಮಡಿಸಿಕೊಂಡು ಸಮಾನರೇಖೆಯ ಕಡೆಗೆ ಇಳಿವೋರೆಯಾಗಿ ಆದದ್ದು ಕೇಂದ್ರಮುಖಾವನತ (ಸಿನ್ಕ್ಲೈನಲ್) ಕಣಿವೆ. ಸ್ತರಭಂಗದಿಂದ ಅಥವಾ ಖನಿಜರೇಖೆಯ ವಿಚ್ಛಿತ್ತಿಯಿಂದ ಸಂಭವಿಸಿದ್ದು ಸೀಳು ಕಣಿವೆ.
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.ಕಾರ್ಮಿಕರ ಮೆರೆವಣಿಗೆ, ಪ್ರದರ್ಶನ, ಸಭೆ-ಇವು ಆ ದಿನದ ವಿಶೇಷಗಳು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಮಫ್ತಿ ೨೦೧೭ರ ಕನ್ನಡ ಭಾಷೆಯ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರ. ನಾರ್ಥನ್ ರವರು ನಿರ್ದೇಶಿರುವ ಮೊದಲ ಚಿತ್ರ ಇದಾಗಿದೆ, ಜಯಣ್ಣ ಕಂಬೈನ್ಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರವು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿರುವ ಶ್ರೀಮುರುಳಿಯು ಭೂಗತ ದೊರೆ ಪಾತ್ರದಲ್ಲಿ ನಟಿಸಿರುವ ಶಿವರಾಜಕುಮಾರ್ ಅವರನ್ನು ಹುಡುಕಿಕೊಂಡು ಹೋಗುವ ಕಥೆಯಾಗಿದೆ.ಜುಲೈ ೨೦೧೬ ರಲ್ಲಿ ಚಿತ್ರದ ನಿರ್ಮಾಣ ಪ್ರಾರಂಭವಾಯಿತು ಮತ್ತು ೧ ಡಿಸೆಂಬರ್ ೨೦೧೭ ರಂದು ಚಿತ್ರ ಬಿಡುಗಡೆಯಾಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ದಿ ಅಡ್ವೆಂಚರ್ಸ್ ಆಫ್ ಟಿನ್ ಟಿನ್ (ಪುಸ್ತಕ)
ದಿ ಅಡ್ವೆಂಚರ್ಸ್ ಆಫ್ ಟಿನ್ ಟಿನ್ ಬೆಲ್ಜಿಯಂ ವ್ಯಂಗ್ಯಚಿತ್ರಕಾರ ಹರ್ಜ್ ಬರೆದ ಕಾಮಿಕ್ ಪುಸ್ತಕಗಳು. ೨೦ನೇ ಶತಮಾನದಲ್ಲಿ ಯೂರೋಪ್ ಖಂಡದ ಅತ್ಯಂತ ಪ್ರಮುಖ ಕಾಮಿಕ್ ಪುಸ್ತಕವಾಗಿ ಕಂಡುಬಂತು.೨೦೦೭ರಷ್ಟರೊಳಗೆ ೭೦ ಭಾಷೆಗಳಿಗೆ ಭಾಷಾಂತರವಾಗಿ ೨೦೦ ಮಿಲಿಯನ್ ಪಟಗಳು ಪ್ರಕಟವಾಗಿದ್ದವು. ಇದಕ್ಕೆ ಚಿತ್ರಗಳನ್ನು ಸಹ ಹರ್ಜ್ ಬಿಡಿಸಿದ್ದಾರೆ.