The most-visited ಕನ್ನಡ Wikipedia articles, updated daily. Learn more...
ರಶ್ಮಿಕಾ ಮಂದಣ್ಣ (ಜನನ: ೫ ಏಪ್ರಿಲ್ ೧೯೯೬), ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿಯೊಂದಿಗೆ ೨೦೧೬ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ರಶ್ಮಿಕಾ ಅವರನ್ನು, ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕ ಸಂಗೀತದಲ್ಲಿ ಎರಡು ಬಗೆಯ ಮೇಳಕರ್ತ ಪದ್ಧತಿಗಳು ರೂಢಿಯಲ್ಲಿವೆ. ಈಗ ಹೆಚ್ಚಿಗೆ ಪ್ರಚಾರದಲ್ಲಿರುವುದು ಸಂಪೂರ್ಣಮೇಳಗಳ ಪದ್ಧತಿ. ಈ ಪದ್ಧತಿಯಲ್ಲಿ, ಎಲ್ಲ ಮೇಳಕರ್ತ ರಾಗಗಳೂ ಕ್ರಮ ಸಂಪೂರ್ಣ ಆರೋಹಣ-ಅವರೋಹಣ ಸಂಚಾರಗಳನ್ನು (ಅಂದರೆ ಸರಿಗಮಪದನಿಸ- ಸನಿದಪಮಗರಿಸ) ಹೊಂದಿರುತ್ತವೆ, ಈ ಕೆಳಗಿನ ಪಟಿಯಲ್ಲಿ ಈ ಪದ್ಧತಿಗೆ ಸೇರಿದ ಮೇಳಕರ್ತರಾಗಗಳನ್ನು ಸೂಚಿಸಲಾಗಿದೆ, ಇವುಗಳನ್ನು ಸಂಸ್ಕೃತದ “ಕಟಪಯಾದಿ” ನಿಯಮಕ್ಕೆ ಅನುಗುಣವಾಗಿ ಹೆಸರಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ರಕ್ಷಿತ್ ಶೆಟ್ಟಿ ಒಬ್ಬ ಕನ್ನಡ ಚಲನಚಿತ್ರ ನಟ. ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ವಿದ್ಯಾಲಯ(NMAMIT)ದಿಂದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ಸ್ ಪದವಿ ಪಡೆದ ನಂತರ, ಚಲನಚಿತ್ರಗಳಲ್ಲಿ ಅಭಿನಯಿಸುವುದಕ್ಕೂ ಮುನ್ನ ಎರಡು ವರ್ಷಗಳ ಕಾಲ ಸಾಫ್ಟ್ವೇರ್ ಉದ್ಯೋಗಿಯಾಗಿ ಕೆಲಸಮಾಡಿದರು.ಶೆಟ್ಟಿ ಅವರ ಚೊಚ್ಚಲ ಚಿತ್ರ ೨೦೧೦ರಲ್ಲಿ ಬಿಡುಗಡೆಯಾದ ನಮ್ ಏರಿಯಾಲ್ ಒಂದಿನ. ೨೦೧೩ರ ಪ್ರಣಯ ಮತ್ತು ಹಾಸ್ಯ ಕಥೆಯುಳ್ಳ ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಪ್ರೇಕ್ಷಕರ ಪ್ರಶಂಸೆಗೊಳಪಟ್ಟಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ನಮ್ಮ ನಾಡಿನ ಖ್ಯಾತ ಸಾಹಿತಿಗಳು, ವಿಮರ್ಶಕರು, ಚಿಂತಕರು, ಲೇಖಕರು, ಸಂಪಾದಕರು, ಸಂಶೋಧಕರು, ಅಂಕಣಕಾರರು, ಪ್ರಖರ ವಾಗ್ಮಿಗಳು, ಸಂಘಟನಾ ಚತುರರು, ಕಥೆಗಾರರು, ಕಾದಂಬರಿಕಾರರು, ಕವಿಗಳು, ಅನುವಾದಕರು, ಆದರ್ಶ ಶಿಕ್ಷಕರು, ದಕ್ಷ ಆಡಳಿತಗಾರರು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ ಸವ್ಯಸಾಚಿಗಳು, ನಮ್ಮ ನಾಡು-ನುಡಿ, ಸಾಹಿತ್ಯ-ಸಂಸ್ಕೃತಿ-ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಮ್ಮನ್ನು ತಾವು ಅರ್ಪಿಸಿಕೊಂಡಿರುವ, ಬಹುಮುಖ ಪ್ರತಿಭೆಯ ಕನ್ನಡದ ಕಟ್ಟಾಳು ಪ್ರೊ ಬಸವರಾಜ ಡೋಣೂರ ಅಧ್ಯಕ್ಷರು ಧಾರವಾಡ ಕಟ್ಟೆ, ಧಾರವಾಡ(ರಿ) ಕುಲಸಚಿವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ಅವರು 1969 ಜುಲೈ 26ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸಾತಿಹಾಳ ಗ್ರಾಮದಲ್ಲಿ ಜನಿಸಿದರು, ಹಂಪಿ ಕನ್ನಡ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ವಿಶ್ವವಿದ್ಯಾಲ ಧಾರವಾಡ ಗಳಿಂದ ಅನುಕ್ರಮವಾಗಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪಿಎಚ್.ಡಿ. ಪದವಿ. ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಅಮರಕಂಟಕದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಮೌಲ್ಯಮಾಪನ ಕುಲಸಚಿವರಾಗಿ, ವಿಭಾಗದ ಮುಖ್ಯಸ್ಥರಾಗಿ, ನಿಕಾಯದ ಡೀನ್ ಆಗಿ ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರಾಗಿ, ಕುಲಸಚಿವರಾಗಿ ಸೇವೆ.
ಸುದೀಪ ಅಥವಾ ಕಿಚ್ಚ ಸುದೀಪ್ (ಜನನ 2 ಸೆಪ್ಟೆಂಬರ್ 1973) ಒಬ್ಬ ಭಾರತೀಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಕಥೆ,ಚಿತ್ರಕಥೆಗಾರ,ವಿತರಕ,ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ, ಇವರು ಮುಖ್ಯವಾಗಿ ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ, ಜೊತೆಗೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಯ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ ನಟ ಕನ್ನಡ ಚಿತ್ರಗಳಾದ ಸ್ಪರ್ಶ (2000), ಹುಚ್ಚ (2001), ನಂದಿ (2002), ಕಿಚ್ಚ (2003), ಸ್ವಾತಿ ಮುತ್ತು (2003), ಮೈ ಆಟೋಗ್ರಾಫ್ (2006), ನಂ 73 ಶಾಂತಿ ನಿವಾಸ (2007), ಮುಸ್ಸಂಜೆ ಮಾತು (2008), ವೀರ ಮದಕರಿ (2009), ಜಸ್ಟ್ ಮಾತ್ ಮಾತಲ್ಲಿ (2010), ಕೆಂಪೇಗೌಡ (2011), ತೆಲುಗು-ತಮಿಳು ದ್ವಿಭಾಷಾ ಚಿತ್ರ ಈಗ (2012) ಮತ್ತು ಹಿಂದಿ ಚಲನಚಿತ್ರ ದಬಾಂಗ್ 3 (2019) ಇವರ ಪ್ರಮುಖ ಚಿತ್ರಗಳು. ಹುಚ್ಚ, ನಂದಿ ಮತ್ತು ಸ್ವಾತಿ ಮುತ್ತು ಚಿತ್ರಗಳಿಗಾಗಿ ಸತತ ಮೂರು ವರ್ಷಗಳ ಕಾಲ ಕನ್ನಡದ ಅತ್ಯುತ್ತಮ ನಟನೆಗಾಗಿ ಫಿಲ್ಮ್ಫೇರ್ ಪ್ರಶಸ್ತಿ ಪಡೆದರು. 2013 ರಿಂದ, ಅವರು ಟೆಲಿವಿಷನ್ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡದ ನಿರೂಪಕರಾಗಿದ್ದಾರೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಜಾಹೀರಾತು ವಿಶಿಷ್ಟವಾಗಿ ಸಂಭಾವ್ಯ ಗ್ರಾಹಕರನ್ನು ಖರೀದಿ ಮಾಡುವಂತೆ ಅಥವಾ ಒಂದು ನಿರ್ದಿಷ್ಟ ಗುರುತಿನ ಉತ್ಪನ್ನ ಅಥವಾ ಸೇವೆಯನ್ನು ಹೆಚ್ಚು ಬಳಸುವಂತೆ ಒಲಿಸಲು ಪ್ರಯತ್ನಿಸುವ ಒಂದು ಪ್ರಸಾರ ಸಾಧನ. ಬಹಳ ಜಾಹೀ ರಾತುಗಳು "ಗುರುತಿನ ಪ್ರತಿ ಅಭಿಪ್ರಾಯ" (ಬ್ರ್ಯಾಂಡ್ ಇಮೇಜ್) ಮತ್ತು "ಗುರುತಿನ ಪ್ರತಿ ನಿಷ್ಠೆ"ಯ (ಬ್ರ್ಯಾಂಡ್ ಲಾಯಲ್ಟಿ) ನಿರ್ಮಾಣ ಮತ್ತು ಬಲವರ್ಧನೆ ಮೂಲಕ ಆ ಉತ್ಪನ್ನಗಳ ಮತ್ತು ಸೇವೆಗಳ ಬಳಕೆ ಹೆಚ್ಚಾಗುವಂತೆ ರೂಪಿಸಲ್ಪಡುತ್ತವೆ. ಈ ಉದ್ದೇಶಗಳಿಗಾಗಿ, ಜಾಹೀರಾತು ಗಳು ಕೆಲವು ಸಲ ವಾಸ್ತವವಾದ ಮಾಹಿತಿಯ ಜೊತೆಗೆ ತಮ್ಮ ಪ್ರೇರಿಸುವ ಸಂದೇಶವನ್ನು ಹುದುಗಿಸುತ್ತವೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, ೨೦೧೪ ಎಂದು ಪ್ರಸ್ತಾಪಿಸಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಕಾವ್ಯಮೀಮಾಂಸೆ ಎಂದರೆ ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯಪ್ರಭೇದಗಳು, ಕಾವ್ಯಗಳಲ್ಲಿ ಅಲಂಕಾರ, ರೀತಿ, ರಸ, ಧ್ವನಿ ಮೊದಲಾದುವುಗಳ ಸ್ಥಾನ, ಕಾವ್ಯದ ವಸ್ತು ಮತ್ತು ಆತ್ಮಗಳ ಪರಿಶೀಲನ--ಇತ್ಯಾದಿಯಾಗಿ ಕಾವ್ಯವಿದ್ಯೆಗೆ ಸಂಬಂಧಿಸಿದ ವಿಷಯಗಳ ಶಾಸ್ತ್ರೀಯ ನಿರೂಪಣೆ. ಸಂಸ್ಕೃತದಲ್ಲಿ ಕಾವ್ಯಮೀಮಾಂಸೆ ಕ್ರಿಸ್ತಶಕದ ಆರಂಭದ ವೇಳೆಗೆ ಸ್ವತಂತ್ರ ಶಾಸ್ತ್ರವೆನಿಸುತ್ತಿದ್ದುದನ್ನು ರುದ್ರದಾಮನ ಶಿಲಾಲೇಖ, ಪತಂಜಲಿಯ ಮಹಾಭಾಷ್ಯ ಭರತನ ನಾಟ್ಯಶಾಸ್ತ್ರ ಮುಂತಾದವು ಸೂಚಿಸುತ್ತವೆ. ಆದರೆ ಕ್ರಿ.ಶ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಬಂಗಾಳದ ನವಾಬ ಹಾಗೂ ಅವನ ಫ್ರೆಂಚ್ ಬೆಂಬಲಿಗರ ನಡುವೆ ಪ್ಲಾಸಿಯಲ್ಲಿ ನಡೆದ ನಿರ್ಣಾಯಕ ಯುದ್ಧದಲ್ಲಿ ಬ್ರಿಟಿಷರು ಗೆದ್ದು ಮುಂದೆ ೧೯೦ ವರ್ಷಗಳ ಕಾಲ ಭಾರತದಲ್ಲಿ ಬ್ರಿಟಿಷ್ ಆಡಳಿತಕ್ಕೆ ಅಡಿಪಾಯ ಹಾಕಿದರು. ೧೭೫೭ರ ೨೩ನೇ ಜೂನಿನಂದು ಪಶ್ಚಿಮ ಬಂಗಾಳದ, ಭಾಗೀರಥಿ ನದಿಯ ದಂಡೆಯ ಮೇಲಿರುವ, ಪ್ಲಾಸಿಯಲ್ಲಿ ಈ ಯುದ್ಧ ನಡೆಯಿತು. ಈ ಯುದ್ಧದ ಒಂದು ಕಡೆ ಬಂಗಾಳದ ಕೊನೆಯ ಸ್ವತಂತ್ರ ನವಾಬ ಸಿರಾಜುದ್ದೌಲನೂ, ಇನ್ನೊಂದು ಕಡೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯೂ ಇದ್ದವು.
Janya Ragas are Carnatic music ragas derived from the fundamental set of 72 ragas called Melakarta ragas, by the permutation and combination of the various ascending and descending notes. The process of deriving janya ragas from the parent melakartas is complex and leads to an open mathematical possibility of around thirty thousand ragas. Although limited by the necessity of the existence of individual swaroopas (unique identities) for the janya ragas, a list is never comprehensive or exhaustive.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
'ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ಮಗಧ ದಕ್ಷಿಣ ಬಿಹಾರದಲ್ಲಿನ ಒಂದು ಪ್ರಾಚೀನ ರಾಜ್ಯವಾಗಿತ್ತು ಮತ್ತು ಪ್ರಾಚೀನ ಭಾರತದ ಹದಿನಾರು ಮಹಾಜನಪದಗಳಲ್ಲಿ ಒಂದಾಗಿತ್ತು. ಮಗಧವು ಜೈನ ಧರ್ಮ ಮತ್ತು ಬೌದ್ಧ ಧರ್ಮದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿತು, ಮತ್ತು ಭಾರತದ ಮಹಾನ್ ಸಾಮ್ರಾಜ್ಯಗಳಲ್ಲಿ ಎರಡು, ಮೌರ್ಯ ಸಾಮ್ರಾಜ್ಯ ಮತ್ತು ಗುಪ್ತ ಸಾಮ್ರಾಜ್ಯಗಳು, ಮಗಧದಲ್ಲಿ ಹುಟ್ಟಿದವು. ಮಗಧದ ಅಸ್ತಿತ್ವವನ್ನು ವೈದಿಕ ಪಠ್ಯಗಳಲ್ಲಿ ಕ್ರಿ.ಪೂ.