The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಗ್ರೇಟ್ ಈಸ್ಟರ್ನ್ ಹೋಟೆಲ್ (ಅಧಿಕೃತವಾಗಿ ಲಲಿತ್ ಗ್ರೇಟ್ ಈಸ್ಟರ್ನ್ ಹೋಟೆಲ್)ಭಾರತೀಯ ಕೋಲ್ಕತಾ (ಹಿಂದಿನ ಕಲ್ಕತ್ತಾ) ನಗರದ ವಸಾಹತುಶಾಹಿಯ ಹೋಟೆಲ್ ಆಗಿದೆ. ಹೋಟೆಲ್ 1840 ಅಥವಾ 1841 ರಲ್ಲಿ ಸ್ಥಾಪಿಸಲಾಯಿತು; ಒಂದು ಸಮಯದಲ್ಲಿ, ಈಸ್ಟ್ ಇಂಡಿಯಾ ಕಂಪನಿಯ ಸ್ಥಾನವನ್ನು ಭಾರತದ ಕಲ್ಕತ್ತಾ ಪ್ರಮುಖ ನಗರವಾದಾಗ. ಉಚ್ಛ್ರಾಯದಲ್ಲಿ "ಪೂರ್ವದ ಜ್ಯುವೆಲ್" ಎಂದು ಕರೆಯಲಾಗುತ್ತದೆ, ಗ್ರೇಟ್ ಈಸ್ಟರ್ನ್ ಹೋಟೆಲ್ಗೆ ಅನೇಕ ಗಮನಾರ್ಹ ವ್ಯಕ್ತಿಗಳು ಭೇಟಿ ಕೊಟ್ಟಿದ್ದಾರೆ.
ಸ್ಕಾಟ್ಲೆಂಡ್ ನಲ್ಲಿ ಸನ್ ೧೭೬೮ ರಲ್ಲಿ ಮೊಟ್ಟಮೊದಲು ಪುಸ್ತಕರೂಪದಲ್ಲಿ ಪ್ರಕಟಗೊಂಡಿದ್ದ 'ಎನ್ಸೈಕ್ಲೊಪೇಡಿಯ ಬ್ರಿಟಾನಿಕಾ' 'ಬ್ರಿಟಾನಿಕಾ ವಿಶ್ವಕೋಶ'ವು ಇದು ವರೆಗೆ ಪ್ರಕಟಿಸಿರುವ ಪುಸ್ತಕ ರೂಪದ ಆವೃತ್ತಿಗಳು, ಮಾರುಕಟ್ಟೆಯಲ್ಲಿ ಬಿಕರಿಯಾದ ಬಳಿಕ, ಪುಸ್ತಕ ರೂಪದ ಪ್ರಕಟಣೆಗಳನ್ನು ಸ್ಥಗಿತಗೊಳಿಸುವ ಸನ್ನದ್ಧತೆ ನಡೆದಿದೆ. ಮನೆಮನೆಗಳಲ್ಲಿ, ಪುಸ್ತಕಾಲಯಗಳಲ್ಲಿ ಮೆರೆಯುತ್ತಿದ್ದ, ಹಾಗೂ 'ಆಕರ ಗ್ರಂಥ'ವಾಗಿ ಬಳಕೆಯಾಗುತ್ತಿರುವ `ಬ್ರಿಟಾನಿಕಾ ವಿಶ್ವಕೋಶ'-'ಎನ್ ಸೈಕ್ಲೋಪೀಡಿಯಾ ಬ್ರಿಟಾನಿಕಾ` ತನ್ನ ೨೪೪ ವರ್ಷಗಳ ಇತಿಹಾಸದಲ್ಲಿ ತನ್ನ ಮುದ್ರಣ ಆವೃತ್ತಿಯನ್ನು ಸ್ಥಗಿತಗೊಳಿಸಲು ಯೋಜನೆಯನ್ನು ಸಿದ್ಧಪಡಿಸಿದ್ದು 'ಡಿಜಿಟಲ್ ಆವೃತ್ತಿ'ಗಳ ಕಡೆ ತನ್ನ ಗಮನವನ್ನು ಹೊರಳಿಸಿದೆ. 'ಡಿಜಿಟಲ್ ಆವೃತ್ತಿ'ಗಳು ಲಗ್ಗೆ ಹಾಕಿದ ಬಳಿಕ ವಿಶ್ವದ ಸಾಹಿತ್ಯ ಪ್ರಕಟನೆಯ ಕ್ಷೇತ್ರಗಳಲ್ಲಿ ಹಲವಾರು ಹೊಸ ಮಾರ್ಪಾಡುಗಳು ಆಗಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಅಂಟು ಚಿತ್ರಣ ಕಲೆ (French: collerರಿಂದ ಅಂಟಿಸುವವರೆಗೆ) ಎನ್ನುವುದು ಪ್ರಮುಖವಾಗಿ ದೃಗ್ಗೋಚರ ಕಲೆಗಳಲ್ಲಿನ ವ್ಯವಸ್ಥಿತ ಕಲೆಯಾಗಿದ್ದು, ಇದನ್ನು ವಿವಿಧ ರೂಪಗಳ ಜೋಡಿಸುವಿಕೆಯೊಂದಿಗೆ ತಯಾರಿಸುವ ಮೂಲಕ ಹೊಚ್ಚ ಹೊಸತೊಂದನ್ನು ರಚಿಸಲಾಗುತ್ತದೆ. ಅಂಟು ಚಿತ್ರಣ ಕಲೆಯು ಸುದ್ದಿ ಪತ್ರಿಕೆಯ ಕತ್ತರಿಸಿದ ಭಾಗಗಳು, ರಿಬ್ಬನ್ಗಳು, ಬಣ್ಣದ ಅಥವಾ ಹಸ್ತ ರಚಿತ ಕಾಗದಗಳ ತುಣುಕುಗಳು, ಇತರ ಕಲಾಕಾರ್ಯದ ಭಾಗಗಳು, ಛಾಯಾಚಿತ್ರಗಳು ಮತ್ತು ಇತರ ಕರಗಿಸಿದ ವಸ್ತುಗಳನ್ನು ಒಳಗೊಂಡಿರುತ್ತದೆ ಮತ್ತು ಇದನ್ನು ಕಾಗದದ ಚೂರು ಅಥವಾ ಕ್ಯಾನ್ವಾಸ್ ಆಗಿ ಜೋಡಿಸಲಾಗಿರುತ್ತದೆ. ಅಂಟು ಚಿತ್ರಣ ಕಲೆಯ ಮೂಲವನ್ನು ನೂರಾರು ವರ್ಷಗಳ ಹಿಂದಿನವರೆಗೆ ಪತ್ತೆ ಹಚ್ಚಬಹುದು, ಆದರೆ ಈ ಕೌಶಲ್ಯವು ೨೦ ನೇ ಶತಮಾನದಲ್ಲಿ ಹೊಸತನದ ಕಲಾ ಪ್ರಕಾರವಾಗಿ ಪರಿಣಾಮಕಾರಿ ಮರು ಪ್ರವೇಶ ಮಾಡಿತು.
ಟೆಂಪ್ಲೇಟು:Fix bunching ಥಾಮ್ಸನ್ ರಾಯಿಟರ್ಸ್ ಎಂಬುದು ರಾಯಿಟರ್ಸ್ ಕಂಪೆನಿಯನ್ನು 17 ಏಪ್ರಿಲ್ 2008ರಂದು ಥಾಮ್ಸನ್ ಕಾರ್ಪೋರೇಷನ್ ಕಂಪೆನಿಯು ಖರೀದಿಸಿದಾಗ ರಚಿಸಲಾದ ಮಾಹಿತಿ ಕಂಪೆನಿ ಯಾಗಿದೆ. ಟೊರೊಂಟೋ ಷೇರು ವಿನಿಮಯ ಕೇಂದ್ರ (TSX: TRI) ಮತ್ತು ನ್ಯೂಯಾರ್ಕ್ ಷೇರು ವಿನಿಮಯ ಕೇಂದ್ರಗಳ (NYSE: TRI) ಪಟ್ಟಿಯಲ್ಲಿ ಥಾಮ್ಸನ್ ರಾಯಿಟರ್ಸ್ನ ಷೇರುಗಳನ್ನು ನಮೂದಿಸಲಾಗುತ್ತದೆ. USAಯ ನ್ಯೂಯಾರ್ಕ್ ಮಹಾನಗರದ ಮನ್ಹಾಟ್ಟನ್ ಮಿಡ್ಟೌನ್/ಪೇಟೆವಲಯದಲ್ಲಿ ಥಾಮ್ಸನ್ ರಾಯಿಟರ್ಸ್ ಕಂಪೆನಿಯು ತನ್ನ ಪ್ರಧಾನ ಕಚೇರಿಯನ್ನು ಹೊಂದಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ಟೇಜ್ ಹೆಸರು ಲೇಡಿ ಗಾಗಾ ಎಂಬ ಹೆಸರಿನಿಂದ ಪ್ರಖ್ಯಾತಿಯನ್ನು ಪಡೆದ ಸ್ಟೆಫನಿ ಜೋನ್ನೆ ಆಂಜೆಲಿನಾ ಜರ್ಮಾನೊಟ್ಟಾ (ಮಾರ್ಚ್ ೨೮, ೧೯೮೬ ರಂದು ಜನಿಸಿದರು) ಇವರು ಅಮೇರಿಕಾದ ಒಬ್ಬ ಹಾಡುಗಾರ್ತಿ-ಕವನಬರಹಗಾರರಾಗಿದ್ದರು. ರಲ್ಲಿ ನ್ಯೂಯಾರ್ಕ್ ನಗರದ ಲೋವರ್ ಈಸ್ಟ್ ಸೈಡ್ನ ರಾಕ್ ಸಂಗೀತ ದೃಶ್ಯದಲ್ಲಿ ಪಾಲ್ಗೊಂಡ ನಂತರ ಮತ್ತು ನಂತರದಲ್ಲಿ ನ್ಯೂಯಾರ್ಕ್ ವಿಶ್ವವಿದ್ಯಾಲಯದ ಟಿಶ್ ಸ್ಕೂಲ್ ಆಫ್ ದ ಆರ್ಟ್ಸ್ನಲ್ಲಿ ದಾಖಲಾತಿಯನ್ನು ಪಡೆದ ನಂತರ, ಆಕೆಯು ಸ್ಟ್ರೀಮ್ಲೈನ್ ರೆಕಾರ್ಡ್ಸ್, ಇಂಟರ್ಸ್ಕೋಪ್ ರೆಕಾರ್ಡ್ಸ್ನ ಒಂದು ಪ್ರಕಾಶನ ಮುದ್ರೆಯಾಗಿತ್ತು. ಇಂಟರ್ಸ್ಕೋಪ್ನಲ್ಲಿನ ಮೊದಲ ಅವಧಿಯ ಸಮಯದಲ್ಲಿ, ಅವರು ತಮ್ಮ ಸಹ ಕಲಾಕಾರರಿಗೆ ಕವನಬರಹಗಾರರಾಗಿ ಕಾರ್ಯನಿರ್ವಹಿಸಿದರು ಮತ್ತು ರಾಪರ್ ಆಕೋನ್ರ ಗಮನವನ್ನು ತಮ್ಮೆಡೆಗೆ ಸೆಳೆದರು, ಆಕನ್ ಆಕೆಯ ಹಾಡುಗಾರಿಕೆಯ ಸಾಮರ್ಥ್ಯಗಳನ್ನು ಗುರುತಿಸಿದರು, ಮತ್ತು ತಮ್ಮ ಸ್ವಂತ ಲೇಬಲ್ ಕಾನ್ ಲೈವ್ ಡಿಸ್ಟ್ರಿಬ್ಯೂಷನ್ನಲ್ಲಿ ಆಕೆಯನ್ನು ದಾಖಲಾತಿ ಮಾಡಿಕೊಂಡರು.
ಇಸ್ರೇಲ್ (יִשְׂרָאֵל, ಯಿಸ್ರೆಇಲ್), ಅಧಿಕೃತವಾಗಿ ಇಸ್ರೇಲ್ ರಾಜ್ಯ (מְדִינַת יִשְׂרָאֵל, ಮೆದೀನತ್ ಯಿಸ್ರೇಎಲ್; دَوْلَةْ إِسْرَائِيل, ದವ್ಲತ್ ಇಸ್ರೇಇಲ್), ಮೆಡಿಟೆರೇನಿಯ ಸಮುದ್ರದ ಆಗ್ನೇಯಕ್ಕೆ ಇರುವ ಪಶ್ಚಿಮ ಏಷ್ಯಾದ ಒಂದು ದೇಶ. ಉತ್ತರಕ್ಕೆ ಲೆಬನನ್, ಪೂರ್ವಕ್ಕೆ ಸಿರಿಯ ಮತ್ತು ಜಾರ್ಡನ್, ನೈರುತ್ಯಕ್ಕೆ ಸಂಯುಕ್ತ ಅರಬ್ ಗಣರಾಜ್ಯ ಈಜಿಪ್ಟ್ ದೇಶಗಳೊಂದಿಗೆ ಗಡಿಯನ್ನು ಇಸ್ರೇಲ್ ಹೊಂದಿದೆ. ಪ್ಯಾಲೆಸ್ತೈನ್ ರಾಷ್ಟ್ರೀಯ ಪ್ರಾಧಿಕಾರ ಆಡಳಿತ ನಡೆಸುವ ಪಶ್ಚಿಮ ದಂಡೆ ಮತ್ತು ಗಾಜಾ ಪಟ್ಟಿ ಕೂಡ ಪಕ್ಕದಲ್ಲಿ ಇವೆ.
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಊಳಿಗಮಾನ ಪದ್ಧತಿ ಅನ್ನುವುದು ಶ್ರೀಮಂತರ(ಒಡೆಯ ಅಥವಾ ಧಣಿ), ಮತ್ತು ಹಿಡುವಳಿದಾರರ (ರೈತ) ನಡುವಿನ ಆಳ್ವಿಕೆಯ ಮತ್ತು ಮಿಲಿಟರಿ ಪದ್ಧತಿ. ಊಳಿಗಮಾನ ಪದ್ಧತಿಯು ಒಂಬತ್ತನೆಯ ಶತಮಾನದಿಂದ ಹದಿನೈದನೆಯ ಶತಮಾನದವರೆಗೂ ಪ್ರವರ್ಧ ಮಾನದಲ್ಲಿತ್ತು. ಇದರ ಅತ್ಯಂತ ಉನ್ನತ ಅರ್ಥದಲ್ಲಿ, ಊಳಿಗಮಾನ ಪದ್ಧತಿಯನ್ನು ಮಧ್ಯಯುಗದ ಯುರೋಪಿನ ಆಳ್ವಿಕೆಯ ಪದ್ದತಿಗೆ ಸೂಚಿಸಲಾಗಿದ್ದು ಪರಸ್ಪರ ಕಾನೂನು ಬದ್ದ ಮತ್ತು ಸೈನಿಕ ಉದಾತ್ತಗುಣದ ನಡುವಿನ ಮಿಲಿಟರಿ ಜವಾಬ್ದಾರಿಗಳಿಂದ ರಚಿಸಲ್ಪಟ್ಟು, ಮೂರು ಪ್ರಮುಖ ಪರಿಕಲ್ಪನೆಗಳಾದ ಒಡೆಯರ, ಹಿಡುವಳಿದಾರರ, ಮತ್ತು ಉಂಬಳಿಗಳ ಸುತ್ತ ಸುತ್ತುತ್ತದೆ.
ರಶ್ಮಿಕಾ ಮಂದಣ್ಣ (ಜನನ: ೫ ಏಪ್ರಿಲ್ ೧೯೯೬), ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿಯೊಂದಿಗೆ ೨೦೧೬ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ರಶ್ಮಿಕಾ ಅವರನ್ನು, ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಬಂಗಾಳದ ನವಾಬ ಹಾಗೂ ಅವನ ಫ್ರೆಂಚ್ ಬೆಂಬಲಿಗರ ನಡುವೆ ಪ್ಲಾಸಿಯಲ್ಲಿ ನಡೆದ ನಿರ್ಣಾಯಕ ಯುದ್ಧದಲ್ಲಿ ಬ್ರಿಟಿಷರು ಗೆದ್ದು ಮುಂದೆ ೧೯೦ ವರ್ಷಗಳ ಕಾಲ ಭಾರತದಲ್ಲಿ ಬ್ರಿಟಿಷ್ ಆಡಳಿತಕ್ಕೆ ಅಡಿಪಾಯ ಹಾಕಿದರು. ೧೭೫೭ರ ೨೩ನೇ ಜೂನಿನಂದು ಪಶ್ಚಿಮ ಬಂಗಾಳದ, ಭಾಗೀರಥಿ ನದಿಯ ದಂಡೆಯ ಮೇಲಿರುವ, ಪ್ಲಾಸಿಯಲ್ಲಿ ಈ ಯುದ್ಧ ನಡೆಯಿತು. ಈ ಯುದ್ಧದ ಒಂದು ಕಡೆ ಬಂಗಾಳದ ಕೊನೆಯ ಸ್ವತಂತ್ರ ನವಾಬ ಸಿರಾಜುದ್ದೌಲನೂ, ಇನ್ನೊಂದು ಕಡೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯೂ ಇದ್ದವು.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.